ನಂದಿ ಫಿಲ್ಮ್ ಅವಾರ್ಡ್: ಪ್ರಶಸ್ತಿ ಪಡೆದವರ ಪಟ್ಟಿ ಇಲ್ಲಿದೆ

Nandi Awards: ಕನ್ನಡದ ಅತ್ಯುತ್ತಮ ಸಿನಿಮಾಗಳನ್ನು, ತಂತ್ರಜ್ಞರನ್ನು ಗುರುತಿಸಿ, ಸನ್ಮಾನಿಸುವ ದೃಷ್ಟಿಯಿಂದ ಆರಂಭವಾಗಿರುವ ನಂದಿ ಫಿಲಂ ಅವಾರ್ಡ್ಸ್​ನ ಮೊದಲ ಪ್ರಶಸ್ತಿ ಸಮಾರಂಭ ನಡೆದಿದ್ದು, ಪ್ರಶಸ್ತಿ ಪಡೆದವರ ಪಟ್ಟಿ ಇಲ್ಲಿದೆ.

ನಂದಿ ಫಿಲ್ಮ್ ಅವಾರ್ಡ್: ಪ್ರಶಸ್ತಿ ಪಡೆದವರ ಪಟ್ಟಿ ಇಲ್ಲಿದೆ
ನಂದಿ ಅವಾರ್ಡ್ಸ್
Follow us
ಮಂಜುನಾಥ ಸಿ.
|

Updated on:Dec 07, 2023 | 7:06 PM

ಕನ್ನಡ ಚಿತ್ರರಂಗದಲ್ಲಿ (Sandalwood) ಮೊದಲ ಬಾರಿಗೆ ನಂದಿ ಚಲನಚಿತ್ರ ಪ್ರಶಸ್ತಿ (Nandi Award) ಪ್ರದಾನ ಮಾಡಲು ಪ್ರಾರಂಭಿಸಲಾಗಿದೆ. ಮೊದಲ ನಂದಿ ಫಿಲಂ ಪ್ರಶಸ್ತಿ ಪ್ರದಾನ ಸಮಾರಂಭ ಡಿಸೆಂಬರ್ 06 ರ ಸಂಜೆ ಬೆಂಗಳೂರಿನ ಒರಿಯನ್ ಮಾಲ್‌ನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಹಿರಿಯ ನಟ ರವಿಚಂದ್ರನ್, ರಿಷಬ್ ಶೆಟ್ಟಿ, ಧ್ರುವ ಸರ್ಜಾ, ಶ್ರೀನಾಥ್, ನಟಿ ಪ್ರೇಮ, ವಿನೋದ್ ರಾಜ್, ಅನುಪ್ರಭಾಕರ್, ಉಮಾಶ್ರೀ ‘ಇನ್ನೂ ಹಲವು ತಾರೆಯರು ಭಾಗಿಯಾಗಿದ್ದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗಿಯಾಗಿದ್ದ ನಟ ರವಿಚಂದ್ರನ್ ಮಾತನಾಡಿ, ‘ನಂದಿ ಪ್ರಶಸ್ತಿ ನೀಡುತ್ತಿರುವುದು ಬಹಳ ಖುಷಿಯಾಗಿದೆ. ಪ್ರಶಸ್ತಿ ಬಹಳ ಭಾರವಾಗಿದೆ ಅದು ನನಗೆ ಖುಷಿ ಕೊಟ್ಟಿತು, ನನ್ನಂಥಹಾ ಶಿವ ಭಕ್ತನಿಂದ ನಂದಿ ಪ್ರಶಸ್ತಿ ಕೊಡಿಸುತ್ತಿದ್ದೀರ. ಎಲ್ಲರ ಮನೆಗಳಿಗೂ ನಂದಿ ಸೇರುತ್ತದೆ ಎಂಬುದು ನನಗೆ ಖುಷಿ’ ಎಂದರು. ನಟ ಶ್ರೀನಾಥ್ ಅವರಿಗೆ ಜೀವನಮಾನ ಸಾಧನೆಗೆ ಲೈಫ್ ಟೈಮ್ ಅಚೀವ್ಮೆಂಟ್ ಅವಾರ್ಡ್ ನೀಡಲಾಯ್ತು.

ನೆರೆಯ ಆಂಧ್ರಪ್ರದೇಶ ಮನರಂಜನಾ ಕ್ಷೇತ್ರದ ಸಾಧಕರಿಗೆ ಕೊಡುವ ರಾಜ್ಯ ಪ್ರಶಸ್ತಿಗೂ ನಂದಿ ಅವಾರ್ಡ್ಸ್ ಎಂದೇ ಹೆಸರಿದೆ. ಆದರೆ, ಆ ಪ್ರಶಸ್ತಿಗೂ ಈ ಪ್ರಶಸ್ತಿಗೂ ಸಮಬಂಧವಿಲ್ಲ. ಎರಡು ಬೇರೆ ಬೇರೆ. ಆಂಧ್ರಪ್ರದೇಶದಂತೆ ಕನ್ನಡದ ಪ್ರಶಸ್ತಿಗೂ ನಂದಿ ಅವಾರ್ಡ್ ಎಂದೇ ಕರೆಯಲಾಗುತ್ತಿದೆ. ಇದಕ್ಕೆ ಕಾರಣವೂ ಇದೆ. ನಂದಿ ಎನ್ನುವುದು ಕನ್ನಡದ ಪಾಲಿಗೂ ಒಂದು ಪವರ್‌ಫುಲ್ ಇಮೇಜ್ ಎನಿಸುವ ಲಾಂಛನ. ಆ ಕಾರಣದಿಂದಲೇ ‘ನಂದಿ’ ಎಂಬ ಹೆಸರನ್ನೇ ಕನ್ನಡದ ಪ್ರಶಸ್ತಿಗೂ ಇಡಲಾಗಿದೆ.

