AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವಿತ್ರಾ ಲೋಕೇಶ್ ಹಾಗೂ ತಮ್ಮ ಸಂಬಂಧದ ಬಗ್ಗೆ ಸತ್ಯ ನುಡಿದ ನಟ ನರೇಶ್

Pavitra Lokesh-Naresh: ನರೇಶ್ ಹಾಗೂ ಪವಿತ್ರಾ ಲೋಕೇಶ್ ಸಂಬಂಧದ ಬಗ್ಗೆ ಕಳೆದ ವರ್ಷ ಬಹುವಾಗಿ ಸುದ್ದಿಯಾಗಿತ್ತು. ಇದೀಗ ನಟ ನರೇಶ್ ತಮ್ಮ ಹಾಗೂ ಪವಿತ್ರಾ ಲೋಕೇಶ್ ಸಂಬಂಧದ ಬಗ್ಗೆ ಸತ್ಯ ನುಡಿದಿದ್ದಾರೆ.

ಪವಿತ್ರಾ ಲೋಕೇಶ್ ಹಾಗೂ ತಮ್ಮ ಸಂಬಂಧದ ಬಗ್ಗೆ ಸತ್ಯ ನುಡಿದ ನಟ ನರೇಶ್
ನರೇಶ್-ಪವಿತ್ರಾ ಲೋಕೇಶ್
ಮಂಜುನಾಥ ಸಿ.
|

Updated on: May 18, 2023 | 10:01 PM

Share

ತೆಲುಗು ನಟ ನರೇಶ್ (Naresh) ಹಾಗೂ ಪವಿತ್ರಾ ಲೋಕೇಶ್ (Pavitra Lokesh) ಅವರ ಸಂಬಂಧದ ಕುರಿತು ಕಳೆದ ವರ್ಷ ಬಹುವಾಗಿ ಸುದ್ದಿಯಾಗಿತ್ತು. ನರೇಶ್​ರ ಮೂರನೇ ಪತ್ನಿ ರಮ್ಯಾ ರಘುಪತಿ ಕರ್ನಾಟಕದ ಮಾಧ್ಯಮಗಳ ಮುಂದೆ ಬಂದು ತಮಗೆ ನರೇಶ್ ಅನ್ಯಾಯ ಮಾಡಿದ್ದಾರೆಂದು, ತಮ್ಮ ಸಂಸಾರ ಹಾಳಾಗಲು ಪವಿತ್ರಾ ಲೋಕೇಶ್ ಕಾರಣವೆಂದು ಅಳಲು ತೋಡಿಕೊಂಡಿದ್ದರು. ಈ ಬಗ್ಗೆ ನರೇಶ್ ಸಹ ಸುದ್ದಿಗೋಷ್ಠಿ ನಡೆಸಿ ರಮ್ಯಾ ವಿರುದ್ಧ ಆರೋಪಗಳನ್ನು ಮಾಡಿದ್ದರು. ಆಗ ನರೇಶ್ ಹಾಗೂ ಪವಿತ್ರಾ ಲೋಕೇಶ್ ಸಂಬಂಧದ ಕುರಿತು ಪ್ರಶ್ನೆಗಳು ಎದ್ದಿದ್ದವು. ಇದೀಗ ನರೇಶ್ ಹಾಗೂ ಪವಿತ್ರಾ ಅವರೇ ಮುಖ್ಯ ಪಾತ್ರದಲ್ಲಿ ನಟಿಸಿರುವ ಮತ್ತೆ ಮದುವೆ ಸಿನಿಮಾದ ಪ್ರಚಾರಕ್ಕೆ ಬೆಂಗಳೂರಿಗೆ ಆಗಮಿಸಿದ್ದ ಈ ಜೋಡಿಗೆ ಮತ್ತೆ ಅದೇ ಪ್ರಶ್ನೆ ಎದುರಾಯಿತು.

