ಮಧ್ಯಪ್ರದೇಶದಲ್ಲಿ ಚಿತ್ರೀಕರಣ ಮುಗಿಸಿದ “ಮೈ ಹೀರೋ”ನ ಮುಂದಿನ ನಿಲ್ದಾಣ ಅಮೆರಿಕ

My Hero: ಹಿರಿಯ ನಟ ದತ್ತಣ್ಣ, ಪ್ರಕಾಶ್ ಬೆಳವಾಡಿ, ಹಾಲಿವುಡ್ ನಟ ಜಿಲ್ಲಾಲಿ ರೆಜ್ ಕಲ್ಲಾಹ್, ನಿರಂಜನ್ ದೇಶಪಾಂಡೆ ಅವರುಗಳು ನಟಿಸಿರುವ ಮೈ ಹೀರೊ ಕನ್ನಡ ಸಿನಿಮಾ ಮಧ್ಯಪ್ರದೇಶದಲ್ಲಿ ಚಿತ್ರೀಕರಣ ಮುಗಿಸಿದ್ದು, ಮುಂದಿನ ಚಿತ್ರೀಕರಣ ಅಮೆರಿಕದಲ್ಲಿ ನಡೆಯಲಿದೆ.

ಮಧ್ಯಪ್ರದೇಶದಲ್ಲಿ ಚಿತ್ರೀಕರಣ ಮುಗಿಸಿದ ಮೈ ಹೀರೋನ ಮುಂದಿನ ನಿಲ್ದಾಣ ಅಮೆರಿಕ
ಮೈ ಹೀರೋ
Follow us
ಮಂಜುನಾಥ ಸಿ.
|

Updated on: Apr 22, 2023 | 8:46 PM

ಸಾಮಾಜಿಕ ಸಮಸ್ಯೆಯೊಂದರ (Social Issue) ಕುರಿತಾದ ವಿಷಯ ಆಧರಿಸಿದ ಸಿನಿಮಾ ಮೈ ಹೀರೋ (My Hero) ಇದೇ ತಿಂಗಳ ಫೆಬ್ರವರಿಯಲ್ಲಿ ಸೆಟ್ಟೇರಿತ್ತು. ಸಿನಿಮಾದಲ್ಲಿ ಕನ್ನಡದ ಜನಪ್ರಿಯ ಹಿರಿಯ ನಟರೊಟ್ಟಿಗೆ ವಿದೇಶಿ ನಟರೊಬ್ಬರು ನಟಿಸುತ್ತಿರುವ ಈ ಸಿನಿಮಾವು ಇದೀಗ ಎರಡನೇ ಹಂತದ ಚಿತ್ರೀಕರಣ ಮುಗಿಸಿ ಮುಂದಿನ ಹಂತದ ಚಿತ್ರೀಕರಣಕ್ಕೆ ತಯಾರಾಗಿದೆ.

ಎ.ವಿ ಸ್ಟುಡಿಯೋಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ “ಮೈ ಹೀರೊ” ಚಿತ್ರದ ದ್ವಿತೀಯ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಮಧ್ಯಪ್ರದೇಶದ ಮಹೇಶ್ವರ ಎಂಬ ಸ್ಥಳದಲ್ಲೇ ಹೆಚ್ಚಿನ ಚಿತ್ರೀಕರಣವಾಗಿದೆ. ಒಂದು ಹಾಡು ಹಾಗೂ ಮಾತಿನ ಭಾಗದ ಚಿತ್ರೀಕರಣ ಅಲ್ಲಿ ನಡೆದಿದೆ. ಹಾಲಿವುಡ್ ನಟ ಜಿಲಾಲಿ ರೆಜ್ ಕಲ್ಲಾಹ್, ಬಾಲನಟ ವೇದಿಕ್ ಕೌಶಿಕ್, ದತ್ತಣ್ಣ, ಅಂಕಿತ ಅಮರ್ ಹಾಗೂ ಅಲ್ಲಿನ ಸ್ಥಳೀಯ ಕಲಾವಿದರು ಈ ಹಂತದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಕೊನೆಯ ಹಂತದ ಚಿತ್ರೀಕರಣ ಯು ಎಸ್ ಎ ನಲ್ಲಿ ನಡೆಯಲಿದೆ.

