Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಣ್ಣಾವ್ರು ಡಾಕ್ಟರೇಟ್​ ಪಡೆದ ಸಮಾರಂಭಕ್ಕೆ ಇಂದಿನ ಮೈಸೂರು ವಿವಿ ಕುಲಪತಿಗೂ ಸಿಕ್ಕಿರಲಿಲ್ಲ ಎಂಟ್ರಿ; ಇಲ್ಲಿದೆ ವಿವರ..

ಡಾ. ರಾಜ್​ಕುಮಾರ್​ ಅವರನ್ನು ಒಮ್ಮೆ ಕಣ್ತುಂಬಿಕೊಳ್ಳಬೇಕು ಎನ್ನುವ ಕನಸು ಎಲ್ಲರದ್ದೂ ಆಗಿತ್ತು. ಅದೇ ರೀತಿಯ ಕನಸನ್ನು ಕಟ್ಟಿಕೊಂಡಿದ್ದರು ಇಂದಿನ ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಜಿ. ಹೇಮಂತ್ ಕುಮಾರ್.

ಅಣ್ಣಾವ್ರು ಡಾಕ್ಟರೇಟ್​ ಪಡೆದ ಸಮಾರಂಭಕ್ಕೆ ಇಂದಿನ ಮೈಸೂರು ವಿವಿ ಕುಲಪತಿಗೂ ಸಿಕ್ಕಿರಲಿಲ್ಲ ಎಂಟ್ರಿ; ಇಲ್ಲಿದೆ ವಿವರ..
ಮೈಸೂರು ವಿವಿ ಕುಲಪತಿ ಪ್ರೊ. ಜಿ. ಹೇಮಂತ್ ಕುಮಾರ್, ಡಾ. ರಾಜ್​ಕುಮಾರ್​
Follow us
TV9 Web
| Updated By: ಮದನ್​ ಕುಮಾರ್​

Updated on: Feb 09, 2022 | 8:54 AM

ಡಾ. ರಾಜ್​ಕುಮಾರ್​ (Dr Rajkumar) ಅವರು ಗೌರವ ಡಾಕ್ಟರೇಟ್​ ಪಡೆದು 46 ವರ್ಷ ಪೂರ್ಣಗೊಂಡಿದೆ. ಮೈಸೂರು ವಿಶ್ವವಿದ್ಯಾಲಯ 1976ರ ಫೆ.8ರಂದು ಮೇರುನಟನಿಗೆ ಈ ಗೌರವ ನೀಡಿ ಸನ್ಮಾನಿಸಿತ್ತು. ರಾಜ್‌ಕುಮಾರ್ ಅವರಿಗೆ ಗೌರವ ಡಾಕ್ಟರೇಟ್ (Honorary Doctorate) ನೀಡಿದ ಮಹತ್ವದ ಕಾರ್ಯಕ್ರಮಕ್ಕೆ ವಿಶೇಷ ವ್ಯಕ್ತಿಗಳು ಸಾಕ್ಷಿಯಾಗಿದ್ದರು. ಅಂದಿನ ರಾಜ್ಯಪಾಲರಾದ ಡಾ. ಉಮಾಶಂಕರ ದೀಕ್ಷಿತ್, ವಿವಿ ಕುಲಪತಿ ಡಾ. ಡಿ.ವಿ. ಅರಸು ಸೇರಿದಂತೆ ಅನೇಕ ಗಣ್ಯಾತಿಗಣ್ಯರು ಭಾಗವಹಿಸಿದ್ದರು. ರಾಜ್‌ಕುಮಾರ್ ಅವರ ಜೊತೆಗೆ ಮುಂಬೈನ ಬಾಬಾ ಅಟಾಮಿಕ್ ಎನರ್ಜಿ ಸೆಂಟರ್ ನಿರ್ದೇಶಕರಾದ ಡಾ. ಎಚ್.ಎನ್. ಸೇತ್ನಾ, ವಿ. ಸೀತಾರಾಮಯ್ಯ, ಎಂ.ಎಚ್. ಗೋಪಾಲ್ ಅವರಿಗೂ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗಿತ್ತು. ಅಂದಿನ ಘಟನೆಯನ್ನು ಈಗ ಹಲವರು ಮೆಲುಕು ಹಾಕಿದ್ದಾರೆ. ಮೈಸೂರು ವಿಶ್ವವಿದ್ಯಾಲಯದ ಇಂದಿನ ಕುಲಪತಿ ಪ್ರೊ. ಜಿ. ಹೇಮಂತ್ ಕುಮಾರ್ (Pro. G. Hemantha Kumar) ಕೂಡ ಆ ದಿನದ ನೆನಪುಗಳನ್ನು ಹಂಚಿಕೊಂಡಿದ್ದಾರೆ. 46 ವರ್ಷಗಳ ಹಿಂದೆ ನಡೆದ ಆ ಸಮಾರಂಭದಲ್ಲಿ ಭಾಗವಹಿಸಲು ಪ್ರೊ. ಜಿ. ಹೇಮಂತ್ ಕುಮಾರ್ ಅವರಿಗೆ ಸಾಧ್ಯವಾಗಿರಲಿಲ್ಲ. ಆ ಕುರಿತು ಇಲ್ಲಿದೆ ವಿವರ..