ತಮ್ಮ ಹಾಗೂ ಪವಿತ್ರಾ ಲೋಕೇಶ್​ರ ಸಂಬಂಧದ ಬಗ್ಗೆ ಮಾತನಾಡಿದ ನರೇಶ್, ”ಹಿಂದೆ ದೇವಾನುದೇವತೆಗಳೇ ಬಹುಪತ್ನಿತ್ವದಲ್ಲಿದ್ದರು. ರಾಜರೂ ಒಂದಕ್ಕಿಂತ ಹೆಚ್ಚು ಮದುವೆ ಆಗುತ್ತಿದ್ದರು. ಅದೆಲ್ಲವನ್ನೂ ನಾವು ಸ್ವೀಕರಿಸಿ, ಒಪ್ಪಿಕೊಂಡಿದ್ದೇವೆ. ಈಗಲೂ ಸುಪ್ರೀಂಕೋರ್ಟ್‌ ಲಿವ್‌ ಇನ್‌ ರಿಲೇಶನ್‌ಶಿಪ್‌ ತಪ್ಪಲ್ಲ ಎಂದು ತೀರ್ಪು ನೀಡಿದೆ. ಅಂತದ್ದರಲ್ಲಿ ನಮ್ಮಿಬ್ಬರ ತಪ್ಪು ಏನಿದೆ? ನಾನಂತೂ ಸಿಂಗಲ್‌ ಅಲ್ಲ, ಪವಿತ್ರಾ ಹಾಗೂ ನಾವಿಬ್ಬರೂ ಲಿವ್‌ ಇನ್‌ ರೀಲೇಶನ್‌ಶಿಪ್‌ನಲ್ಲಿದ್ದೇವೆ” ಎಂದು ಬಹಿರಂಗವಾಗಿ ಒಪ್ಪಿಕೊಂಡರು.

ಕಳೆದ ವರ್ಷ ನಡೆದ ವಿವಾದಗಳ ಬಗ್ಗೆ ಮಾತನಾಡಿದ ನಟಿ ಪವಿತ್ರಾ ಲೋಕೇಶ್, ”ನನ್ನ ವೃತ್ತಿಗೂ ವೈಯಕ್ತಿಕ ವಿಚಾರಕ್ಕೂ ಲಿಂಕ್‌ ಮಾಡುವುದು ನನಗೆ ಇಷ್ಟವಿಲ್ಲ. ನನ್ನನ್ನು ಒಬ್ಬ ನಟಿಯಾಗಿ ಮಾತ್ರ ನೋಡಿ, ಬೇಕಂತಲೇ ಯಾರೂ ಸುದ್ದಿಯಾಗುವುದಿಲ್ಲ. 1994ನಲ್ಲಿ ಅಂಬರೀಶ್‌ ಅವರು ನನ್ನನ್ನು ಚಿತ್ರರಂಗಕ್ಕೆ ಪರಿಚಯಿಸಿದರು. ಅಲ್ಲಿಂದ ಇದುವರೆಗೂ ನಾನು ಯಾವುದೇ ವಿಚಾರವನ್ನು ಮಾಧ್ಯಮಗಳ ಮುಂದೆ ಬಂದು ಹೇಳಿಕೊಂಡಿರಲಿಲ್ಲ. ದುರುದ್ದೇಶಪೂರ್ವಕವಾಗಿ ನನ್ನ ಹೆಗಲ ಮೇಲೆ ಗನ್‌ ಇಟ್ಟು ನರೇಶ್‌ ಅವರನ್ನು ಶೂಟ್‌ ಮಾಡುವ ಪಿತೂರಿ ನಡೆದಿತ್ತು” ಎಂದರು.

ಇದನ್ನೂ ಓದಿ: ಮೈಸೂರಿನ ಹೋಟೆಲ್​ನಲ್ಲಿ ಸಿಕ್ಕಿಬಿದ್ದ ಘಟನೆ ಬಗ್ಗೆ ಪ್ರಶ್ನೆ; ಅಪ್​ಸೆಟ್ ಆದ ಪವಿತ್ರಾ ಲೋಕೇಶ್

