AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಡಪ್ರಭು ಕೆಂಪೇಗೌಡರ ಪಾತ್ರದಲ್ಲಿ ನೆನಪಿರಲಿ ಪ್ರೇಮ್; ‘ಕೆಂಪಾಂಬುಧಿ’ ಟೀಸರ್ ರಿಲೀಸ್

‘ನೆನಪಿರಲಿ’ ಪ್ರೇಮ್, ಮೇಘನಾ ಗಾಂವ್ಕರ್, ರಾಜೇಶ್ ನಟರಂಗ ಮುಂತಾದವರು ‘ಕೆಂಪಾಂಬುಧಿ’ ಸಿನಿಮಾದಲ್ಲಿ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ರಮೇಶ್ ಬೇಗಾರ್ ಅವರು ನಿರ್ದೇಶನ ಮಾಡಿದ್ದಾರೆ. ವೀರ್ ಸಮರ್ಥ್ ಅವರು ಸಂಗೀತ ಹಾಗೂ ಹಿನ್ನೆಲೆ ಸಂಗೀತ ನೀಡಿದ್ದಾರೆ. ಶಶೀರ್ ಶೃಂಗೇರಿ ಅವರ ಛಾಯಾಗ್ರಹಣ, ಅವಿನಾಶ್ ಶೃಂಗೇರಿ ಅವರ ಸಂಕಲನ, ಅಭಿಷೇಕ್ ಹೆಬ್ಬಾರ್ ಅವರ ಕಲಾ ನಿರ್ದೇಶನ ಈ ಸಿನಿಮಾದಲ್ಲಿ ಇರಲಿದೆ.

ನಾಡಪ್ರಭು ಕೆಂಪೇಗೌಡರ ಪಾತ್ರದಲ್ಲಿ ನೆನಪಿರಲಿ ಪ್ರೇಮ್; ‘ಕೆಂಪಾಂಬುಧಿ’ ಟೀಸರ್ ರಿಲೀಸ್
Nenapirali Prem
ಮದನ್​ ಕುಮಾರ್​
|

Updated on: Jun 28, 2026 | 8:18 AM

Share

ಮುಖ್ಯಾಂಶಗಳು

  • ನಾಡಪ್ರಭು ಕೆಂಪೇಗೌಡರ ಜೀವನ ಆಧಾರಿತ ಸಿನಿಮಾ ‘ಕೆಂಪಾಂಬುಧಿ’.
  • ಚಿತ್ರದ ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದಾರೆ ನಟ ‘ನೆನಪಿರಲಿ’ ಪ್ರೇಮ್.
  • ಟೀಸರ್ ಮೂಲಕ ಪ್ರೇಕ್ಷಕರಲ್ಲಿ ಕೌತುಕ ಮೂಡಿಸಿದೆ ‘ಕೆಂಪಾಂಬುಧಿ’ ತಂಡ.

ಬೆಂಗಳೂರು ನಗರದ ನಿರ್ಮಾತೃ ನಾಡಪ್ರಭು ಕೆಂಪೇಗೌಡರ (Nadaprabhu Kempegowda) ಕುರಿತು ಸಿನಿಮಾ ಸಿದ್ಧವಾಗುತ್ತಿದೆ. ಅವರ ಆದರ್ಶಮಯ ಬದುಕು, ದೂರದೃಷ್ಟಿ ಮತ್ತು ಪರಂಪರೆಯನ್ನು ತೆರೆ ಮೇಲೆ ಅನಾವರಣಗೊಳಿಸುವ ಈ ಸಿನಿಮಾಗೆ ‘ಕೆಂಪಾಂಬುಧಿ’ (Kempambudhi) ಎಂದು ಶೀರ್ಷಿಕೆ ಇಡಲಾಗಿದೆ. ಈ ಸಿನಿಮಾದ ಟೀಸರ್ ಇತ್ತೀಚೆಗೆ ಬಿಡುಗಡೆ ಆಗಿದೆ. ‘ಪ್ರಶಾಂತ್ ಪ್ರಕಾಶ್ ಫ್ಯಾಮಿಲಿ ಫೌಂಡೇಶನ್’ ಈ ಸಿನಿಮಾವನ್ನು ಪ್ರಸ್ತುತಪಡಿಸುತ್ತಿದೆ. ‘ಹೊಂಬಾಳೆ ಮ್ಯೂಸಿಕ್’ ಕೂಡ ಸಾಥ್ ನೀಡಿದೆ. ‘ನೆನಪಿರಲಿ’ ಪ್ರೇಮ್ (Nenapirali Prem) ಅವರು ಈ ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸುತ್ತಿದ್ದಾರೆ.

ಬಿಡುಗಡೆ ಆಗಿರುವ ‘ಕೆಂಪಾಂಬುಧಿ’ ಟೀಸರ್ ಗಮನ ಸೆಳೆಯುತ್ತಿದೆ. ಈ ಚಿತ್ರದಲ್ಲಿ ‘ನೆನಪಿರಲಿ’ ಪ್ರೇಮ್ ಜೊತೆ ಮೇಘನಾ ಗಾಂವ್ಕರ್, ರಾಜೇಶ್ ನಟರಂಗ, ಸುಧಾ ಬೆಳವಾಡಿ, ನಾಗಶ್ರೀ ಬೇಗಾರ್, ಸಂಯುಕ್ತಾ ಹೊರನಾಡು, ರಾಜೇಂದ್ರ ಕಾರಂತ್, ರಮೇಶ್ ಪಂಡಿತ್, ನಟರಾಜ್ ರಾವ್, ಬಿ.ಎಲ್. ರವಿಕುಮಾರ್ ಸೇರಿದಂತೆ ಹಲವರು ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ರಮೇಶ್ ಬೇಗಾರ್ ಅವರು ನಿರ್ದೇಶನ ಮಾಡಿದ್ದಾರೆ.

ಲೇಖಕ ಜಾಣಗೆರೆ ವೆಂಕಟರಾಮಯ್ಯ ಅವರ ಜನಪ್ರಿಯ ಕಾದಂಬರಿಯನ್ನು ಆಧರಿಸಿ ‘ಕೆಂಪಾಂಬುಧಿ’ ಸಿನಿಮಾ ಮೂಡಿಬರುತ್ತಿದೆ. ಇತಿಹಾಸ, ಜನಪದ, ದಂತಕಥೆಗಳು ಮತ್ತು ಸಾಂಸ್ಕೃತಿಕ ನೆನಪುಗಳನ್ನು ಒಗ್ಗೂಡಿಸಿ ರೂಪುಗೊಂಡ ವಿಶಿಷ್ಟ ಸಿನಿಮಾ ಇದು ಎಂದು ಚಿತ್ರತಂಡ ಹೇಳಿದೆ. ದೂರದೃಷ್ಟಿಯ ಆಡಳಿತಗಾರ, ಜನಪರ ನಾಯಕ ಮತ್ತು ಪರಿಸರದ ಮಹತ್ವವನ್ನು ಬಹಳ ಹಿಂದೆಯೇ ಅರಿತು ಅನುಷ್ಠಾನಗೊಳಿಸಿದ್ದ ಕೆಂಪೇಗೌಡರ ಚಿಂತನೆಗಳು ಈ ಸಿನಿಮಾದಲ್ಲಿ ಕಾಣಿಸಲಿವೆ.

‘ಕೆಂಪಾಂಬುಧಿ’ ಸಿನಿಮಾದ ಟೀಸರ್:

