ಡಾಲಿ ಧನಂಜಯ ನಿರ್ಮಾಣದ ‘ವಿದ್ಯಾಪತಿ’ ಸಿನಿಮಾ ಏಪ್ರಿಲ್ 10ರಂದು ಬಿಡುಗಡೆ

|

Updated on: Jan 14, 2025 | 7:03 PM

‘ವಿದ್ಯಾಪತಿ’ ಚಿತ್ರದಲ್ಲಿ ನಾಗಭೂಷಣ್ ಮತ್ತು ಮಲೈಕಾ ಟಿ. ವಸುಪಾಲ್ ಅವರು ಜೋಡಿಯಾಗಿ ನಟಿಸಿದ್ದಾರೆ. ‘ಡಾಲಿ ಪಿಕ್ಚರ್ಸ್’ ಮೂಲಕ ಡಾಲಿ ಧನಂಜಯ ಅವರು ಬಂಡವಾಳ ಹೂಡಿದ್ದಾರೆ. ಏಪ್ರಿಲ್ 10ಕ್ಕೆ ‘ವಿದ್ಯಾಪತಿ’ ಸಿನಿಮಾ ತೆರೆಕಾಣಲಿದೆ. ಸಂಕ್ರಾಂತಿ ಹಬ್ಬದ ಪ್ರಯುಕ್ತ ಒಂದು ವಿಡಿಯೋ ಹಂಚಿಕೊಳ್ಳುವ ಮೂಲಕ ಚಿತ್ರತಂಡ ಈ ಮಾಹಿತಿ ನೀಡಿದೆ.

ಡಾಲಿ ಧನಂಜಯ ನಿರ್ಮಾಣದ ‘ವಿದ್ಯಾಪತಿ’ ಸಿನಿಮಾ ಏಪ್ರಿಲ್ 10ರಂದು ಬಿಡುಗಡೆ
Nagabhushan, Daali Dhananjay
Follow us on

ಡಾಲಿ ಧನಂಜಯ್ ಮತ್ತು ನಾಗಭೂಷಣ್ ಅವರು ಉತ್ತಮ ಸ್ನೇಹಿತರು. ಅವರ ಕಾಂಬಿನೇಷನ್​ನಲ್ಲಿ ಬ್ಯಾಕ್ ಟು ಬ್ಯಾಕ್ ಸಿನಿಮಾಗಳು ಬರುತ್ತಿವೆ. ಡಾಲಿ ಧನಂಜಯ್ ನಿರ್ಮಾಣ ಮಾಡಿರುವ, ನಾಗಭೂಷಣ್ ನಟಿಸಿರುವ ‘ವಿದ್ಯಾಪತಿ’ ಸಿನಿಮಾ ಈಗ ಬಿಡುಗಡೆಗೆ ಸಜ್ಜಾಗುತ್ತಿದೆ. ನಾಡಿನ ಎಲ್ಲೆಡೆ ಸಂಕ್ರಾಂತಿ ಹಬ್ಬದ ಸಂಭ್ರಮ ಕಳೆ ಕಟ್ಟಿದೆ. ಸ್ಯಾಂಡಲ್​ವುಡ್​ನಲ್ಲಿಯೂ ಸುಗ್ಗಿ ಸಂಭ್ರಮ ಮನೆಮಾಡಿದೆ. ಈ ಖುಷಿಯ ಸಂದರ್ಭದಲ್ಲೇ ‘ವಿದ್ಯಾಪತಿ’ ಸಿನಿಮಾದ ರಿಲೀಸ್ ಡೇಟ್​ ಘೋಷಣೆ ಮಾಡಲಾಗಿದೆ.

ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು ಸಿನಿಮಾದ ಕೆಲಸಗಳಿಗೆ ಸಣ್ಣ ಬಿಡುವು ನೀಡಿ ಸಂಕ್ರಾಂತಿ ಹಬ್ಬವನ್ನು ಸೆಲೆಬ್ರೆಟ್ ಮಾಡುತ್ತಿದ್ದಾರೆ. ಈ ಖುಷಿಯ ನಡುವೆ ಡಾಲಿ ಧನಂಜಯ್, ನಾಗಭೂಷಣ ಮತ್ತು ಕಾರ್ತಿಕ್ ಗೌಡ ಅವರು ಒಂದು ವಿಶೇಷವಾದ ವಿಡಿಯೋ ಹಂಚಿಕೊಂಡು, ಪ್ರಾಸಬದ್ಧವಾಗಿ ಮಾತನಾಡುತ್ತಾ ‘ವಿದ್ಯಾಪತಿ’ ಬಿಡುಗಡೆ ದಿನಾಂಕದ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.

