Breaking News: ಎದೆ ನೋವಿನಿಂದ ಹಂಸಲೇಖ ಆಸ್ಪತ್ರೆಗೆ ದಾಖಲು; ಇಲ್ಲಿದೆ ಹೆಲ್ತ್ ಅಪ್ಡೇಟ್
Nadabrahma Hamsalekha: ‘ನಾದಬ್ರಹ್ಮ’ ಹಂಸಲೇಖ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ.
ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ (Hamsalekha) ಅವರಿಗೆ ಎದೆ ನೋವು (Chest Pain) ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೆಂಗಳೂರಿನ ರಾಜಾಜಿನಗರ ಫಸ್ಟ್ ಬ್ಲಾಕ್ನಲ್ಲಿರುವ ಅಪೋಲೊ ಆಸ್ಪತ್ರೆಯಲ್ಲಿ ಹಂಸಲೇಖ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯದಲ್ಲಿ ಏರುಪೇರು ಆದ ವಿಷಯ ಕೇಳಿ ಅಭಿಮಾನಿಗಳಿಗೆ ಆತಂಕ ಆಗಿದೆ. ಆದರೆ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ಹಂಸಲೇಖ ಅವರ ಆರೋಗ್ಯ ತಪಾಸಣೆ ಮಾಡಿರುವ ವೈದ್ಯರು ಯಾವುದೇ ತೊಂದರೆ ಇಲ್ಲ ಎಂದು ಹೇಳಿದ್ದಾರೆ. ಈ ವಿಷಯ ತಿಳಿದು ಆಪ್ತರು ಹಾಗೂ ಅಭಿಮಾನಿಗಳು ನಿಟ್ಟುಸಿರು ಬಿಡುವಂತಾಗಿದೆ. ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಎದೆ ನೋವು ಕಾಣಿಸಿಕೊಂಡಿದೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಹಿಂದೆ ಹಂಸಲೇಖ ಅವರು ಓಪನ್ ಹಾರ್ಟ್ ಸರ್ಜರಿ ಮಾಡಿಸಿಕೊಂಡಿದ್ದರು. ಈಗ ಒಂದು ದಿನ ವಿಶ್ರಾಂತಿ ಪಡೆಯಲು ಹಂಸಲೇಖಗೆ ವೈದ್ಯರು ಸೂಚಿಸಿದ್ದಾರೆ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಯಲ್ಲಿ ಹಂಸಲೇಖ ಉಳಿದುಕೊಂಡಿದ್ದಾರೆ.
Published On - 1:13 pm, Mon, 10 October 22