ಇಡೀ ವಿಶ್ವದಲ್ಲೇ ಇರುವ ಸಾಮಾಜಿಕ ಸಮಸ್ಯೆಯೊಂದರ ಕುರಿತಾದ ಚಿತ್ರವಿದು. ಅವಿನಾಶ್ ವಿಜಯಕುಮಾರ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಎ.ವಿ.ಸ್ಟುಡಿಯೋಸ್ ಮೂಲಕ ಈ ಚಿತ್ರವನ್ನು ಅವಿನಾಶ್ ವಿಜಯಕುಮಾರ್ ಅವರೆ ನಿರ್ಮಿಸುತ್ತಿದ್ದಾರೆ. ಹಾಲಿವುಡ್ ನಟ ಜಿಲಾಲಿ ರೆಜ್ ಕಲ್ಲಾಹ್ ಹಾಗೂ ಬಾಲನಟ ವೇದಿಕ್ ಕೌಶಿಕ್ ಈ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ದತ್ತಣ್ಣ, ಪ್ರಕಾಶ್ ಬೆಳವಾಡಿ, ನಿರಂಜನ್ ದೇಶಪಾಂಡೆ, ಅಂಕಿತ ಅಮರ್, ತನುಜಾ ಕೃಷ್ಣಪ್ಪ, ನವೀನ್ ಬೊಂದೇಲ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಗಗನ್ ಬಡೇರಿಯಾ ಸಂಗೀತ ನಿರ್ದೇಶನ ಹಾಗೂ ವೀನಸ್ ನಾಗರಾಜ್ ಅವರ ಛಾಯಾಗ್ರಹಣ “ಮೈ ಹೀರೊ” ಚತ್ರಕ್ಕಿದ್ದು, ಎ.ವಿ.ಸ್ಟುಡಿಯೋಸ್ ಸಂಭಾಷಣೆ ಬರೆದಿದ್ದಾರೆ.

ಸಿನಿಮಾದ ನಿರ್ದೇಶಕ ಹಾಗೂ ನಿರ್ಮಾಪಕರೂ ಆಗಿರುವ ಅವಿನಾಶ್ ವಿಜಯ್​ಕುಮಾರ್, ಸ್ಯಾನ್‌ ಫ್ರಾನ್ಸಿಸ್ಕೊ ಫಿಲಂ ಸ್ಕೂಲ್‌ನಲ್ಲಿ ನಿರ್ದೇಶನ ಹಾಗೂ ಮುಂಬೈನ ಅನುಪಮ್‌ ಖೇರ್‌ ಫಿಲಂ ಇನ್‌ಸ್ಟಿಟ್ಯೂಟ್‌ನಲ್ಲಿ ಅಭಿನಯ ತರಬೇತಿ ಪಡೆದು ಕೊಂಡಿದ್ದಾರೆ. ಇದು ಇವರ ಮೊದಲ ನಿರ್ದೇಶನದ ಚಿತ್ರ. ಇಡೀ ಪ್ರಪಂಚದಲ್ಲಿರುವ ಸಾಮಾಜಿಕ ಸಮಸ್ಯೆಗಳನ್ನು ಕೇಂದ್ರವಾಗಿಟ್ಟುಕೊಂಡು ಕಥೆ ಹೆಣೆದಿದ್ದಾರೆ ಅವಿನಾಶ್. ಅಮೆರಿಕದ ಅಧಿಕಾರಿಯೊಬ್ಬರು ಭಾರತಕ್ಕೆ ಬಂದಾಗ ಹುಡುಗನೊಬ್ಬನ ಪರಿಚಯವಾಗುತ್ತದೆ. ಇವರಿಬ್ಬರ ನಡುವೆ ಹೆಚ್ಚಿನ ಕಥೆ ಸಾಗುತ್ತದೆ. ಕೆಲವು ಸಿನಿಮಾಗಳಲ್ಲಿ ಭಾರತವನ್ನು ಬಡ ರಾಷ್ಟ್ರ ಎಂದು ಬಿಂಬಿಸಿ ತೋರಿಸಲಾಗುತ್ತದೆ. ಆದರೆ ನಮ್ಮ ಚಿತ್ರದಲ್ಲಿ ಭಾರತವನ್ನು ಬೇರೆಯದೇ ರೀತಿಯಲ್ಲಿ ತೋರಿಸುತ್ತಿದ್ದೇವೆ. ನಮ್ಮ ಸಿನಿಮಾವನ್ನು ನೋಡಿದ ಮೇಲೆ ಭಾರತವನ್ನು ನೋಡುವ ರೀತಿ ಬದಲಾಗಬಹುದು ಎಂದು ಸಿನಿಮಾ ಸೆಟ್ಟೇರಿದ ಸಂದರ್ಭದಲ್ಲಿ ಅವಿನಾಶ್ ಹೇಳಿದ್ದರು.

