ಆರ್​ಎಸ್​ಎಸ್ ಕಾರ್ಯಕ್ರಮಕ್ಕೆ ಹೋಗುತ್ತಿಲ್ಲ: ಸ್ಪಷ್ಟನೆ ನೀಡಿದ ನಾಗತಿಹಳ್ಳಿ ಚಂದ್ರಶೇಖರ್

Nagthihalli Chandrashekhar: ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಹೆಸರುಳ್ಳ ಆರ್​ಎಸ್​ಎಸ್ ಕಾರ್ಯಕ್ರಮದ ಆಹ್ವಾನ ಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಹುಟ್ಟುಹಾಕಿತ್ತು, ಈ ಬಗ್ಗೆ ನಾಗತಿಹಳ್ಳಿ ಚಂದ್ರಶೇಖರ್ ಸ್ಪಷ್ಟನೆ ನೀಡಿದ್ದಾರೆ.

ಆರ್​ಎಸ್​ಎಸ್ ಕಾರ್ಯಕ್ರಮಕ್ಕೆ ಹೋಗುತ್ತಿಲ್ಲ: ಸ್ಪಷ್ಟನೆ ನೀಡಿದ ನಾಗತಿಹಳ್ಳಿ ಚಂದ್ರಶೇಖರ್
ನಾಗತಿಹಳ್ಳಿ ಚಂದ್ರಶೇಖರ್
Follow us
ಮಂಜುನಾಥ ಸಿ.
|

Updated on: Jun 30, 2023 | 6:57 PM

ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ (Nagathihalli Chandrashekhar), ಆರ್​ಎಸ್​ಎಸ್ (RSS) ಆಯೋಜಿಸಿರುವ ಕಾರ್ಯಕ್ರಮವೊಂದರ ಅಧ್ಯಕ್ಷೆ ವಹಿಸಿರುವ ಮಾಹಿತಿ ಒಳಗೊಂಡ ಆಹ್ವಾನ ಪತ್ರಿಕೆ ಕಳೆದೆರಡು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ (Social Media) ಹರಿದಾಡುತ್ತಾ ಎಡ-ಬಲ ಚರ್ಚೆಗೆ ನಾಂದಿ ಹಾಡಿತ್ತು. ಧರ್ಮ ಸಾಮರಸ್ಯದ ಪರ, ದ್ವೇಷ ರಾಜಕಾರಣದ ವಿರೋಧಿಯಾಗಿ ಗುರುತಿಸಿಕೊಂಡಿರುವ ನಾಗತಿಹಳ್ಳಿ ಚಂದ್ರಶೇಖರ್, ಧರ್ಮ ದ್ವೇಷದ ಮೂಲ ಎಂದು ಆರೋಪಿಸಲಾಗುವ ಆರ್​ಎಸ್​ಎಸ್​ನ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ಬಗ್ಗೆ ಹಲವರು ಆಕ್ಷೇಪಣೆ ವ್ಯಕ್ತಪಡಿಸಿದ್ದರು. ಕೆಲವರಂತೂ ನಾಗತಿಹಳ್ಳಿಯವರು ‘ಒಳ ಬಲಪಂಥೀಯ’ ಎಂದು ಟೀಕಿಸಿದ್ದರು. ಆದರೆ ಆ ಎಲ್ಲದಕ್ಕೂ ನಾಗತಿಹಳ್ಳಿ ಸ್ಪಷ್ಟನೆ ನೀಡಿದ್ದಾರೆ.

”ಈ (ಆರ್​ಎಸ್​ಎಸ್) ಸಮಾರಂಭದಲ್ಲಿ ನಾನು ಭಾಗವಹಿಸುತ್ತಿಲ್ಲ. ಅದನ್ನು ನಾನು ಸ್ಪಷ್ಟಪಡಿಸಿಯೂ ಆಮಂತ್ರಣದಲ್ಲಿ ನನ್ನ ಹೆಸರು ಅಚ್ಚಾಗಿದೆ. ಅದು ‘ಆಕಸ್ಮಿಕ’ಎಂದು ಅವರು ಕ್ಷಮೆ ಯಾಚಿಸಿದ್ದಾರೆ. ಅಲ್ಲಿಗೆ ವಿಷಯ ಮುಕ್ತಾಯಗೊಂಡಿದೆ. ಆ ದಿನಾಂಕದಂದು ನಾನು ದೂರದ ದೇಶದಲ್ಲಿ ಚಿತ್ರೀಕರಣದಲ್ಲಿರುವುದು ನನ್ನನ್ನು ಬಲ್ಲವರಿಗೆಲ್ಲ ತಿಳಿದಿದೆ. ನನ್ನನ್ನು ಅತ್ಯಂತ ಹತ್ತಿರದಿಂದ ಬಲ್ಲ, ನನ್ನನ್ನು ನಂಬುವ,ನನ್ನನ್ನು ಪ್ರೀತಿಸುವ, ನನ್ನನ್ನು ಬೆಳೆಸಿರುವ, ನನ್ನೊಂದಿಗೆ ಹಳ್ಳಿಯ ಕೆಲಸದಲ್ಲಿ ಕೈಜೋಡಿಸಿರುವ ಅಕ್ಕರೆಯ ಎಲ್ಲ ಮನಸ್ಸುಗಳಿಗೆ ಹೇಳುವ ಒಂದು ಮಾತು: ನಾನು ಏನಾಗಿದ್ದೀನೋ ಅದೇ ಆಗಿ ಇರುತ್ತೇನೆ. ನಾನು ಏನು ಮಾಡುತ್ತಿದ್ದೀನೋ ಅದು ಸರಿ ಇದೆ. ಅದನ್ನೇ ಮುಂದುವರೆಸುತ್ತೇನೆ” ಎಂದಿದ್ದಾರೆ.

