AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

​ನಿಖಿಲ್​ ಕುಮಾರಸ್ವಾಮಿ ಪತ್ನಿ ರೇವತಿಗೆ ಸೀಮಂತ; ದೇವೇಗೌಡರ ಕುಟುಂಬದಲ್ಲಿ ಸಂಭ್ರಮ

ಎಚ್​ಎಸ್​ಆರ್​ ಲೇಔಟ್​ನಲ್ಲಿ ಇರುವ ಮಾನ್ವಿ ಕನ್ವೆನ್ಷನ್ ಹಾಲ್​ನಲ್ಲಿ ನಿಖಿಲ್ ಕುಮಾರಸ್ವಾಮಿ​ ಪತ್ನಿ ರೇವತಿ ಅವರ ಸೀಮಂತ ಕಾರ್ಯಕ್ರಮ ನಡೆಯುತ್ತಿದೆ. ಕೇವಲ ಕುಟುಂಬದವರು ಮತ್ತು ಆಪ್ತರಿಗೆ ಮಾತ್ರ ಆಹ್ವಾನ ನೀಡಲಾಗಿದೆ.

​ನಿಖಿಲ್​ ಕುಮಾರಸ್ವಾಮಿ ಪತ್ನಿ ರೇವತಿಗೆ ಸೀಮಂತ; ದೇವೇಗೌಡರ ಕುಟುಂಬದಲ್ಲಿ ಸಂಭ್ರಮ
ನಿಖಿಲ್ ಕುಮಾರಸ್ವಾಮಿ, ರೇವತಿ
TV9 Web
| Edited By: |

Updated on: Sep 13, 2021 | 1:09 PM

Share

ನಿಖಿಲ್​ ಕುಮಾರಸ್ವಾಮಿ ಮತ್ತು ರೇವತಿ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿ ಇದ್ದಾರೆ ಎಂಬ ಸುದ್ದಿ ಕೇಳಿ ಅವರ ಫ್ಯಾನ್ಸ್​ ಖುಷಿ ಆಗಿದ್ದರು. ರೇವತಿ ಅವರು ಈಗ 8 ತಿಂಗಳ ತುಂಬು ಗರ್ಭಿಣಿ. ಆ ಪ್ರಯುಕ್ತ ಸೀಮಂತ ಕಾರ್ಯಕ್ರಮ ನೆರವೇರಿಸಲಾಗುತ್ತಿದೆ. ದೇವೇಗೌಡರ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಎಚ್​ಎಸ್​ಆರ್​ ಲೇಔಟ್​ನಲ್ಲಿ ಇರುವ ಮಾನ್ವಿ ಕನ್ವೆನ್ಷನ್ ಹಾಲ್​ನಲ್ಲಿ ನಿಖಿಲ್​ ಪತ್ನಿ ರೇವತಿಗೆ ಸೀಮಂತ ಕಾರ್ಯಕ್ರಮ ಮಾಡಲಾಗುತ್ತಿದೆ. ಇಂದು (ಸೆ.13) ಈ ಕಾರ್ಯ ನಡೆಯುತ್ತಿದ್ದು, ಕೇವಲ ಕುಟುಂಬದವರು ಮತ್ತು ಆಪ್ತರಿಗೆ ಮಾತ್ರ ಆಹ್ವಾನ ನೀಡಲಾಗಿದೆ. ಕೊವಿಡ್​ ನಿಯಮಾವಳಿ ಹಿನ್ನೆಲೆಯಲ್ಲಿ ಹೆಚ್ಚಿನವರನ್ನು ಆಹ್ವಾನಿಸಲು ಸಾಧ್ಯವಾಗಿಲ್ಲ. ಕುಮಾರಸ್ವಾಮಿ ಕುಟುಂಬದ ಆಪ್ತರು ಈ ಸೀಮಂತ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ.

