ಯಾರಿದು ನಿತಿನ್ ರಾಜು? ಪ್ರಣಿತಾ ಪ್ರೇಮ ಕಥೆ ಆರಂಭವಾಗಿದ್ದು ಹೇಗೆ? ಇಲ್ಲಿದೆ ಉತ್ತರ

Pranitha Subash - Nitin Raju: ಕೆಲ ಆಂಗ್ಲ ಮಾಧ್ಯಮಗಳ ವರದಿ ಪ್ರಕಾರ, ಕೆಲವು ವರ್ಷಗಳ ಹಿಂದೆ ಮ್ಯೂಚುವಲ್​ ಫ್ರೆಂಡ್​​​​ ಮೂಲಕ ನಿತೀನ್​ ರಾಜು ಅವರ ಗೆಳೆತನ ಪ್ರಣಿತಾಗೆ ಆಗಿತ್ತು. ಆ ನಂತರ ಇಬ್ಬರ ನಡುವೆ ಒಳ್ಳೆಯ ಫ್ರೆಂಡ್​ಶಿಪ್​ ಬೆಳೆದಿದೆ.

ಯಾರಿದು ನಿತಿನ್ ರಾಜು? ಪ್ರಣಿತಾ ಪ್ರೇಮ ಕಥೆ ಆರಂಭವಾಗಿದ್ದು ಹೇಗೆ? ಇಲ್ಲಿದೆ ಉತ್ತರ
ಉದ್ಯಮಿ ನಿತಿನ್​ ರಾಜು ಜೊತೆ ಪ್ರಣಿತಾ ಸುಭಾಷ್​ ಮದುವೆ
Follow us
ರಾಜೇಶ್ ದುಗ್ಗುಮನೆ
| Updated By: Digi Tech Desk

Updated on:May 31, 2021 | 8:02 PM

ಕನ್ನಡದ ನಟಿ ಪ್ರಣಿತಾ ಸುಭಾಷ್​ ಮದುವೆ ವಿಚಾರ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ. ಅವರು ಮದುವೆ ಆದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ. ಪ್ರಣಿತಾ ಉದ್ಯಮಿ ನಿತಿನ್​ ರಾಜು ಅವರನ್ನು ವರಿಸಿದ್ದಾರೆ. ಅಷ್ಟಕ್ಕೂ ಯಾರು ಈ ನಿತಿನ್​ ರಾಜು? ಇವರ ಪ್ರೇಮ ಶುರುವಾಗಿದ್ದು ಹೇಗೆ ಎಂಬುದಕ್ಕೆ ಇಲ್ಲಿದೆ ಉತ್ತರ.

2010ರಲ್ಲಿ ಪೊರ್ಕಿ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಪ್ರಣಿತಾ ಪದಾರ್ಪಣೆ ಮಾಡಿದರು. ಮೊದಲ ಸಿನಿಮಾದಲ್ಲಿಯೇ ಅವರಿಗೆ ದರ್ಶನ್​ ಜೊತೆ ನಟಿಸುವ ಅವಕಾಶ ಸಿಕ್ಕಿತ್ತು. ಬಳಿಕ ತಮಿಳು ಮತ್ತು ತೆಲುಗಿನಲ್ಲಿಯೂ ಅವರು ಗುರುತಿಸಿಕೊಂಡರು. ನಟನೆ ಮಾತ್ರವಲ್ಲದೇ ಅನೇಕ ಸಮಾಜಮುಖಿ ಕೆಲಸಗಳಲ್ಲೂ ಪ್ರಣಿತಾ ತೊಡಗಿಕೊಂಡಿದ್ದಾರೆ.

ಕೆಲ ಆಂಗ್ಲ ಮಾಧ್ಯಮಗಳ ವರದಿ ಪ್ರಕಾರ, ಕೆಲವು ವರ್ಷಗಳ ಹಿಂದೆ ಮ್ಯೂಚುವಲ್​ ಫ್ರೆಂಡ್​​​​ ಮೂಲಕ ನಿತೀನ್​ ರಾಜು ಅವರ ಗೆಳೆತನ ಪ್ರಣಿತಾಗೆ ಆಗಿತ್ತು. ಆ ನಂತರ ಇಬ್ಬರ ನಡುವೆ ಒಳ್ಳೆಯ ಫ್ರೆಂಡ್​ಶಿಪ್​ ಬೆಳೆದಿದೆ. ಆ ನಂತರ ಗೆಳೆತನ ಪ್ರೀತಿಯಾಗಿದೆ. ಈಗ ಇಬ್ಬರೂ ಪ್ರೀತಿಗೆ ಹೊಸ ಅರ್ಥ ನೀಡಿದ್ದಾರೆ. ಕನಕಪುರ ರಸ್ತೆಯಲ್ಲಿ ಇರುವ ರೆಸಾರ್ಟ್​ವೊಂದರಲ್ಲಿ ಪ್ರಣಿತಾ ಮದುವೆ ನಡೆದಿದೆ. ನಿತಿನ್​ ರಾಜು​ ಜತೆ ಅವರು ವೈವಾಹಿಕ ಜೀವನ ಆರಂಭಿಸಿದ್ದಾರೆ.

