AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜನರಿಂದ ನಾನು ಮೇಲೆ ಬಂದೆ’ ಸಿನಿಮಾಗೆ ಲೀಲಾವತಿ ಸ್ಮಾರಕದಲ್ಲಿ ಮುಹೂರ್ತ

ನಟಿ ಲೀಲಾವತಿ ಅವರ ಮೊದಲ ವರ್ಷದ ಪುಣ್ಯಸ್ಮರಣೆಯ ಸಮಯದಲ್ಲಿ ಸ್ಮಾರಕ ಉದ್ಘಾಟನೆ ಆಯಿತು. ರಾಜ್​ಕುಮಾರ್​, ಅಂಬರೀಷ್​, ಪುನೀತ್​ ರಾಜ್​ಕುಮಾರ್​ ಸ್ಮಾರಕಗಳ ರೀತಿಯೇ ಲೀಲಾವತಿ ಅವರ ಸ್ಮಾರಕ ಕೂಡ ಸ್ಫೂರ್ತಿಯ ಸ್ಥಳ ಆಗಿದೆ. ಸಿನಿಮಾದ ಚಟುವಟಿಕೆಗಳಿಗೆ ಅಲ್ಲಿ ಚಾಲನೆ ಸಿಗುತ್ತಿವೆ. ಇತ್ತೀಚೆಗೆ ‘ಜನರಿಂದ ನಾನು ಮೇಲೆ ಬಂದೆ’ ಸಿನಿಮಾಗೆ ಲೀಲಾವತಿ ಸ್ಮಾರಕದ ಎದುರು ಮುಹೂರ್ತ ನೆರವೇರಿಸಲಾಗಿದೆ.

‘ಜನರಿಂದ ನಾನು ಮೇಲೆ ಬಂದೆ’ ಸಿನಿಮಾಗೆ ಲೀಲಾವತಿ ಸ್ಮಾರಕದಲ್ಲಿ ಮುಹೂರ್ತ
‘ಜನರಿಂದ ನಾನು ಮೇಲೆ ಬಂದೆ’ ಸಿನಿಮಾದ ಮುಹೂರ್ತ
ಮದನ್​ ಕುಮಾರ್​
|

Updated on: Dec 10, 2024 | 6:37 PM

Share

ವಿನೋದ್ ರಾಜ್ ಅವರು ತುಂಬ ಶ್ರದ್ಧೆಯಿಂದ ಲೀಲಾವತಿ ಸ್ಮಾರಕವನ್ನು ನಿರ್ಮಿಸಿದ್ದಾರೆ. ಕೆಲವೇ ದಿನಗಳ ಹಿಂದೆ ಸ್ಮಾರಕದ ಉದ್ಘಾಟನೆ ಮಾಡಲಾಯಿತು. ಈಗ ಆ ಜಾಗದಲ್ಲಿ ಸಿನಿಮಾದ ಮುಹೂರ್ತ ನಡೆದಿದೆ ಎಂಬುದು ವಿಶೇಷ. ಹೌದು, ‘ಜನರಿಂದ ನಾನು ಮೇಲೆ ಬಂದೆ’ ಶೀರ್ಷಿಕೆ ಇರುವ ಹೊಸ ಸಿನಿಮಾಗೆ ಲೀಲಾವತಿ ಅವರ ಸ್ಮಾರಕದಲ್ಲಿ ಇತ್ತೀಚೆಗೆ ಮುಹೂರ್ತ ಮಾಡಲಾಯಿತು. ಲೀಲಾವತಿ ಸ್ಮಾರಕದಲ್ಲಿ ಮುಹೂರ್ತ ಮಾಡಿಕೊಂಡ ಮೊದಲ ಸಿನಿಮಾ ಇದು. ‘ಜನರಿಂದ ನಾನು ಮೇಲೆ ಬಂದೆ’ ಸಿನಿಮಾದ ಪೂಜೆಯ ಸಂದರ್ಭದಲ್ಲಿ ವಿನೋದ್ ರಾಜ್​ ಕೂಡ ಉಪಸ್ಥಿತರಿದ್ದರು.

ಶೀರ್ಷಿಕೆಯ ಕಾರಣದಿಂದಲೇ ‘ಜನರಿಂದ ನಾನು ಮೇಲೆ ಬಂದೆ’ ಸಿನಿಮಾ ಗಮನ ಸೆಳೆಯುತ್ತಿದೆ. ಡಾ. ರಾಜ್​ಕುಮಾರ್​ ನಟಿಸಿದ್ದ ಕೊನೆಯ ಸಿನಿಮಾ ‘ಶಬ್ಧವೇದಿ’ಯಲ್ಲಿ ‘ಜನರಿಂದ ನಾನು ಮೇಲೆ ಬಂದೆ..’ ಹಾಡು ಸೂಪರ್​ ಹಿಟ್​ ಆಗಿತ್ತು. ಆ ಸಾಲನ್ನೇ ಈಗ ಶೀರ್ಷಿಕೆಯಾಗಿಸಿಕೊಂಡು ಹೊಸ ಸಿನಿಮಾ ಮಾಡಲಾಗುತ್ತಿದೆ. ಈ ಸಿನಿಮಾದ ಮುಹೂರ್ತ ಸಮಾರಂಭದಲ್ಲಿ ವಿನೋದ್‌ರಾಜ್ ಅವರು ಕ್ಲ್ಯಾಪ್ ಮಾಡಿ ಶುಭ ಕೋರಿದರು.