‘ಕೆಂಪಾಂಬುಧಿ ರೀತಿಯ ಕಥೆಗಳು ನಿಜಕ್ಕೂ ಮೌಲ್ಯಯುತವಾದವು. ಕೆಂಪೇಗೌಡರ ಅಪ್ರತಿಮ ಕೊಡುಗೆ ಮತ್ತು ಬೆಂಗಳೂರಿನ ಭವ್ಯ ಇತಿಹಾಸವನ್ನು ಗೌರವಿಸುವ ಇಂತಹದೊಂದು ಸಿನಿಮಾಗೆ ಕೈಜೋಡಿಸಿದ ಪ್ರಶಾಂತ್ ಪ್ರಕಾಶ್ ಫ್ಯಾಮಿಲಿ ಫೌಂಡೇಶನ್‌ನ ಕಾಳಜಿ ಶ್ಲಾಘನೀಯ. ನಮ್ಮ ಹೆಮ್ಮೆಯ ನಗರದ ಇತಿಹಾಸವನ್ನು ಇಂದಿನ ತಲೆಮಾರಿಗೆ ಪರಿಚಯಿಸುತ್ತಾ, ಅದರ ಹಸಿರು ಭವಿಷ್ಯವನ್ನು ಕಾಪಾಡುವ ಜವಾಬ್ದಾರಿಯನ್ನು ಮುಂದಿನ ಪೀಳಿಗೆಯಲ್ಲಿ ಮೂಡಿಸುತ್ತಿರುವ ಈ ಪ್ರಯತ್ನ ಇದಾಗಿದೆ’ ಎಂದು ಹೊಂಬಾಳೆ ಫಿಲ್ಮ್ಸ್ ಸಂಸ್ಥಾಪಕ ವಿಜಯ್ ಕಿರಗಂದೂರು ಹೇಳಿದ್ದಾರೆ.

ಇದನ್ನೂ ಓದಿ: ಬಾಲಿವುಡ್ ಹೀರೋಗಳ ರೀತಿ ದೇಹ ಹುರಿಗೊಳಿಸಿದ ನೆನಪಿರಲಿ ಪ್ರೇಮ್

‘ಈ ಸಿನಿಮಾ ಕೇವಲ ಒಂದು ಐತಿಹಾಸಿಕ ಕಥನವಾಗಿಯೇ ಉಳಿಯದೆ, ಅಂದಿನ ಮತ್ತು ಇಂದಿನ ಬೆಂಗಳೂರನ್ನು ಜೋಡಿಸುವ ಪ್ರಯತ್ನವಾಗಿದೆ. ವೇಗವಾಗಿ ಬೆಳೆಯುತ್ತಿರುವ ನಗರದಲ್ಲಿ ನಿಧಾನವಾಗಿ ಮರೆಯಾಗುತ್ತಿರುವ ‘ಗಾರ್ಡನ್ ಸಿಟಿ’ಯ ಹಸಿರು ವೈಭವವನ್ನು ಮತ್ತೆ ನೆನಪಿಸುವುದರ ಜೊತೆಗೆ, ಪರಿಸರ ಸಂರಕ್ಷಣೆ ಮತ್ತು ನಗರವನ್ನು ಕಟ್ಟಿದ ಮೂಲ ಮೌಲ್ಯಗಳ ಕಡೆಗೆ ಸಮಾಜದ ಗಮನ ಸೆಳೆಯುವ ಕೆಲಸವನ್ನು ಈ ಸಿನಿಮಾ ಮಾಡುತ್ತದೆ’ ಎಂದು ‘ಕೆಂಪಾಂಬುಧಿ’ ಚಿತ್ರತಂಡ ಹೇಳಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ತುಮಕೂರು ಯುವ ದಸರಾ: ಮಕ್ಕಳ ಪ್ರತಿಭೆಗೆ ಅದ್ದೂರಿ ವೇದಿಕೆ
ತುಮಕೂರು ಯುವ ದಸರಾ: ಮಕ್ಕಳ ಪ್ರತಿಭೆಗೆ ಅದ್ದೂರಿ ವೇದಿಕೆ
ಹಾಸನಾಂಬೆ ಉತ್ಸವದಲ್ಲಿ ಕೋಟಿ ಕೋಟಿ ಅವ್ಯವಹಾರ ಆರೋಪ
ಹಾಸನಾಂಬೆ ಉತ್ಸವದಲ್ಲಿ ಕೋಟಿ ಕೋಟಿ ಅವ್ಯವಹಾರ ಆರೋಪ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್