ಡಾ. ರಾಜ್‌ಕುಮಾರ್ ಅವರ ಪಾಲಿಗೆ ಅಭಿಮಾನಿಗಳು ಅಭಿಮಾನಿ ದೇವರುಗಳಾದರೆ, ಅಭಿಮಾನಿಗಳ ಪಾಲಿಗೆ ಡಾ. ರಾಜ್ ಪ್ರತ್ಯಕ್ಷ ದೇವರು. ಅಂತಹ ದೇವರು ತಮ್ಮ ಊರಿಗೆ ಬರುತ್ತಾರೆ ಅನ್ನುವ ವಿಚಾರ ತಿಳಿದ ಮೈಸೂರಿಗರು ಥ್ರಿಲ್ ಆಗಿದ್ದರು. ಆ ದೇವರನ್ನು ಒಮ್ಮೆ ಕಣ್ತುಂಬಿಕೊಳ್ಳಬೇಕು ಅನ್ನುವ ಕನಸು ಎಲ್ಲರದ್ದೂ ಆಗಿತ್ತು. ಅದೇ ರೀತಿಯ ಕನಸನ್ನು ಕಟ್ಟಿಕೊಂಡಿದ್ದವರು ಇಂದಿನ ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಜಿ. ಹೇಮಂತ್ ಕುಮಾರ್. ಅಂದು ಏನು ನಡೆಯಿತು ಎಂಬುದನ್ನು ಅವರೇ ವಿವರಿಸಿದ್ದಾರೆ.

‘ನಾನು ಆಗ ಮೈಸೂರಿನ ಶಾರದ ವಿಲಾಸ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದೆ. ಅವತ್ತು ಭಾನುವಾರ ರಜಾ ದಿನವಾಗಿತ್ತು. ಮೈಸೂರು ವಿಶ್ವವಿದ್ಯಾನಿಲಯವು ರಾಜ್‌ಕುಮಾರ್ ಅವರಿಗೆ ಗೌರವ ಡಾಕ್ಟರೇಟ್ ನೀಡುವ ವಿಚಾರ ಮೊದಲೇ ಗೊತ್ತಾಗಿತ್ತು. ಅವರ ಅಭಿಮಾನಿಗಳಲ್ಲಿ ಒಬ್ಬನಾಗಿದ್ದ ನನಗೆ ನನ್ನ ಸಹಪಾಠಿಗಳು ಮಾತ್ರವಲ್ಲ ಮೈಸೂರಿನ ಪ್ರತಿಯೊಬ್ಬರು ಆ ಅಮೂಲ್ಯ ಕ್ಷಣಕ್ಕೆ ಸಾಕ್ಷಿಯಾಗಬೇಕು ಎಂದು ಕಾತುರರಾಗಿದ್ದರು. ಮಾನಸ ಗಂಗೋತ್ರಿ ಬಯಲು ರಂಗಮಂದಿರದಲ್ಲಿ ಕಾರ್ಯಕ್ರಮ ನಿಗದಿಯಾಗಿತ್ತು. ನಾನು ನನ್ನ ಗೆಳೆಯರು ಬೇಗನೇ ಎದ್ದು ನಡೆದುಕೊಂಡೇ ಲಗುಬಗೆಯಿಂದ ಕಾರ್ಯಕ್ರಮದ ಸ್ಥಳಕ್ಕೆ ತಲುಪಿದೆವು. ನಾವು ಕಾರ್ಯಕ್ರಮದ ನಿಗದಿತ ಸಮಯಕ್ಕಿಂತ ಬೇಗನೆ ಬಂದಿದ್ದೇವೆ, ನಾವು ಸುಲಭವಾಗಿ ಒಳಗೆ ಹೋಗಬಹುದು ಅಂತ ನಾವು ಅಂದುಕೊಂಡಿದ್ದೆವು. ಆದರೆ ನಮ್ಮ ನಿರೀಕ್ಷೆ ಹುಸಿಯಾಗಿತ್ತು. ನಾವು ಬರುವ ಮೊದಲೇ ಬಯಲು ರಂಗಮಂದಿರದಲ್ಲಿ ಜನರು ಕಿಕ್ಕಿರಿದು ತುಂಬಿದ್ದರು. ನಮಗೆ ಒಳಗೆ ಹೋಗಲು ಸಾಧ್ಯವಾಗಲೇ ಇಲ್ಲ. ಹೊರಗೆ ನಿಂತು ಕಾರ್ಯಕ್ರಮದ ವೀಕ್ಷಕ ವಿವರಣೆ, ಭಾಷಣ, ಅಣ್ಣಾವ್ರ ಮಾತುಗಳನ್ನು ಕೇಳಿದೆವು. ಅದಾದ ನಂತರ ಮರುದಿನ ಪತ್ರಿಕೆಗಳಲ್ಲಿ ಪ್ರಕಟವಾದ ಸುದ್ದಿಯಲ್ಲಿ ಅಣ್ಣಾವ್ರ ಫೋಟೋಗಳನ್ನು ಕಣ್ತುಂಬಿಕೊಂಡೆವು’ ಎಂದಿದ್ದಾರೆ ಪ್ರೊ. ಜಿ. ಹೇಮಂತ್ ಕುಮಾರ್.