ಇದನ್ನೂ ಓದಿ:‘ವಿಷ್ಣುವರ್ಧನ್​-ಸುಹಾಸಿನಿ ನಡುವೆ ನಡೆಯುತ್ತಿದ್ದ ಮಾತುಕತೆಯೇ ಬೇರೆ’: ನಾಗತಿಹಳ್ಳಿ ಚಂದ್ರಶೇಖರ್​

ಈ ಆಹ್ವಾನ ಪತ್ರಿಕೆ ಇಟ್ಟುಕೊಂಡು ತಮ್ಮನ್ನು ಟೀಕಿಸಿದವರ ಬಗ್ಗೆ ”ತಪ್ಪು ತಿಳಿಯಲು,ತಪ್ಪು ಹರಡಲು ತುದಿಗಾಲಲ್ಲಿ ನಿಂತವರನ್ನು, ನಿತ್ಯ ಹೊಸ, ಹುಸಿ ರೋಮಾಂಚನ ಬಯಸುವ ಮಹನೀಯರನ್ನು ಮನ್ನಿಸಿ ಮುಂದೆ ಹೋಗೋಣ. ಇಲ್ಲಿ ನಾವೆಲ್ಲ ಮಾಡಲೇಬೇಕಾದ ಜನಪರ ಕೆಲಸಗಳು ಬಹಳಷ್ಟಿವೆ. ಮಾಡೋಣ. ಇನ್ನು ಮಾತು ಸಾಕು” ಎಂದಿದ್ದಾರೆ ನಾಗತಿಹಳ್ಳಿ ಚಂದ್ರಶೇಖರ್.

ನಾಗತಿಹಳ್ಳಿ ಅವರು ಕಾರ್ಯಕ್ರಮಕ್ಕೆ ಹೋಗುತ್ತಿದ್ದಾರೆಂದು ತಿಳಿಸಿ ಹಲವರು ಟೀಕಿಸಿದ್ದಂತೆಯೇ, ಈಗ ಹೋಗದೇ ಇರುವ ಬಗ್ಗೆಯೂ ಹಲವರು ಪ್ರಶ್ನೆ ಮಾಡಿದ್ದಾರೆ. ನಾಗತಿಹಳ್ಳಿ ಅವರ ಸ್ಪಷ್ಟನೆಯ ಪೋಸ್ಟ್​ಗೆ ಹಲವರು ಕೆಮೆಂಟ್​ ಮಾಡಿದ್ದು, ”ಆರ್​ಎಸ್​ಎಸ್ ಕಾರ್ಯಕ್ರಮಕ್ಕೆ ಏಕೆ ಹೋಗುತ್ತಿಲ್ಲ ತಿಳಿಸಿ ಎಂದಿದ್ದಾರೆ. ಒಂದೊಮ್ಮೆ ಚಿತ್ರೀಕರಣದಲ್ಲಿ ಇಲ್ಲದೇ ಇರದಿದ್ದರೆ ಹೋಗುತ್ತಿದ್ದಿರಾ? ಆರ್​ಎಸ್​ಎಸ್​ ಬಗ್ಗೆ ನಿಲುವೇನು? ಎಂಬಿತ್ಯಾದಿ ಪ್ರಶ್ನೆಗಳನ್ನು ಮೇಷ್ಟ್ರ ಮುಂದುರಿಸಿದ್ದಾರೆ. ಕೆಲವರು ನಿಂದನೆ, ಕೆಟ್ಟ ವ್ಯಂಗ್ಯವನ್ನೂ ಮಾಡಿದ್ದಾರೆ. ಇನ್ನು ಕೆಲವರು ನಾಗತಿಹಳ್ಳಿ ಅವರ ನಿರ್ಣಯಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ನಾಗತಿಹಳ್ಳಿ ಚಂದ್ರಶೇಖರ್ ಅವರು ಹಿಂಸೆ, ದ್ವೇಷ, ಅಸಮಾನತೆ, ಕೋಮು ರಾಜಕಾರಣವನ್ನು ವಿರೋಧಿಸುತ್ತಾ ಬಂದಿದ್ದಾರೆ. ಈ ಬಗ್ಗೆ ಹಲವು ಬಾರಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕ್ಷಣಾರ್ಧದಲ್ಲಿ ಅತ್ಯಾದ್ಭುತ ಕ್ಯಾಚ್ ಹಿಡಿದ ಮ್ಯಾಕ್ಸ್​ವೆಲ್
ಕ್ಷಣಾರ್ಧದಲ್ಲಿ ಅತ್ಯಾದ್ಭುತ ಕ್ಯಾಚ್ ಹಿಡಿದ ಮ್ಯಾಕ್ಸ್​ವೆಲ್
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು