ಲೀಲಾವತಿ ನಿಧನ: ಪ್ರಧಾನಿ ನರೇಂದ್ರ ಮೋದಿ ಸಂತಾಪ

|

Updated on: Dec 08, 2023 | 10:21 PM

Narendra Modi: ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಅಗಲಿಕೆಗೆ ಸಂತಾಪ ವ್ಯಕ್ತಪಡಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದಾರೆ.

ಲೀಲಾವತಿ ನಿಧನ: ಪ್ರಧಾನಿ ನರೇಂದ್ರ ಮೋದಿ ಸಂತಾಪ
ಮೋದಿ
Follow us on

ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ (Leelavathi) ಅವರ ಅಗಲಿಕೆ ಕನ್ನಡ ಚಿತ್ರರಂಗದ ಅನೇಕರು ಸಂತಾಪ ವ್ಯಕ್ತಪಡಿಸಿದ್ದಾರೆ. ಸಿಎಂ ಸಿದ್ದಾರಾಮಯ್ಯ, ಉಪಮುಖ್ಯ ಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ವಿಪಕ್ಷದ ಹಲವು ರಾಜಕೀಯ ಮುಖಂಡರುಗಳು ಸಹ ಲೀಲಾವತಿಯವರ ಅಗಲಿಕೆ ತಮ್ಮ ಸಂತಾಪ ಸೂಚಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಸಹ ಲೀಲಾವರ ಅಗಲಿಕೆಗೆ ತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ.

ಟ್ವೀಟ್ ಮಾಡಿರುವ ನರೇಂದ್ರ ಮೋದಿ, ‘‘ಕನ್ನಡ ಚಿತ್ರರಂಗದ ಹೆಸರಾಂತ ನಟಿ ಲೀಲಾವತಿ ಅವರ ನಿಧನದ ಸುದ್ದಿ ಕೇಳಿ ದುಃಖವಾಯಿತು. ಸಿನಿಮಾದ ನೈಜ ಪ್ರತೀಕವಾದ ಅವರು ಹಲವಾರು ಚಲನಚಿತ್ರಗಳಲ್ಲಿ ತಮ್ಮ ಬಹುಮುಖ ನಟನೆಯೊಂದಿಗೆ ಬೆಳ್ಳಿ ಪರದೆಯನ್ನು ಅಲಂಕರಿಸಿದವರು. ಅವರ ವೈವಿಧ್ಯಮಯ ಪಾತ್ರಗಳು ಮತ್ತು ಅದ್ಭುತ ಪ್ರತಿಭೆಯನ್ನು ಸದಾ ಸ್ಮರಿಸಲಾಗುತ್ತದೆ ಮತ್ತು ಪ್ರಶಂಸಿಸಲಾಗುತ್ತದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ’’ ಎಂದಿದ್ದಾರೆ.

ಸಿಎಂ ಸಿದ್ದರಾಮಯ್ಯನವರು ಸಹ ಲೀಲಾವತಿಯವರ ಅಗಲಿಕೆ ಬಗ್ಗೆ ಟ್ವೀಟ್ ಮಾಡಿದ್ದು, ‘‘ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಅಗಲಿಕೆಯ ಸುದ್ದಿ ನೋವುಂಟುಮಾಡಿದೆ. ಕಳೆದ ವಾರವಷ್ಟೇ ಅವರು ಅನಾರೋಗ್ಯಕ್ಕೀಡಾದ ವಿಚಾರ ತಿಳಿದು ಅವರ ಮನೆಗೆ ಭೇಟಿನೀಡಿ ಆರೋಗ್ಯ ವಿಚಾರಿಸಿ ಪುತ್ರ ವಿನೋದ್ ರಾಜ್ ಅವರೊಂದಿಗೆ ಮಾತನಾಡಿದ್ದೆ. ಹಲವು ದಶಕಗಳ ಕಾಲ ತಮ್ಮ‌ ಮನೋಜ್ಞ ಅಭಿನಯದ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದ ಲೀಲಾವತಿ ಅವರು ಗುಣಮುಖರಾಗಿ ಇನ್ನಷ್ಟು ಕಾಲ ನಮ್ಮ ನಡುವೆ ಇರುತ್ತಾರೆಂಬ ನನ್ನ ನಂಬಿಕೆ ಹುಸಿಯಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ’’ ಎಂದಿದ್ದಾರೆ.

