ಮಹಿಳಾ ಕೇಂದ್ರವೇ ರಾಗಿಣಿ ವಿಚಾರಣೆಗೆ ಪ್ರಶಸ್ತ, NCB ಅಧಿಕಾರಿಗಳಿಂದಲೂ ವಿಚಾರಣೆ ಸಾಧ್ಯತೆ

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಕೇಸ್​ಗೆ ಸಂಬಂಧಿಸಿ ನಟಿ ರಾಗಿಣಿ ದ್ವಿವೇದಿಯನ್ನು ಮತ್ತೆ 5 ದಿನಗಳ ಕಾಲ ಸಿಸಿಬಿ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಹೀಗಾಗಿ ಎನ್‌ಸಿಬಿ ಅಧಿಕಾರಿಗಳು ನಟಿ ರಾಗಿಣಿಯನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ. ಕಿಂಗ್‌ಪಿನ್ ಡಿ. ಅನಿಕಾ ಬಂಧನ ಬಳಿಕ ಕರ್ನಾಟಕದಲ್ಲಿ ಡ್ರಗ್ಸ್ ಜಾಲದ ಬಗ್ಗೆ ಸಾಕಷ್ಟು ಮಾಹಿತಿ ನೀಡಿದ್ದಾಳೆ. ಹೀಗಾಗಿ ಎನ್‌ಸಿಬಿ ಅಧಿಕಾರಿಗಳು ಮುಂಬೈನಿಂದ ಬೆಂಗಳೂರಿಗೆ ಆಗಮಿಸಿ ಮಹಿಳಾ ಸಾಂತ್ವನ ಕೇಂದ್ರದಲ್ಲಿರುವ ರಾಗಿಣಿಯನ್ನೂ ವಿಚಾರಣೆ ನಡೆಸುವ ಸಾಧ್ಯತೆ ಇದೆ. ಅಲ್ಲದೆ […]

ಮಹಿಳಾ ಕೇಂದ್ರವೇ ರಾಗಿಣಿ ವಿಚಾರಣೆಗೆ ಪ್ರಶಸ್ತ, NCB ಅಧಿಕಾರಿಗಳಿಂದಲೂ ವಿಚಾರಣೆ ಸಾಧ್ಯತೆ
ಆಯೇಷಾ ಬಾನು Edited By: ಸಾಧು ಶ್ರೀನಾಥ್​

Updated on: Sep 07, 2020 | 4:03 PM

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಕೇಸ್​ಗೆ ಸಂಬಂಧಿಸಿ ನಟಿ ರಾಗಿಣಿ ದ್ವಿವೇದಿಯನ್ನು ಮತ್ತೆ 5 ದಿನಗಳ ಕಾಲ ಸಿಸಿಬಿ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಹೀಗಾಗಿ ಎನ್‌ಸಿಬಿ ಅಧಿಕಾರಿಗಳು ನಟಿ ರಾಗಿಣಿಯನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ.

ಕಿಂಗ್‌ಪಿನ್ ಡಿ. ಅನಿಕಾ ಬಂಧನ ಬಳಿಕ ಕರ್ನಾಟಕದಲ್ಲಿ ಡ್ರಗ್ಸ್ ಜಾಲದ ಬಗ್ಗೆ ಸಾಕಷ್ಟು ಮಾಹಿತಿ ನೀಡಿದ್ದಾಳೆ. ಹೀಗಾಗಿ ಎನ್‌ಸಿಬಿ ಅಧಿಕಾರಿಗಳು ಮುಂಬೈನಿಂದ ಬೆಂಗಳೂರಿಗೆ ಆಗಮಿಸಿ ಮಹಿಳಾ ಸಾಂತ್ವನ ಕೇಂದ್ರದಲ್ಲಿರುವ ರಾಗಿಣಿಯನ್ನೂ ವಿಚಾರಣೆ ನಡೆಸುವ ಸಾಧ್ಯತೆ ಇದೆ. ಅಲ್ಲದೆ ಭದ್ರತೆ ದೃಷ್ಟಿಯಿಂದ 5 ದಿನವೂ ಮಹಿಳಾ ಸಾಂತ್ವನ ಕೇಂದ್ರದಲ್ಲಿಯೇ ಸಿಸಿಬಿ ಅಧಿಕಾರಿಗಳು ಸಹ ನಟಿ ರಾಗಿಣಿ ದ್ವಿವೇದಿಯನ್ನು ವಿಚಾರಣೆಗೆ ಒಳಪಡಿಸಲಿದ್ದಾರೆ.

ಮಡಿವಾಳ ಮಹಿಳಾ ಸಾಂತ್ವನ ಕೇಂದ್ರವೇ ರಾಗಿಣಿ ವಿಚಾರಣೆಗೆ ಪ್ರಶಸ್ತ
ಪದೇಪದೆ ಹೊರಗೆ ಬಂದರೆ ನಟಿ ರಾಗಿಣಿ ಮಾಧ್ಯಮಗಳಿಗೆ ಅನಗತ್ಯ ಹೇಳಿಕೆ ನೀಡುತ್ತಾರೆ. ಅನಗತ್ಯವಾಗಿ ತಮಗೆ ಸಮಸ್ಯೆ ಇದೆ ಎಂದು ಹೇಳುವ ಸಾಧ್ಯತೆ ಇದೆ. ಹಾಗೂ ಸಿಸಿಬಿ ಕಚೇರಿಯಲ್ಲಿ ವಿಚಾರಣೆ ನಡೆಸಿದರೂ ಅಪಸ್ವರ ಎತ್ತುತ್ತಾರೆ. ವಿಚಾರಣೆ ವೇಳೆ ಕುಳಿತುಕೊಳ್ಳಲು ಕಬ್ಬಿಣದ ಚೇರ್ ನೀಡ್ತಾರೆ ಎಂದು ಈಗಾಗಲೇ ಆರೋಪಿಸಿದ್ದಾರೆ. ಹೀಗಾಗಿ ಮಹಿಳಾ ಸಾಂತ್ವನ ಕೇಂದ್ರದಲ್ಲೇ ರಾಗಿಣಿ ವಿಚಾರಣೆ ನಡೆಸಲಾಗುತ್ತೆ ಎಂಬ ಮಾಹಿತಿ ಸಿಕ್ಕಿದೆ.

ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Loading...
Unable to load recommendations.
Follow Us