Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿವೇದಿತಾ ಶಿವರಾಜ್‌ಕುಮಾರ್ ನಿರ್ಮಾಣದ ‘ಫೈರ್ ಫ್ಲೈ’ ಸಿನಿಮಾದ ಮೊದಲ‌ ಹಂತದ ಚಿತ್ರೀಕರಣ ಮುಕ್ತಾಯ

Niveditha Shiva Rajkumar: ಶಿವರಾಜ್ ಕುಮಾರ್ ಪುತ್ರಿ ನಿವೇದಿತಾ ಶಿವರಾಜ್ ಕುಮಾರ್ ಸಿನಿಮಾ ನಿರ್ಮಾಣ ಮಾಡುತ್ತಿದ್ದು, ಸಿನಿಮಾ ಈಗ ಯಾವ ಹಂತದಲ್ಲಿದೆ?

ನಿವೇದಿತಾ ಶಿವರಾಜ್‌ಕುಮಾರ್ ನಿರ್ಮಾಣದ 'ಫೈರ್ ಫ್ಲೈ' ಸಿನಿಮಾದ ಮೊದಲ‌ ಹಂತದ ಚಿತ್ರೀಕರಣ ಮುಕ್ತಾಯ
ನಿವೇದಿತಾ ಶಿವರಾಜ್ ಕುಮಾರ್
Follow us
ಮಂಜುನಾಥ ಸಿ.
|

Updated on: Sep 24, 2023 | 6:58 PM

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ (Shiva Rajkumar) ಮಗಳು ನಿವೇದಿತಾ ಶಿವರಾಜ್‌ಕುಮಾರ್ ಚಿತ್ರರಂಗಕ್ಕೆ ಕಾಲಿರಿಸಿದ್ದಾರೆ. ನಟಿಯಾಗಿ ಅಲ್ಲ ಬದಲಿಗೆ ನಿರ್ಮಾಪಕಿಯಾಗಿ. ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲೆಂದು ಶ್ರೀ ಮುತ್ತು ಸಿನಿ ಸರ್ವೀಸ್‌ ಆರಂಭಿಸಿ ಸಿನಿಮಾಗಳನ್ನು ಮಾಡಲು ಮುಂದಾಗಿದ್ದಾರೆ. ನಿವೇದಿತಾರ ಸಂಸ್ಥೆಯ ಮೊದಲ ಸಿನಿಮಾ ಆಗಿ ‘ಫೈರ್ ಫ್ಲೈ’ ತೆರೆಗೆ ಬರಲಿದೆ. ಸಿನಿಮಾದ ಪೋಸ್ಟರ್ ಈಗಾಗಲೇ ಬಿಡುಗಡೆ ಆಗಿದೆ. ಈ ಸಿನಿಮಾದ ಮೊದಲ ಹಂತದ ಚಿತ್ರೀಕರಣ ಪೂರ್ಣಗೊಂಡಿದೆ. ಮೈಸೂರು, ಬೆಂಗಳೂರು ಇನ್ನೂ ಕೆಲವು ಕಡೆಗಳಲ್ಲಿ ಚಿತ್ರೀಕರಣ ಮಾಡಲಾಗಿದೆ. ಅಕ್ಟೋಬರ್ ತಿಂಗಳ ಮೂರನೇ ವಾರದಿಂದ ಎರಡನೇ ಹಂತದ ಶೂಟಿಂಗ್ ಶುರು ಆಗಲಿದೆ.

‘ಫೈರ್ ಫ್ಲೈ’ ಸಿನಿಮಾವನ್ನು ಯುವ ನಟ ವಂಶಿ ನಿರ್ದೇಶನ ಮಾಡುತ್ತಿದ್ದಾರೆ. ನಟ ವಂಶಿ, ಪೂರ್ಣ ಪ್ರಮಾಣದ ನಾಯಕ ನಟನಾಗಿ ಕನ್ನಡ ಚಿತ್ರರಂಗಕ್ಕೆ ಇದೇ ಸಿನಿಮಾ ಮೂಲಕ ಪರಿಚಯ ಆಗುತ್ತಿದ್ದಾರೆ. ಅಭಿಲಾಷ್ ಕಲ್ಲಟ್ಟಿ ಈ ಸಿನಿಮಾದ ಸಿನಿಮಾಟೊಗ್ರಾಫರ್. ತಮ್ಮ ಮಧುರವಾದ ಮೆಲೋಡಿಗಳ ಮೂಲಕ ಹೆಸರು ಮಾಡಿರುವ ಚರಣ್ ರಾಜ್ ಈ ಚಿತ್ರಕ್ಕೆ ಹಿನ್ನೆಲೆ ಸಂಗೀತ ನೀಡುತ್ತಿದ್ದಾರೆ. ಜನಪ್ರಿಯ ಸಂಭಾಷಣೆಕಾರ ರಘು ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ.

