‘ನನ್ನ ವೈಯಕ್ತಿಕ ಜೀವನದಲ್ಲಿ ಭಾವನಾತ್ಮಕವಾಗಿ ಕೆಲವು ಏರುಪೇರುಗಳಾಗಿವೆ’; ನಿಶ್ವಿಕಾ ನಾಯ್ಡು
‘ಈ ವರ್ಷ ನನ್ನ ವೈಯಕ್ತಿಕ ಜೀವನದಲ್ಲಿ ಭಾವನಾತ್ಮಕವಾಗಿ ಕೆಲವು ಏರುಪೇರುಗಳು ಆಗಿವೆ. ನನ್ನ ಪ್ರೀತಿಯ ಲಿಯೋ ಇತ್ತೀಚೆಗೆ ನಮ್ಮನ್ನೆಲ್ಲ ಬಿಟ್ಟು ಹೋದ. ಈ ಆಕಸ್ಮಿಕ ಘಟನೆ ನನ್ನ ಜೀವನಕ್ಕೆ ಮತ್ತು ಮನಸಿಗೆ ತುಂಬಾ ಆಳವಾದ ನೋವನ್ನುಂಟು ಮಾಡಿದೆ’ ಎಂದಿದ್ದಾರೆ ಅವರು.

ಕುಟುಂಬದಲ್ಲಿ ಯಾವುದಾದರೂ ದುರ್ಘಟನೆ ನಡೆದಿದ್ದರೆ ಅಥವಾ ವೈಯಕ್ತಿಕವಾಗಿ ನೋವಾಗಿದ್ದರೆ ಸೆಲೆಬ್ರಿಟಿಗಳು ಬರ್ತ್ಡೇ ಆಚರಿಸಿಕೊಳ್ಳುವುದಿಲ್ಲ. ಈಗ ನಿಶ್ವಿಕಾ ನಾಯ್ಡು (Nishvika Naidu) ಕೂಡ ಇದೇ ರೀತಿಯ ನಿರ್ಧಾರ ಮಾಡಿದ್ದಾರೆ. ಮೇ 19ರಂದು ಅವರ ಬರ್ತ್ಡೇ. ಅವರು 28ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಆದರೆ, ಈ ಸಂದರ್ಭದಲ್ಲಿ ಬರ್ತ್ಡೇ ಆಚರಿಸಿಕೊಳ್ಳದಿರಲು ಅವರು ನಿರ್ಧರಿಸಿದ್ದಾರೆ. ಇದಕ್ಕೆ ಅವರು ಕಾರಣ ಕೂಡ ನೀಡಿದ್ದಾರೆ.
‘ಈ ವರ್ಷ ನನ್ನ ವೈಯಕ್ತಿಕ ಜೀವನದಲ್ಲಿ ಭಾವನಾತ್ಮಕವಾಗಿ ಕೆಲವು ಏರುಪೇರುಗಳು ಆಗಿವೆ. ನನ್ನ ಪ್ರೀತಿಯ ಲಿಯೋ ಇತ್ತೀಚೆಗೆ ನಮ್ಮನ್ನೆಲ್ಲ ಬಿಟ್ಟು ಹೋದ. ಈ ಆಕಸ್ಮಿಕ ಘಟನೆ ನನ್ನ ಜೀವನಕ್ಕೆ ಮತ್ತು ಮನಸಿಗೆ ತುಂಬಾ ಆಳವಾದ ನೋವನ್ನುಂಟು ಮಾಡಿದೆ. ಅದರಿಂದ ಈ ವರ್ಷ ನನ್ನ ಜನ್ಮದಿನವನ್ನು ಆಚರಿಸದಿರಲು ನಾನು ನಿರ್ಧರಿಸಿದ್ದೇನೆ’ ಎಂದು ಬರೆದುಕೊಂಡಿದ್ದಾರೆ ಅವರು.
ಇದನ್ನೂ ಓದಿ: ಭಟ್ಟರು ಹೊಡೆದ ‘ಹಲಗಿ’ ಸೂಪರ್ ಹಿಟ್; ಲಕ್ಷ ಲಕ್ಷ ವೀಕ್ಷಣೆ ಪಡೆದ ನಿಶ್ವಿಕಾ ನಾಯ್ಡು ಡ್ಯಾನ್ಸ್
‘ಲಿಯೋ ನಮ್ಮ ಕುಟುಂಬದಲ್ಲಿ ಒಬ್ಬನ್ನಾಗಿದ್ದ ಮತ್ತು ಅವನ ಅನುಪಸ್ಥಿತಿಯು ನಮ್ಮ ಕುಟುಂಬದ ಮನಸ್ಸುಗಳ ಮೇಲೆ ಬಹಳ ದೊಡ್ಡ ಗಾಯ ಮಾಡಿದೆ. ದಯವಿಟ್ಟು ನನ್ನ ಭಾವನೆಗಳಿಗೆ ಬೆಲೆ ಕೊಟ್ಟು ಈ ಬಾರಿ ನನ್ನ ಹುಟ್ಟುಹಬ್ಬದ ದಿನದಂದು ಯಾರೂ ಕೂಡ ನನ್ನನ್ನು ಭೇಟಿ ಮಾಡಲು ಬರಬೇಡಿ ಅಥವಾ ಉಡುಗೊರೆಗಳನ್ನು ತರಬೇಡಿ ಎಂದು ಈ ಮೂಲಕ ಕೇಳಿಕೊಳ್ಳುತ್ತೇನೆ’ ಎಂದು ನಿಶ್ವಿಕಾ ಕೋರಿಕೊಂಡಿದ್ದಾರೆ.
View this post on Instagram
‘ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕೆ ನಾನು ಎಂದಿಗೂ ಚಿರಋಣಿಯಾಗಿ ಇರುತ್ತೆನೆ. ಈ ಕಷ್ಟದ ಸಮಯದಲ್ಲಿ, ನಾನು ಒಂಟಿಯಾಗಿ ಇರಲು ಬಯಸಿದ್ದು ನನ್ನ ಈ ನಿರ್ಧಾರಕ್ಕೆ ನೀವೆಲ್ಲರು ಒಪ್ಪಿ, ನೀವು ಇರುವ ಜಾಗದಿಂದಲೇ ನನ್ನ ಹುಟ್ಟುಹಬ್ಬಕ್ಕೆ ನನ್ನನ್ನು ಹರಸಿ ಆಶಿರ್ವದಿಸಿ’ ಎಂದು ಕೋರಿದ್ದಾರೆ ನಿಶ್ವಿಕಾ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.