ರಾಷ್ಟ್ರಪ್ರಶಸ್ತಿ ವಿಜೇತ ಬಾಲ ನಟ ‘ಕಾಟೇರ’ ಖ್ಯಾತಿಯ ರೋಹಿತ್​ಗೆ ಅಪಘಾತ

‘ಕಾಟೇರ’, ‘ಒಂದಲ್ಲ ಎರಡಲ್ಲ’ ಸಿನಿಮಾದಲ್ಲಿ ನಟಿಸಿರುವ ಮಾಸ್ಟರ್ ರೋಹಿತ್​ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೆ ಈಡಾಗಿದ್ದು, ಮಾಸ್ಟರ್ ರೋಹಿತ್​ಗೆ ತೀವ್ರ ಗಾಯಗಳಾಗಿವೆ. ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ.

ರಾಷ್ಟ್ರಪ್ರಶಸ್ತಿ ವಿಜೇತ ಬಾಲ ನಟ ‘ಕಾಟೇರ’ ಖ್ಯಾತಿಯ ರೋಹಿತ್​ಗೆ ಅಪಘಾತ
Follow us
ಮಂಜುನಾಥ ಸಿ.
|

Updated on:Nov 17, 2024 | 12:12 PM

ಬ್ಲಾಕ್ ಬಸ್ಟರ್ ಸಿನಿಮಾ ‘ಕಾಟೇರ’ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿರುವ, ನಟನೆಗೆ ರಾಷ್ಟ್ರಪ್ರಶಸ್ತಿಯನ್ನು ಸಹ ಪಡೆದಿರುವ ಮಾಸ್ಟರ್ ರೋಹಿತ್​ಗೆ ನಿನ್ನೆ ಅಪಘಾತವಾಗಿದೆ. ಪಾಂಡವಪುರದಿಂದ ಶ್ರೀರಂಗಪಟ್ಟಣಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ನಡೆದಿದೆ, ಈ ಭೀಕರ ಅಪಘಾತದಲ್ಲಿ ರೋಹಿತ್ ಮತ್ತು ಅವರ ತಾಯಿ ಇಬ್ಬರಿಗೂ ಗಾಯಗಳಾಗಿವೆ. ಅವರನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಮಾಸ್ಟರ್ ರೋಹಿತ್, ಶ್ರೀರಂಗಪಟ್ಟಣದಲ್ಲಿ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮಕ್ಕೆಂದು ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಮಾಸ್ಟರ್ ರೋಹಿತ್, ಅವರ ತಾಯಿ, ಒಬ್ಬ ಉಪನ್ಯಾಸಕ ಹಾಗೂ ರೋಹಿತ್​ರ ಗೆಳೆಯ KA11 N 4173 ಸಂಖ್ಯೆಯ ಕಾರಿನಲ್ಲಿ ಪಾಂಡವಪುರದಿಂದ ಶ್ರೀರಂಗಪಟ್ಟಣದ ಆರಾಧನಾ ಶಾಲೆಗೆ ಹೋಗುತ್ತಿದ್ದರು. ಈ ವೇಳೆಯಲ್ಲಿ ಕೇರಳದ ಪ್ರವಾಸಿ ಬಸ್ಸೊಂದಕ್ಕೆ ಕಾರು ಮುಖಾ-ಮುಖಿ ಡಿಕ್ಕಿ ಆಗಿದ್ದು, ಕಾರಿನಲ್ಲಿದ್ದ ಎಲ್ಲರಿಗೂ ತೀವ್ರ ಗಾಯಗಳಾಗಿವೆ.

ಇದನ್ನೂ ಓದಿ:ಹೊಂಬಾಳೆಯ ಹೊಸ ಸಿನಿಮಾ ‘ನರಸಿಂಹ’, ಟೀಸರ್ ನೋಡಿ

ಅದರಲ್ಲೂ ರೋಹಿತ್​ಗೆ ತೀವ್ರ ಪೆಟ್ಟಾಗಿದ್ದು, ರೋಹಿತ್​ರ ವಸಡು ಒಡೆದು ಹೋಗಿದೆ. ಹಾಗೂ ಅವರ ತಲೆ ಬುರುಡೆಗೆ ತೀವ್ರ ಪೆಟ್ಟಾಗಿದೆ. ಅವರನ್ನು ಮೈಸೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ರೋಹಿತ್​ರ ತಾಯಿಯ ಎರಡೂ ಕಾಲಿಗೆ ತೀವ್ರ ಪೆಟ್ಟಾಗಿದ್ದು ಮೂಳೆಗಳು ಮುರಿದಿವೆ ಎನ್ನಲಾಗುತ್ತಿದೆ. ರೋಹಿತ್​ರ ಗೆಳೆಯ ಹಾಗೂ ಉಪನ್ಯಾಸಕರಿಗೂ ತೀವ್ರ ಪೆಟ್ಟಾಗಿದೆ.

ಮಾಸ್ಟರ್ ರೋಹಿತ್, ‘ಒಂದಲ್ಲ ಎರಡಲ್ಲ’ ಸಿನಿಮಾದಲ್ಲಿ ಪ್ರಧಾನ ಪಾತ್ರದಲ್ಲಿ ನಟಿಸಿದ್ದರು. ಅದೇ ಸಿನಿಮಾಕ್ಕೆ ಅವರಿಗೆ ರಾಷ್ಟ್ರಪ್ರಶಸ್ತಿ ಸಹ ದೊರಕಿತು. ಕಳೆದ ವರ್ಷ ಬಿಡುಗಡೆ ಆದ ‘ಕಾಟೇರ’ ಸಿನಿಮಾದಲ್ಲಿ ರೋಹಿತ್ ನಟಿಸಿದ್ದರು. ಆ ಸಿನಿಮಾದಲ್ಲಿಯೂ ರೋಹಿತ್ ಅದ್ಭುತವಾಗಿ ನಟಿಸಿದ್ದರು. ಸಿನಿಮಾದ ಪ್ರಚಾರ ಕಾರ್ಯಕ್ರಮದಲ್ಲಿ ನಟ ದರ್ಶನ್, ರೋಹಿತ್ ಅವರ ನಟನೆಯನ್ನು ಕೊಂಡಾಡಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:23 am, Sun, 17 November 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