ಇದನ್ನೂ ಓದಿ:ಬಾಲಿವುಡ್​ನಲ್ಲಿ ಹವಾ ಎಬ್ಬಿಸಲು ಶಿವರಾಜ್ ಕುಮಾರ್ ರೆಡಿ: ಏನಿದು ಹೊಸ ಸುದ್ದಿ?

ಚಿತ್ರದ ನಾಯಕ-ನಿರ್ದೇಶಕ ವಂಶಿ ಈ ಹಿಂದೆ ಪಿ.ಆರ್‌.ಕೆ ಸಂಸ್ಥೆಯ ‘ಮಾಯಾಬಜಾರ್’ ಸಿನಿಮಾಕ್ಕೆ ಸಹಾಯಕ ನಿರ್ದೇಶಕರಾಗಿ ಕೆಲಸ ನಿರ್ವಹಿಸಿದ್ದರು. ಗುರು ದೇಶಪಾಂಡೆ ಅವರ ‘ಪೆಂಟಗನ್’ ಸಿನಿಮಾದಲ್ಲೂ ಪ್ರಮುಖ ಪಾತ್ರ ನಿರ್ವಹಿಸಿದ್ದರು. ನಾಯಕ-ನಿರ್ದೇಶಕ ವಂಶಿಗೆ ಇಲ್ಲಿ ಜಯ್ ರಾಮ್ ಸಹ ನಿರ್ದೇಶಕರಾಗಿಯೇ ಕೆಲಸ ಮಾಡುತ್ತಿದ್ದಾರೆ. ಸಿನಿಮಾ ನಿರ್ಮಾಣ ಸಂಸ್ಥೆ ಶ್ರೀ ಮುತ್ತು ಸಿನಿ ಸರ್ವಿಸ್ ಸಂಸ್ಥೆ ಈ ಮೂಲಕ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ಕೂಡ ಕೊಡುತ್ತಿದೆ.

ನಿವೇದಿತಾ ಶಿವರಾಜ್ ಕುಮಾರ್ ಅವರು ಸಿನಿಮಾಗಳಲ್ಲಿ ಆಸಕ್ತಿ ಇರಿಸಿಕೊಂಡಿದ್ದು ಸಿನಿಮಾ ಜೊತೆಗೆ ಹಿಂದೆ ಕೆಲವು ವೆಬ್ ಸರಣಿಗಳನ್ನು ನಿರ್ಮಾಣ ಮಾಡಿದ್ದಾರೆ. ‘ಹನಿಮೂನ್’, ‘ಬೈ ಮಿಸ್ಟೆಕ್’, ‘ಹೇಟ್ ಯು ರೋಮಿಯೋ’ ವೆಬ್ ಸರಣಿಗಳನ್ನು ನಿರ್ಮಾಣ ಮಾಡಿದ್ದಾರೆ. ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಸಹ ನಿರ್ಮಾಪಕಿ ಆಗಿದ್ದು ತಮ್ಮದೇ ಒಡೆತನದ ನಿರ್ಮಾಣ ಸಂಸ್ಥೆಯನ್ನು ಹೊಂದಿದ್ದಾರೆ. ಇತ್ತೀಚೆಗೆ ಸೂಪರ್ ಹಿಟ್ ಆದ ‘ವೇದ’ ಸಿನಿಮಾವನ್ನು ಗೀತಾ ಶಿವರಾಜ್ ಕುಮಾರ್ ಅವರೇ ನಿರ್ಮಾಣ ಮಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!