ಹೇಗಿದ್ದಾನೆ ನೋಡಿ ನಿಖಿಲ್ ಕುಮಾರ್ ಮಗ ಅವ್ಯಾನ್; ಫೋಟೋ ಹಂಚಿಕೊಂಡ ಹೀರೋ

ಕೆಲ ಸೆಲೆಬ್ರಿಟಿಗಳ ಮಕ್ಕಳ ಫೋಟೋವನ್ನು ರಿವೀಲ್ ಮಾಡಲು ಹಿಂಜರಿಯುತ್ತಾರೆ. ಇನ್ನೂ ಕೆಲವರು ನಿತ್ಯ ಮಕ್ಕಳ ಹೊಸಹೊಸ ಫೋಟೋ ಹಂಚಿಕೊಂಡು ಸಂಭ್ರಮಿಸುತ್ತಾರೆ. ನಿಖಿಲ್ ಕುಮಾರ್ ಅವರು ಎರಡನೇ ಸಾಲಿಗೆ ಸೇರುತ್ತಾರೆ.

ಹೇಗಿದ್ದಾನೆ ನೋಡಿ ನಿಖಿಲ್ ಕುಮಾರ್ ಮಗ ಅವ್ಯಾನ್; ಫೋಟೋ ಹಂಚಿಕೊಂಡ ಹೀರೋ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Nov 16, 2022 | 8:02 PM

ನಿಖಿಲ್ ಕುಮಾರ್​ (Nikhil Kumar) ಅವರು ಸದ್ಯ ಕುಟುಂಬಕ್ಕೆ ಹೆಚ್ಚು ಸಮಯ ನೀಡುತ್ತಿದ್ದಾರೆ. ಅವರು ರಾಜಕೀಯ ಕೆಲಸಗಳ ಜತೆ ಕುಟುಂಬಕ್ಕಾಗಿ ಸಮಯ ನೀಡುತ್ತಿದ್ದಾರೆ. ಈಗ ನಿಖಿಲ್ ಕುಮಾರ್ ಅವರು ಮಗನ ಫೋಟೋ ಹಂಚಿಕೊಂಡಿದ್ದಾರೆ. ಮಗ ಅವ್ಯಾನ್​ ಹಾಗೂ ಪತ್ನಿ ರೇವತಿ (Revathi Nikhil) ಜತೆ ಸಮಯ ಕಳೆಯುತ್ತಿರುವ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ನಿಖಿಲ್ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ.

ಕೆಲ ಸೆಲೆಬ್ರಿಟಿಗಳ ಮಕ್ಕಳ ಫೋಟೋವನ್ನು ರಿವೀಲ್ ಮಾಡಲು ಹಿಂಜರಿಯುತ್ತಾರೆ. ಇನ್ನೂ ಕೆಲವರು ನಿತ್ಯ ಮಕ್ಕಳ ಹೊಸಹೊಸ ಫೋಟೋ ಹಂಚಿಕೊಂಡು ಸಂಭ್ರಮಿಸುತ್ತಾರೆ. ನಿಖಿಲ್ ಕುಮಾರ್ ಅವರು ಎರಡನೇ ಸಾಲಿಗೆ ಸೇರುತ್ತಾರೆ. ಅವರು ಮಗ ಅವ್ಯಾನ್​ ಫೋಟೋಗಳನ್ನು ಆಗಾಗ ಹಂಚಿಕೊಳ್ಳುತ್ತಿರುತ್ತಾರೆ. ಇತ್ತೀಚೆಗೆ ಮಕ್ಕಳ ದಿನಾಚರಣೆ (ನವೆಂಬರ್ 14) ಆಚರಿಸಲಾಗಿದೆ. ಈ ಸಂದರ್ಭದಲ್ಲಿ ನಿಖಿಲ್ ತಮ್ಮ ಮಗನ ಫೋಟೋ ಶೇರ್ ಮಾಡಿಕೊಂಡು ಸಂಭ್ರಮಿಸಿದ್ದರು.

ನಟ ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ದಂಪತಿಗೆ 2021ರ ಸೆಪ್ಟೆಂಬರ್ 24ರಂದು ಗಂಡು ಮಗು ಜನಿಸಿತು. ಸೋಶಿಯಲ್ ಮೀಡಿಯಾದಲ್ಲಿ ನಿಖಿಲ್ ಈ ಬಗ್ಗೆ ಸಂತಸ ಹೊರಹಾಕಿದ್ದರು. ಜೂನ್ 8ರಂದು ಬೆಂಗಳೂರಿನ ಜೆಪಿ ನಗರದ ವೆಂಕಟೇಶ್ವರ ದೇವಸ್ಥಾನದಲ್ಲಿ ಶಾಸ್ತ್ರೋಕ್ತವಾಗಿ ನಾಮಕರಣ ಕಾರ್ಯಕ್ರಮ ನಡೆದಿತ್ತು. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಸೇರಿದಂತೆ ಕುಟುಂಬದ ಎಲ್ಲರೂ ಭಾಗಿಯಾಗಿದ್ದರು. ನಿಖಿಲ್​ ತಮ್ಮ ಪುತ್ರನಿಗೆ ಅವ್ಯಾನ್​​ ದೇವ್ ಎಂದು ಹೆಸರು ಇಟ್ಟಿದ್ದಾರೆ. ಅವ್ಯಾನ್ ಎಂದರೆ ನಾಶ ಇಲ್ಲದವನು ಎಂಬರ್ಥ ಇದೆ.

ಇದನ್ನೂ ಓದಿ: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಖಚಿತಪಡಿಸಿದ ಎಚ್​ಡಿಕೆ

ಸಿನಿಮಾ ವಿಚಾರಕ್ಕೆ ಬರೋದಾದರೆ ನಿಖಿಲ್ ಅವರು ಚಿತ್ರರಂಗದಲ್ಲಿ ದೊಡ್ಡ ಯಶಸ್ಸು ಕಂಡಿಲ್ಲ. ಕಳೆದ ವರ್ಷ ರಿಲೀಸ್ ಆದ ‘ರೈಡರ್’ ಸಿನಿಮಾ ಮಿಶ್ರಪ್ರತಿಕ್ರಿಯೆ ಪಡೆಯಿತು. ಸದ್ಯ ‘ಯದುವೀರ’ ಚಿತ್ರದಲ್ಲಿ ಅವರು ನಟಿಸುತ್ತಿದ್ದಾರೆ. ಇದರ ಜತೆಗೆ ರಾಜಕೀಯದಲ್ಲೂ ಅವರು ಬ್ಯುಸಿ ಆಗಿದ್ದಾರೆ. ಜೆಡಿಎಸ್ ಪಕ್ಷವನ್ನು ಬೆಳೆಸಲು ಅವರು ಪ್ರಯತ್ನಿಸುತ್ತಿದ್ದಾರೆ. ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಅವರು ಸ್ಪರ್ಧಿಸಲಿದ್ದಾರೆ ಎನ್ನಲಾಗುತ್ತಿದೆ.

Published On - 7:58 pm, Wed, 16 November 22

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್