ಮೈಸೂರು ವಿವಿಗೆ ಸಂದ ಗೌರವ:

ಅಣ್ಣಾವ್ರಿಗೆ ಸಾವಿರಾರು ಪ್ರಶಸ್ತಿಗಳು ಲಭಿಸಿವೆ. ಕೋಟ್ಯಂತರ ಅಭಿಮಾನಿಗಳಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯ ಕೂಡ ತನ್ನದೇ ಆದ ಗೌರವ ಪ್ರತಿಷ್ಠೆಯನ್ನು ಹೊಂದಿದೆ. ವಿವಿಯ ವಿದ್ಯಾರ್ಥಿಗಳು ವಿಶ್ವದಾದ್ಯಂತ ತಮ್ಮ ಛಾಪು ಮೂಡಿಸಿದ್ದಾರೆ. ಇದೆಲ್ಲದರ ನಡುವೆ ಡಾ. ರಾಜ್‌ಕುಮಾರ್ ಅವರಿಗೆ ಗೌರವ ಡಾಕ್ಟರೇಟ್ ನೀಡಿದ್ದು ಮೈಸೂರು ವಿವಿಯ ಗೌರವ, ಪ್ರತಿಷ್ಠೆಯನ್ನು ಮತ್ತಷ್ಟು ಎತ್ತರಕ್ಕೆ ತೆಗೆದುಕೊಂಡು ಹೋಯಿತು ಅಂದರು ತಪ್ಪಾಗಲಾರದು.

ವರದಿ: ರಾಮ್ ಮೈಸೂರು

ಇದನ್ನೂ ಓದಿ:

ರಾಜ್​ಕುಮಾರ್​ ಗೌರವ ಡಾಕ್ಟರೇಟ್​ ಪಡೆದು 46 ವರ್ಷ ಪೂರ್ಣ; ಕೋಟ್ಯಂತರ ಜನರಿಗೆ ವರನಟ ಸ್ಫೂರ್ತಿ

ಮ್ಯೂಸಿಯಂ ಆಗಲಿದೆ ಡಾ. ರಾಜ್​ ಆಡಿ ಬೆಳೆದ ಮನೆ; ಪುನೀತ್​ ಆಸೆ ಈಡೇರಿಸಲು ಕುಟುಂಬದ ನಿರ್ಧಾರ

ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ಉಚ್ಚಾಟನೆ ನಿರ್ಧಾರವನ್ನು ಪುನರ್​ಪರಿಶೀಲಿಸುವಂತೆ ಕೋರುವೆ: ಶ್ರೀರಾಮುಲು
ಉಚ್ಚಾಟನೆ ನಿರ್ಧಾರವನ್ನು ಪುನರ್​ಪರಿಶೀಲಿಸುವಂತೆ ಕೋರುವೆ: ಶ್ರೀರಾಮುಲು
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಈ ನಾಯಿ ಮುಖ ನೋಡಿ ನಿಮ್ಗೆ ದಂಡ ಹಾಕ್ತಿಲ್ಲ:ಟ್ರಾಫಿಕ್ ಪೊಲೀಸ್
ಈ ನಾಯಿ ಮುಖ ನೋಡಿ ನಿಮ್ಗೆ ದಂಡ ಹಾಕ್ತಿಲ್ಲ:ಟ್ರಾಫಿಕ್ ಪೊಲೀಸ್
ಶ್ರೀನಗರ-ಜಮ್ಮು ಹೆದ್ದಾರಿಯ ನವಯುಗ್ ಸುರಂಗ ಮಾರ್ಗದಲ್ಲಿ ಭೀಕರ ಅಪಘಾತ
ಶ್ರೀನಗರ-ಜಮ್ಮು ಹೆದ್ದಾರಿಯ ನವಯುಗ್ ಸುರಂಗ ಮಾರ್ಗದಲ್ಲಿ ಭೀಕರ ಅಪಘಾತ