ಮಗು ಜನಿಸಿದ ಬಗ್ಗೆ ಫಸ್ಟ್​ ರಿಯಾಕ್ಷನ್ ನೀಡಿದ ನಿಖಿಲ್​ ಕುಮಾರಸ್ವಾಮಿ

ನಿಖಿಲ್​ ಕುಮಾರಸ್ವಾಮಿ ಟ್ವಿಟರ್​ನಲ್ಲಿ ಆ್ಯಕ್ಟಿವ್ ಆಗಿದ್ದಾರೆ. ಅಭಿಮಾನಿಗಳ ಜತೆ ಸಂಪರ್ಕದಲ್ಲಿರೋಕೆ ಟ್ವಿಟರ್​, ಇನ್​ಸ್ಟಾಗ್ರಾಮ್​ ಹಾಗೂ ಫೇಸ್​ಬುಕ್​ ಬಳಕೆ ಮಾಡುತ್ತಾರೆ. ಅಲ್ಲಿ ಅವರು ಪತ್ನಿ ರೇವತಿ ಜತೆ ಇರುವ ಫೋಟೋವನ್ನು ಹಾಕುತ್ತಾರೆ.

ಮಗು ಜನಿಸಿದ ಬಗ್ಗೆ ಫಸ್ಟ್​ ರಿಯಾಕ್ಷನ್ ನೀಡಿದ ನಿಖಿಲ್​ ಕುಮಾರಸ್ವಾಮಿ
ನಿಖಿಲ್​ ಕುಮಾರಸ್ವಾಮಿ
TV9kannada Web Team

| Edited By: Rajesh Duggumane

Sep 24, 2021 | 3:44 PM

ನಟ ನಿಖಿಲ್​ ಕುಮಾರಸ್ವಾಮಿ ಅವರು ಗಂಡು ಮಗುವನ್ನು ಬರಮಾಡಿಕೊಂಡ ಖುಷಿಯಲ್ಲಿದ್ದಾರೆ. ಪತ್ನಿ ರೇವತಿ ಇಂದು (ಸೆಪ್ಟೆಂಬರ್​ 24) ಒಂದು ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮನೀಡಿದ್ದಾರೆ. ಈ ಖುಷಿಯನ್ನು ನಿಖಿಲ್​ ಕುಮಾರಸ್ವಾಮಿ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ನಿಖಿಲ್​ ಕುಮಾರಸ್ವಾಮಿ ಟ್ವಿಟರ್​ನಲ್ಲಿ ಆ್ಯಕ್ಟಿವ್ ಆಗಿದ್ದಾರೆ. ಅಭಿಮಾನಿಗಳ ಜತೆ ಸಂಪರ್ಕದಲ್ಲಿರೋಕೆ ಟ್ವಿಟರ್​, ಇನ್​ಸ್ಟಾಗ್ರಾಮ್​ ಹಾಗೂ ಫೇಸ್​ಬುಕ್​ ಬಳಕೆ ಮಾಡುತ್ತಾರೆ. ಅಲ್ಲಿ ಅವರು ಪತ್ನಿ ರೇವತಿ ಜತೆ ಇರುವ ಫೋಟೋವನ್ನು ಹಾಕುತ್ತಾರೆ. ಈಗ ಮಗುವಿನ ಜತೆ ನಿಂತಿರುವ ಫೋಟೋವನ್ನು ನಿಖಿಲ್​ ಪೋಸ್ಟ್​ ಮಾಡಿದ್ದಾರೆ. ‘ನಮ್ಮ ಜೀವನದ ಈ ವಿಶೇಷ ಕ್ಷಣವನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಸಂತೋಷವಾಗುತ್ತಿದೆ. ಲವ್​ ಯು ಮೈ ಸನ್​’ ಎಂದು ಬರೆದುಕೊಂಡಿದ್ದಾರೆ ನಿಖಿಲ್.

2020ರ ಏಪ್ರಿಲ್​ನಲ್ಲಿ ರೇವತಿ ಜೊತೆ ನಿಖಿಲ್​ ಕುಮಾರಸ್ವಾಮಿ ಸಪ್ತಪದಿ ತುಳಿದಿದ್ದರು. ಲಾಕ್​ಡೌನ್​ ನಿಯಮಗಳ ಅನುಸಾರ ಈ ಹೈಪ್ರೊಫೈಲ್​ ಕುಟುಂಬದಲ್ಲಿ ವಿವಾಹ ಸಮಾರಂಭ ನೆರವೇರಿತ್ತು. ಬಿಡದಿ ಬಳಿ ಇರುವ ಫಾರ್ಮ್​ಹೌಸ್​ನಲ್ಲಿ ರೇವತಿ ಮತ್ತು ನಿಖಿಲ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ರೇವತಿ ಪ್ರೆಗ್ನೆಂಟ್​ ಎಂಬ ಸುದ್ದಿ ಇತ್ತೀಚಿನ ಕೆಲವು ತಿಂಗಳುಗಳಿಂದ ಕೇಳಿಬರುತ್ತಿತ್ತು. ಈ ವರ್ಷ ಜೂನ್​ನಲ್ಲಿ ಆ ಬಗ್ಗೆ ಸ್ವತಃ ನಿಖಿಲ್​ ಪ್ರತಿಕ್ರಿಯೆ ನೀಡಿದ್ದರು. ‘ಕೇಳಿಬರುತ್ತಿರುವ ಸುದ್ದಿ ನಿಜ. ನಾವು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದೇವೆ. ಶೀಘ್ರದಲ್ಲಿ ನಮ್ಮ ಕುಟುಂಬಕ್ಕೆ ಹೊಸ ಅತಿಥಿ ಬರಲಿದ್ದಾರೆ’ ಎಂದು ನಿಖಿಲ್​ ಹೇಳಿದ್ದರು. ಈಗ ಅವರಿಗೆ ಗಂಡು ಮಗು ಜನನವಾಗಿದೆ.

ಈ ಬಗ್ಗೆ ಎಚ್​​ಡಿಕೆ ಕೂಡ ಸಂತಸ ಹೊರ ಹಾಕಿದ್ದಾರೆ. ‘ನನ್ನ ಜೀವನದಲ್ಲಿ ಇನ್ನೊಂದು ಶುಭ ಘಳಿಗೆ ಬಂದಿದೆ. ನಮ್ಮ ಪರಿವಾರಕ್ಕೆ ಹೊಸ ಸದಸ್ಯನ ಆಗಮನವಾಗಿದೆ. ತಾತನಾದೆ ಎಂದು ಹೇಳಲು ಅತೀವ ಸಂತಸವಾಗುತ್ತಿದೆ. ಕಂದನಿಗೆ ನಿಮ್ಮೆಲ್ಲರ ಹಾರೈಕೆ ಮತ್ತು ಆಶೀರ್ವಾದ ಇರಲಿ ಎಂದು ಪ್ರಾರ್ಥನೆ ಮಾಡುತ್ತೇನೆ’ ಎಂದು ಎಚ್​ಡಿಕೆ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ‘ನನ್ನ ಜೀವನದಲ್ಲಿ ಇನ್ನೊಂದು ಶುಭ ಘಳಿಗೆ ಬಂದಿದೆ’; ತಾತನಾದ ಖುಷಿ ಹಂಚಿಕೊಂಡ ಕುಮಾರಸ್ವಾಮಿ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada