ಕನ್ನಡದಲ್ಲಿ ಶುರುವಾಯ್ತು ‘ನಂದಿ ಫಿಲ್ಮಂ ಅವಾರ್ಡ್’: ಲೋಗೋ ಬಿಡುಗಡೆ ಮಾಡಿದ ಸಿಎಂ
Nandi Awards: ತೆಲುಗು ಚಿತ್ರರಂಗದಲ್ಲಿ ಜನಪ್ರಿಯ ಪ್ರಶಸ್ತಿಯಾಗಿದೆ ನಂದಿ ಪ್ರಶಸ್ತಿ. ಇದೀಗ ಇದೇ ಹೆಸರಿನ ಪ್ರಶಸ್ತಿ ಕರ್ನಾಟಕದಲ್ಲಿಯೂ ಆರಂಭವಾಗಿದೆ. ರಾಜ್ಯದ ಸಿಎಂ ಸಿದ್ದರಾಮಯ್ಯ ಅವರು ನಂದಿ ಪ್ರಶಸ್ತಿಯ ಲೋಗೋವನ್ನು ಇಂದು ಅನಾವರಣ ಮಾಡಿದ್ದಾರೆ.
ತೆಲುಗು ಸಿನಿಮಾ ರಂಗದಲ್ಲಿ (Tollywood) ಅನನ್ಯ ಸೇವೆಗೈದ ಸಾಧಕರಿಗೆ ನಂದಿ ಪ್ರಶಸ್ತಿ ಕೊಡಲಾಗುತ್ತದೆ. ಇದೇ ನಂದಿ ಪ್ರಶಸ್ತಿ ಈಗ ಕನ್ನಡದಲ್ಲಿಯೂ ಪ್ರಾರಂಭವಾಗುತ್ತಿದೆ. ಅದರ ಭಾಗವಾಗಿ ನಂದಿ ಅವಾರ್ಡ್ನ ಲೋಗೋ ಅನ್ನು ಸಿಎಂ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ವತಿಯಿಂದ ಪ್ರಶಸ್ತಿಯನ್ನು ಕೊಡಲಾಗುತ್ತಿದ್ದು, ಸರ್ಕಾರದ ನೆರವು, ಸಹಕಾರ ಇರಲಿದೆ ಎನ್ನಲಾಗುತ್ತಿದೆ.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಭಾ.ಮಾ.ಹರೀಶ್ ನೇತೃತ್ವದಲ್ಲಿ ಇನ್ನೂ ಕಲೆವು ಮುಖಂಡರು ಸೆಪ್ಟೆಂಬರ್ 15 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ನಂದಿ ಪ್ರಶಸ್ತಿಯ ಲೋಗೋ ಅನಾವರಣ ಮಾಡಿಸಿದ್ದಾರೆ. ಅನಿತಾ ರೆಡ್ಡಿ, ನಿತ್ಯನಂದ ಪ್ರಭು, ಪದ್ಮವತಿ ಚಂದ್ರಶೇಖರ್, ಭಾಮಾ ಗಿರೀಶ್, ಗಿರೀಶ್ ಸೇರಿದಂತೆ ಇನ್ನೂ ಹಲವರು ಈ ಸಂದರ್ಭದಲ್ಲಿ ಹಾಜರಿದ್ದರು.
”ನಂದಿ, ಕನ್ನಡದ ಹೆಮ್ಮೆ, ಈ ಹೆಸರಿನಲ್ಲಿ ಪ್ರಶಸ್ತಿ ಕೊಡಬೇಕೆಂಬು ಸಿನಿಮಾ ರಂಗದ ಸ್ನೇಹಿರೊಟ್ಟಿಗೆ ಚರ್ಚಿಸಿ ಈ ತೀರ್ಮಾನ ಮಾಡಲಾಗಿದೆ ಎಂದು ಅಧ್ಯಕ್ಷ ಭಾ.ಮಾಹರೀಶ್ ತಿಳಿಸಿದ್ದಾರೆ. ನವೆಂಬರ್ ತಿಂಗಳಲ್ಲಿ ಪ್ರಶಸ್ತಿ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತದೆ. ಪ್ರತಿ ವರ್ಷ ಸಿನಿಮಾ ರಂಗದಲ್ಲಿ ಸಾಧನೆ ಮಾಡಿ ಕಲಾವಿದರನ್ನು ಸನ್ಮಾನಿಸಿ ಗೌರವಿಸಿ ನಂದಿ ಪ್ರಶಸ್ತಿ ನೀಡಲಾಗುತ್ತದೆ.
ಇದನ್ನೂ ಓದಿ:‘ಸೈಮಾ ಅವಾರ್ಡ್ಸ್ 2023’ ಸಮಾರಂಭದಲ್ಲಿ ಸುಂದರಿಯರ ದರ್ಬಾರು
ಸದ್ಯ ನಂದಿ ಪ್ರಶಸ್ತಿ ಲೋಗೋ ಬಿಡುಗಡೆ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಕಾರ್ಯಕ್ರಮ ರೂಪರೇಷೆಗಳನ್ನು ತಿಳಿಸಲಾಗುತ್ತದೆ. ಸೈಮಾ, ಫಿಲ್ಮಂ ಫೇರ್ ಮಾದರಿಯಲ್ಲಿಯೇ ಕನ್ನಡ ಸಿನಿಮಾರಂಗಕ್ಕೆ ಪ್ರತ್ಯಕ್ಷ ಪ್ರಶಸ್ತಿ ನಂದಿ ಎಂದಿದ್ದಾರೆ ವಾಣಿಜ್ಯ ಚಲನಚಿತ್ರ ಮಂಡಳಿ ಅಧ್ಯಕ್ಷರಾದ ಭಾ.ಮಾ.ಹರೀಶ್ ತಿಳಿಸಿದ್ದಾರೆ. ಕೆಲವೇ ದಿನಗಳಲ್ಲಿ ವಾಣಿಜ್ಯ ಚಲನಚಿತ್ರ ಮಂಡಳಿ ಚುನಾವಣೆ ನಡೆಯಲಿದೆ, ಹೊಸ ಪದಾಧಿಕಾರಿಗಳ ಆಯ್ಕೆ ಬಳಿಕ ಪ್ರಶಸ್ತಿ ವಿತರಣೆ ಕಾರ್ಯಕ್ರಮ ನಡೆಯುವ ಸಾಧ್ಯತೆ ಇದೆ.
ಪ್ರಸ್ತುತ ರಾಜ್ಯ ಸರ್ಕಾರವು ಸಿನಿಮಾಕ್ಕೆ ಸಂಬಂಧಿಸಿದಂತೆ ರಾಜ್ಯ ಪ್ರಶಸ್ತಿಗಳನ್ನು ನೀಡುತ್ತಿದೆ. ಇದರ ಹೊರತಾಗಿ ಕೆಲವು ಖಾಸಗಿ ಪ್ರಶಸ್ತಿಗಳು ಇವೆ. ಇದೀಗ ಆರಂಭವಾಗಿರುವ ನಂದಿ ಪ್ರಶಸ್ತಿಯು ರಾಜ್ಯ ಪ್ರಶಸ್ತಿಯ ಬಳಿಕ ಹೆಚ್ಚು ಘನತೆಯುಕ್ತ ಪ್ರಶಸ್ತಿಯಾಗಿ ಗುರುತಿಸಿಕೊಳ್ಳುವ ಸಾಧ್ಯತೆ ಇದೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