ನಿಖಿಲ್​-ರೇವತಿಗೆ ಗಂಡು ಮಗು; ದೇವೇಗೌಡರ ಕುಟುಂಬಕ್ಕೆ ಹೊಸ ಸದಸ್ಯನ ಆಗಮನ

ಸಿನಿಮಾ ಮತ್ತು ರಾಜಕೀಯ ಎರಡರಲ್ಲೂ ಬ್ಯುಸಿ ಆಗಿರುವ ನಿಖಿಲ್​ ಅವರು ಕುಟುಂಬದ ಕಡೆಗೂ ಹೆಚ್ಚು ಗಮನ ನೀಡುತ್ತಾರೆ. ಪತ್ನಿ ಜೊತೆ ಇರುವ ಫೋಟೋಗಳನ್ನು ಅವರು ಆಗಾಗ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾ ಇರುತ್ತಾರೆ.

ನಿಖಿಲ್​-ರೇವತಿಗೆ ಗಂಡು ಮಗು; ದೇವೇಗೌಡರ ಕುಟುಂಬಕ್ಕೆ ಹೊಸ ಸದಸ್ಯನ ಆಗಮನ
ಮಗುವನ್ನು ಹಿಡಿದುಕೊಂಡಿರುವ ನಿಖಿಲ್
Follow us
| Updated By: ರಾಜೇಶ್ ದುಗ್ಗುಮನೆ

Updated on:Sep 24, 2021 | 2:45 PM

ನಟ ನಿಖಿಲ್​ ಕುಮಾರಸ್ವಾಮಿ ಹಾಗೂ ರೇವತಿ ಗಂಡು ಮಗುವನ್ನು ಸ್ವಾಗತಿಸಿದ್ದಾರೆ. ಈ ಮೂಲಕ ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡ ಅವರ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ರೇವತಿ ಮಧ್ಯಾಹ್ನ ಒಂದು ಗಂಟೆಗೆ  ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.  ತಾಯಿ, ಮಗು ಇಬ್ಬರೂ ಆರೋಗ್ಯವಾಗಿದ್ದಾರೆ.

2020ರ ಏಪ್ರಿಲ್​ನಲ್ಲಿ ರೇವತಿ ಜೊತೆ ನಿಖಿಲ್​ ಕುಮಾರಸ್ವಾಮಿ ಸಪ್ತಪದಿ ತುಳಿದಿದ್ದರು. ಲಾಕ್​ಡೌನ್​ ನಿಯಮಗಳ ಅನುಸಾರ ಈ ಹೈಪ್ರೊಫೈಲ್​ ಕುಟುಂಬದಲ್ಲಿ ವಿವಾಹ ಸಮಾರಂಭ ನೆರವೇರಿತ್ತು. ಬಿಡದಿ ಬಳಿ ಇರುವ ಫಾರ್ಮ್​ಹೌಸ್​ನಲ್ಲಿ ರೇವತಿ ಮತ್ತು ನಿಖಿಲ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ರೇವತಿ ಪ್ರೆಗ್ನೆಂಟ್​ ಎಂಬ ಸುದ್ದಿ ಇತ್ತೀಚಿನ ಕೆಲವು ತಿಂಗಳುಗಳಿಂದ ಕೇಳಿಬರುತ್ತಿತ್ತು. ಈ ವರ್ಷ ಜೂನ್​ನಲ್ಲಿ ಆ ಬಗ್ಗೆ ಸ್ವತಃ ನಿಖಿಲ್​ ಪ್ರತಿಕ್ರಿಯೆ ನೀಡಿದ್ದರು. ‘ಕೇಳಿಬರುತ್ತಿರುವ ಸುದ್ದಿ ನಿಜ. ನಾವು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದೇವೆ. ಶೀಘ್ರದಲ್ಲಿ ನಮ್ಮ ಕುಟುಂಬಕ್ಕೆ ಹೊಸ ಅತಿಥಿ ಬರಲಿದ್ದಾರೆ’ ಎಂದು ನಿಖಿಲ್​ ಹೇಳಿದ್ದರು. ಈಗ ಅವರಿಗೆ ಗಂಡು ಮಗು ಜನನವಾಗಿದೆ.

ಸಿನಿಮಾ ಮತ್ತು ರಾಜಕೀಯ ಎರಡರಲ್ಲೂ ಬ್ಯುಸಿ ಆಗಿರುವ ನಿಖಿಲ್​ ಅವರು ಕುಟುಂಬದ ಕಡೆಗೂ ಹೆಚ್ಚು ಗಮನ ನೀಡುತ್ತಾರೆ. ಪತ್ನಿ ಜೊತೆ ಇರುವ ಫೋಟೋಗಳನ್ನು ಅವರು ಆಗಾಗ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾ ಇರುತ್ತಾರೆ. ಇತ್ತೀಚೆಗೆ ಅವರ ಮನೆಯಲ್ಲಿ ಗಣೇಶ ಚತುರ್ಥಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಆ ಸಂದರ್ಭದ ಫೋಟೋವನ್ನು ಹಂಚಿಕೊಂಡ ನಿಖಿಲ್​, ತಮ್ಮ ಅಭಿಮಾನಿಗಳಿಗೆ ವಿಶ್​ ಮಾಡಿದ್ದರು.

ನಿಖಿಲ್​ ಮತ್ತು ರೇವತಿ ದಂಪತಿಗೆ ಮೊದಲ ಮಗು ಜನಿಸಿದ ನಂತರ ಎಲ್ಲರಿಂದ ಶುಭ ಹಾರೈಕೆಗಳು ಕೇಳಿಬರುತ್ತಿವೆ. ಸಿನಿಮಾ ವಿಚಾರಕ್ಕೆ ಬರುವುದಾದರೆ ನಿಖಿಲ್​ ಸದ್ಯ ‘ರೈಡರ್​’ ಚಿತ್ರದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ.

ಇದನ್ನೂ ಓದಿ: ​ನಿಖಿಲ್​ ಕುಮಾರಸ್ವಾಮಿ ಪತ್ನಿ ರೇವತಿಗೆ ಸೀಮಂತ; ದೇವೇಗೌಡರ ಕುಟುಂಬದಲ್ಲಿ ಸಂಭ್ರಮ

ನಿಖಿಲ್​ ಕುಮಾರಸ್ವಾಮಿ ಪತ್ನಿ ರೇವತಿ ಸೀಮಂತದ ಕಲರ್​ಫುಲ್​ ಫೋಟೋ ಗ್ಯಾಲರಿ ಇಲ್ಲಿದೆ..

Published On - 1:37 pm, Fri, 24 September 21

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