ಹಾಗಾದರೆ, ನಿತಿನ್​ ರಾಜು ಯಾರು? ಆ ಪ್ರಶ್ನೆಗೂ ಉತ್ತರವಿದೆ. ನಿತಿನ್​ ಅವರು ಹಾಸ್ಪಿಟಲ್​ ಮ್ಯಾನೇಜ್​ಮೆಂಟ್​ ಕೋರ್ಸ್​ ಮುಗಿಸಿದ್ದಾರಂತೆ. ಇವರು 2018ರಿಂದ ಬ್ಲ್ಯೂ ಹಾರಿಜೋನ್​ ಹೋಟೆಲ್ಸ್​ ಪ್ರೈವೇಟ್​ ಲಿಮಿಟೆಡ್​ನ ನಿರ್ದೇಶಕರಾಗಿದ್ದಾರೆ. ಇದಲ್ಲದೆ, ಕೆಲ ಕಂಪನಿಯ ನಿರ್ದೇಶಕ ಜವಾಬ್ದಾರಿ ಇವರ ಮೇಲಿದೆ. 2011ರಲ್ಲಿ ವೆಂಚರ್ ಒಂದನ್ನು ಆರಂಭಿಸಿದ್ದು, ಇದು ಉತ್ತಮ ಏಳ್ಗೆ ಕಾಣುತ್ತಿದೆ.

2010ರಲ್ಲಿ ದರ್ಶನ್ ಜೊತೆ ‘ಪೊರ್ಕಿ’ ಸಿನಿಮಾದಲ್ಲಿ ನಟಿಸುವ ಮೂಲಕ ಬಣ್ಣದ ಲೋಕಕ್ಕೆ ಪ್ರಣಿತಾ ಕಾಲಿಟ್ಟರು. ಚೊಚ್ಚಲ ಚಿತ್ರದಲ್ಲಿಯೇ ದರ್ಶನ್ಗೆ ನಾಯಕಿಯಾಗುವ ಅವಕಾಶ ಸಿಕ್ಕಿದ್ದರಿಂದ ಅವರಿಗೆ ದೊಡ್ಡಮಟ್ಟದ ಜನಪ್ರಿಯತೆ ಸಿಕ್ಕಿತ್ತು. ನಂತರ ತಮಿಳು ಮತ್ತು ತೆಲುಗಿನಲ್ಲಿಯೂ ಅವರು ಗುರುತಿಸಿಕೊಂಡರು. ಭೀಮ ತೀರದಲ್ಲಿ, ಬ್ರಹ್ಮ, ಮಾಸ್ ಲೀಡರ್ ಮುಂತಾದ ಸಿನಿಮಾಗಳಲ್ಲಿ ಸ್ಟಾರ್ ನಟರ ಜೊತೆ ತೆರೆ ಹಂಚಿಕೊಂಡರು. ನಟನೆ ಮಾತ್ರವಲ್ಲದೇ ಅನೇಕ ಸಮಾಜಮುಖಿ ಕೆಲಸಗಳಲ್ಲೂ ಪ್ರಣಿತಾ ತೊಡಗಿಕೊಂಡಿದ್ದಾರೆ. ಆ ಮೂಲಕ ಅವರು ತಮ್ಮದೇ ಆದ ಅಭಿಮಾನಿ ಬಳಗವನ್ನು ಸೃಷ್ಟಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ‘ನಮ್ಮನ್ನು ಕ್ಷಮಿಸಿ’; ಮದುವೆ ಬೆನ್ನಲ್ಲೇ ಅಭಿಮಾನಿಗಳಿಗೆ ಬಹಿರಂಗ ಪತ್ರ ಬರೆದ ಪ್ರಣಿತಾ ಮತ್ತು ನಿತಿನ್

Published On - 5:51 pm, Mon, 31 May 21

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