ಮತ್ತೆ ಮದುವೆ ಸಿನಿಮಾ ನಿಮ್ಮ ಜೀವನದ ರಿಯಲ್‌ ಲೈಫ್‌ ಸ್ಟೋರಿನಾ? ಟೀಸರ್‌ ನೋಡಿದರೆ ಇದುವರೆಗೂ ನಡೆದ ಘಟನೆಗಳನ್ನೇ ಅಲ್ಲಿ ತೋರಿಸಲಾಗಿದೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಪವಿತ್ರಾ ಲೋಕೇಶ್, ”ಒಂದೆರಡು ನಿಮಿಷದ ಟೀಸರ್‌ ಟ್ರೇಲರ್‌ ನೋಡಿ ಯಾವ ನಿರ್ಧಾರಕ್ಕೂ ಬರಬೇಡಿ, ಸಿನಿಮಾ ನೋಡಿದರೆ ನಾವು ಏನು ಹೇಳಲು ಹೊರಟಿದ್ದೇವೆ ಎನ್ನುವುದು ಅರ್ಥವಾಗುತ್ತದೆ. ಸಮಾಜಕ್ಕೆ ಒಂದೊಳ್ಳೆ ಸಂದೇಶ ನೀಡಲು ಹೊರಟಿದ್ದೇವೆ. ಈಗಲೇ ಸಿನಿಮಾ ಕಥೆಯನ್ನು ಹೇಳಲು ಸಾಧ್ಯವಿಲ್ಲ. ನಮ್ಮ ಜೀವನಕ್ಕೂ ಸಿನಿಮಾಗೂ ಏನೂ ಸಂಬಂಧ ಇಲ್ಲ. ಸಿನಿಮಾ ಬೇರೆ, ವೈಯಕ್ತಿಕ ಜೀವನವೇ ಬೇರೆ.

ಮಳ್ಳಿ ಪೆಳ್ಳಿ ಸಿನಿಮಾವನ್ನು ನರೇಶ್ ಅವರೇ ನಿರ್ಮಾಣ ಮಾಡುತ್ತಿದ್ದಾರೆ. ನರೇಶ್ ಅವರ ತಾಯಿ, ಹಿರಿಯ ನಟಿ, ನಿರ್ದೇಶಕಿ ವಿಜಯಾ ನಿರ್ಮಲಾ ಅವರು 1973ರಲ್ಲಿ ‘ಸೂಪರ್ ಸ್ಟಾರ್‌’ ಕೃಷ್ಣ ಅವರ ಜತೆಗೂಡಿ ವಿಜಯ ಕೃಷ್ಣ ಮೂವೀಸ್ ಆರಂಭಿಸಿದ್ದರು. ಇದೀಗ ಆ ಬ್ಯಾನರ್‌ಗೆ ಭರ್ತಿ 50 ವರ್ಷ ತುಂಬಿದೆ. ಆ ಹಿನ್ನೆಲೆಯಲ್ಲಿ ಆ ಬ್ಯಾನರ್‌ ಮೂಲಕ ಮಳ್ಳಿ ಪೆಳ್ಳಿ’ ಸಿನಿಮಾವನ್ನು ನರೇಶ್ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ಎಂ. ಎಸ್. ರಾಜು, ಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಇದೊಂದು ಫ್ಯಾಮಿಲಿ ಎಂಟರ್ಟೈನ್ಮೆಂಟ್ ಸಿನಿಮಾವಾಗಿದೆ. ಜಯಸುಧ ಮತ್ತು ಶರತ್ ಬಾಬು ಚಿತ್ರದ ಪ್ರಮುಖ ಪಾತ್ರಗಳಿಗೆ ಬಣ್ಣ ಹಚ್ಚಿದ್ದಾರೆ. ವನಿತ ವಿಜಯಕುಮಾರ್, ಅನನ್ಯ ನಾಗೆಲ್ಲ, ರೋಶನ್, ರವಿವರ್ಮ, ಅನ್ನಪೂರ್ಣ, ಭದ್ರಂ, ಯುಕ್ತ, ಪ್ರವೀಣ್ ಯಂಡಮುರಿ, ಮಧು ಹಾಗೂ ಇನ್ನಿತರರು ಈ ಚಿತ್ರದಲ್ಲಿ ನಟಿಸಿದ್ದಾರೆ.‌ ಮೇ 26ಕ್ಕೆ ಮಳ್ಳಿ ಪೆಳ್ಳಿ ಎಂಬ ಟೈಟಲ್ ನಡಿ ತೆಲುಗಿನಲ್ಲಿ ಸಿನಿಮಾ ತೆರೆ ಕಾಣುತ್ತಿದೆ. ಕನ್ನಡದಲ್ಲಿ ಇನ್ನೂ ರಿಲೀಸ್ ಡೇಟ್ ಫೈನಲ್ ಆಗಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್