Fire Fly: ನಿವೇದಿತಾ ಶಿವರಾಜ್​ಕುಮಾರ್​ ನಿರ್ಮಾಣದ ಮೊದಲ ಚಿತ್ರಕ್ಕೆ ‘ಫೈರ್​ ಫ್ಲೈ’ ಶೀರ್ಷಿಕೆ; ಸರಳವಾಗಿ ನಡೆಯಿತು ಮುಹೂರ್ತ

Niveditha Shivarajkumar: ಶಿವರಾಜ್​ಕುಮಾರ್​ ಅವರು ಮೊದಲಿಂದಲೂ ಹೊಸ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ. ಅವರ ರೀತಿಯೇ ಪುತ್ರಿ ನಿವೇದಿತಾ ಕೂಡ ಹೊಸಬರಿಗೆ ವೇದಿಕೆ ಒದಗಿಸಿಕೊಡುತ್ತಿದ್ದಾರೆ.

Fire Fly: ನಿವೇದಿತಾ ಶಿವರಾಜ್​ಕುಮಾರ್​ ನಿರ್ಮಾಣದ ಮೊದಲ ಚಿತ್ರಕ್ಕೆ ‘ಫೈರ್​ ಫ್ಲೈ’ ಶೀರ್ಷಿಕೆ; ಸರಳವಾಗಿ ನಡೆಯಿತು ಮುಹೂರ್ತ
ನಿವೇದಿತಾ, ಗೀತಾ, ಶಿವರಾಜ್​ಕುಮಾರ್​
Follow us
ಮದನ್​ ಕುಮಾರ್​
|

Updated on: Jun 15, 2023 | 7:47 PM

‘ಸೆಂಚುರಿ ಸ್ಟಾರ್​’ ಶಿವರಾಜ್​ಕುಮಾರ್ ಅವರ ಪುತ್ರಿ ನಿವೇದಿತಾ ಶಿವರಾಜ್​ಕುಮಾರ್ (Niveditha Shivarajkumar) ಅವರು ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿರುವುದು ಇತ್ತೀಚೆಗಷ್ಟೇ ಸುದ್ದಿ ಆಗಿತ್ತು. ‘ಶ್ರೀ ಮುತ್ತು ಸಿನಿ ಸರ್ವೀಸಸ್’ ಬ್ಯಾನರ್​ ಮೂಲಕ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಬೇಕು ಎಂಬ ಉದ್ದೇಶದಿಂದ ಆರಂಭಿಸಿರುವ ಈ ನಿರ್ಮಾಣ ಸಂಸ್ಥೆಯ ಮೊದಲ ಸಿನಿಮಾ ಇಂದು (ಜೂನ್​ 15) ಸೆಟ್ಟೇರಿದೆ. ಬೆಂಗಳೂರಿನ ಕಾಡು ಮಲ್ಲೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಸರಳವಾಗಿ ಮುಹೂರ್ತ ನೆರವೇರಿಸಲಾಗಿದೆ. ಈ ಸಂದರ್ಭದಲ್ಲಿ ಶಿವರಾಜ್​ಕುಮಾರ್ (Shivarajkumar) ಹಾಗೂ ಗೀತಾ ಶಿವರಾಜ್​ಕುಮಾರ್ ಅವರು ಹಾಜರಿದ್ದು, ಮಗಳ ಚೊಚ್ಚಲ ನಿರ್ಮಾಣದ ಚಿತ್ರಕ್ಕೆ ಶುಭ ಹಾರೈಸಿದ್ದಾರೆ. ಈ ಸಿನಿಮಾದ ಶೀರ್ಷಿಕೆ ಏನು ಎಂಬುದು ಕೂಡ ಇಂದು ಅನೌನ್ಸ್​ ಆಗಿದೆ. ಈ ಚಿತ್ರಕ್ಕೆ ‘ಫೈರ್ ಫ್ಲೈ’ (Fire Fly) ಎಂದು ಟೈಟಲ್​ ಇಡಲಾಗಿದೆ.

‘ನವಿರಾಗಿ ಶುರುವಾದ ಕಥೆಗೆ ಹೆಸರೊಂದು ಮೂಡಿದೆ. ಹೆಸರ ಜೊತೆಗೆ ಬರುವೆವು’ ಎಂದು ಈ ಚಿತ್ರತಂಡವು ಟೈಟಲ್​ ಅನಾವರಣದ ಬಗ್ಗೆ ಮುನ್ಸೂಚನೆ ನೀಡಿತ್ತು. ಆ ಮೂಲಕ ಸಿನಿಪ್ರಿಯರಲ್ಲಿ ಕೌತುಕ ಮೂಡಿಸಲಾಗಿತ್ತು. ಅದರಂತೆ ಗುರುವಾರ (ಜೂನ್​ 15) ಶೀರ್ಷಿಕೆ ರಿವೀಲ್​ ಮಾಡಲಾಗಿದೆ. ನಿವೇದಿತಾ ಶಿವರಾಜ್​ಕುಮಾರ್​ ಅವರ ಮೊದಲ ನಿರ್ಮಾಣದ ಸಿನಿಮಾಗೆ ‘ಫೈರ್ ಫ್ಲೈ’ ಎಂಬ ಕ್ಯಾಚಿ ಟೈಟಲ್ ಇಡಲಾಗಿದ್ದು, ಪೋಸ್ಟರ್​ ಕೂಡ ರಿಲೀಸ್​ ಮಾಡಲಾಗಿದೆ.

