AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಲ್ಲಿ ಫ್ರೆಶರ್ಸ್ ಡೇ ‘ಆರಂಭ್ 2026’ ಸಂಭ್ರಮ

‘ಸ್ಪಾರ್ಕ್’ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿರುವ ನಿರಂಜನ್ ಸುಧೀಂದ್ರ ಹಾಗೂ ರಚನಾ ಇಂದರ್ ಅವರು ಬೆಂಗಳೂರಿನ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದ ‘ಆರಂಭ್ 2026’ ಸಮಾರಂಭದಲ್ಲಿ ಭಾಗಿಯಾದರು. ವಿದ್ಯಾರ್ಥಿಗಳೊಂದಿಗೆ ಅವರು ಬೆರೆತರು. ‘ಸ್ಪಾರ್ಕ್’ ಸಿನಿಮಾದ ಹಾಡಿಗೆ ಅವರು ಹೆಜ್ಜೆ ಹಾಕುವ ಮೂಲಕ ವಾತಾವರಣದ ರಂಗು ಹೆಚ್ಚಿಸಿದರು.

ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಲ್ಲಿ ಫ್ರೆಶರ್ಸ್ ಡೇ ‘ಆರಂಭ್ 2026’ ಸಂಭ್ರಮ
Niranjan Sudhindra, Rachana Inder
ಮದನ್​ ಕುಮಾರ್​
|

Updated on:Aug 31, 2026 | 5:11 PM

Share

ಬೆಂಗಳೂರಿನ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದ (Presidency University) ಹೊಸ ವಿದ್ಯಾರ್ಥಿಗಳಿಗೆ ಸಂಭ್ರಮಿಸಲು ಮತ್ತೊಂದು ಕಾರಣ ಸಿಕ್ಕಿತು. ತಮ್ಮ ಮುಂಬರುವ ಚಿತ್ರ ‘ಸ್ಪಾರ್ಕ್’ ಬಿಡುಗಡೆಗೆ ಮುನ್ನ, ಕನ್ನಡದ ಕಲಾವಿದರಾದ ನಿರಂಜನ್ ಸುಧೀಂದ್ರ (Niranjan Sudhindra) ಮತ್ತು ರಚನಾ ಇಂದರ್ ಅವರು ವಿಶ್ವವಿದ್ಯಾಲಯದ ‘ಫ್ರೆಶರ್ಸ್ ಡೇ’ ಕಾರ್ಯಕ್ರಮವಾದ ‘ಆರಂಭ್ 2026’ (Aarambh 2026) ವೇದಿಕೆಯಲ್ಲಿ ಪಾಲ್ಗೊಂಡರು. ಚಿತ್ರದ ‘ಶಕ ಲಕ’ ಹಾಡಿಗೆ ವಿದ್ಯಾರ್ಥಿಗಳೊಂದಿಗೆ ನಟ-ನಟಿ ಹೆಜ್ಜೆ ಹಾಕಿದಾಗ ಕ್ಯಾಂಪಸ್‌ನಲ್ಲಿ ಉತ್ಸಾಹದ ವಾತಾವರಣ ಮನೆಮಾಡಿತ್ತು.

ನಿರಂಜನ್ ಸುಧೀಂದ್ರ ಮತ್ತು ರಚನಾ ಇಂದರ್ ಅವರು ವಿದ್ಯಾರ್ಥಿಗಳೊಂದಿಗೆ ಸಾಕಷ್ಟು ಸಮಯ ಕಳೆದರು. ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದರು ಮತ್ತು ತಮ್ಮ ಕಾಲೇಜು ದಿನಗಳ ನೆನಪುಗಳನ್ನು ಹಂಚಿಕೊಂಡರು. ನಟ-ನಟಿಯರು ದೈಹಿಕ ಕ್ಷಮತೆ, ಸೌಂದರ್ಯ ಮತ್ತು ಆರೋಗ್ಯಕರ ಜೀವನಶೈಲಿಯನ್ನು ಕಾಪಾಡಿಕೊಳ್ಳುವ ಕುರಿತು ಮಾತನಾಡಿದರು.

