‘ನಾ ನಿನ್ನ ಬಿಡಲಾರೆ’ ಶೀರ್ಷಿಕೆಯಲ್ಲಿ ಮತ್ತೊಂದು ಸಿನಿಮಾ; ಈ ಬಾರಿಯೂ ಹಾರರ್​

ಜುಲೈ ತಿಂಗಳ ಅಂತ್ಯದಲ್ಲಿ ‘ನಾ ನಿನ್ನ ಬಿಡಲಾರೆ’ ಸಿನಿಮಾದ ಶೂಟಿಂಗ್​ ಶುರುವಾಗಲಿದೆ. ಹೊಸನಗರದ ಸಮೀಪ ಇರುವ ಅಂದಾಜು 150 ವರ್ಷಗಳಷ್ಟು ಹಳೆಯ ಮನೆಯಲ್ಲಿ 30 ದಿನ ಶೂಟಿಂಗ್​ ನಡೆಯಲಿದೆ. ಇದು ಹಾರರ್​ ಸಿನಿಮಾ ಆಗಿದ್ದು, ಹೇಮಂತ್​ ಹೆಗಡೆ ನಟನೆ ಜೊತೆ ನಿರ್ದೇಶನ ಮಾಡುತ್ತಿದ್ದಾರೆ. ಅಪೂರ್ವಾ, ಭಾವನಾ ರಾಮಣ್ಣ ಮುಂತಾದವರು ‘ನಾ ನಿನ್ನ ಬಿಡಲಾರೆ’ ಸಿನಿಮಾದ ಪಾತ್ರವರ್ಗದಲ್ಲಿದ್ದಾರೆ.

‘ನಾ ನಿನ್ನ ಬಿಡಲಾರೆ’ ಶೀರ್ಷಿಕೆಯಲ್ಲಿ ಮತ್ತೊಂದು ಸಿನಿಮಾ; ಈ ಬಾರಿಯೂ ಹಾರರ್​
ಹೇಮಂತ್​ ಹೆಗಡೆ, ಅಪೂರ್ವಾ
Follow us
ಮದನ್​ ಕುಮಾರ್​
|

Updated on: Jun 25, 2024 | 9:29 PM

1979ರಲ್ಲಿ ಅನಂತ್​ ನಾಗ್​, ಲಕ್ಷ್ಮೀ ನಟನೆಯ ‘ನಾ ನಿನ್ನ ಬಿಡಲಾರೆ’ (Naa Ninna Bidalaare) ಸಿನಿಮಾ ಬಿಡುಗಡೆ ಆಗಿತ್ತು. ಹಾರರ್​ ಪ್ರಿಯರಿಗೆ ಆ ಸಿನಿಮಾ ಮಸ್ತ್​ ಮನರಂಜನೆ ನೀಡಿತ್ತು. ಈಗ ಮತ್ತೆ ಅದೇ ಶೀರ್ಷಿಕೆಯಲ್ಲಿ ಹೊಸ ಸಿನಿಮಾ ಮೂಡಿಬರುತ್ತಿದೆ. ಈ ಹೊಸ ಸಿನಿಮಾದಲ್ಲೂ ಹಾರರ್​ (Horror) ಕಥಾಹಂದರ ಇರಲಿದೆ ಎಂಬುದು ವಿಶೇಷ. ಆದರೆ, ಹೊಸ ‘ನಾ ನಿನ್ನ ಬಿಡಲಾರೆ’ ಸಿನಿಮಾದಲ್ಲಿ ನಟಿಸಲಿರುವುದು ಸಂಪೂರ್ಣ ಬೇರೆ ತಂಡ. ಹಳೇ ಸಿನಿಮಾಗೂ ಈ ಹೊಸ ಸಿನಿಮಾದ ಕಥೆಗೂ ಸಂಬಂಧ ಇಲ್ಲ. ಕಿರುತೆರೆ ಮತ್ತು ಹಿರಿತೆರೆಯಲ್ಲಿ ತಮ್ಮದೇ ಚಾಪು ಮೂಡಿಸಿರುವ ನಟ ಹೇಮಂತ್ ಹೆಗಡೆ (Hemanth Hegde) ಅವರು ಈಗ ‘ನಾ ನಿನ್ನ ಬಿಡಲಾರೆ’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದು, ಪ್ರಮುಖ ಪಾತ್ರದಲ್ಲೂ ನಟಿಸುತ್ತಿದ್ದಾರೆ.

‘ನಾ ನಿನ್ನ ಬಿಡಲಾರೆ’ ಸಿನಿಮಾಗೆ ಬೆಂಗಳೂರಿನ ಪದ್ಮನಾಭ ನಗರದ ಶ್ರೀಲಕ್ಷ್ಮೀಕಾಂತ ದೇವಸ್ಥಾನದಲ್ಲಿ ಮುಹೂರ್ತ ನೆರವೇರಿತು. ಸಿನಿಮಾದ ಮೊದಲ ಸನ್ನಿವೇಶಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಎನ್.ಎಂ. ಸುರೇಶ್ ಅವರು ಆರಂಭ ಫಲಕ ತೋರಿದರು. ನೈಸ್ ಸಂಸ್ಥೆಯ ಅಶೋಕ್ ಖೇಣಿ ಕ್ಯಾಮೆರಾ ಚಾಲನೆ ಮಾಡುವ ಮೂಲಕ ಶುಭ ಕೋರಿದರು. ಚಿತ್ರರಂಗದ ಅನೇಕ ಗಣ್ಯರು ಈ ಸಿನಿಮಾದ ಮುಹೂರ್ತ ಸಮಾರಂಭದಲ್ಲಿ ಭಾಗಿಯಾದರು.

