Kantara: ‘ವರಾಹ ರೂಪಂ’ ಹಾಡು ಕಾಪಿ ಎಂಬ ಆರೋಪ: ಕೇಸ್​ ಹಾಕಲು ನಿರ್ಧರಿಸಿದ ‘ನವರಸಂ’ ತಂಡ

Varaha Roopam Song copy: ‘ವರಾಹ ರೂಪಂ..’ ಮತ್ತು ‘ನವರಸಂ..’ ಹಾಡಿನ ಸಾಮ್ಯತೆ ಬಗ್ಗೆ ಸಾಕಷ್ಟು ಚರ್ಚೆ ಆಗಿದೆ. ಈಗ ಕೃತಿಚೌರ್ಯದ ಆರೋಪದಲ್ಲಿ ‘ಕಾಂತಾರ’ ತಂಡಕ್ಕೆ ಕಾನೂನಿನ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.

Kantara: ‘ವರಾಹ ರೂಪಂ’ ಹಾಡು ಕಾಪಿ ಎಂಬ ಆರೋಪ: ಕೇಸ್​ ಹಾಕಲು ನಿರ್ಧರಿಸಿದ ‘ನವರಸಂ’ ತಂಡ
ವರಾಹ ರೂಪಂ-ನವರಸಂ
Follow us
TV9 Web
| Updated By: ಮದನ್​ ಕುಮಾರ್​

Updated on:Oct 25, 2022 | 7:49 AM

ರಿಷಬ್​ ಶೆಟ್ಟಿ ನಟನೆ, ನಿರ್ದೇಶನದ ‘ಕಾಂತಾರ’ (Kantara Movie) ಸಿನಿಮಾ ಮಾಡಿರುವ ಮೋಡಿ ಕಂಡು ಎಲ್ಲರಿಗೂ ಅಚ್ಚರಿ ಆಗುತ್ತಿದೆ. ಅಷ್ಟರಮಟ್ಟಿಗೆ ಈ ಚಿತ್ರ ಸೂಪರ್​ ಹಿಟ್​ ಆಗಿದೆ. ಈ ಚಿತ್ರದ ಹಾಡುಗಳು ಕೂಡ ಜನಮನ ಗೆದ್ದಿವೆ. ಅದರಲ್ಲೂ ‘ವರಾಹ ರೂಪಂ..’ ಗೀತೆಯನ್ನು ಕೇಳಿ ಜನರು ತಲೆದೂಗಿದ್ದಾರೆ. ಆದರೆ ಈ ಹಾಡಿನ ಮೇಲೆ ಕೃತಿಚೌರ್ಯದ ಆರೋಪ ಕೇಳಿಬಂದಿದೆ. ಸಂಗೀತ ನಿರ್ದೇಶಕ ಅಜನೀಶ್​ ಬಿ. ಲೋಕನಾಥ್​ (Ajaneesh Loknath) ಅವರು ಮಲಯಾಳಂ ಭಾಷೆಯ ‘ನವರಸಂ..’ ಹಾಡಿನಿಂದ ಇದನ್ನು ಕಾಪಿ ಮಾಡಿದ್ದಾರೆ ಎಂಬ ಆರೋಪ ಎದುರಾಗಿದೆ. ಹಾಗಾಗಿ ಮಲಯಾಳಂನ ‘ತೈಕ್ಕುಡಂ ಬ್ರಿಡ್ಜ್​’ ತಂಡದವರು ಕೇಸ್​ ಹಾಕಲು ನಿರ್ಧರಿಸಿದ್ದಾರೆ. ಇದಕ್ಕೆ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲ್ಮ್ಸ್​, ಸಂಗೀತ ನಿರ್ದೇಶಕ ಅಜನೀಶ್​ ಬಿ. ಲೋಕನಾಥ್​ ಹಾಗೂ ನಿರ್ದೇಶಕ ರಿಷಬ್​ ಶೆಟ್ಟಿ (Rishab Shetty) ಯಾವ ರೀತಿಯ ಪ್ರತಿಕ್ರಿಯೆ ನೀಡುತ್ತಾರೆ ಎಂಬ ಕೌತುಕ ಸೃಷ್ಟಿ ಆಗಿದೆ.

