AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nandita Swetha: ಸ್ಯಾಂಡಲ್​ವುಡ್​ಗೆ ಕಂಬ್ಯಾಕ್ ಮಾಡಿದ ‘ಜಿಂಕೆ ಮರಿ’; ‘ಬೆನ್ನಿ’ ಚಿತ್ರದಲ್ಲಿ ನಂದಿತಾ ಶ್ವೇತಾ ನಟನೆ  

Benny Movie: ನಂದಿತಾ ಶ್ವೇತಾ ಅವರು ‘ಜಿಂಕೆ ಮರೀನಾ..’ ಹಾಡಿಗೆ ಪಡೆದ ಜನಪ್ರಿಯತೆ ಅಷ್ಟಿಷ್ಟಲ್ಲ. ‘ನಂದ ಲವ್ಸ್ ನಂದಿತ’ ಬಳಿಕ ಅವರು ಪರಭಾಷೆಯಲ್ಲಿ ಬ್ಯುಸಿ ಇದ್ದರು. ಹಲವು ವರ್ಷಗಳ ನಂತರ ‘ಬೆನ್ನಿ’ ಎಂಬ ಮಹಿಳಾ ಪ್ರಧಾನ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಮರಳಿದ್ದಾರೆ.ಚಿತ್ರದ ಫಸ್ಟ್ ಲುಕ್ ಟೀಸರ್ ರಿಲೀಸ್ ಆಗಿದ್ದು, ಕಿಚ್ಚ ಸುದೀಪ್ ಅವರ ಖಡಕ್ ಧ್ವನಿ ಕೂಡ ಇದೆ.

Nandita Swetha: ಸ್ಯಾಂಡಲ್​ವುಡ್​ಗೆ ಕಂಬ್ಯಾಕ್ ಮಾಡಿದ ‘ಜಿಂಕೆ ಮರಿ’; ‘ಬೆನ್ನಿ’ ಚಿತ್ರದಲ್ಲಿ ನಂದಿತಾ ಶ್ವೇತಾ ನಟನೆ  
ನಂದಿತಾ
ರಾಜೇಶ್ ದುಗ್ಗುಮನೆ
|

Updated on:Jul 15, 2025 | 2:45 PM

Share

ನಟಿ ನಂದಿತಾ ಶ್ವೇತಾ ಅವರು ‘ನಂದ ಲವ್ಸ್ ನಂದಿತಾ’ ಸಿನಿಮಾದಲ್ಲಿ ನಟಿಸಿ ಸಾಕಷ್ಟು ಜನಪ್ರಿಯತೆ ಪಡೆದರು. ಈ ಚಿತ್ರದ ‘ಜಿಂಕೆ ಮರೀನಾ..’ ಹಾಡು ಪಡೆದ ಜನಪ್ರಿಯತೆ ಅಷ್ಟಿಷ್ಟಲ್ಲ. ಆ ಬಳಿಕ ನಂದಿತಾಗೆ ಜಿಂಕೆ ಮರಿ ಎಂಬ ಟೈಟಲ್ ಫಿಕ್ಸ್ ಆಯಿತು. ಈ ಸಿನಿಮಾ ಬಳಿಕ ಅವರು ಪರಭಾಷೆಯಲ್ಲಿ ಬ್ಯುಸಿ ಇದ್ದರು. ಈಗ ಜಿಂಕೆ ಮರಿ ಕನ್ನಡ ಇಂಡಸ್ಟ್ರಿಗೆ ಮರಳಿ ಬಂದಿದೆ. ‘ಬೆನ್ನಿ’ ಹೆಸರಿನ ಮಹಿಳಾ ಪ್ರಧಾನ ಸಿನಿಮಾದಲ್ಲಿ ನಂದಿತಾ ಶ್ವೇತಾ (Nandita Shwetha) ನಟಿಸುತ್ತಿದ್ದಾರೆ.

ನಂದಿತಾ ಶ್ವೇತಾ ಸ್ಪಷ್ಟವಾಗಿ ಕನ್ನಡ ಮಾತನಾಡುತ್ತಾರೆ. ಅವರಿಗೆ ಕನ್ನಡದ ಮೇಲೆ ವಿಶೇಷ ಪ್ರೀತಿ ಕೂಡ ಇದೆ. ಆದರೆ, ಅವರಿಗೆ ಸರಿ ಹೊಂದುವ ಪಾತ್ರ ಇಷ್ಟು ದಿನ ಸಿಕ್ಕಿರಲಿಲ್ಲ. ಈಗ ಕೊನೆಗೂ ಅಂಥದ್ದೊಂದು ಪಾತ್ರ ಅವರಿಗೆ ದೊರೆತಿದ್ದು, ಖುಷಿಯಿಂದ ಸಿನಿಮಾ ಮಾಡಲು ಒಪ್ಪಿದ್ದಾರೆ.

