National Film Awards 2019: ರಾಷ್ಟ್ರ ಪ್ರಶಸ್ತಿ ಪಡೆದ ಕನ್ನಡದ ‘ಅಕ್ಷಿ’ ಚಿತ್ರಕ್ಕೂ ಡಾ. ರಾಜ್​ಕುಮಾರ್​​ಗೂ ಇದೆ ಸಂಬಂಧ!

Akshi Kannada Movie: 67ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿಯಲ್ಲಿ ಕನ್ನಡದ ‘ಅಕ್ಷಿ’ ಚಿತ್ರಕ್ಕೆ ಮನ್ನಣೆ ಸಿಕ್ಕಿದೆ. ಅಚ್ಚರಿ ಎಂದರೆ, ಈ ಸಿನಿಮಾದ ಕಥೆಗೆ ಡಾ. ರಾಜ್​ಕುಮಾರ್​ ಸ್ಫೂರ್ತಿ. ಆ ಬಗ್ಗೆ ನಿರ್ದೇಶಕ ಮನೋಜ್​ ಕುಮಾರ್​ ಮಾತನಾಡಿದ್ದಾರೆ.

National Film Awards 2019: ರಾಷ್ಟ್ರ ಪ್ರಶಸ್ತಿ ಪಡೆದ ಕನ್ನಡದ ‘ಅಕ್ಷಿ’ ಚಿತ್ರಕ್ಕೂ ಡಾ. ರಾಜ್​ಕುಮಾರ್​​ಗೂ ಇದೆ ಸಂಬಂಧ!
ಅಕ್ಷಿ ಕನ್ನಡ ಸಿನಿಮಾ - ಡಾ. ರಾಜ್​ಕುಮಾರ್​
Follow us
ಮದನ್​ ಕುಮಾರ್​
|

Updated on: Mar 23, 2021 | 10:29 AM

67ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪಟ್ಟಿ ಸೋಮವಾರ (ಮಾ.22) ಘೋಷಣೆ ಆಗಿದೆ. ಕನ್ನಡದ ಅತ್ಯುತ್ತಮ ಸಿನಿಮಾ ಎಂಬ ಖ್ಯಾತಿಗೆ ಈ ವರ್ಷ ‘ಅಕ್ಷಿ’ ಚಿತ್ರ ಪಾತ್ರವಾಗಿದೆ. ಇದಕ್ಕೆ ನಿರ್ದೇಶನ ಮಾಡಿರುವುದು ಹೊಸ ನಿರ್ದೇಶಕ ಮನೋಜ್​ ಕುಮಾರ್. ಈ ಸಿನಿಮಾ ಇನ್ನೂ ಬಿಡುಗಡೆ ಆಗಿಲ್ಲ. ಅದಕ್ಕೂ ಮುನ್ನವೇ ರಾಷ್ಟ್ರ ಪ್ರಶಸ್ತಿಯ ಗರಿ ಸಿಕ್ಕಿರುವುದು ತಂಡದ ಸಂತಸಕ್ಕೆ ಕಾರಣವಾಗಿದೆ. ಅಲ್ಲದೆ, ಸಿನಿಮಾ ಬಗ್ಗೆ ಪ್ರೇಕ್ಷಕರಿಗೂ ನಿರೀಕ್ಷೆ ಮೂಡುವಂತಾಗಿದೆ. ವಿಶೇಷ ಏನೆಂದರೆ, ಈ ಚಿತ್ರದ ಕತೆಗೆ ಪ್ರೇರಣೆ ಆಗಿದ್ದು ಡಾ. ರಾಜ್​ಕುಮಾರ್​!

ಹೆಸರೇ ಸೂಚಿಸುವಂತೆ ‘ಅಕ್ಷಿ’ ಚಿತ್ರದಲ್ಲಿ ನೇತ್ರದಾನದ ಮಹತ್ವದ ಬಗ್ಗೆ ತಿಳಿಸಲಾಗಿದೆ. ನಿರ್ದೇಶಕ ಮನೋಜ್​ ಅವರಿಗೆ ಇಂಥ ವಿಷಯದ ಮೇಲೆ ಸಿನಿಮಾ ಮಾಡಬೇಕು ಎನಿಸಲು ಕಾರಣ ಡಾ. ರಾಜ್​ಕುಮಾರ್. ಹೌದು, 2006ರ ಏಪ್ರಿಲ್​ 12ರಂದು ಮೇರುನಟ ನಿಧನರಾದಾಗ ಅವರ ನೇತ್ರದಾನ ಮಾಡಿದ್ದಾರೆ ಎಂಬ ಸುದ್ದಿ ಎಲ್ಲೆಲ್ಲೂ ಹರಡಿತು. ಆ ಸಂದರ್ಭದಲ್ಲಿ ಮನೋಜ್​ ಕುಮಾರ್​ ಕಾಲೇಜು ವಿದ್ಯಾರ್ಥಿ ಆಗಿದ್ದರು. ಆಗಲೇ ಅವರಿಗೆ ನೇತ್ರದಾನದ ಕುರಿತು ಜನರಿಗೆ ತಿಳಿಸಿ ಹೇಳಬೇಕು ಎಂಬ ಗುರಿ ಮೂಡಿತ್ತು. ಅದನ್ನು ‘ಅಕ್ಷಿ’ ಸಿನಿಮಾದ ಮೂಲಕ ಅವರು ಈಡೇರಿಸಿಕೊಂಡಿದ್ದಾರೆ.

