Nikhil Kumaraswamy: ನಿಖಿಲ್​ ಕುಮಾರಸ್ವಾಮಿಗೆ ಕೊರೊನಾ ಸೋಂಕು ದೃಢ

|

Updated on: Apr 17, 2021 | 3:40 PM

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ನಿಖಿಲ್​ ಕುಮಾರಸ್ವಾಮಿ, ನಾನು ಇಂದು ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದು ಪ್ರಾಥಮಿಕ ವರದಿ ಪಾಸಿಟಿವ್ ಬಂದಿದೆ ಎಂದಿದ್ದಾರೆ.

Nikhil Kumaraswamy: ನಿಖಿಲ್​ ಕುಮಾರಸ್ವಾಮಿಗೆ ಕೊರೊನಾ ಸೋಂಕು ದೃಢ
ನಟ ನಿಖಿಲ್ ಕುಮಾರಸ್ವಾಮಿ ( ಕೃಪೆ: ಫೇಸ್​ಬುಕ್)
Follow us on

ನಿಖಿಲ್​ ಕುಮಾರಸ್ವಾಮಿ ರೈಡರ್​ ಸಿನಿಮಾದ ಶೂಟಿಂಗ್​ಗಾಗಿ ಇತ್ತೀಚೆಗೆ ಲೇಹ್​-ಲಡಾಕ್​ಗೆ ತೆರಳಿದ್ದಾರೆ. ಈಗ ಅವರು ಪರೀಕ್ಷೆಗೆ ಒಳಗಾಗಿದ್ದು ಕೊರೊನಾ ಪಾಸಿಟಿವ್​ ಕಾಣಿಸಿಕೊಂಡಿದೆ. ಈ ಬಗ್ಗೆ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ನಿಖಿಲ್​ ಕುಮಾರಸ್ವಾಮಿ, ನಾನು ಇಂದು ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದು ಪ್ರಾಥಮಿಕ ವರದಿ ಪಾಸಿಟಿವ್ ಬಂದಿದೆ. ಯಾರೂ ಆತಂಕ ಪಡುವ ಅವಶ್ಯಕತೆ ಇಲ್ಲ. ವೈದ್ಯರ ಸಲಹೆಯ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ ಕೆಲ ದಿನಗಳಲ್ಲಿ ನನ್ನ ಸಂಪರ್ಕದಲ್ಲಿದ್ದವರು ಕೋವಿಡ್ ಪರೀಕ್ಷೆಗೆ ಒಳಗಾಗಿ ಎಂದು ಬರೆದಿದ್ದಾರೆ.

ನಿಖಿಲ್​ ತಂದೆ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿಗೆ ಕೊರೊನಾ ಸೋಂಕು ದೃಢವಾಗಿತ್ತು. ಈ ಬಗ್ಗೆ ಸ್ವತಃ ಅವರೇ ಟ್ವೀಟ್​ ಮಾಡಿದ್ದರು. ನನ್ನ ಕೋವಿಡ್-19 ಪರೀಕ್ಷೆಯ ವರದಿ ಪಾಸಿಟಿವ್ ಎಂದು ಬಂದಿದೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಕೇಳಿದ್ದಾರೆ.

ಇತ್ತೀಚೆಗೆ ಹೆಚ್​ ಡಿ ಕುಮಾರಸ್ವಾಮಿ ಅವರ ತಂದೆ ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್​ ಡಿ ದೇವೇಗೌಡ ಮತ್ತು ತಾಯಿ ಚನ್ನಮ್ಮ ಅವರಿಗೂ ಕೊರೊನಾ ಸೋಂಕು ತಗುಲಿತ್ತು. ಹೆಚ್​ ಡಿ ದೇವೇಗೌಡ ದಂಪತಿಯಿಬ್ಬರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಗುಣಮುಖರಾಗಿ ಇತ್ತೀಚೆಗೆ ಮನೆಗೆ ಬಂದಿದ್ದರು.

ಇದನ್ನೂ ಓದಿ: ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿಗೆ ಕೊರೊನಾ ಸೋಂಕು ದೃಢ

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಗೂ ತಟ್ಟಿದ ಬೆಡ್​ ಬಿಸಿ: ಬೆಡ್​ ಖಚಿತ ಪಡಿಸಿದ ನಂತರವಷ್ಟೇ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್