ವಿಕ್ಟೋರಿಯಾ ವೈದ್ಯರಿಂದ ಜೈಲಿನಲ್ಲೇ ದರ್ಶನ್‌ಗೆ ಚಿಕಿತ್ಸೆ, ಆಸ್ಪತ್ರೆ ಶಿಫ್ಟ್ ಸದ್ಯಕ್ಕಿಲ್ಲ
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಅವರನ್ನು ಸದ್ಯಕ್ಕೆ ಆಸ್ಪತ್ರೆಗೆ ಶಿಫ್ಟ್ ಮಾಡುವ ನಿರ್ಧಾರ ಇಲ್ಲ. ತೀವ್ರ ಬೆನ್ನು ನೋವಿನ ಸಮಸ್ಯೆಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲೇ ವಿಕ್ಟೋರಿಯಾ ಫಿಸಿಯೋಥೆರಪಿ ವೈದ್ಯರಿಂದ ಚಿಕಿತ್ಸೆ ನೀಡಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. ಸೋಮವಾರ ಎಸ್‌ಪಿಪಿ ಆಕ್ಷೇಪಣೆ ಸಲ್ಲಿಸಿದ ಬಳಿಕ ಮುಂದಿನ ಕಾನೂನು ತೀರ್ಮಾನ ಹೊರಬೀಳುವ ಸಾಧ್ಯತೆ ಇದೆ.

ಮುಖ್ಯಾಂಶಗಳು
- ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಇಲ್ಲ
- ಜೈಲಿನಲ್ಲೇ ದರ್ಶನ್‌ಗೆ ಫಿಸಿಯೋಥೆರಪಿ ಚಿಕಿತ್ಸೆ
- ಜೈಲಿಗೆ ಬರಲಿದ್ದಾರೆ ವಿಕ್ಟೋರಿಯಾ ವೈದ್ಯರು
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿರುವ ನಟ ದರ್ಶನ್ ಅವರನ್ನು ಸದ್ಯಕ್ಕೆ ಆಸ್ಪತ್ರೆಗೆ ಶಿಫ್ಟ್ ಮಾಡುತ್ತಿಲ್ಲ. ಬೆನ್ನು ನೋವಿನ ಸಮಸ್ಯೆ ಸೇರಿದಂತೆ ಸದ್ಯದ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಿ ಜೈಲಿನಲ್ಲೇ ಚಿಕಿತ್ಸೆ ನೀಡಲು ಅಧಿಕಾರಿಗಳು ಮುಂದಾಗಿದ್ದಾರೆ. ಅಗತ್ಯವಿದ್ದರೆ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡುವಂತೆ 59ನೇ ಸಿಸಿಹೆಚ್ ಕೋರ್ಟ್ ನಿರ್ದೇಶನ ನೀಡಿತ್ತು. ಆದರೆ ಹಿರಿಯ ಜೈಲಾಧಿಕಾರಿಗಳು ಈ ನಿರ್ಧಾರವನ್ನು ಜೈಲಿನ ಮುಖ್ಯ ವೈದ್ಯರ ವಿವೇಚನೆಗೆ ಬಿಟ್ಟಿದ್ದಾರೆ.
ವಿಕ್ಟೋರಿಯಾ ವೈದ್ಯರೇ ಜೈಲಿಗೆ ಭೇಟಿ
ನಟ ದರ್ಶನ್ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸುವ ಬದಲು ಅಲ್ಲಿನ ಫಿಸಿಯೋಥೆರಪಿ ವೈದ್ಯರನ್ನೇ ಜೈಲಿಗೆ ಕರೆಸಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ. ಜೈಲಿನ ಮುಖ್ಯ ವೈದ್ಯರು ಫಿಸಿಯೋಥೆರಪಿ ವೈದ್ಯರನ್ನು ಕರೆಸಿಕೊಳ್ಳುತ್ತಿದ್ದು, ಅಧಿಕಾರಿಗಳು ಈಗಾಗಲೇ ಅವರನ್ನು ಸಂಪರ್ಕಿಸಿದ್ದಾರೆ. ಇಂದೇ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರು ಜೈಲಿಗೆ ಭೇಟಿ ನೀಡಿ ತಪಾಸಣೆ ನಡೆಸುವ ಸಾಧ್ಯತೆ ಇದೆ.
ಜೈಲಿನಲ್ಲೇ ಫಿಸಿಯೋಥೆರಪಿ ಚಿಕಿತ್ಸೆ
ಅಗತ್ಯ ಯಂತ್ರೋಪಕರಣಗಳ ಸಹಾಯದಿಂದ ವಿಕ್ಟೋರಿಯಾ ಆಸ್ಪತ್ರೆ ವೈದ್ಯರಿಂದಲೇ ದರ್ಶನ್ ಅವರಿಗೆ ಜೈಲಿನಲ್ಲೇ ಚಿಕಿತ್ಸೆ ಕೊಡಿಸಲು ಸಿದ್ಧತೆ ನಡೆದಿದೆ. ದರ್ಶನ್ ಅವರ ಬೆನ್ನು ನೋವಿನ ಸಮಸ್ಯೆ ಹಾಗೂ ಪ್ರಸ್ತುತ ಆರೋಗ್ಯ ಸ್ಥಿತಿಯನ್ನು ವೈದ್ಯರು ಕೂಲಂಕಷವಾಗಿ ಪರಿಶೀಲಿಸಲಿದ್ದಾರೆ. ತಪಾಸಣೆಯ ಬಳಿಕ ಅವರಿಗೆ ಅಗತ್ಯವಿರುವ ಚಿಕಿತ್ಸೆಯನ್ನು ವೈದ್ಯರು ನೀಡಲಿದ್ದಾರೆ.
ಇದನ್ನೂ ಓದಿ: ದರ್ಶನ್‌ಗೆ ಬೆನ್ನುನೋವು: ಜೈಲಿನ ಹೊರಗೆ ಚಿಕಿತ್ಸೆ ಬಗ್ಗೆ ಮಹತ್ವದ ಆದೇಶ
ಸೋಮವಾರ ಎಸ್‌ಪಿಪಿ ಆಕ್ಷೇಪಣೆ ಬಳಿಕ ನಿರ್ಧಾರ
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ವಿಶೇಷ ಸಾರ್ವಜನಿ ಅಭಿಯೋಜಕರು ಆಕ್ಷೇಪಣೆ ಸಲ್ಲಿಸಿದ ಬಳಿಕ ಮುಂದಿನ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ. ಸದ್ಯದ ಮಟ್ಟಿಗೆ ದರ್ಶನ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಯಾವುದೇ ಕ್ರಮಕ್ಕೆ ಜೈಲಾಧಿಕಾರಿಗಳು ಮುಂದಾಗಿಲ್ಲ. ಪರಪ್ಪನ ಅಗ್ರಹಾರ ಜೈಲಿನಲ್ಲೇ ಎಲ್ಲಾ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಪ್ರಕ್ರಿಯೆಗಳು ನಡೆಯಲಿವೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On - 11:58 am, Sat, 28 November 26