ಸಿನಿಮಾದ ಬಗ್ಗೆ ಹೇಮಂತ್​ ಹೆಗಡೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ‘ಈ ಶೀರ್ಷಿಕೆ ನಮ್ಮ ಸಿನಿಮಾದ ಕಥೆಗೆ ಸೂಕ್ತವಾಗಿದೆ. ಆದ್ದರಿಂದ ‘ನಾ ನಿನ್ನ ಬಿಡಲಾರೆ’ ಎಂದು ಇಟ್ಟಿದ್ದೇವೆ. ಆದರೆ ಹಳೆಯ ಸಿನಿಮಾದ ಕಥೆಯೇ ಬೇರೆ, ನಮ್ಮ ಸಿನಿಮಾದ ಕಥೆಯೇ ಬೇರೆ. ಕನ್ನಡ ಚಿತ್ರರಂಗದಲ್ಲಿ ಒಳ್ಳೆಯ ಹಾರರ್ ಸಿನಿಮಾ ಬಂದು ಬಹಳ ಸಮಯ ಆಗಿದೆ. ಆದ್ದರಿಂದ ಹಾರರ್ ಕಥೆಯನ್ನು ಆಯ್ಕೆ ಮಾಡಿಕೊಂಡಿದ್ದೇವೆ’ ಎಂದು ಅವರು ಹೇಳಿದ್ದಾರೆ. ‘ಅನ್ವಿತಾ ಆರ್ಟ್ಸ್’ ಮೂಲಕ ಶಶಿಕಿರಣ್ ರಂಗನಾಥ್, ಕಿರಣ್ ನಾಗರಾಜ್ ಮತ್ತು ಬಾಲಕೃಷ್ಣ ಪೆರುಂಬಲ ಅವರು ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ.

ಇದನ್ನೂ ಓದಿ: ಜೂ.30ಕ್ಕೆ ಚಲನಚಿತ್ರ ನಿರ್ಮಾಪಕರ ಸಂಘದ ಕಟ್ಟಡ ಉದ್ಘಾಟನೆ ಮಾಡಲಿರುವ ಸಿಎಂ

ಜುಲೈ ಅಂತ್ಯಕ್ಕೆ ‘ನಾ ನಿನ್ನ ಬಿಡಲಾರೆ’ ಸಿನಿಮಾದ ಚಿತ್ರೀಕರಣ ಆರಂಭವಾಗಲಿದೆ. ಹೊಸನಗರದಲ್ಲಿನ ನೂರೈವತ್ತು ವರ್ಷ ಹಳೆಯ ಮನೆಯಲ್ಲಿ ಮೂವತ್ತು ದಿನ ಚಿತ್ರೀಕರಣ ಮಾಡಲಾಗುವುದು. ಹೇಮಂತ್​ ಹೆಗಡೆ ಹೆಂಡತಿ ಪಾತ್ರದಲ್ಲಿ ಅಪೂರ್ವಾ ನಟಿಸಲಿದ್ದಾರೆ. ಭಾವನಾ ರಾಮಣ್ಣ ಅವರು ದೆವ್ವದ ಪಾತ್ರಕ್ಕೆ ಬಣ್ಣ ಹಚ್ಚಲಿದ್ದಾರೆ. ಕಿಶೋರ್, ಶಂಕರ್ ಅಶ್ವಥ್, ಮಕರಂದ್ ದೇಶಪಾಂಡೆ, ಶರತ್ ಲೋಹಿತಾಶ್ವ, ರೇವಣ್ಣ ಸಿದ್ದಯ್ಯ, ಸುಚೇಂದ್ರ ಪ್ರಸಾದ್ ಮುಂತಾದವರು ಪಾತ್ರವರ್ಗದಲ್ಲಿ ಇದ್ದಾರೆ.

‘ನಾ ನಿನ್ನ ಬಿಡಲಾರೆ’ ಸಿನಿಮಾಗೆ ವಾಸುಕಿ ವೈಭವ್ ಸಂಗೀತ ನಿರ್ದೇಶನ ಮಾಡಲಿದ್ದಾರೆ. ಕೃಷ್ಣ ಬಂಜನ್ ಅವರ ಛಾಯಾಗ್ರಹಣ ಇರಲಿದೆ. ‘ಘೋಸ್ಟ್ 2.0’ ಎಂದು ಟ್ಯಾಗ್​ಲೈನ್​ ಈ ಸಿನಿಮಾದ ಶೀರ್ಷಿಕೆಗೆ ಇದೆ. ‘ನನ್ನದು ಈ ಸಿನಿಮಾದಲ್ಲಿ ಮಧ್ಯಮ ವಯಸ್ಸಿನ ಮಲೆನಾಡು ಬ್ರಾಹ್ಮಣ ಮಹಿಳೆಯ ಪಾತ್ರ. ನಾನು ಹುಟ್ಟಿ ಬೆಳೆದಿದ್ದು ಶಿವಮೊಗ್ಗದ ಬ್ರಾಹ್ಮಣರ ವಠಾರದಲ್ಲಿ ಆದ್ದರಿಂದ ನನಗೆ ಈ ಪಾತ್ರ ಬಹಳ ಹತ್ತಿರವಾಯಿತು’ ಎಂದು ಭಾವನಾ ರಾಮಣ್ಣ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