AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

30ಕ್ಕೆ ಕಾಲಿಟ್ಟ ‘ಅಮೆರಿಕ ಅಮೆರಿಕ’, ಬರಲಿದೆ ‘ಅಮೆರಿಕ-ಅಮೆರಿಕ 2’

Nagathihalli Chandrashekhar: ‘ಅಮೆರಿಕ-ಅಮೆರಿಕ’ ಸಿನಿಮಾ1997ರ ಏಪ್ರಿಲ್ 11ರಂದು ಸಿನಿಮಾ ಬಿಡುಗಡೆ ಆಗಿತ್ತು. ರಮೇಶ್ ಅರವಿಂದ್, ಹೇಮಾ ಪಂಚಮುಖಿ, ಅಕ್ಷಯ್ ಆನಂದ್ ಒಟ್ಟಿಗೆ ನಟಿಸಿದ್ದ ಈ ಸಿನಿಮಾ ವರ್ಷಗಳ ಕಾಲ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಂಡಿತ್ತು. ಗೆಳೆತನ, ಪ್ರೀತಿ, ದೇಶ, ದೇಶಪ್ರೇಮ, ಆಧುನಿಕತೆಯ ಸೈಡ್ ಎಫೆಕ್ಟ್ಸ್ ಹೀಗೆ ಹಲವು ವಿಷಯಗಳನ್ನು ಚರ್ಚಿಸಿದ್ದ ಈ ಸಿನಿಮಾ ಹಲವು ದಾಖಲೆಗಳನ್ನು ಬರೆದಿತ್ತು.

30ಕ್ಕೆ ಕಾಲಿಟ್ಟ ‘ಅಮೆರಿಕ ಅಮೆರಿಕ’, ಬರಲಿದೆ ‘ಅಮೆರಿಕ-ಅಮೆರಿಕ 2’
America America
ಮಂಜುನಾಥ ಸಿ.
|

Updated on:Apr 11, 2026 | 6:46 PM

Share

‘ಅಮೆರಿಕ-ಅಮೆರಿಕ’ (America America) ಕನ್ನಡದ ಕಲ್ಟ್ ಸಿನಿಮಾಗಳಲ್ಲಿ ಒಂದು. ಇಂದಿಗೂ ಹಲವಾರು ಜನರ ನೆಚ್ಚಿನ ಸಿನಿಮಾಗಳಲ್ಲಿ ಒಂದಾಗಿದೆ. 1997ರ ಏಪ್ರಿಲ್ 11ರಂದು ಸಿನಿಮಾ ಬಿಡುಗಡೆ ಆಗಿತ್ತು. ಈಗ ಈ ಸಿನಿಮಾ 30ನೇ ವರ್ಷಕ್ಕೆ ಕಾಲಿಟ್ಟಿದೆ. ರಮೇಶ್ ಅರವಿಂದ್, ಹೇಮಾ ಪಂಚಮುಖಿ, ಅಕ್ಷಯ್ ಆನಂದ್ ಒಟ್ಟಿಗೆ ನಟಿಸಿದ್ದ ಈ ಸಿನಿಮಾ ವರ್ಷಗಳ ಕಾಲ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಂಡಿತ್ತು. ಗೆಳೆತನ, ಪ್ರೀತಿ, ದೇಶ, ದೇಶಪ್ರೇಮ, ಆಧುನಿಕತೆಯ ಸೈಡ್ ಎಫೆಕ್ಟ್ಸ್ ಹೀಗೆ ಹಲವು ವಿಷಯಗಳನ್ನು ಚರ್ಚಿಸಿದ್ದ ಈ ಸಿನಿಮಾ ಹಲವು ದಾಖಲೆಗಳನ್ನು ಬರೆದಿತ್ತು. ಪ್ರಶಸ್ತಿಗಳಿಗೂ ಭಾಜನವಾಗಿತ್ತು.

