ನಾಡಪ್ರಭು ಕೆಂಪೇಗೌಡರ ಜೀವನ ಆಧರಿಸಿ ಬರ್ತಿದೆ ಸಿನಿಮಾ; ನಟಿಸಲಿದ್ದಾರೆ ಕನ್ನಡದ ಜನಪ್ರಿಯ ನಟ
ಬೆಂಗಳೂರಿಗೆ ಗಾರ್ಡನ್ ಸಿಟಿ, ಸಿಲಿಕಾನ್ ಸಿಟಿ ಎಂಬ ಬಿರುದುಗಳು ಇವೆ. ಇದನ್ನು ಕಟ್ಟಿ ಬೆಳೆಸಿದ್ದು ಕೆಂಪೇಗೌಡರು. ಅವರು ಬೆಂಗಳೂರು ಕಟ್ಟಿದ್ದು ಹೇಗೆ ಎಂಬ ಕಥೆಯನ್ನು ಸಿನಿಮಾ ರೂಪಕ್ಕೆ ಇಳಿಸಲಾಗುತ್ತಿದೆ. ರಾಜ್ಯ ಪ್ರಶಸ್ತಿ ವಿಜೇತ ದಿನೇಶ್ ಬಾಬು ‘ಧರ್ಮಬೀರು ನಾಡಪ್ರಭು ಕೆಂಪೇಗೌಡ’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.
ಕನ್ನಡ ಚಿತ್ರರಂಗದಲ್ಲಿ ನಾಡಪ್ರಭು ಕೆಂಪೇಗೌಡರ (Kempegowda) ಜೀವನ ಆಧರಿಸಿ ಸಂಪೂರ್ಣ ಸಿನಿಮಾ ಬಂದಿಲ್ಲ. ಕೆಲವು ಸಿನಿಮಾಗಳಲ್ಲಿ ಇವರ ಬಗ್ಗೆ ಹೇಳಲಾಗಿದೆ. ಇನ್ನೂ ಕೆಲವು ಸಿನಿಮಾಗಳಲ್ಲಿ ಅವರ ಬಗ್ಗೆ ತೋರಿಸಲಾಗಿದೆ. ಈಗ ಕೆಂಪೇಗೌಡರ ಜೀವನ ಚರಿತ್ರೆ ಆಧರಿಸಿ ಸಿನಿಮಾ ಮಾಡಲು ತಯಾರಿ ನಡೆದಿದೆ. ಬೆಂಗಳೂರು ಕಟ್ಟಿದ ನಾಡಪ್ರಭುವಿನ ಕಥೆ ಸಿನಿಮಾ ಆಗಲಿದೆ. ‘ಧರ್ಮಬೀರು ನಾಡಪ್ರಭು ಕೆಂಪೇಗೌಡ’ ಎಂದು ಚಿತ್ರಕ್ಕೆ ಶೀರ್ಷಿಕೆ ಇಡಲಾಗಿದೆ.
ಬೆಂಗಳೂರಿಗೆ ಗಾರ್ಡನ್ ಸಿಟಿ, ಸಿಲಿಕಾನ್ ಸಿಟಿ ಎಂಬ ಬಿರುದುಗಳು ಇವೆ. ಇದನ್ನು ಕಟ್ಟಿ ಬೆಳೆಸಿದ್ದು ಕೆಂಪೇಗೌಡರು. ಅವರು ಬೆಂಗಳೂರು ಕಟ್ಟಿದ್ದು ಹೇಗೆ ಎಂಬ ಕಥೆಯನ್ನು ಸಿನಿಮಾ ರೂಪಕ್ಕೆ ಇಳಿಸಲಾಗುತ್ತಿದೆ. ರಾಜ್ಯ ಪ್ರಶಸ್ತಿ ವಿಜೇತ ದಿನೇಶ್ ಬಾಬು ‘ಧರ್ಮಬೀರು ನಾಡಪ್ರಭು ಕೆಂಪೇಗೌಡ’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.
