AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸರ್ಸೆ ಸೆರಗು’ ಹಾಡು ವಿವಾದ: ರಾಷ್ಟ್ರೀಯ ಮಹಿಳಾ ಆಯೋಗದಿಂದ ಪ್ರೇಮ್​​ಗೆ ನೊಟೀಸ್

Director Prem: ‘ಕೆಡಿ’ ಸಿನಿಮಾದ ‘ಸರ್ಸೆ ಸೆರಗ’ ಹಾಡು ಇತ್ತೀಚೆಗಷ್ಟೆ ಬಿಡುಗಡೆ ಆಗಿ ಭಾರಿ ವಿವಾದಕ್ಕೆ ಕಾರಣವಾಗಿದೆ. ಹಾಡಿನ ಸಾಹಿತ್ಯದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ವಿಶೇಷವಾಗಿ ಹಾಡಿನ ಹಿಂದಿ ಆವೃತ್ತಿ ‘ಸರ್ಕೆ ಚುನರಿಯಾ ತೇರಿ ಸರ್ಕೆ’ ಹಾಡಿನ ಬಗ್ಗೆಯಂತೂ ತೀವ್ರ ಟೀಕೆ ವ್ಯಕ್ತವಾಗಿದ್ದು, ಈಗಾಗಲೇ ಸಿಬಿಎಫ್​​ಸಿ, ಸೈಬರ್ ಪೊಲೀಸರಿಗೆ ದೂರು ಸಹ ದಾಖಲಾಗಿದೆ. ಲೋಕಸಭೆಯಲ್ಲಿ ಸಹ ಹಾಡಿನ ಬಗ್ಗೆ ಚರ್ಚೆ ನಡೆದಿದೆ. ಇದೀಗ ಹಾಡಿನ ಕುರಿತಾಗಿ ನಿರ್ದೇಶಕ ಪ್ರೇಮ್ ಸೇರಿದಂತೆ ಹಲವರಿಗೆ ರಾಷ್ಟ್ರೀಯ ಮಹಿಳಾ ಆಯೋಗ ನೊಟೀಸ್ ಜಾರಿ ಮಾಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

‘ಸರ್ಸೆ ಸೆರಗು’ ಹಾಡು ವಿವಾದ: ರಾಷ್ಟ್ರೀಯ ಮಹಿಳಾ ಆಯೋಗದಿಂದ ಪ್ರೇಮ್​​ಗೆ ನೊಟೀಸ್
Prem Nora
ಮಂಜುನಾಥ ಸಿ.
|

Updated on: Mar 19, 2026 | 4:19 PM

Share

ಪ್ರೇಮ್ (Prem) ನಿರ್ದೇಶಿಸಿ ಧ್ರುವ ಸರ್ಜಾ ನಟಿಸಿರುವ ‘ಕೆಡಿ’ ಸಿನಿಮಾದ ‘ಸರ್ಸೆ ಸೆರಗ’ ಹಾಡು ಇತ್ತೀಚೆಗಷ್ಟೆ ಬಿಡುಗಡೆ ಆಗಿ ಭಾರಿ ವಿವಾದಕ್ಕೆ ಕಾರಣವಾಗಿದೆ. ಹಾಡಿನ ಸಾಹಿತ್ಯದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ವಿಶೇಷವಾಗಿ ಹಾಡಿನ ಹಿಂದಿ ಆವೃತ್ತಿ ‘ಸರ್ಕೆ ಚುನರಿಯಾ ತೇರಿ ಸರ್ಕೆ’ ಹಾಡಿನ ಬಗ್ಗೆಯಂತೂ ತೀವ್ರ ಟೀಕೆ ವ್ಯಕ್ತವಾಗಿದ್ದು, ಈಗಾಗಲೇ ಸಿಬಿಎಫ್​​ಸಿ, ಸೈಬರ್ ಪೊಲೀಸರಿಗೆ ದೂರು ಸಹ ದಾಖಲಾಗಿದೆ. ಲೋಕಸಭೆಯಲ್ಲಿ ಸಹ ಹಾಡಿನ ಬಗ್ಗೆ ಚರ್ಚೆ ನಡೆದಿದೆ. ಇದೀಗ ಹಾಡಿನ ಕುರಿತಾಗಿ ನಿರ್ದೇಶಕ ಪ್ರೇಮ್ ಸೇರಿದಂತೆ ಹಲವರಿಗೆ ರಾಷ್ಟ್ರೀಯ ಮಹಿಳಾ ಆಯೋಗ ನೊಟೀಸ್ ಜಾರಿ ಮಾಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

ರಾಷ್ಟ್ರೀಯ ಮಹಿಳಾ ಆಯೋಗವು ಎನ್​​ಸಿಡಬ್ಲು ಕಾಯ್ದೆ 1990 ರ ಅಡಿಯಲ್ಲಿ ತನಗೆ ನೀಡಲಾದ ಅಧಿಕಾರವನ್ನು ಬಳಸಿ, ಮಾಧ್ಯಮ ವರದಿಗಳ ಆಧಾರದ ಮೇಲೆ ಈ ವಿಷಯದಲ್ಲಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಹಾಡಿನ ದೃಶ್ಯಗಳು ಮತ್ತು ಸಾಹಿತ್ಯವು ಸಮಾಜದ ಮೇಲೆ ಕೆಟ್ಟ ಪ್ರಭಾವ ಬೀರುವಂತಿದೆ ಎಂಬ ಆಕ್ಷೇಪಣೆಗಳು ಕೇಳಿಬಂದಿರುವುದನ್ನು ಆಯೋಗವು ಗಂಭೀರವಾಗಿ ಪರಿಗಣಿಸಿದೆ.

