AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ದಸರಾ 2026 ಜಂಬೂಸವಾರಿಗೆ ಸ್ಯಾಂಡಲ್‌ವುಡ್ ಮೆರುಗು; ಮೆರವಣಿಗೆಯಲ್ಲಿ 30 ತಾರೆಗಳು ಭಾಗಿ

ವಿಶ್ವ ವಿಖ್ಯಾತ ಮೈಸೂರು ದಸರಾ 2026ರ ಜಂಬೂಸವಾರಿಗೆ ಸ್ಯಾಂಡಲ್‌ವುಡ್‌ನ 30 ಪ್ರಮುಖ ನಟ-ನಟಿಯರು ಆಕರ್ಷಣೆ ನೀಡಲಿದ್ದಾರೆ. ಅಂಬಾವಿಲಾಸ ಅರಮನೆಯಿಂದ ಕೆ.ಆರ್. ವೃತ್ತದವರೆಗೆ ತೆರೆದ ಅಂಬಾರಿ ಬಸ್‌ನಲ್ಲಿ ತಾರೆಯರ ಮೆರವಣಿಗೆ ನಡೆಯಲಿದ್ದು, ಕನ್ನಡ ಚಿತ್ರರಂಗದ 93 ವರ್ಷಗಳ ಸುದೀರ್ಘ ಇತಿಹಾಸ ಸಾರುವ ವಿಶೇಷ ಸ್ತಬ್ಧಚಿತ್ರ ಪ್ರದರ್ಶನಗೊಳ್ಳಲಿದೆ.

ಮೈಸೂರು ದಸರಾ 2026 ಜಂಬೂಸವಾರಿಗೆ ಸ್ಯಾಂಡಲ್‌ವುಡ್ ಮೆರುಗು; ಮೆರವಣಿಗೆಯಲ್ಲಿ 30 ತಾರೆಗಳು ಭಾಗಿ
ಯಶ್, ಸುದೀಪ್, ರಿಷಬ್
ರಾಮ್​, ಮೈಸೂರು
| Edited By: |

Updated on: Sep 10, 2026 | 9:50 AM

Share

ಮುಖ್ಯಾಂಶಗಳು

  • ಅಂಬಾರಿ ಬಸ್‌ನಲ್ಲಿ ತಾರೆಗಳ ಮೆರವಣಿಗೆ
  • ಅರಮನೆಯಿಂದ ಕೆ.ಆರ್. ವೃತ್ತದವರೆಗೆ ಸ್ಯಾಂಡಲ್‌ವುಡ್ ಮೆರುಗು
  • ಶಿವಣ್ಣ, ಯಶ್, ಸುದೀಪ್‌ಗೆ ಆಹ್ವಾನ 

‘ವಿಶ್ವ ವಿಖ್ಯಾತ ಮೈಸೂರು ದಸರಾ 2026’ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಈ ಬಾರಿಯ ಜಂಬೂಸವಾರಿ ಮೆರವಣಿಗೆಗೆ ಈ ಬಾರಿ ಕನ್ನಡ ಚಿತ್ರರಂಗದ ತಾರೆಯರು ವಿಶೇಷ ಮೆರುಗು ನೀಡಲಿದ್ದಾರೆ. ಈ ಬಾರಿಯ ಮೆರವಣಿಗೆಯಲ್ಲಿ ಸ್ಯಾಂಡಲ್‌ವುಡ್‌ನ ಪ್ರಮುಖ 30 ಖ್ಯಾತ ನಟ-ನಟಿಯರು ಭಾಗವಹಿಸಲಿದ್ದಾರೆ. ಇವರೆಲ್ಲರಿಗೂ ವಿಶೇಷ ಆಹ್ವಾನ ಹೋಗಲಿದೆ. ಅಂಬಾವಿಲಾಸ ಅರಮನೆಯಿಂದ ಕೆ.ಆರ್. ವೃತ್ತದವರೆಗೆ ತೆರೆದ ಅಂಬಾರಿ ಬಸ್‌ನಲ್ಲಿ ಈ ಎಲ್ಲಾ ನಟ-ನಟಿಯರು ಸಾಗಲಿದ್ದಾರೆ. ಮೆರವಣಿಗೆಯಲ್ಲಿ ಭಾಗವಹಿಸುವ ಮೂಲಕ ಜನರನ್ನು ರಂಜಿಸಲಿದ್ದಾರೆ.