ಈ ಕಥೆಯನ್ನು ತೆರೆಗೆ ತರುವುದಕ್ಕೂ ಮುನ್ನ ನೇತ್ರದಾನಕ್ಕೆ ಸಂಬಂಧಿಸಿದಂತೆ ಮನೋಜ್​ ಕುಮಾರ್​ ಸಾಕಷ್ಟು ಅಧ್ಯಯನ ನಡೆಸಿದ್ದಾರೆ. ಹಲವು ಆಸ್ಪತ್ರೆಗಳಿಗೆ ತೆರಳಿ ಮಾಹಿತಿ ಕಲೆ ಹಾಕಿದ್ದಾರೆ. ನೇತ್ರದಾನದ ಬಗ್ಗೆ ಜನರಿಗೆ ಇರುವಂತಹ ಮನಸ್ಥಿತಿ ಏನು ಎಂಬುದನ್ನು ಅರ್ಥ ಮಾಡಿಕೊಂಡಿದ್ದಾರೆ. ಹೀಗೆ ಕಲೆಹಾಕಿದ ಎಲ್ಲ ಅಂಶಗಳಿಗೆ ಅವರು ಸಿನಿಮಾ ರೂಪ ನೀಡಿದ್ದಾರೆ.

ಹಲವಾರು ವರ್ಷಗಳಿಂದ ಚಿತ್ರರಂಗದಲ್ಲಿ ತೊಡಗಿಕೊಂಡಿರುವ ಮನೋಜ್​ ಅವರಿಗೆ ನಿರ್ದೇಶಕನಾಗಿ ‘ಅಕ್ಷಿ’ ಮೊದಲ ಸಿನಿಮಾ. ದರ್ಶನ್​, ಮಾಲಾಶ್ರೀ ಮುಂತಾದವರ ಸಿನಿಮಾಗಳಿಗೆ ಸಹ-ನಿರ್ದೇಶಕನಾಗಿ ಮನೋಜ್​ ಕೆಲಸ ಮಾಡಿದ್ದರು. ಆದರೆ ತಮ್ಮ ಚೊಚ್ಚಲ ನಿರ್ದೇಶನದ ಚಿತ್ರಕ್ಕೆ ಅವರು ಆಯ್ಕೆ ಮಾಡಿಕೊಂಡಿದ್ದು ಒಂದು ಸಂವೇದನಾಶೀಲ ಕಥೆಯನ್ನು. ಅದಕ್ಕೆ ರಾಷ್ಟ್ರ ಪ್ರಶಸ್ತಿಯ ಮನ್ನಣೆ ಸಿಕ್ಕಿರುವುದು ಅವರಿಗೆ ಸಂತಸ ತಂದಿದೆ.

Akshi Movie Director Manoj Kumar

ನಿರ್ದೇಶಕ ಮನೋಜ್​ ಕುಮಾರ್​

ಏಪ್ರಿಲ್​ನಲ್ಲಿ ‘ಅಕ್ಷಿ’ ಚಿತ್ರವನ್ನು ತೆರೆಕಾಣಿಸಲು ಪ್ಲ್ಯಾನ್​ ಮಾಡಿಕೊಳ್ಳಲಾಗುತ್ತಿದೆ. ಕಲಾದೇಗುಲ ಶ್ರೀನಿವಾಸ್​, ರಮೇಶ್​ ಎನ್​., ರವಿ ಎಚ್​.ಎಚ್​. ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಕಲಾದೇಗುಲ ಶ್ರೀನಿವಾಸ್​ ಅವರೇ ಸಂಗೀತ ನಿರ್ದೇಶನ ಮತ್ತು ಸಾಹಿತ್ಯದ ಜವಾಬ್ದಾರಿಯನ್ನು ನಿಭಾಯಿಸಿದ್ದಾರೆ. ಇಳಾ ವಿಟ್ಲ, ಗೋವಿಂದೇ ಗೌಡ ಹಾಗು ಇಬ್ಬರು ಮಕ್ಕಳು ಈ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಶೀಘ್ರದಲ್ಲೇ ಟ್ರೇಲರ್​ ಬಿಡುಗಡೆ ಆಗಲಿದೆ.

ಇದನ್ನೂ ಓದಿ: National Film Awards 2019: ಅವನೇ ಶ್ರೀಮನ್ನಾರಾಯಣ ಚಿತ್ರಕ್ಕೆ ಒಲಿದ ರಾಷ್ಟ್ರ ಪ್ರಶಸ್ತಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