‘ನಾನು ಉಳಿಯುವ ರೀತಿ ಕಾಣುತ್ತಿಲ್ಲ’; ಹೊಸ ವಿಡಿಯೋ ಮಾಡಿ ಹರಿಬಿಟ್ಟ ನಟಿ ವಿಜಯಲಕ್ಷ್ಮಿ

ಈ ಬಗ್ಗೆ ಟಿವಿ9 ಕನ್ನಡದ ಜತೆಗೆ ಮಾತನಾಡಿದ ಅವರು, ‘ನನಗೆ ಕೊವಿಡ್​ ಪಾಸಿಟಿವ್​ ಆಗಿದೆ. ನ್ಯುಮೋನಿಯಾ ಕೂಡ ಇದೆ. ನನ್ನ ಅಕ್ಕನಿಗೂ ಸೀರಿಯಸ್​ ಆಗಿದೆ. ನನಗೆ ಯಾರೂ ಸಹಾಯ ಮಾಡ್ತಾ ಇಲ್ಲ’ ಎಂದು ಬೇಸರ ಹೊರ ಹಾಕಿದ್ದಾರೆ.

‘ನಾನು ಉಳಿಯುವ ರೀತಿ ಕಾಣುತ್ತಿಲ್ಲ’; ಹೊಸ ವಿಡಿಯೋ ಮಾಡಿ ಹರಿಬಿಟ್ಟ ನಟಿ ವಿಜಯಲಕ್ಷ್ಮಿ
ನಟಿ ವಿಜಯಲಕ್ಷ್ಮಿ
Edited By:

Updated on: Sep 16, 2021 | 2:02 PM

ನಟಿ ವಿಜಯಲಕ್ಷ್ಮಿ ಅವರು ಚಿತ್ರರಂಗದಲ್ಲಿ ಆ್ಯಕ್ಟಿವ್​ ಆಗಿಲ್ಲ. ಆದರೆ, ಇತ್ತೀಚೆಗೆ ಅವರು ಸುದ್ದಿಯಲ್ಲಿದ್ದಾರೆ. ಅವರ ಸಹೋದರಿ ಉಷಾ ಅವರಿಗೆ ಅನಾರೋಗ್ಯ ಕಾಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈಗ ವಿಜಯಲಕ್ಷ್ಮಿಗೆ ಕೊವಿಡ್​ ಅಂಟಿದೆ. ಇದರಿಂದ ಅವರ ಆರೋಗ್ಯ ಗಂಭೀರವಾಗಿದೆ. ಈ ಬಗ್ಗೆ ವಿಡಿಯೋ ಮಾಡಿ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

‘ನಾನು ತುಂಬಾ ನರಳುತ್ತಿದ್ದೇನೆ. ಐದು ದಿನದಿಂದ ಜ್ವರ ಬಂದಿದೆ. ಕಷ್ಟಪಟ್ಟು ಆಸ್ಪತ್ರೆಗೆ ಬಂದಿದ್ದೇನೆ. ನಾನು ಕೊವಿಡ್​ ಸೆಂಟರ್​ಗೆ ಹೋಗಬೇಕು. ಈ ಬಗ್ಗೆ ಕಲಾವಿದರ ಸಂಘಕ್ಕೆ ಮನವಿ ಮಾಡಿದ್ದೇನೆ. ನಾನು ಎಲ್ಲರ ಜತೆಯೂ ಮಾತನಾಡುತ್ತಾ ಇದ್ದೇನೆ. ಆದರೆ, ಪ್ರಯೋಜನ ಆಗುತ್ತಿಲ್ಲ. ನನಗೆ ಕೊವಿಡ್​ ನ್ಯುಮೋನಿಯಾ ಅಟ್ಯಾಕ್​ ಆಗಿದೆ. ನಾನು ಉಳಿಯುವ ರೀತಿ ಕಾಣುತ್ತಿಲ್ಲ. ಐದು ದಿನದಿಂದ ಊಟ ಸರಿಯಾಗಿ ಸಿಗುತ್ತಿಲ್ಲ. ನಾನು ಎಲ್ಲಿಯೂ ಹೋಗಿಲ್ಲ. ಕರ್ನಾಟಕದಲ್ಲೇ ಇದ್ದೇನೆ’ ಎಂದಿದ್ದಾರೆ ಅವರು.