ಇದನ್ನೂ ಓದಿ:ನಂದಿ ಫಿಲ್ಮಂ ಅವಾರ್ಡ್ 2023: ನಂದಿ ಹೆಸರಲ್ಲಿ ಪ್ರಶಸ್ತಿ ಶುದ್ಧವಾಗಿರಲಿ ಎಂದ ಸುದೀಪ್

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಿಕಟ ಪೂರ್ವ ಅಧ್ಯಕ್ಷರಾದ ಭಾ.ಮಾ.ಹರೀಶ್, ನಿರ್ಮಾಪಕ ನಿತ್ಯಾನಂದ ಪ್ರಭು, ಪದ್ಮಾವತಿ ಚಂದ್ರಶೇಖರ್ ಹಾಗೂ ಅನಿತಾ ರೆಡ್ಡಿ ಈ ಪ್ರಶಸ್ತಿ ಸಂಸ್ಥಾಪರಾಗಿದ್ದು, ಭಾ.ಮಾ.ಗಿರೀಶ್, ಹರ್ಷಿತಾ, ನಂದಿತಾ ಹಾಗೂ ಆಶೋಕ್ ಪ್ರಶಸ್ತಿ ಸಮಿತಿಯ ನಿರ್ದೇಶಕರುಗಳಾಗಿದ್ದಾರೆ.

ಮೊದಲ ನಂದಿ ಪ್ರಶಸ್ತಿ ಪಡೆದವರ ಪಟ್ಟಿ ಇಂತಿದೆ

1.ಬೆಸ್ಟ್ ಬಾಯೋಪಿಕ್ ಅವಾರ್ಡ್. ವಿಜಯಾನಂದ ಫಿಲ್ಮ್.

2. ಲೆಜೆಂಡರಿ ಆಕ್ಟ್ರೆಸ್ ಅವಾರ್ಡ್.ಲೀಲಾವತಿ.

3.ಜೀವಮಾನ ಸಾಧನೆ ಪ್ರಶಸ್ತಿ-ನಟ ಶ್ರೀನಾಥ್ ಹಾಗೂ ಭಾರತಿ ವಿಷ್ಣುವರ್ಧನ್.

4.ಅತ್ಯತ್ತಮ ಡಾಕ್ಯುಮೆಂಟ್ರಿ ಪ್ರಶಸ್ತಿ-ಗಂಧದಗುಡಿ.

5.ಬೆಸ್ಟ್ ಡೇಬ್ಯುಟ್ ಆಕ್ಟರ್ ವಿಕ್ರಮ್ ರವಿಚಂದ್ರನ್.

6.ಬೆಸ್ಟ್ ಡೇಬ್ಯುಟ್ ಆಕ್ಟ್ರೆಸ್ ರೀಷ್ಮಾ ನಾಣಯ್ಯ.

7.ಬೆಸ್ಟ್ ಕಮಿಡಿಯನ್ ರಂಗಾಯಣ ರಘು.

8.ಬೆಸ್ಟ್ ಕಾಮಿಕ್ ರೋಲ್-ಅಕ್ಟ್ರೆಸ್ ಹೇಮಾದತ್.

9.ಬೆಸ್ಟ್ ಸಪೋರ್ಟಿಂಗ್ ರೋಲ್-ವೀಣಾ ಸುಂದರ್.

10.ಬೆಸ್ಟ್ ಕ್ರಿಟಿಕ್ಸ್ ಆಕ್ಟರ್-.ಸಂಚಾರಿ ವಿಜಯ್.

11.ಅತ್ಯುತ್ತಮ ಸಂಭಾಷಣೆಕಾರ ಮಾಸ್ತಿ.

12.ಅತ್ಯುತ್ತಮ ಚಿತ್ರ.777 ಚಾರ್ಲಿ.

13.ಅತ್ಯುತ್ತಮ ನಿರ್ದೇಶಕ. ರಿಷಬ್ ಶೆಟ್ಟಿ.

14.ಅತ್ಯುತ್ತಮ ನಟ. ರಿಷಬ್ ಶೆಟ್ಟಿ.

15.ಅತ್ಯುತ್ತಮ ನಟಿ-ಸಪ್ತಮಿ ಗೌಡ

16.ಅತ್ಯುತ್ತಮ ಖಳನಟ-ಡಾಲಿ ಧನಂಜಯ್

17. ಬೆಸ್ಟ್ ಆಕ್ಟರ್ ಸಪೋರ್ಟಿಂಗ್ ರೋಲ್-ಲೂಸ್ ಮಾದ ಯೋಗಿ

18.ಬೆಸ್ಟ್ ಕ್ರಿಟಿಕ್ಸ್ ಆಕ್ಟರ್ಸ್ಸ್-ಹರಿಪ್ರಿಯಾ-ಅನುಪ್ರಭಾಕರ್

19.ಬೆಸ್ಟ್ ಪ್ರೆಸ್ ಫೋಟೋಗ್ರಾಫರ್-ಕೆ.ಎನ್.ನಾಗೇಶ್ ಕುಮಾರ್

20. ಬೆಸ್ಟ್ ಪಿಆರ್ -ನಾಗೇಂದ್ರ

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:18 pm, Thu, 7 December 23

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