ಸಿನಿಮಾ ನಿರ್ದೇಶಿಸಿರುವ ನಾಗತಿಹಳ್ಳಿ ಚಂದ್ರಶೇಖರ್ ಅವರು ಸಿನಿಮಾದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದು, ‘ನಾನು ರೂಪಿಸಿದ್ದಲ್ಲ; ನನ್ನನ್ನೇ ರೂಪಿಸಿದ ಸಿನಿಮಾ! ಕೋಟಿ ಕೋಟಿ ಕಂಗಳಿಗೆ ಕನಸು ಕೊಟ್ಟ ಸಿನಿಮಾ. ಕೋಟಿ ಕೋಟಿ ಮನಗಳಿಗೆ ಮಮಕಾರವಿತ್ತ ಸಿನಿಮಾ. ಕನ್ನಡ ಜನತೆಗೆ ಕೋಟಿ ಕೋಟಿ ಕೃತಜ್ಞತೆಗಳು’ ಎಂದಿದ್ದಾರೆ. ಇದರ ಜೊತೆಗೆ ‘ಸದ್ಯದಲ್ಲೇ ನಿಮ್ಮೆದುರು ‘ಅಮೆರಿಕ-ಅಮೆರಿಕ 2’ ಎಂದು ಸಹ ನಾಗತಿಹಳ್ಳಿ ಚಂದ್ರಶೇಖರ್ ಅವರು ಘೋಷಿಸಿದ್ದಾರೆ.

‘ಅಮೆರಿಕ-ಅಮೆರಿಕ 2’ ಸಿನಿಮಾವನ್ನು ನಾಗತಿಹಳ್ಳಿ ಅವರು ಘೋಷಿಸಿದ್ದಾರಾದರೂ ಸಿನಿಮಾದ ಬಗ್ಗೆ ಹೆಚ್ಚಿನ ಮಾಹಿತಿ ಹಂಚಿಕೊಂಡಿಲ್ಲ. ಆದರೆ ನಾಗತಿಹಳ್ಳಿ ಅವರ ಪೋಸ್ಟ್​​ಗೆ ಕಮೆಂಟ್ ಮಾಡಿರುವ ಹಲವರು, ‘ಅಮೆರಿಕ-ಅಮೆರಿಕ’ ಸಿನಿಮಾವನ್ನು ಮರು ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ. ‘ಅಮೆರಿಕ-ಅಮೆರಿಕ 2’ ಸಿನಿಮಾನಲ್ಲಿ ಹಳೆಯ ಮುಖಗಳನ್ನೇ ಅಂದರೆ ರಮೇಶ್ ಅರವಿಂದ್, ಹೇಮಾ ಪಂಚಮುಖಿ, ಅಕ್ಷಯ್ ಆನಂದ್ ಅವರನ್ನೇ ಹಾಕಿಕೊಳ್ಳಿ ಎಂದು ಇನ್ನಿತರೆ ಸಲಹೆಗಳನ್ನು ನೀಡಿದ್ದಾರೆ.

ನಾಗತಿಹಳ್ಳಿ ಚಂದ್ರಶೇಖರ್ ಅವರು ಇತ್ತೀಚೆಗೆ ಸಿನಿಮಾ ನಿರ್ದೇಶನ ತುಸು ಕಡಿಮೆ ಮಾಡಿದ್ದಾರೆ. ಅವರು ಕೊನೆಯದಾಗಿ ನಿರ್ದೇಶಿಸಿದ ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದ್ದು 2020ರಲ್ಲಿ ‘ಇಂಡಿಯಾ vs ಇಂಗ್ಲಂಡ್’. ಅದಕ್ಕೆ ಮುಂಚೆ 2015 ರಲ್ಲಿ ‘ಇಷ್ಟಕಾಮ್ಯ’ ಸಿನಿಮಾ ನಿರ್ದೇಶಿಸಿದ್ದರು. ಇದೀಗ ಬಹಳ ವರ್ಷಗಳ ಬಳಿಕ ತಮಗೆ ದೊಡ್ಡ ಯಶಸ್ಸು, ಹೆಸರು ತಂದುಕೊಟ್ಟ ‘ಅಮೆರಿಕ-ಅಮೆರಿಕ’ ಸಿನಿಮಾದ ಸೀಕ್ವೆಲ್ ನಿರ್ದೇಶಿಸಲು ಮುಂದಾಗಿದ್ದಾರೆ. ನಾಗತಿಹಳ್ಳಿ ಅವರ ಸಿನಿಮಾಗಳನ್ನು ನೋಡುತ್ತಾ ಬಂದಿರುವ, ಅವರ ಸಿನಿಮಾಗಳ ಮೆಚ್ಚುವ ಅಭಿಮಾನಿಗಳು ನಾಗತಿಹಳ್ಳಿ ಅವರಿಂದ ಒಂದು ಸುಂದರ ಸಿನಿಮಾದ ನಿರೀಕ್ಷೆಯಲ್ಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:28 pm, Sat, 11 April 26

Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು