AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆ ಸೋತ ಬಳಿಕ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ: ಅಪ್ಪ-ಅಜ್ಜನಿಂದ ಕಲಿತ ಪಾಠ ಸ್ಮರಣೆ

Nikhil Kumaraswamy: ನಿಖಿಲ್ ಕುಮಾರಸ್ವಾಮಿ ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಸೋಲುಂಡಿದ್ದಾರೆ. ಇದು ಅವರಿಗೆ ಎರಡನೇ ಚುನಾವಣಾ ಸೋಲು. ತಮ್ಮ ಸೋಲಿನ ಕುರಿತು ಅಭಿಪ್ರಾಯವನ್ನು ನಿಖಿಲ್ ಹಂಚಿಕೊಂಡಿದ್ದಾರೆ.

ಚುನಾವಣೆ ಸೋತ ಬಳಿಕ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ: ಅಪ್ಪ-ಅಜ್ಜನಿಂದ ಕಲಿತ ಪಾಠ ಸ್ಮರಣೆ
ನಿಖಿಲ್ ಕುಮಾರಸ್ವಾಮಿ
ಮಂಜುನಾಥ ಸಿ.
|

Updated on: May 14, 2023 | 5:56 PM

Share

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿದಿದ್ದ ಕೆಲವೇ ಸಿನಿಮಾ ನಟರಲ್ಲಿ ಹೆಚ್ಚು ಗಮನ ಸೆಳೆದಿದ್ದು ನಿಖಿಲ್ ಕುಮಾರಸ್ವಾಮಿ. (Nikhil Kumaraswamy) ರಾಜಕೀಯದ ದೊಡ್ಡ ಹಿನ್ನೆಲೆಯುಳ್ಳವರೇ ಆದರೂ ಚುನಾವಣಾ ರಾಜಕೀಯಕ್ಕೆ ಬೇಕಾದ ಜನಪ್ರಿಯತೆಯನ್ನು ಸಿನಿಮಾದಿಂದ ಪಡೆದುಕೊಂಡು ಬಳಿಕ ಚುನಾವಣೆಗೆ ಇಳಿದಿದ್ದ ನಿಖಿಲ್ ಕುಮಾರಸ್ವಾಮಿ ಈ ಬಾರಿ ರಾಮನಗರ ಕ್ಷೇತ್ರದಿಂದ (Ramangara Assembly Constituency) ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದರು. ಆದರೆ ಕಾಂಗ್ರೆಸ್​ನ ಇಕ್ಬಾಲ್ ಅನ್ಸಾರಿ ವಿರುದ್ಧ ಅವರು ಸೋಲನುಭವಿಸಿದ್ದಾರೆ.

ನಿಖಿಲ್ ಕುಮಾರಸ್ವಾಮಿ ಗೆದ್ದೇ ಗೆಲ್ಲುತ್ತಾರೆಂದೇ ಹೇಳಲಾಗಿತ್ತು. ಆದರೆ ಅವರ ಅಭಿಮಾನಿಗಳ ನಿರೀಕ್ಷೆ ತಿರುವು-ಮುರುವಾಗಿದೆ. ಸೋತ ಬಳಿಕ ಯಾವುದೇ ಮಾಧ್ಯಮಗಳ ಕೈಗೆ ಸಿಗಗಿದ್ದ ನಿಖಿಲ್ ಕುಮಾರಸ್ವಾಮಿ ಇದೀಗ ಫೇಸ್​ಬುಕ್ ಮೂಲಕ ಸಂದೇಶವೊಂದನ್ನು ಪ್ರಕಟಿಸಿದ್ದಾರೆ. ತಮ್ಮ ಸೋಲಿನ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ತಂದೆ ಕುಮಾರಸ್ವಾಮಿ ಹಾಗೂ ತಾತ ಮಾಜಿ ಪ್ರಧಾನಿ ದೇವೇಗೌಡರಿಂದ ಕಲಿತ ಪಾಠವನ್ನು ಸ್ಮರಿಸಿಕೊಂಡಿದ್ದಾರೆ.

”ನನ್ನನ್ನು ಅತ್ಯಂತ ಪ್ರೀತಿಯಿಂದ ಬೆಂಬಲಿಸಿ ಆಶೀರ್ವದಿಸಿದ ರಾಮನಗರ ವಿಧಾನಸಭೆ ಕ್ಷೇತ್ರದ ಮಹಾಜನತೆಗೆ ನನ್ನ ಶಿರಸಾಷ್ಟಾಂಗ ನಮನಗಳು. ಈ ಒಂದು ಸೋಲು ನಿಮ್ಮ ಸೇವೆ ಮಾಡಬೇಕು ಎನ್ನುವ ನನ್ನ ಅದಮ್ಯ ಸಂಕಲ್ಪಕ್ಕೆ ತಡೆ ಒಡ್ಡಲಾರದು. ನಾನೆಂದೂ ನಿಮ್ಮ ಜತೆಯಲ್ಲೇ ಇರುತ್ತೇನೆ, ನಿಮಗಾಗಿ ಜೀವಿಸುತ್ತೇನೆ. ಸೋಲನ್ನು ಸಮಚಿತ್ತದಿಂದ ಸ್ವಿಕರಿಸಿ ಮುನ್ನಡೆಯುತ್ತೇನೆ. ಅದು ನಾನು ನನ್ನ ಪೂಜ್ಯ ತಾತನವರಾದ ಶ್ರೀ ಹೆಚ್.ಡಿ.ದೇವೇಗೌಡ ಸಾಹೇಬರಿಂದ, ತಂದೆ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರಿಂದ ಕಲಿತ ಪಾಠ” ಎಂದಿದ್ದಾರೆ.

ಇದನ್ನೂ ಓದಿ:ದೇವೆಗೌಡರಿಂದ ಬಿ ಫಾರಂ ಸ್ವೀಕರಿಸುವಾಗ ಕಣ್ಣೀರಿಟ್ಟ ನಿಖಿಲ್ ಕುಮಾರಸ್ವಾಮಿ

ಮುಂದುವರೆದು, “ಎಡವಿದ್ದೇನೆ, ಮತ್ತೆ ಎದ್ದು ಓಡುತ್ತೇನೆ. ಬಿದ್ದ ಮಗುವನ್ನು ಮೇಲೆತ್ತುವ ನಿಮ್ಮ ಪ್ರೀತಿ, ವಾತ್ಸಲ್ಯವನ್ನು ನಾನು ಬಲ್ಲೆ. ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ನಮ್ಮ ಪಕ್ಷ ಜಾತ್ಯತೀತ ಜನತಾದಳವನ್ನು ಹರಸಿದ ಸಾರ್ವಜನಿಕ ಬಂಧುಗಳನ್ನು ಇಲ್ಲಿ ಸ್ಮರಿಸುತ್ತೇನೆ. ಸೋಲಿನಿಂದ ಕಂಗೆಟ್ಟು ಜನರಿಂದ ದೂರವಾಗುವ ಜಾಯಮಾನ ನಮ್ಮದಲ್ಲ. ಈ ಪರಾಜಯದಿಂದ ಪಾಠ ಕಲಿಯುತ್ತೇವೆ, ಪುನಾ ಪುಟಿದೆದ್ದು ಬರುತ್ತೇವೆ. ಪ್ರತಿಯೊಬ್ಬರಿಗೂ ಪ್ರಣಾಮಗಳು” ಎಂದಿದ್ದಾರೆ ನಟ ನಿಖಿಲ್ ಕುಮಾರಸ್ವಾಮಿ.

ನಿಖಿಲ್ ಕುಮಾರಸ್ವಾಮಿ ಅವರಿಗೆ ಇದು ಎರಡನೇ ಸೋಲು. 2019 ರಲ್ಲಿ ನಡೆದಿದ್ದ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಅವರು ಸ್ಪರ್ಧಿಸಿದ್ದರು. ಎದುರಾಳಿಯಾಗಿದ್ದ ನಟಿ, ಅಂಬರೀಶ್ ಪತ್ನಿ ಸುಮಲತಾ ವಿರುದ್ಧ ನಿಖಿಲ್ ಸೋಲು ಕಂಡರು. ಆದರೆ ಈ ಬಾರಿ ಗೆದ್ದೇ ಗೆಲ್ಲುವ ನಿರೀಕ್ಷೆಯಲ್ಲಿ ನಿಖಿಲ್ ಕುಮಾರಸ್ವಾಮಿ ಇದ್ದರು ಆದರೆ ಆ ನಿರೀಕ್ಷೆಯೂ ಹುಸಿಯಾಗಿದೆ.

2016 ರಲ್ಲಿ ಜಾಗ್ವಾರ್ ಸಿನಿಮಾ ಮೂಲಕ ಚಿತ್ರರಂಗ ಪ್ರವೇಶಿಸಿದ ನಿಖಿಲ್ ಕುಮಾರ್ ಈವರೆಗೆ ನಾಲ್ಕು ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರ ನಟನೆಯ ರೈಡರ್ ಸಿನಿಮಾ ಕಳೆದ ವರ್ಷಾಂತ್ಯದಲ್ಲಿ ಬಿಡುಗಡೆ ಆಗಿ ಸಾಧಾರಣ ಹಿಟ್ ಎನಿಸಿಕೊಂಡಿತ್ತು. ಆ ಬಳಿಕ ಯಧುವೀರ ಹೆಸರಿನ ಸಿನಿಮಾವನ್ನು ನಿಖಿಲ್ ಕುಮಾರಸ್ವಾಮಿ ಒಪ್ಪಿಕೊಂಡಿದ್ದಾರೆ. ಚುನಾವಣೆಯಲ್ಲಿ ಸೋತ ಬಳಿಕ ಮತ್ತೆ ಸಿನಿಮಾಗಳಲ್ಲಿ ನಿಖಿಲ್ ಸಕ್ರಿಯರಾಗುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ವಿದ್ಯಾರ್ಥಿಗಳೇ ಗಮನಿಸಿ: SSLC ಫೇಲ್​​ ಆದವರಿಗೆ 3ನೇ ಬಾರಿ ಪರೀಕ್ಷೆ ಇರಲ್ಲ
ವಿದ್ಯಾರ್ಥಿಗಳೇ ಗಮನಿಸಿ: SSLC ಫೇಲ್​​ ಆದವರಿಗೆ 3ನೇ ಬಾರಿ ಪರೀಕ್ಷೆ ಇರಲ್ಲ