ಅದೇ ಸಮಯದಲ್ಲಿ ವಿದ್ಯಾರ್ಥಿಗಳು ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳುವ ಮತ್ತು ಸಂವಾದ ನಡೆಸುವ ಅವಕಾಶವನ್ನು ಸದುಪಯೋಗಪಡಿಸಿಕೊಂಡರು. ವಿದ್ಯಾರ್ಥಿಗಳೊಂದಿಗಿನ ಅವರ ಅನೌಪಚಾರಿಕ ಸಂವಾದವು ಆ ದಿನದ ಉತ್ಸಾಹವನ್ನು ಇನ್ನಷ್ಟು ಹೆಚ್ಚಿಸಿತು. ಕನ್ನಡ ಚಿತ್ರರಂಗದ ಜನಪ್ರಿಯ ಯುವ ತಾರೆ ರಚನಾ ಇಂದರ್ ವಿದ್ಯಾರ್ಥಿಗಳಿಂದ ಉತ್ತಮ ಪ್ರತಿಕ್ರಿಯೆ ಪಡೆದರು. ನಟ ಉಪೇಂದ್ರ ಅವರ ಸಂಬಂಧಿ, ನಿರಂಜನ್ ಸುಧೀಂದ್ರ ಅವರು ತಮ್ಮ ಲವಲವಿಕೆಯ ವೇದಿಕೆಯ ಉಪಸ್ಥಿತಿಯಿಂದ ಎಲ್ಲರ ಗಮನ ಸೆಳೆದರು.

ಇಲ್ಲಿದೆ ಡ್ಯಾನ್ಸ್ ವಿಡಿಯೋ:

‘ಆರಂಭ್ 2026’ ಕಾರ್ಯಕ್ರಮದಲ್ಲಿ ಹೊಸ ಮತ್ತು ಹಿರಿಯ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡರು. ಸಮೂಹ ನೃತ್ಯ, ಲೈವ್ ಬ್ಯಾಂಡ್ ಪ್ರದರ್ಶನಗಳು, ಏಕವ್ಯಕ್ತಿ ಗಾಯನ ಮತ್ತು ರ್ಯಾಂಪ್ ವಾಕ್ ಸೇರಿದಂತೆ ವಿವಿಧ ಚಟುವಟಿಕೆಗಳು ಕಾರ್ಯಕ್ರಮದ ಮೆರುಗು ಹೆಚ್ಚಿಸಿದವು.

ಇದನ್ನೂ ಓದಿ: ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಲ್ಲಿ ರಶ್ಮಿಕಾ ಮಂದಣ್ಣ ಮತ್ತು ಕೃತಿ ಸನನ್

ಡೀನ್ ಡಾ. ಅನು ಸುಖ್‌ದೇವ್ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿ ವ್ಯವಹಾರಗಳ ವಿಭಾಗವು (Department of Student Affairs) ಈ ಕಾರ್ಯಕ್ರಮವನ್ನು ಆಯೋಜಿಸಿತ್ತು. ದಿನವಿಡೀ ನಡೆದ ಈ ಸಂಭ್ರಮಾಚರಣೆಯು ಹೊಸ ವಿದ್ಯಾರ್ಥಿಗಳಿಗೆ ತಮ್ಮ ಸಹಪಾಠಿಗಳೊಂದಿಗೆ ಬೆರೆಯಲು ಮತ್ತು ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದ ಚೈತನ್ಯಶೀಲ ಕ್ಯಾಂಪಸ್ ಜೀವನವನ್ನು ಅರಿಯಲು ಉತ್ತಮ ಅವಕಾಶವನ್ನು ಒದಗಿಸಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 4:54 pm, Mon, 31 August 26

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ
ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ: ಇಡಿಯಿಂದ ವರದಿ ಸಲ್ಲಿಕೆ
ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ: ಇಡಿಯಿಂದ ವರದಿ ಸಲ್ಲಿಕೆ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