2020ರ ಏಪ್ರಿಲ್​ನಲ್ಲಿ ರೇವತಿ ಜೊತೆ ನಿಖಿಲ್​ ಕುಮಾರಸ್ವಾಮಿ ಸಪ್ತಪದಿ ತುಳಿದಿದ್ದರು. ಲಾಕ್​ಡೌನ್​ ನಿಯಮಗಳ ಅನುಸಾರ ಈ ಹೈಪ್ರೊಫೈಲ್​ ಕುಟುಂಬದಲ್ಲಿ ವಿವಾಹ ಸಮಾರಂಭ ನೆರವೇರಿತ್ತು. ಬಿಡದಿ ಬಳಿ ಇರುವ ಫಾರ್ಮ್​ಹೌಸ್​ನಲ್ಲಿ ರೇವತಿ ಮತ್ತು ನಿಖಿಲ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ರೇವತಿ ಪ್ರೆಗ್ನೆಂಟ್​ ಎಂಬ ಸುದ್ದಿ ಇತ್ತೀಚಿನ ಕೆಲವು ತಿಂಗಳುಗಳಿಂದ ಕೇಳಿಬರುತ್ತಿತ್ತು. ಈ ವರ್ಷ ಜೂನ್​ನಲ್ಲಿ ಆ ಬಗ್ಗೆ ಸ್ವತಃ ನಿಖಿಲ್​ ಪ್ರತಿಕ್ರಿಯೆ ನೀಡಿದ್ದರು. ‘ಕೇಳಿಬರುತ್ತಿರುವ ಸುದ್ದಿ ನಿಜ. ನಾವು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದೇವೆ. ಶೀಘ್ರದಲ್ಲಿ ನಮ್ಮ ಕುಟುಂಬಕ್ಕೆ ಹೊಸ ಅತಿಥಿ ಬರಲಿದ್ದಾರೆ’ ಎಂದು ನಿಖಿಲ್​ ಹೇಳಿದ್ದರು.

ಸಿನಿಮಾ ಮತ್ತು ರಾಜಕೀಯ ಎರಡರಲ್ಲೂ ಬ್ಯುಸಿ ಆಗಿರುವ ನಿಖಿಲ್​ ಅವರು ಕುಟುಂಬದ ಕಡೆಗೂ ಹೆಚ್ಚು ಗಮನ ನೀಡುತ್ತಾರೆ. ಪತ್ನಿ ಜೊತೆ ಇರುವ ಫೋಟೋಗಳನ್ನು ಅವರು ಆಗಾಗ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾ ಇರುತ್ತಾರೆ. ಇತ್ತೀಚೆಗೆ ಅವರ ಮನೆಯಲ್ಲಿ ಗಣೇಶ ಚತುರ್ಥಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಆ ಸಂದರ್ಭದ ಫೋಟೋವನ್ನು ಹಂಚಿಕೊಂಡ ನಿಖಿಲ್​, ತಮ್ಮ ಅಭಿಮಾನಿಗಳಿಗೆ ವಿಶ್​ ಮಾಡಿದ್ದರು.

ಮೊದಲ ಮಗುವಿನ ನಿರೀಕ್ಷೆಯಲ್ಲಿ ಇರುವ ನಿಖಿಲ್​ ಮತ್ತು ರೇವತಿ ದಂಪತಿಗೆ ಎಲ್ಲರಿಂದ ಶುಭ ಹಾರೈಕೆಗಳು ಕೇಳಿಬರುತ್ತಿವೆ. ಸಿನಿಮಾ ವಿಚಾರಕ್ಕೆ ಬರುವುದಾದರೆ ನಿಖಿಲ್​ ಸದ್ಯ ‘ರೈಡರ್​’ ಚಿತ್ರದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ.

ಇದನ್ನೂ ಓದಿ:

ನಿಖಿಲ್​ ಕುಮಾರಸ್ವಾಮಿ ಬೆನ್ನಲ್ಲೇ ರೈಡರ್​ ಚಿತ್ರತಂಡಕ್ಕೂ ಕೊರೊನಾ

Nikhil Kumaraswamy: ಕನ್ನಡ ಸರಿಯಾಗಿ ಬರಲ್ವಾ; ತಪ್ಪು ಪದ ಬಳಸಿ ಟ್ರೋಲ್​ ಆದ ನಿಖಿಲ್​ ಕುಮಾರಸ್ವಾಮಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?