ಸಿನಿಮಾದಲ್ಲಿ ದತ್ತಣ್ಣ ಪುರೋಹಿತನ ಪಾತ್ರದಲ್ಲಿ ನಟಿಸಿದ್ದಾರೆ. ಪ್ರಕಾಶ್ ಬೆಳವಾಡಿ ಜಿಲ್ಲಾಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅಮೆರಿಕದ ಅಧಿಕಾರಿಯ ಪಾತ್ರದಲ್ಲಿ ಹಾಲಿವುಡ್ ನಟ ಜಿಲ್ಲಾಲಿ ರೆಜ್ ಕಲ್ಲಾಹ್ ನಟಿಸಿದ್ದಾರೆ. ಸಿನಿಮಾದ ಮೊದಲ ಹಂತದ ಚಿತ್ರೀಕರಣ ಚಿಕ್ಕಮಗಳೂರಿನಲ್ಲಿ ನಡೆದಿದೆ. ಎರಡನೇ ಹಂತದ ಚಿತ್ರೀಕರಣ ಮಧ್ಯಪ್ರದೇಶದಲ್ಲಿ ನಡೆದಿದ್ದು, ಇದೀಗ ಅಮೆರಿಕದಲ್ಲಿ ಮೂರನೇ ಹಂತದ ಚಿತ್ರೀಕರಣ ನಡೆಯಲಿದೆ. ಸಿನಿಮಾವು ಕನ್ನಡ, ಹಿಂದಿ ಹಾಗೂ ಇಂಗ್ಲೀಷ್​ ಭಾಷೆಗಳಲ್ಲಿ ಬಿಡುಗಡೆ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಾನ್ಪುರದಲ್ಲಿ ಸ್ಕೂಟರ್ ಸವಾರಿ ಮಾಡುತ್ತಿದ್ದ ಮಹಿಳೆಗೆ ಕಚ್ಚಿದ ಸಾಕು ನಾಯಿ
ಕಾನ್ಪುರದಲ್ಲಿ ಸ್ಕೂಟರ್ ಸವಾರಿ ಮಾಡುತ್ತಿದ್ದ ಮಹಿಳೆಗೆ ಕಚ್ಚಿದ ಸಾಕು ನಾಯಿ
ಅಕ್ರಮ ಹಣ ವರ್ಗಾವಣೆ ಬಗ್ಗೆ ಎಲ್ಲರೆದುರೇ ಅತ್ತು ಗೋಳಾಡಿದ ಕಾಂಗ್ರೆಸ್ ಶಾಸಕಿ
ಅಕ್ರಮ ಹಣ ವರ್ಗಾವಣೆ ಬಗ್ಗೆ ಎಲ್ಲರೆದುರೇ ಅತ್ತು ಗೋಳಾಡಿದ ಕಾಂಗ್ರೆಸ್ ಶಾಸಕಿ
ಜೀ ಕನ್ನಡದ ಹೊಸ ರಿಯಾಲಿಟಿ ಶೋನಲ್ಲಿ ರಕ್ಷಕ್ ಬುಲೆಟ್
ಜೀ ಕನ್ನಡದ ಹೊಸ ರಿಯಾಲಿಟಿ ಶೋನಲ್ಲಿ ರಕ್ಷಕ್ ಬುಲೆಟ್
ಕಾರ್​ ಶೋರೂಂನಲ್ಲಿ ಅಗ್ನಿ ಅವಘಡ, ಸುಟ್ಟು ಭಸ್ಮವಾದ ಹೊಸ ವಾಹನಗಳು
ಕಾರ್​ ಶೋರೂಂನಲ್ಲಿ ಅಗ್ನಿ ಅವಘಡ, ಸುಟ್ಟು ಭಸ್ಮವಾದ ಹೊಸ ವಾಹನಗಳು
ಬಿಗ್ ಬಾಸ್ ಫಿನಾಲೆ ಸಮಯದಲ್ಲಿ ಬದಲಾವಣೆ; ಮಾಹಿತಿ ನೀಡಿದ ವಾಹಿನಿ
ಬಿಗ್ ಬಾಸ್ ಫಿನಾಲೆ ಸಮಯದಲ್ಲಿ ಬದಲಾವಣೆ; ಮಾಹಿತಿ ನೀಡಿದ ವಾಹಿನಿ
Daily Devotional: ಮಂಗಳಸೂತ್ರದ ಮಹತ್ವ ತಿಳಿಯಿರಿ
Daily Devotional: ಮಂಗಳಸೂತ್ರದ ಮಹತ್ವ ತಿಳಿಯಿರಿ
ಬುಧಗ್ರಹ ಮಕರ ರಾಶಿಗೆ ಪ್ರವೇಶ ಮಾಡುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಬುಧಗ್ರಹ ಮಕರ ರಾಶಿಗೆ ಪ್ರವೇಶ ಮಾಡುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಸುದೀಪ್ ಸರ್ ನೋಡಿದ್ರೆ ಭಯ ಆಗುತ್ತೆ: ತೆಲುಗು ಬಿಗ್ ಬಾಸ್ ವಿನ್ನರ್ ಮಾತು
ಸುದೀಪ್ ಸರ್ ನೋಡಿದ್ರೆ ಭಯ ಆಗುತ್ತೆ: ತೆಲುಗು ಬಿಗ್ ಬಾಸ್ ವಿನ್ನರ್ ಮಾತು
ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ
ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ
ಬಿಗ್ ಬಾಸ್ ಮನೆಯಲ್ಲಿ ಕೊನೇ ವಾರ ಊಟ ಸೇರಲ್ಲ: ವಿನ್ನರ್ ನಿಖಿಲ್ ಅನುಭವ
ಬಿಗ್ ಬಾಸ್ ಮನೆಯಲ್ಲಿ ಕೊನೇ ವಾರ ಊಟ ಸೇರಲ್ಲ: ವಿನ್ನರ್ ನಿಖಿಲ್ ಅನುಭವ