ಇದನ್ನೂ ಓದಿ: Shivarajkumar: ಯುವಕನ ಸಾಹಸಕ್ಕೆ ಫಿದಾ ಆದ ನಟ ಶಿವರಾಜ್​ಕುಮಾರ್

‘ಫೈರ್ ಫ್ಲೈ’ ಚಿತ್ರದಲ್ಲಿ ವಂಶಿ ಅವರು ಹೀರೋ ಆಗಿ ನಟಿಸುತ್ತಿದ್ದಾರೆ. ನಿರ್ದೇಶನದ ಜವಾಬ್ದಾರಿ ಕೂಡ ಅವರದ್ದೇ ಎಂಬುದು ವಿಶೇಷ. ಪುನೀತ್​ ರಾಜ್​ಕುಮಾರ್​ ಅವರ ‘ಪಿಆರ್​ಕೆ ಪ್ರೊಡಕ್ಷನ್ಸ್’ ನಿರ್ಮಾಣದ ‘ಮಯಾಬಜಾರ್’ ಸಿನಿಮಾದಲ್ಲಿ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ್ದ ಅನುಭವ ವಂಶಿ ಅವರಿಗೆ ಇದೆ. ಕೆಲವು ವಾರಗಳ ಹಿಂದೆ ಬಿಡುಗಡೆ ಆದ ‘ಪೆಂಟಗನ್’ ಚಿತ್ರದಲ್ಲೂ ಪ್ರಮುಖ ಪಾತ್ರವೊಂದರಲ್ಲಿ ಅವರು ನಟಿಸಿದ್ದರು. ಈಗ ನಿವೇದಿತಾ ನಿರ್ಮಾಣ ಮಾಡುತ್ತಿರುವ ಮೊದಲ ಚಿತ್ರಕ್ಕೆ ನಿರ್ದೇಶನ ಮಾಡುವ ಮೂಲಕ ವಂಶಿ ಅವರು ಸ್ವತಂತ್ರ ನಿರ್ದೇಶಕರಾಗಿ ಮತ್ತು ಪೂರ್ಣಪ್ರಮಾಣದ ಹೀರೋ ಆಗಿ ಚಿತ್ರರಂಗದಲ್ಲಿ ಹೊಸ ಅಧ್ಯಾಯ ಶುರು ಮಾಡಿದ್ದಾರೆ.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಶಿವರಾಜ್​ಕುಮಾರ್​; ಸಾಥ್​ ನೀಡಿದ ಮಧು, ಗೀತಾ

ಶಿವರಾಜ್​ಕುಮಾರ್​ ಅವರು ಯಾವಾಗಲೂ ಹೊಸ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ. ಅವರ ರೀತಿಯೇ ನಿವೇದಿತಾ ಶಿವರಾಜ್​ಕುಮಾರ್ ಕೂಡ ಹೊಸಬರಿಗೆ ವೇದಿಕೆ ಒದಗಿಸಿಕೊಡುತ್ತಿದ್ದಾರೆ. ‘ಶ್ರೀ ಮುತ್ತು ಸಿನಿ ಸರ್ವೀಸಸ್​’ ಸಂಸ್ಥೆಯು ಅವರ ಕನಸಿನ ಕೂಸು. ಯುವ ಪ್ರತಿಭೆಗಳಿಗೆ ಹಾಗೂ ಹೊಸ ಆಲೋಚನೆಗಳಿಗೆ ಅವಕಾಶ ನೀಡುವ ಉದ್ದೇಶದಿಂದ ಈ ಸಂಸ್ಥೆ ಕಾರ್ಯಪ್ರವೃತ್ತವಾಗಿದೆ. ‘ಫೈರ್ ಫ್ಲೈ’ ಚಿತ್ರಕ್ಕೆ ಜಯ್ ರಾಮ್ ಸಹ-ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದಾರೆ. ಅಭಿಲಾಷ್ ಕಲ್ಲಟ್ಟಿ ಛಾಯಾಗ್ರಹಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಚರಣ್ ರಾಜ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ರಘು ನಿಡುವಳ್ಳಿ ಅವರು ಸಂಭಾಷಣೆಯ ಬರೆಯುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.