ಬೆಂಗಳೂರಲ್ಲಿ ಯಶ್ ಜೊತೆ ‘ಟಾಕ್ಸಿಕ್’ ಶೂಟಿಂಗ್ ಆರಂಭಿಸಿದ ಸ್ಟಾರ್​ ನಟಿ ನಯನತಾರಾ

ರಾಕಿಂಗ್ ಸ್ಟಾರ್​ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾಗೆ ಬೆಂಗಳೂರಿನಲ್ಲಿ ಅದ್ದೂರಿಯಾಗಿ ಚಿತ್ರೀಕರಣ ಮಾಡಲಾಗುತ್ತಿದೆ. ಯಶ್ ಜೊತೆ ನಯನತಾರಾ, ಹುಮಾ ಖುರೇಶಿ, ಕಿಯಾರಾ ಅಡ್ವಾಣಿ, ತಾರಾ ಸುತಾರಿಯಾ ಮುಂತಾದವರು ನಟಿಸುತ್ತಿದ್ದಾರೆ. ಶೂಟಿಂಗ್ ಸಲುವಾಗಿ ಇವರೆಲ್ಲರೂ ಬೆಂಗಳೂರಿಗೆ ಬಂದಿದ್ದಾರೆ. ಭಾರಿ ಬಜೆಟ್​ನಲ್ಲಿ ‘ಟಾಕ್ಸಿಕ್’ ಸಿನಿಮಾ ಸಿದ್ಧವಾಗುತ್ತಿದೆ.

ಬೆಂಗಳೂರಲ್ಲಿ ಯಶ್ ಜೊತೆ ‘ಟಾಕ್ಸಿಕ್’ ಶೂಟಿಂಗ್ ಆರಂಭಿಸಿದ ಸ್ಟಾರ್​ ನಟಿ ನಯನತಾರಾ
Nayanthara, Yash

Updated on: Feb 05, 2025 | 7:02 AM

ಭಾರಿ ನಿರೀಕ್ಷೆ ಮೂಡಿಸಿರುವ ‘ಟಾಕ್ಸಿಕ್’ ಸಿನಿಮಾದ ಶೂಟಿಂಗ್ ನಡೆಯುತ್ತಿದೆ. ಯಶ್ ನಟನೆಯ ಈ ಸಿನಿಮಾದಲ್ಲಿ ಅನೇಕ ಕಲಾವಿದರು ಅಭಿನಯಿಸುತ್ತಿದ್ದಾರೆ. ಮುಖ್ಯವಾಗಿ ಪರಭಾಷೆಯ ಸ್ಟಾರ್​ ನಟಿಯರು ಈ ಸಿನಿಮಾದಲ್ಲಿದ್ದಾರೆ. ಈಗಾಗಲೇ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆಯುತ್ತಿದ್ದು, ಶೂಟಿಂಗ್ ಸೆಟ್​ನಿಂದ ಒಂದಷ್ಟು ವಿಷಯಗಳು ಕೇಳಿಬರುತ್ತಿವೆ. ಈಗ ನಟಿ ನಯನತಾರಾ ಕೂಡ ಚಿತ್ರೀಕರಣದಲ್ಲಿ ಭಾಗಿ ಆಗಿದ್ದಾರೆ. ಅದ್ದೂರಿ ಸೆಟ್​ನಲ್ಲಿ ಶೂಟಿಂಗ್ ಮಾಡಲಾಗುತ್ತಿದೆ.

‘ಟಾಕ್ಸಿಕ್’ ಸಿನಿಮಾಗೆ ಮಲಯಾಳಂ ಚಿತ್ರರಂಗದ ಖ್ಯಾತ ನಿರ್ದೇಶಕಿ ಗೀತು ಮೋಹನ್​ದಾಸ್ ಅವರು ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಈ ಸಿನಿಮಾದ ಪಾತ್ರವರ್ಗದಲ್ಲಿ ಕೂಡ ಮಹಿಳೆಯರು ಮಿಂಚುತ್ತಿದ್ದಾರೆ. ಬಾಲಿವುಡ್​ ಬೆಡಗಿಯರಾದ ಕಿಯಾರಾ ಅಡ್ವಾಣಿ, ತಾರಾ ಸುತಾರಿಯಾ, ಹುಮಾ ಖುರೇಶಿ ಅವರು ಪಾತ್ರವರ್ಗದಲ್ಲಿ ಇದ್ದಾರೆ. ದಕ್ಷಿಣ ಭಾರತ ಹಾಗೂ ಬಾಲಿವುಡ್​ನಲ್ಲಿ ಕೂಡ ಹವಾ ಮಾಡಿರುವ ನಯನತಾರಾ ಎಂಟ್ರಿಯಿಂದಾಗಿ ‘ಟಾಕ್ಸಿಕ್’ ತಾರಾಬಳಗಕ್ಕೆ ಇನ್ನಷ್ಟು ಮೆರಗು ಬಂದಿದೆ.

