‘ಥ್ಯಾಂಕ್ಸ್ ಅಣ್ಣ’; ಕಿಚ್ಚ ಸುದೀಪ್ ಬೆಂಬಲಕ್ಕೆ ಧನ್ಯವಾದ ಹೇಳಿದ ಟಾಲಿವುಡ್ ನಟ ನಾನಿ

ನಾನಿ ಅವರು ಒಂದೇ ರೀತಿಯ ಪಾತ್ರಕ್ಕೆ ಕಟ್ಟುಬಿದ್ದವರಲ್ಲ. ಚಿತ್ರದಿಂದ ಚಿತ್ರಕ್ಕೆ ಹೊಸ ರೀತಿಯ ಪಾತ್ರಗಳನ್ನು ಒಪ್ಪಿಕೊಳ್ಳುತ್ತಾರೆ. ಅವರು ನಟನೆಯಲ್ಲಿ ತಮ್ಮನ್ನು ತಾವು ಸಾಬೀತು ಮಾಡಿಕೊಂಡಿದ್ದಾರೆ. ಈಗ ಅವರು ‘ಹಾಯ್ ನಾನ್ನ’ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ವರ್ಷಾಂತ್ಯಕ್ಕೆ ಸಿನಿಮಾ ರಿಲೀಸ್ ಆಗಲಿದೆ.

‘ಥ್ಯಾಂಕ್ಸ್ ಅಣ್ಣ’; ಕಿಚ್ಚ ಸುದೀಪ್ ಬೆಂಬಲಕ್ಕೆ ಧನ್ಯವಾದ ಹೇಳಿದ ಟಾಲಿವುಡ್ ನಟ ನಾನಿ
ನಾನಿ-ಸುದೀಪ್

Updated on: Oct 07, 2023 | 8:09 AM

ನಟ ನಾನಿ ಹಾಗೂ ಕಿಚ್ಚ ಸುದೀಪ್ ಮಧ್ಯೆ ಒಳ್ಳೆಯ ಫ್ರೆಂಡ್​ಶಿಪ್ ಇದೆ. ಎಸ್​​ಎಸ್​ ರಾಜಮೌಳಿ (SS Rajamouli) ನಿರ್ದೇಶನದ ‘ಈಗ’ ಸಿನಿಮಾದಲ್ಲಿ ನಾನಿ ಹಾಗೂ ಸುದೀಪ್ ಒಟ್ಟಾಗಿ ನಟಿಸಿದ್ದರು. ಅಂದಿನಿಂದ ಇಂದಿನವರೆಗೂ ಇವರ ಫ್ರೆಂಡ್​ಶಿಪ್ ಹಾಗೆಯೇ ಮುಂದುವರಿದಿದೆ. ಈಗ ನಾನಿ ನಟನೆಯ ‘ಹಾಯ್ ನಾನ್ನ’ ಚಿತ್ರಕ್ಕೆ ಸುದೀಪ್ ಬೆಂಬಲ ಸೂಚಿಸಿದ್ದಾರೆ. ಈ ವಿಚಾರ ನಾನಿಗೆ ಖುಷಿ ನೀಡಿದೆ. ‘ಧನ್ಯವಾದ ಅಣ್ಣ’ ಎಂದಿದ್ದಾರೆ ನಾನಿ (Nani).

ನಾನಿ ಅವರು ಒಂದೇ ರೀತಿಯ ಪಾತ್ರಕ್ಕೆ ಕಟ್ಟುಬಿದ್ದವರಲ್ಲ. ಚಿತ್ರದಿಂದ ಚಿತ್ರಕ್ಕೆ ಹೊಸ ರೀತಿಯ ಪಾತ್ರಗಳನ್ನು ಒಪ್ಪಿಕೊಳ್ಳುತ್ತಾರೆ. ಅವರು ನಟನೆಯಲ್ಲಿ ತಮ್ಮನ್ನು ತಾವು ಸಾಬೀತು ಮಾಡಿಕೊಂಡಿದ್ದಾರೆ. ಈಗ ಅವರು ‘ಹಾಯ್ ನಾನ್ನ’ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ವರ್ಷಾಂತ್ಯಕ್ಕೆ ಸಿನಿಮಾ ರಿಲೀಸ್ ಆಗಲಿದೆ. ಈ ಚಿತ್ರದ ಸಾಂಗ್ ರಿಲೀಸ್ ಆಗಿ ಗಮನ ಸೆಳೆಯುತ್ತಿದೆ.

‘ಮಗಳಲ್ಲ..’ ಹಾಡನ್ನು ರಿಲೀಸ್ ಮಾಡಲಾಗಿದೆ. ಹಾಡು ಸಾಕಷ್ಟು ಭಾವನಾತ್ಮಕವಾಗಿದೆ. ಕನ್ನಡದಲ್ಲಿ ಈ ಹಾಡನ್ನು ಕಿಚ್ಚ ಸುದೀಪ್ ಅವರು ರಿಲೀಸ್ ಮಾಡಿದ್ದಾರೆ. ‘ನನ್ನ ಸಹೋದರ ನಾನಿ ಹಾಗೂ ಇಡೀ ತಂಡಕ್ಕೆ ಶುಭವಾಗಲಿ. ಮಗಳಲ್ಲ ಹಾಡನ್ನು ಪ್ರೆಸೆಂಟ್ ಮಾಡುತ್ತಿದ್ದೇನೆ..’ ಎಂದು ಸುದೀಪ್ ಬರೆದುಕೊಂಡಿದ್ದಾರೆ. ಈ ಟ್ವೀಟ್ ರೀಟ್ವೀಟ್ ಮಾಡಿಕೊಂಡಿರುವ ನಾನಿ, ‘ಧನ್ಯವಾದ ಅಣ್ಣ’ ಎಂದಿದ್ದಾರೆ.

ಇದನ್ನೂ ಓದಿ: ಟ್ರೋಲ್​ ಆದ ಬಿಗ್​ ಬಾಸ್​ ಸ್ಪರ್ಧಿಗಳ ಬಗ್ಗೆ ಪ್ರಶ್ನೆ: ಸುದ್ದಿಗೋಷ್ಠಿಯಲ್ಲಿ ಕಿಚ್ಚ ಸುದೀಪ್​ ಗರಂ

‘ಹಾಯ್ ನಾನ್ನ’ ಸಿನಿಮಾ ಅಪ್ಪ-ಮಗಳ ಬಾಂಧವ್ಯದ ಕಥೆಯನ್ನು ಹೊಂದಿದೆ ಎನ್ನಲಾಗಿದೆ. ಈ ಚಿತ್ರದಲ್ಲಿ ಮೃಣಾಲ್ ಠಾಕೂರ್, ಶ್ರುತಿ ಹಾಸನ್, ನಾನಿ ಮೊದಲಾದವರು ನಟಿಸಿದ್ದಾರೆ. ಈ ಚಿತ್ರದ ಬಗ್ಗೆ ಈಗಲೇ ನಿರೀಕ್ಷೆ ಸೃಷ್ಟಿ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:41 am, Sat, 7 October 23