‘ಕಾಂತಾರ’ ಚಿತ್ರ ಬಿಡುಗಡೆ ಆದಾಗಲೇ ‘ವರಾಹ ರೂಪಂ..’ ಮತ್ತು ‘ನವರಸಂ..’ ಹಾಡಿನ ನಡುವೆ ಇರುವ ಸಾಮ್ಯತೆ ಬಗ್ಗೆ ಸಾಕಷ್ಟು ಚರ್ಚೆ ಆಗಿತ್ತು. ಸೋಶಿಯಲ್​ ಮೀಡಿಯಾದಲ್ಲಿ ಅನೇಕರು ಈ ಬಗ್ಗೆ ಟೀಕೆ ವ್ಯಕ್ತಪಡಿಸಿದ್ದರು. ಆದರೆ ‘ಇದು ಕಾಪಿ ಅಲ್ಲ, ಕೇವಲ ಸ್ಫೂರ್ತಿ ಪಡೆದು ಮಾಡಿದ್ದು. ರಾಗಗಳು ಒಂದೇ ಆಗಿರುವ ಕಾರಣದಿಂದ ಸಾಮ್ಯತೆ ಸಹಜ’ ಎಂದು ಅಜನೀಶ್​ ಬಿ. ಲೋಕನಾಥ್ ಅವರು ಸಮಜಾಯಿಷಿ ನೀಡಿದ್ದರು. ಇಷ್ಟು ದಿನ ಸುಮ್ಮನಿದ್ದ ‘ತೈಕ್ಕುಡಂ ಬ್ರಿಡ್ಜ್​’ ತಂಡದವರು ಈಗ ಕೇಸ್​ ಹಾಕಲು ನಿರ್ಧರಿಸಿದ್ದಾರೆ.

‘ನಾವು ನಮ್ಮ ಕೇಳುಗರಿಗೆ ತಿಳಿಸುವುದೇನೆಂದರೆ, ಯಾವುದೇ ರೀತಿಯಲ್ಲೂ ‘ತೈಕ್ಕುಡಂ ಬ್ರಿಡ್ಜ್​’ ತಂಡವು ‘ಕಾಂತಾರ’ ಸಿನಿಮಾ ಜೊತೆ ಸಹಯೋಗ ಹೊಂದಿಲ್ಲ. ವರಾಹ ರೂಪಂ ಮತ್ತು ನವರಸಂ ಹಾಡುಗಳ ನಡುವೆ ಇರುವ ಸಾಮ್ಯತೆಯು ಕಾಪಿರೈಟ್​ ಕಾನೂನಿನ ಸ್ಪಷ್ಟ ಉಲ್ಲಂಘನೆ ಆಗಿದೆ. ಇದಕ್ಕೆ ಕಾರಣವಾದವರ ವಿರುದ್ಧ ನಾವು ಕಾನೂನಿನ ಕ್ರಮಕ್ಕೆ ಒತ್ತಾಯಿಸುತ್ತೇವೆ’ ಎಂದು ‘ತೈಕ್ಕುಡಂ ಬ್ರಿಡ್ಜ್​’ ತಂಡ ಸೋಶಿಯಲ್​ ಮೀಡಿಯಾದಲ್ಲಿ ತಿಳಿಸಿದೆ.

ಇದನ್ನೂ ಓದಿ
Image
Kantara: ‘ಕಾಂತಾರ’ ಚಿತ್ರದಿಂದ ಅಲ್ಲು ಅರ್ಜುನ್​ ತಂದೆಗೆ ಭಾರಿ ಲಾಭ; ಎಷ್ಟಕ್ಕೆ ನಡೆಯಿತು ತೆಲುಗು ವ್ಯವಹಾರ?
Image
Rishab Shetty: ಒಂದೇ ದಿನಕ್ಕೆ 15 ಕೋಟಿ ರೂಪಾಯಿ ಬಾಚಿದ ‘ಕಾಂತಾರ’; ಪರಭಾಷೆಯಲ್ಲಿ ಭರ್ಜರಿ ಕಮಾಯಿ
Image
Anushka Shetty: ‘ಕಾಂತಾರ’ ನೋಡಿ ಅನುಷ್ಕಾ ಶೆಟ್ಟಿ ಫಿದಾ; ರಿಷಬ್​ ಬಗ್ಗೆ ಸ್ಪೆಷಲ್​ ಮಾತುಗಳನ್ನು ಹೇಳಿದ ಸ್ಟಾರ್​ ನಟಿ
Image
Rishab Shetty: ರಿಷಬ್​ ಶೆಟ್ಟಿ ಕಾಲಿಗೆ ಬಿದ್ದ ಖ್ಯಾತ ಯೂಟ್ಯೂಬರ್​; ಹಿಂದಿ ಪ್ರೇಕ್ಷಕರಲ್ಲಿ ಹೆಚ್ಚಿತು ‘ಕಾಂತಾರ’ ಸೆನ್ಸೇಷನ್​