ಇದನ್ನೂ ಓದಿ: ‘ಯಶ್ ನನ್ನ ಸ್ನೇಹಿತ’: ದುಬೈನಲ್ಲಿ ಕೂಗಿ ಹೇಳಿದ ಶಾರುಖ್ ಖಾನ್; ವಿಡಿಯೋ ವೈರಲ್

ಕನ್ನಡ ಚಿತ್ರರಂಗವನ್ನು ಇನ್ನೊಂದು ಹಂತಕ್ಕೆ ತೆಗೆದುಕೊಂಡ ಹೋದ ಖ್ಯಾತಿ ಯಶ್ ಅವರಿಗೆ ಸಲ್ಲುತ್ತದೆ. ‘ಕೆಜಿಎಫ್: ಚಾಪ್ಟರ್​ 1’ ಮತ್ತು ‘ಕೆಜಿಎಫ್: ಚಾಪ್ಟರ್​ 2’ ಸಿನಿಮಾಗಳ ಗೆಲುವಿನ ನಂತರ ಯಶ್ ಅವರ ಜನಪ್ರಿಯತೆ ವಿಶ್ವಮಟ್ಟದಲ್ಲಿ ಹಬ್ಬಿದೆ. ‘ಟಾಕ್ಸಿಕ್’ ಸಿನಿಮಾಗಾಗಿ ದೊಡ್ಡ ದೊಡ್ಡ ತಂತ್ರಜ್ಞರು ಮತ್ತು ಕಲಾವಿದರು ಕರುನಾಡಿಗೆ ಬರುವಂತೆ ಮಾಡಿದ್ದಾರೆ ಯಶ್. ಯಾರ ಪಾತ್ರದ ಲುಕ್ ಯಾವ ರೀತಿ ಇರಲಿದೆ ಎಂಬುದನ್ನು ತಿಳಿಯುವ ಕುತೂಹಲ ಮನೆ ಮಾಡಿದೆ.

ಇದನ್ನೂ ಓದಿ: ಯಶ್ ಕೈ ಸೇರಿತು ಧನಂಜಯ ಮದುವೆ ಆಮಂತ್ರಣ; ಟಾಕ್ಸಿಕ್ ಸೆಟ್​ನಲ್ಲಿ ಡಾಲಿ ಭೇಟಿ

ಈ ವರ್ಷ ಯಶ್ ಅವರ ಜನ್ಮದಿನದ ಪ್ರಯುಕ್ತ ‘ಟಾಕ್ಸಿಕ್’ ಸಿನಿಮಾದಿಂದ ಟೀಸರ್​ ಬಿಡುಗಡೆ ಮಾಡಲಾಗಿತ್ತು. ಅದರಲ್ಲಿ ಯಶ್ ಅವರ ರಗಡ್ ಲುಕ್ ಗಮನ ಸೆಳೆದಿತ್ತು. ಸಿನಿಮಾ ಬಗ್ಗೆ ಹೆಚ್ಚಿನ ಅಪ್​ಡೇಟ್ ತಿಳಿಯಲು ಅಭಿಮಾನಿಗಳು ಕಾಯುತ್ತಿದ್ದಾರೆ. ‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆಯು ತುಂಬ ಅದ್ದೂರಿಯಾಗಿ ಈ ಸಿನಿಮಾವನ್ನು ನಿರ್ಮಿಸುತ್ತಿದೆ. ‘ಕೆಜಿಎಫ್ 2’ ಬಳಿಕ ಯಶ್ ನಟಿಸುತ್ತಿರುವ ಸಿನಿಮಾ ಆದ್ದರಿಂದ ‘ಟಾಕ್ಸಿಕ್’ ಮೇಲೆ ಬೆಟ್ಟದಷ್ಟು ನಿರೀಕ್ಷೆ ಮನೆ ಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.