ಕನ್ನಡದಲ್ಲಿ ಹಲವು ಸಿನಿಮಾಗಳನ್ನು ನಿರ್ಮಿಸಿದ ಅನುಭವ ದಿನೇಶ್ ಬಾಬು ಅವರಿಗೆ ಇದೆ. ಈಗ ಅವರು ಈ ಐತಿಹಾಸಿಕ ಕಥೆಯುಳ್ಳ ಸಿನಿಮಾ ನಿರ್ದೇಶನ ಮಾಡಲು ಮುಂದಾಗಿದ್ದಾರೆ. ಕೆಂಪೇಗೌಡರ ಪಾತ್ರದಲ್ಲಿ ಯಾರು ಬಣ್ಣ ಹಚ್ಚುತ್ತಾರೆ ಎನ್ನುವ ಕುತೂಹಲ ಮೂಡೋದು ಸಹಜ. ಇದನ್ನು ಚಿತ್ರತಂಡ ರಿವೀಲ್ ಮಾಡಿಲ್ಲ. ಖ್ಯಾತ ನಟರೊಬ್ಬರು ಈ ಪಾತ್ರ ಮಾಡಲಿದ್ದಾರಂತೆ. ಮುಂದಿನ ದಿನಗಳಲ್ಲಿ ಚಿತ್ರತಂಡ ಈ ಬಗ್ಗೆ ಮಾಹಿತಿ ನೀಡಲಿದೆ.
ಕಿರಣ್ ತೋಟಂಬೈಲ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಅವರು ವೃತ್ತಿಯಲ್ಲಿ ವೈದ್ಯರು. ಕೆಂಪೇಗೌಡ ಮೆಡಿಕಲ್ ಕಾಲೇಜ್‌ನಲ್ಲಿ ಅವರು ಶಿಕ್ಷಣ ಪಡೆದಿದ್ದಾರೆ. ಆಗಲೇ ಕೆಂಪೇಗೌಡರ ಬಗ್ಗೆ ಸಿನಿಮಾ ಮಾಡಬೇಕು ಅಂದುಕೊಂಡಿದ್ದರು. ಅದರಂತೆ ‘ಧರ್ಮಬೀರು ನಾಡಪ್ರಭು ಕೆಂಪೇಗೌಡ’ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ.
ಇದನ್ನೂ ಓದಿ: ಕೆಂಪೇಗೌಡ ಏರ್ಪೋರ್ಟ್ನಲ್ಲಿ ವಿದೇಶಿ ಪ್ರಜೆ ಹುಚ್ಚಾಟ; ಮಹಿಳಾ ತಪಾಸಣಾ ಕೊಠಡಿಗೆ ನುಗ್ಗಲು ಯತ್ನ
ಧರ್ಮೇಂದ್ರ ಕುಮಾರ್ ಅರೇನಹಳ್ಳಿ ‘ಧರ್ಮಬೀರು ನಾಡಪ್ರಭು ಕೆಂಪೇಗೌಡ’ ಸಿನಿಮಾಗೆ ಕಥೆ ಬರೆದಿದ್ದಾರೆ. ಸಂಕೇತ್ ಎಂವೈಎಸ್ ಛಾಯಾಗ್ರಹಣ, ಉಜ್ವಲ್ ಕುಲಕರ್ಣಿ ಸಂಕಲನ ಚಿತ್ರಕ್ಕಿದೆ. ಕಿರಣ್ ತೋಟಂಬೈಲ್ ಅವರೇ ಸಂಗೀತ ನೀಡುತ್ತಿದ್ದಾರೆ. ವಿ ನಾಗೇಂದ್ರ ಪ್ರಸಾದ್ ಹಾಗೂ ಸಂತೋಷ್ ನಾಯಕ್ ಸಾಹಿತ್ಯ ಬರೆದಿದ್ದಾರೆ. ಮಾಸ್ತಿ ಹಾಗೂ ರಘು ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ. ಕನ್ನಡದ ಜೊತೆ ಇಂಗ್ಲಿಷ್ನಲ್ಲೂ ಸಿನಿಮಾ ನಿರ್ಮಾಣವಾಗಲಿದೆ. ಮೇ ಅಥವಾ ಜೂನ್ ತಿಂಗಳಲ್ಲಿ ಸಿನಿಮಾಗೆ ಮುಹೂರ್ತ ನಡೆಯಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