ಇದನ್ನೂ ಓದಿ:500 ರೂಪಾಯಿ ಸಂಭಾವನೆ ಇದ್ದ ಕಾಲಕ್ಕೆ 50 ಸಾವಿರ ಸಂಭಾವನೆ ಪಡೆದಿದ್ದ ಲೀಲಾವತಿ

ಉಪಮುಖ್ಯ ಮಂತ್ರಿ ಡಿಕೆ ಶಿವಕುಮಾರ್ ಸಹ ಲೀಲಾವತಿ ಅವರ ಅಗಲಿಕೆ ಬಗ್ಗೆ ಟ್ವೀಟ್ ಮಾಡಿದ್ದು, ‘‘ಹಿರಿಯ ನಟಿ ಲೀಲಾವತಿ ಅವರ ಅಗಲಿಕೆಯ ಸುದ್ದಿ ಅತೀವ ದುಃಖ ಉಂಟುಮಾಡಿದೆ. ಇತ್ತೀಚೆಗಷ್ಟೇ ಅವರು ನೆಲಮಂಗಲ ಬಳಿಯ ಸೋಲದೇವನಹಳ್ಳಿಯಲ್ಲಿ ನಿರ್ಮಿಸಿದ್ದ ಪಶು ಆಸ್ಪತ್ರೆಯನ್ನು ಉದ್ಘಾಟಿಸಿದ್ದೆ. ಸಂಕಷ್ಟದಲ್ಲಿದ್ದರೂ ಸಮಾಜ ಸೇವೆ ಮಾಡಬೇಕೆನ್ನುವ ಅವರ ಕಳಕಳಿ ನನ್ನ ಹೃದಯ ಮುಟ್ಟಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಪುತ್ರ ವಿನೋದ್‌ ರಾಜ್‌ ಕುಟುಂಬವರ್ಗದವರು ಹಾಗೂ ಅಭಿಮಾನಿಗಳ ನೋವಿನಲ್ಲಿ ನಾನೂ ಕೂಡ ಭಾಗಿ’’ ಎಂದಿದ್ದಾರೆ.

ವಿಪಕ್ಷ ನಾಯಕ ಆರ್ ಅಶೋಕ್ ಸಹ ‘‘ಸುಮಾರು 600 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಕನ್ನಡದ ಹಿರಿಯ ಬಹುಭಾಷಾ ನಟಿ ಲೀಲಾವತಿ ನಿಧನರಾಗಿದ್ದು ಅತ್ಯಂತ ದುಃಖ‌ ತಂದಿದೆ. ಕುಟುಂಬಕ್ಕೆ ಅವರ ಅಗಲಿಕೆಯ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು, ಅವರ ಆತ್ಮಕ್ಕೆ ಚಿರಶಾಂತಿ‌ಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ’’ ಎಂದಿದ್ದಾರೆ.

ಸಿಎಂ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಅವರುಗಳು ಪ್ರತ್ಯೇಕವಾಗಿ ಲೀಲಾವತಿ ಅವರ ನಿವಾಸಕ್ಕೆ ಕೆಲ ದಿನಗಳ ಹಿಂದೆ ಭೇಟಿ ನೀಡಿ ಲೀಲಾವತಿಯವರ ಆರೋಗ್ಯ ವಿಚಾರಿಸಿದ್ದರು, ವಿನೋದ್ ರಾಜ್​ರಿಗೆ ಧರ್ಯ ತುಂಬುವ ಕಾರ್ಯ ಮಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