ಲೀಲಾವತಿ ನಾಗರಾಜ್ ಅವರು ‘ಜನರಿಂದ ನಾನು ಮೇಲೆ ಬಂದೆ’ ಸಿನಿಮಾದ ಮೊದಲ ದೃಶ್ಯಕ್ಕೆ ಕ್ಯಾಮೆರಾ ಚಾಲನೆ ಮಾಡಿದರು. ‘ಮಂಜುನಾಥ್ ಸಿನಿಮಾಸ್’ ಬ್ಯಾನರ್ ಮೂಲಕ ಹೇಮಾವತಿ ಅವರು ಈ ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ. ನವಿಲುಗರಿ ನವೀನ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಅವರ ನಿರ್ದೇಶನದಲ್ಲಿ ಬರುತ್ತಿರುವ 4ನೇ ಸಿನಿಮಾ ಇದು. ನಾಯಕನಾಗಿ ಅವರಿಗೆ ಇದು ಎರಡನೇ ಸಿನಿಮಾ.

‘ಜನರಿಂದ ನಾನು ಮೇಲೆ ಬಂದೆ’ ಸಿನಿಮಾದಲ್ಲಿ ನವೀನ್ ಜೊತೆ ಗಂಧರ್ವ ರಾಜ್ (ಶಂಕರ್) ಅವರು ಮುಖ್ಯ ಭೂಮಿಕೆ ನಿಭಾಯಿಸುತ್ತಿದ್ದಾರೆ. ಸೌಂದರ್ಯಾ ಹಾಗೂ ಕೃತಿಕಾ ದಿವಾಕರ್ ಅವರು ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ವಿನೋದ್‌ ರಾಜ್ ಕೂಡ ನಟಿಸುವ ಸಾಧ್ಯತೆ ಇದೆ ಎಂದು ಚಿತ್ರತಂಡ ಹೇಳಿದೆ. ಇನ್ನುಳಿದ ಕಲಾವಿದರ ಆಯ್ಕೆ ಪ್ರಕ್ರಿಯೆ ಸದ್ಯದಲ್ಲೇ ಪೂರ್ಣಗೊಳ್ಳಲಿದೆ.

ಇದನ್ನೂ ಓದಿ: ಅಮ್ಮನಿಗಾಗಿ ನಟ ವಿನೋದ್ ಕಟ್ಟಿಸಿರುವ ಸುಂದರ ಸ್ಮಾರಕ ಹೇಗಿದೆ ನೋಡಿ

ಪ್ರಣವ್ ಸತೀಶ್ ಅವರ ಸಂಗೀತ ಈ ಸಿನಿಮಾಗೆ ಇದೆ. ಜಿ.ವಿ. ರಮೇಶ್ ಅವರು ಛಾಯಾಗ್ರಹಣ ಮಾಡುತ್ತಿದ್ದಾರೆ. ಗೌತಮ್ ಗೌಡ ಸಂಕಲನದ ಜವಾಬ್ದಾರಿ ಹೊತ್ತಿದ್ದಾರೆ. ಬೆಂಗಳೂರು, ಮಂಗಳೂರು, ಮೈಸೂರು, ಚೆನ್ನೈ ಮುಂತಾದ ಕಡೆ ಶೂಟಿಂಗ್ ನಡೆಯಲಿದೆ. ನೈಜ ಘಟನೆಯನ್ನು ಆಧರಿಸಿ ಕಥೆ ಬರೆಯಲಾಗಿದೆ. ಡ್ಯಾನ್ಸ್ ಕುರಿತಾದ ಕತೆ ಈ ಸಿನಿಮಾದಲ್ಲಿ ಇರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ದೇವಿಮನೆ ಘಟ್ಟದ ಬಳಿ ಕಂದಕಕ್ಕೆ ಉರುಳಿಬಿದ್ದ KSRTC ಬಸ್: 12 ಮಂದಿಗೆ ಗಾಯ
ದೇವಿಮನೆ ಘಟ್ಟದ ಬಳಿ ಕಂದಕಕ್ಕೆ ಉರುಳಿಬಿದ್ದ KSRTC ಬಸ್: 12 ಮಂದಿಗೆ ಗಾಯ
ಇಂದು ಚಂದನ ಷಷ್ಠಿ; ಈ ರಾಶಿಗಳಿಗೆ ಕೂಡಿಬರಲಿದೆ ಅದೃಷ್ಟ!
ಇಂದು ಚಂದನ ಷಷ್ಠಿ; ಈ ರಾಶಿಗಳಿಗೆ ಕೂಡಿಬರಲಿದೆ ಅದೃಷ್ಟ!
ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬ್ಯಾಟ್ ಬೀಸಿದ ಸಚಿವ ಗಜೇಂದ್ರ ಸಿಂಗ್ ಶೇಖಾವತ್
ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬ್ಯಾಟ್ ಬೀಸಿದ ಸಚಿವ ಗಜೇಂದ್ರ ಸಿಂಗ್ ಶೇಖಾವತ್
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?