ಈ ವಿಡಿಯೋ ಮೂಲಕ ‘ಡಾಲಿ ಪಿಕ್ಚರ್ಸ್’ ಸಂಸ್ಥೆಯು ಹೊಸ ಸುದ್ದಿ ನೀಡಿದೆ. ಕಳೆದ ಸಂಕ್ರಾಂತಿ ಹಬ್ಬಕ್ಕೆ ‘ವಿದ್ಯಾಪತಿ’ ಸಿನಿಮಾ ಘೋಷಣೆ ಆಗಿತ್ತು. ಈ ವರ್ಷ ಸಂಕ್ರಾತಿ ಪ್ರಯುಕ್ತ ಡಾಲಿ ಧನಂಜಯ್ ಅವರು ರಿಲೀಸ್ ದಿನಾಂಕ ತಿಳಿಸಿದ್ದಾರೆ. ಏಪ್ರಿಲ್ 10ರಂದು ಈ ಸಿನಿಮಾ ತೆರೆ ಕಾಣಲಿದೆ. ಧನಂಜಯ್ ಒಡೆತನದ ‘ಡಾಲಿ ಪಿಕ್ಚರ್ಸ್‌’ ಮೂಲಕ ನಿರ್ಮಾಣ ಆಗುತ್ತಿರುವ 4ನೇ ಸಿನಿಮಾ ಇದು.

‘ಟಗರು ಪಲ್ಯ’ ಸಿನಿಮಾದಲ್ಲಿ ನಾಯಕನಾಗಿ ನಟಿಸಿದ್ದ ನಾಗಭೂಷಣ್ ಅವರು ‘ವಿದ್ಯಾಪತಿ’ ಚಿತ್ರದಲ್ಲಿ ಕರಾಟೆ ಕಿಂಗ್ ಅವತಾರ ತಾಳಿದ್ದಾರೆ. ಕರಾಟೆ ಮಾಸ್ಟರ್ ಪಾತ್ರದಲ್ಲಿ ರಂಗಾಯಣ ರಘು ನಟಿಸಿದ್ದಾರೆ. ನಾಯಕಿಯಾಗಿ ಮಲೈಕಾ ಟಿ. ವಸುಪಾಲ್ ಅವರು ಅಭಿನಯಿಸಿದ್ದಾರೆ. ಈ ಸಿನಿಮಾದ ಪಾತ್ರವರ್ಗದಲ್ಲಿ ಇನ್ನೂ ಅನೇಕ ಕಲಾವಿದರು ನಟಿಸಿದ್ದು, ಆ ಬಗ್ಗೆ ಸದ್ಯದಲ್ಲೇ ಚಿತ್ರತಂಡ ಹೆಚ್ಚಿನ ಮಾಹಿತಿ ನೀಡಲಿದೆ.

ಇದನ್ನೂ ಓದಿ: ಡಾಲಿ ಧನಂಜಯ್-ಧನ್ಯತಾ ಮದುವೆಯ ಸರಳ, ಸುಂದರ ಲಗ್ನಪತ್ರಿಕೆ

‘ವಿದ್ಯಾಪತಿ’ ಚಿತ್ರಕ್ಕೆ ಇಶಾಂ ಹಾಗೂ ಹಸೀಂ ಖಾನ್ ಅವರು ನಿರ್ದೇಶನ ಮಾಡಿದ್ದಾರೆ. ಕಥೆ ಬರೆದು, ಸಂಕಲನವನ್ನೂ ಅವರೇ ಮಾಡುತ್ತಿದ್ದಾರೆ. ಲವಿತ್ ಅವರ ಛಾಯಾಗ್ರಹಣ, ಡಾಸ್ಮೋಡ್ ಅವರ ಸಂಗೀತ ನಿರ್ದೇಶನ, ಮುರಳಿ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಸುಜಿತ್ ವೆಂಕಟರಾಮಯ್ಯ ಅವರು ಸಾಹಿತ್ಯ ಬರೆದಿದ್ದಾರೆ. ಅರ್ಜುನ್ ಮಾಸ್ಟರ್ ಅವರು ಸಾಹಸ ನಿರ್ದೇಶನ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.