ಮಹಿಳಾ ಕೇಂದ್ರವೇ ರಾಗಿಣಿ ವಿಚಾರಣೆಗೆ ಪ್ರಶಸ್ತ, NCB ಅಧಿಕಾರಿಗಳಿಂದಲೂ ವಿಚಾರಣೆ ಸಾಧ್ಯತೆ
ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಕೇಸ್ಗೆ ಸಂಬಂಧಿಸಿ ನಟಿ ರಾಗಿಣಿ ದ್ವಿವೇದಿಯನ್ನು ಮತ್ತೆ 5 ದಿನಗಳ ಕಾಲ ಸಿಸಿಬಿ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಹೀಗಾಗಿ ಎನ್‌ಸಿಬಿ ಅಧಿಕಾರಿಗಳು ನಟಿ ರಾಗಿಣಿಯನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ. ಕಿಂಗ್‌ಪಿನ್ ಡಿ. ಅನಿಕಾ ಬಂಧನ ಬಳಿಕ ಕರ್ನಾಟಕದಲ್ಲಿ ಡ್ರಗ್ಸ್ ಜಾಲದ ಬಗ್ಗೆ ಸಾಕಷ್ಟು ಮಾಹಿತಿ ನೀಡಿದ್ದಾಳೆ. ಹೀಗಾಗಿ ಎನ್‌ಸಿಬಿ ಅಧಿಕಾರಿಗಳು ಮುಂಬೈನಿಂದ ಬೆಂಗಳೂರಿಗೆ ಆಗಮಿಸಿ ಮಹಿಳಾ ಸಾಂತ್ವನ ಕೇಂದ್ರದಲ್ಲಿರುವ ರಾಗಿಣಿಯನ್ನೂ ವಿಚಾರಣೆ ನಡೆಸುವ ಸಾಧ್ಯತೆ ಇದೆ. ಅಲ್ಲದೆ […]
ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಕೇಸ್ಗೆ ಸಂಬಂಧಿಸಿ ನಟಿ ರಾಗಿಣಿ ದ್ವಿವೇದಿಯನ್ನು ಮತ್ತೆ 5 ದಿನಗಳ ಕಾಲ ಸಿಸಿಬಿ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಹೀಗಾಗಿ ಎನ್‌ಸಿಬಿ ಅಧಿಕಾರಿಗಳು ನಟಿ ರಾಗಿಣಿಯನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ.
ಕಿಂಗ್‌ಪಿನ್ ಡಿ. ಅನಿಕಾ ಬಂಧನ ಬಳಿಕ ಕರ್ನಾಟಕದಲ್ಲಿ ಡ್ರಗ್ಸ್ ಜಾಲದ ಬಗ್ಗೆ ಸಾಕಷ್ಟು ಮಾಹಿತಿ ನೀಡಿದ್ದಾಳೆ. ಹೀಗಾಗಿ ಎನ್‌ಸಿಬಿ ಅಧಿಕಾರಿಗಳು ಮುಂಬೈನಿಂದ ಬೆಂಗಳೂರಿಗೆ ಆಗಮಿಸಿ ಮಹಿಳಾ ಸಾಂತ್ವನ ಕೇಂದ್ರದಲ್ಲಿರುವ ರಾಗಿಣಿಯನ್ನೂ ವಿಚಾರಣೆ ನಡೆಸುವ ಸಾಧ್ಯತೆ ಇದೆ. ಅಲ್ಲದೆ ಭದ್ರತೆ ದೃಷ್ಟಿಯಿಂದ 5 ದಿನವೂ ಮಹಿಳಾ ಸಾಂತ್ವನ ಕೇಂದ್ರದಲ್ಲಿಯೇ ಸಿಸಿಬಿ ಅಧಿಕಾರಿಗಳು ಸಹ ನಟಿ ರಾಗಿಣಿ ದ್ವಿವೇದಿಯನ್ನು ವಿಚಾರಣೆಗೆ ಒಳಪಡಿಸಲಿದ್ದಾರೆ.
ಮಡಿವಾಳ ಮಹಿಳಾ ಸಾಂತ್ವನ ಕೇಂದ್ರವೇ ರಾಗಿಣಿ ವಿಚಾರಣೆಗೆ ಪ್ರಶಸ್ತ ಪದೇಪದೆ ಹೊರಗೆ ಬಂದರೆ ನಟಿ ರಾಗಿಣಿ ಮಾಧ್ಯಮಗಳಿಗೆ ಅನಗತ್ಯ ಹೇಳಿಕೆ ನೀಡುತ್ತಾರೆ. ಅನಗತ್ಯವಾಗಿ ತಮಗೆ ಸಮಸ್ಯೆ ಇದೆ ಎಂದು ಹೇಳುವ ಸಾಧ್ಯತೆ ಇದೆ. ಹಾಗೂ ಸಿಸಿಬಿ ಕಚೇರಿಯಲ್ಲಿ ವಿಚಾರಣೆ ನಡೆಸಿದರೂ ಅಪಸ್ವರ ಎತ್ತುತ್ತಾರೆ. ವಿಚಾರಣೆ ವೇಳೆ ಕುಳಿತುಕೊಳ್ಳಲು ಕಬ್ಬಿಣದ ಚೇರ್ ನೀಡ್ತಾರೆ ಎಂದು ಈಗಾಗಲೇ ಆರೋಪಿಸಿದ್ದಾರೆ. ಹೀಗಾಗಿ ಮಹಿಳಾ ಸಾಂತ್ವನ ಕೇಂದ್ರದಲ್ಲೇ ರಾಗಿಣಿ ವಿಚಾರಣೆ ನಡೆಸಲಾಗುತ್ತೆ ಎಂಬ ಮಾಹಿತಿ ಸಿಕ್ಕಿದೆ.