ದಿಗ್ಗಜರಿಗೆ ಆಹ್ವಾನ ಹಾಗೂ ನಟಿಯರ ಹಾಜರಿ

ಕನ್ನಡ ಚಿತ್ರರಂಗದ ಪ್ರಮುಖ ನಟರಾದ ರಾಕಿಂಗ್ ಸ್ಟಾರ್ ಯಶ್, ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್, ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿ, ರಕ್ಷಿತ್ ಶೆಟ್ಟಿ, ನಟ ಕಿಚ್ಚ ಸುದೀಪ್ ಹಾಗೂ ಕ್ರೇಜಿ ಸ್ಟಾರ್ ರವಿಚಂದ್ರನ್ ಸೇರಿದಂತೆ ಸಾಲು ಸಾಲು ದಿಗ್ಗಜರಿಗೆ ದಸರಾ ಕಮಿಟಿಯಿಂದ ಆಹ್ವಾನ ನೀಡಲಾಗಿದೆ. ಇವರ ಪೈಕಿ ಯಾರೆಲ್ಲ ಆಗಮಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಅಷ್ಟೇ ಅಲ್ಲದೆ, ಹಿರಿಯ ನಟಿ ಉಮಾಶ್ರೀ, ರಚಿತಾ ರಾಮ್, ರುಕ್ಮಿಣಿ ವಸಂತ್ ಮತ್ತು ಸಪ್ತಮಿ ಗೌಡ ಸೇರಿದಂತೆ ಕನ್ನಡದ ಜನಪ್ರಿಯ ನಟಿಯರು ಕೂಡ ಈ ಮೆರವಣಿಗೆಯಲ್ಲಿ ಭಾಗವಹಿಸಿ ಮೆರಗು ನೀಡಲಿದ್ದಾರೆ. ಸ್ಯಾಂಡಲ್‌ವುಡ್ ತಾರೆಯರಿಗೆ ಆಹ್ವಾನ ನೀಡುವಂತೆ ಸರ್ಕಾರದ ಕಡೆಯಿಂದ ಸೂಚನೆ ಸಿಕ್ಕಿದೆ ಎನ್ನಲಾಗಿದೆ.

93 ವರ್ಷಗಳ ಸ್ಯಾಂಡಲ್‌ವುಡ್ ಇತಿಹಾಸದ ವಿಶೇಷ ಸ್ತಬ್ಧಚಿತ್ರ

ಈ ಬಾರಿಯ ದಸರಾದ ಪ್ರಮುಖ ಆಕರ್ಷಣೆಯಾಗಿ 93 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಕನ್ನಡ ಚಿತ್ರರಂಗದ ವೈಭವವನ್ನು ಸಾರುವ ವಿಶೇಷ ಸ್ತಬ್ಧಚಿತ್ರ ನಿರ್ಮಾಣವಾಗಲಿದೆ. 1934ರ ಕಪ್ಪು-ಬೆಳುಪಿನ ಯುಗದಿಂದ ಆರಂಭಗೊಂಡು ಇಂದಿನ ಮಲ್ಟಿಪ್ಲೆಕ್ಸ್ ಹಾಗೂ ಪ್ಯಾನ್-ಇಂಡಿಯಾ ಯುಗದವರೆಗಿನ ಸ್ಯಾಂಡಲ್‌ವುಡ್ ಬೆಳೆದು ಬಂದ ಹಾದಿಯನ್ನು ಈ ಸ್ತಬ್ಧಚಿತ್ರ ಪ್ರದರ್ಶಿಸಲಿದೆ.

ಇದನ್ನೂ ಓದಿ: ಮೈಸೂರು ದಸರಾ ಗಜಪಡೆಯ ತಾಲೀಮಿನ ಆಕರ್ಷಕ ಚಿತ್ರಗಳು ಇಲ್ಲಿವೆ

ಜೊತೆಗೆ, ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ ವರನಟ ಡಾ. ರಾಜ್‌ಕುಮಾರ್, ಸಾಹಸಸಿಂಹ ಡಾ. ವಿಷ್ಣುವರ್ಧನ್, ರೆಬೆಲ್ ಸ್ಟಾರ್ ಅಂಬರೀಶ್ ಹಾಗೂ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ಸ್ಮರಣಾರ್ಥ ವಿಶೇಷ ವಿನ್ಯಾಸದ ಶ್ರದ್ಧಾಂಜಲಿ ಸ್ತಬ್ಧಚಿತ್ರವು ಪ್ರದರ್ಶನಗೊಳ್ಳಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಮ್​, ಮೈಸೂರು
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