ಇದನ್ನೂ ಓದಿ
Image
ಮುಂದಿನ ಮೂರು ವರ್ಷ ರಜನಿಕಾಂತ್ ಬ್ಯುಸಿ; ಮತ್ತೆ ಮೂರು ಸಿನಿಮಾ ಫೈನಲ್
Image
ಪಾತ್ರ ಕೊಡದ್ದಕ್ಕೆ ಸಿಟ್ಟು; ಯಶಸ್ಸು ಕೊಟ್ಟ ಬನ್ಸಾಲಿ ಮರೆತ ರಣವೀರ್ ಸಿಂಗ್
Image
ರಶ್ಮಿಕಾ ಸಿನಿಮಾ ಪ್ರಚಾರಕ್ಕೆ ಸಹಾಯ ಮಾಡಲಿದ್ದಾರೆ ಜೂ.ಎನ್​ಟಿಆರ್​-ಹೃತಿಕ್
Image
‘ರಾಮಾಯಣ’ ಬಜೆಟ್ ನಾಲ್ಕು ಸಾವಿರ ಕೋಟಿ; ಯಶ್ ಪಾಲೆಷ್ಟು?

ಬೆನ್ನಿ ಟೀಸರ್

‘ಹೊಂದಿಸಿ ಬರೆಯಿರಿ’ ಸಿನಿಮಾದ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್‌ ‘ಬೆನ್ನಿ’ ಹೆಸರಿನ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಈ ಹಿಂದೆ ‘ಪೆಪೆ’ ಸಿನಿಮಾ ನಿರ್ದೇಶನ ಮಾಡಿದ್ದ ಶ್ರೀಲೇಶ್ ಎಸ್ ನಾಯರ್ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ನಂದಿತಾ ಶ್ವೇತಾ ಕಂಬ್ಯಾಕ್ ವಿಚಾರ ಫ್ಯಾನ್ಸ್​ಗೆ ಖುಷಿ ನೀಡಿದೆ.

ನಂದಿತಾ ಶ್ವೇತಾ ಪೋಸ್ಟರ್

ಈ ಚಿತ್ರದ ಫಸ್ಟ್ ಪೋಸ್ಟರ್ ರಿವೀಲ್ ಆಗಿದೆ. ನಟಿ ಶ್ವೇತಾ ಇಲ್ಲಿ ಬೆನ್ನಿಯಾಗಿ ಟೈಲಟ್‌ ರೋಲ್‌ ಪ್ಲೇ ಮಾಡುತ್ತಿದ್ದಾರೆ. ಈ ಸಿನಿಮಾದ ಫಸ್ಟ್​ ಲುಕ್ ಟೀಸರ್​ಗೆ ಕಿಚ್ಚ ಸುದೀಪ್ ಅವರು ಖಡಕ್ ವಾಯ್ಸ್ ಕೊಟ್ಟಿದ್ದಾರೆ. ರಕ್ತಸಿಕ್ತ ಅವತಾರದಲ್ಲಿ ನಂದಿತಾ ಶ್ವೇತಾ ಮಿಂಚಿದ್ದಾರೆ.

ಇದನ್ನೂ ನೋಡಿ: ಹೇಗಿದ್ದಾರೆ ನೋಡಿ ಜಿಂಕೆಮರಿ ನಂದಿತಾ ಶ್ವೇತಾ

‘ಬೆನ್ನಿ’ ಚಿತ್ರದಲ್ಲಿ ದಕ್ಷಿಣದ ಭಾರತದ ಪ್ರಮುಖ ನಟರು ಅಭಿನಯಿಸಲಿದ್ದಾರೆ. ಕನ್ನಡ ಮಾತ್ರವಲ್ಲ ತೆಲುಗು, ತಮಿಳು ಹಾಗೂ ಮಲಯಾಳಂ ಈ ಚಿತ್ರ ಮೂಡಿ ಬರುತ್ತಿದೆ. ಸಂಡೇ ಸಿನಿಮಾಸ್‌ ಬ್ಯಾನರ್‌ನಡಿ ರಾಮೇನಹಳ್ಳಿ ಜಗನ್ನಾಥ್‌ ಚಿತ್ರವನ್ನು ನಿರ್ಮಿಸಿ ಪ್ರೆಸೆಂಟ್‌ ಮಾಡುತ್ತಿದ್ದಾರೆ. ಸಚಿನ್‌ ಬಸ್ರೂರ್‌ ಸಂಗೀತ ಸಂಯೋಜನೆ, ಗುರುಪ್ರಸಾದ್ ನಾರ್ನಾದ್ ಛಾಯಾಗ್ರಹಣ, ಮನು ಶೇಡ್ಗಾರ್ ಹಾಗೂ ರಂಜನ್ ನರಸಿಂಹಮೂರ್ತಿ ಸಂಕಲನ ಈ ಚಿತ್ರಕ್ಕೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:07 am, Tue, 15 July 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