‘ಹಾಡಿನ ಹಕ್ಕುಗಳನ್ನು ಕುರಿತಂತೆ ಕಾಂತಾರ ತಂಡದವರು ನಮಗೆ ಯಾವುದೇ ಕ್ರಿಡಿಟ್​ ನೀಡಿಲ್ಲ ಹಾಗೂ ಈ ಹಾಡನ್ನು ತಮ್ಮ ಸ್ವಂತ ಸೃಷ್ಟಿ ಎಂಬಂತೆ ಪ್ರಚಾರ ಮಾಡಿಕೊಳ್ಳಲಾಗಿದೆ. ಈ ಬಗ್ಗೆ ನಮಗೆ ಬೆಂಬಲ ನೀಡಬೇಕು ಎಂದು ನಮ್ಮ ಕೇಳುಗರಲ್ಲಿ ವಿನಂತಿ ಮಾಡಿಕೊಳ್ಳುತ್ತೇವೆ. ಮ್ಯೂಸಿಕ್​ ಕಾಪಿ ರೈಟ್​ ಉಳಿಸುವ ಬಗ್ಗೆ ಎಲ್ಲ ಸಂಗೀತ ಕಲಾವಿದರು ತಮ್ಮ ಅಭಿಪ್ರಾಯ ಹಂಚಿಕೊಳ್ಳಬೇಕು ಎಂದು ಮನವಿ ಮಾಡಿಕೊಳ್ಳುತ್ತೇವೆ’ ಎಂದು ‘ತೈಕ್ಕುಡಂ ಬ್ರಿಡ್ಜ್​’ ತಂಡ ಪೋಸ್ಟ್​ ಮಾಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:49 am, Tue, 25 October 22

ಮನೆಯಲ್ಲಿ ಸಲಗೆನಾ, ಸ್ಟ್ರೀಕ್ಟಾ? ವಿದ್ಯಾರ್ಥಿನಿ ಪ್ರಶ್ನೆಗೆ ಡಿಕೆಶಿ ಉತ್ತರ
ಮನೆಯಲ್ಲಿ ಸಲಗೆನಾ, ಸ್ಟ್ರೀಕ್ಟಾ? ವಿದ್ಯಾರ್ಥಿನಿ ಪ್ರಶ್ನೆಗೆ ಡಿಕೆಶಿ ಉತ್ತರ
ತಮಗೊಂದು ಗ್ಯಾರಂಟಿ ನೀಡುವಂತೆ ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ಡಿಸಿಎಂ ಉತ್ತರ
ತಮಗೊಂದು ಗ್ಯಾರಂಟಿ ನೀಡುವಂತೆ ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ಡಿಸಿಎಂ ಉತ್ತರ
ರಸ್ತೆ ದಾಟುವಾಗ ಬಸ್ ಡಿಕ್ಕಿ ಹೊಡೆದು ಕಾಲೇಜು ಯುವತಿ ಭೀಕರ ಸಾವು
ರಸ್ತೆ ದಾಟುವಾಗ ಬಸ್ ಡಿಕ್ಕಿ ಹೊಡೆದು ಕಾಲೇಜು ಯುವತಿ ಭೀಕರ ಸಾವು
ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಮಹಾರಾಷ್ಟ್ರದ ಪನ್ವೇಲ್​ನಲ್ಲಿ ಇಸ್ಕಾನ್​ನಿಂದ ಮೋದಿಗೆ ವಿಶೇಷ ಸ್ವಾಗತ
ಮಹಾರಾಷ್ಟ್ರದ ಪನ್ವೇಲ್​ನಲ್ಲಿ ಇಸ್ಕಾನ್​ನಿಂದ ಮೋದಿಗೆ ವಿಶೇಷ ಸ್ವಾಗತ
ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ
ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ
ಲೈಸೆನ್ಸ್ ಹಂಚಿಕೆಯಲ್ಲಿ ಅವ್ಯಾಹತ ಭ್ರಷ್ಟಾಚಾರ: ಗುರುಸ್ವಾಮಿ, ಸಂಘದ ಅಧ್ಯಕ್ಷ
ಲೈಸೆನ್ಸ್ ಹಂಚಿಕೆಯಲ್ಲಿ ಅವ್ಯಾಹತ ಭ್ರಷ್ಟಾಚಾರ: ಗುರುಸ್ವಾಮಿ, ಸಂಘದ ಅಧ್ಯಕ್ಷ
ಕೊವಿಡ್ ಹಗರಣದ ತನಿಖೆಗೆ SIT ರಚನೆ: ಡಾ ಸಿಎನ್ ಮಂಜುನಾಥ್​ಗೂ ಸಂಕಷ್ಟ?
ಕೊವಿಡ್ ಹಗರಣದ ತನಿಖೆಗೆ SIT ರಚನೆ: ಡಾ ಸಿಎನ್ ಮಂಜುನಾಥ್​ಗೂ ಸಂಕಷ್ಟ?