ಭಾರತೀಯ ನ್ಯಾಯ ಸಂಹಿತೆ ಪ್ರಕಾರ ಸಾರ್ವಜನಿಕ ನೈತಿಕತೆಗೆ ಧಕ್ಕೆ. ಅಂತರ್ಜಾಲದಲ್ಲಿ ಆಕ್ಷೇಪಾರ್ಹ ವಿಷಯಗಳ ಪ್ರಸಾರ. ಪೋಕ್ಸೋ (POCSO) ಕಾಯ್ದೆಯಡಿ ಲೈಂಗಿಕ ಪ್ರಚೋದನೆ ಮತ್ತು ಆಕ್ಷೇಪಾರ್ಹ ದೃಶ್ಯಗಳಿಗೆ ಸಂಬಂಧಿಸಿದ ನಿಯಮಗಳನ್ನು ಹಾಡು ಉಲ್ಲಂಘನೆ ಮಾಡುತ್ತಿರುವುದನ್ನು ಗಮನಿಸಿ ಸಿನಿಮಾಕ್ಕೆ ಸಂಬಂಧಿಸಿದವರಿಗೆ ನೊಟೀಸ್ ಅನ್ನು ಆಯೋಗವು ಜಾರಿ ಮಾಡಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಡಿನಲ್ಲಿ ಕಾಣಿಸಿಕೊಂಡಿರುವ ನಟಿ ನೋರಾ ಫತೇಹಿ, ನಟ ಸಂಜಯ್ ದತ್, ಹಿಂದಿ ಆವೃತ್ತಿಯ ಹಾಡು ಬರೆದಿರುವ ಗೀತರಚನೆಕಾರ ರಕೀಬ್ ಆಲಂ, ಸಿನಿಮಾದ ನಿರ್ಮಾಪಕ ವೆಂಕಟ್ ಕೆ ನಾರಾಯಣ ಮತ್ತು ನಿರ್ದೇಶಕ ಪ್ರೇಮ್ ಅಲಿಯಾಸ್ ಕಿರಣ್ ಕುಮಾರ್. ಅವರುಗಳಿಗೆ ನೊಟೀಸ್ ಜಾರಿ ಮಾಡಲಾಗಿದ್ದು, ಎಲ್ಲರೂ ಮಾರ್ಚ್ 24 ರಂದು ಮಧ್ಯಾಹ್ನ 12:30ಕ್ಕೆ ಆಯೋಗದ ಮುಂದೆ ಸೂಕ್ತ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗಬೇಕು ಎಂದು ಸೂಚಿಸಿದೆ. ಒಂದೊಮ್ಮೆ ಗೈರಾದರೆ ಸೂಕ್ತ ಕ್ರಮದ ಎಚ್ಚರಿಕೆಯನ್ನು ಸಹ ಆಯೋಗ ನೀಡಿದೆ.

ಇದನ್ನೂ ಓದಿ:ಪ್ರೇಮ್​​ಗೆ ಆ ದಿನವೇ ಎಚ್ಚರಿಕೆ ನೀಡಿದ್ದೆ: ಅಶ್ಲೀಲ ಹಾಡಿನ ವಿವಾದಕ್ಕೆ ನೋರಾ ಫತೇಹಿ ತಿರುಗೇಟು

ಹಾಡಿನ ಸಾಹಿತ್ಯ ಬಗ್ಗೆ ಆಕ್ಷೇಪಗಳು ವ್ಯಕ್ತವಾದ ಬೆನ್ನಲ್ಲೆ ನಿನ್ನೆ (ಮಾರ್ಚ್ 18) ನಿರ್ದೇಶಕ ಮತ್ತು ಹಾಡಿಗೆ ಸಾಹಿತ್ಯ ಬರೆದಿರುವ ಪ್ರೇಮ್ ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ತಾವು ಎಣ್ಣೆ ಬಾಟಲಿ ಮತ್ತು ಉಪ್ಪಿನಕಾಯಿಯನ್ನು ಗಮನದಲ್ಲಿರಿಸಿಕೊಂಡು ಆ ಹಾಡನ್ನು ಬರೆದಿದ್ದು, ಆದರೆ ಜನ ಅದನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ ಎಂದಿದ್ದರು. ಆದರೆ ಹಾಡಿನ ಸಾಹಿತ್ಯದಿಂದ ಬೇಸರವಾಗಿದ್ದರೆ ಕ್ಷಮೆ ಕೋರುವುದಾಗಿ ಹೇಳಿದ ಪ್ರೇಮ್, ಮತ್ತೆ ಹಾಡನ್ನು ರೀ ರೈಟ್ ಮಾಡಿ ಮತ್ತೆ ಹಾಡನ್ನು ಬಿಡುಗಡೆ ಮಾಡುವುದಾಗಿಯೂ ಸಹ ಹೇಳಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