ಈ ಬಗ್ಗೆ ಟಿವಿ9 ಕನ್ನಡದ ಜತೆಗೆ ಮಾತನಾಡಿದ ಅವರು, ‘ನನಗೆ ಕೊವಿಡ್​ ಪಾಸಿಟಿವ್​ ಆಗಿದೆ. ನ್ಯುಮೋನಿಯಾ ಕೂಡ ಇದೆ. ನನ್ನ ಅಕ್ಕನಿಗೂ ಸೀರಿಯಸ್​ ಆಗಿದೆ. ನನಗೆ ಯಾರೂ ಸಹಾಯ ಮಾಡ್ತಾ ಇಲ್ಲ’ ಎಂದು ಬೇಸರ ಹೊರ ಹಾಕಿದ್ದಾರೆ.

‘ಉಷಾ ತುಂಬಾ ವೀಕ್​​ ಆಗಿದ್ದಾರೆ. ಎರಡು ಮೂರು ದಿನದಿಂದ ನೆನಪು ಮಾಡಿಕೊಳ್ಳಲು ಕಷ್ಟಪಡುತ್ತಿದ್ದಾರೆ. ಮಾತನಾಡೋಕೆ ಆಗುತ್ತಿಲ್ಲ. ಸರ್ಜರಿ ಆದ ನಂತರ ಇಷ್ಟೆಲ್ಲ ಆಗಿದೆ. ಡಾಕ್ಟರ್​ ಜೊತೆ ಮಾತಾಡಿ ನನಗೆ ಸಾಕಾಗಿದೆ. ಯಾರೂ ಕೂಡ ಅವರು ಮಾಡಿರುವ ತಪ್ಪನ್ನು ಒಪ್ಪಿಕೊಳ್ಳುತ್ತಿಲ್ಲ. ಈಗ ಉಷಾ ಅವರಿಗೆ ಬೇರೆ ಕಡೆ ಚಿಕಿತ್ಸೆ ಕೊಡಿಸೋಕೆ ನಮ್ಮ ಬಳಿ ದುಡ್ಡಿಲ್ಲ. ನಾವೀಗ ಬಹಳ ನೋವಿನಲ್ಲಿ ಇದ್ದೇವೆ. ದಯವಿಟ್ಟು ನಮಗೆ ಆರ್ಥಿಕವಾಗಿ ಸಹಾಯ ಮಾಡಿ’ ಎಂದು ವಿಜಯಲಕ್ಷ್ಮಿ ಮನವಿ ಮಾಡಿಕೊಂಡಿದ್ದರು. ಇದಾದ ಕೆಲವೇ ತಿಂಗಳಲ್ಲಿ ಅವರಿಗೆ ಕೊವಿಡ್​ ಆಗಿದೆ.

ಇದನ್ನೂ ಓದಿ: ಜಯಪ್ರದಾ ಕುಟುಂಬದಿಂದ ಅನ್ಯಾಯವಾಗಿದೆ, ದಯವಿಟ್ಟು ನ್ಯಾಯ ಕೊಡಿಸಿ: ಸಂಸದೆ ಸುಮಲತಾ ಬಳಿ ವಿಜಯಲಕ್ಷ್ಮಿ ಮನವಿ

ನಟಿ ವಿಜಯಲಕ್ಷ್ಮಿ ಸಹೋದರಿ ಉಷಾ ಆರೋಗ್ಯ ಮತ್ತಷ್ಟು ಗಂಭೀರ