‘ಸಂಸ್ಕೃತಿ ಬಗ್ಗೆ ಮಾತಾಡುವಷ್ಟು ಅರ್ಹತೆ ನನಗೆ ಇಲ್ಲ, ಹಾಗೇ ಕೇಳುವವರಿಗೆ ಇದೆಯೋ ಗೊತ್ತಿಲ್ಲ’-ರಿಷಬ್ ಶೆಟ್ಟಿ

ರಿಷಬ್ ಶೆಟ್ಟಿ ಅವರು ಪರೋಕ್ಷವಾಗಿ ಚೇತನ್​ಗೆ ತಿರುಗೇಟು ನೀಡಿದ್ದಾರೆ. ‘ಈ ವಿಚಾರದಲ್ಲಿ ನಾನು ಯಾರಿಗೂ ಉತ್ತರ ಕೊಡಬೇಕಾಗಿಲ್ಲ’ ಎಂಬ ಮಾತನ್ನು ಹೇಳಿದ್ದಾರೆ ರಿಷಬ್.

‘ಸಂಸ್ಕೃತಿ ಬಗ್ಗೆ ಮಾತಾಡುವಷ್ಟು ಅರ್ಹತೆ ನನಗೆ ಇಲ್ಲ, ಹಾಗೇ ಕೇಳುವವರಿಗೆ ಇದೆಯೋ  ಗೊತ್ತಿಲ್ಲ’-ರಿಷಬ್ ಶೆಟ್ಟಿ
ರಿಷಬ್-ಆ ದಿನಗಳು ಚೇತನ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Oct 19, 2022 | 11:55 PM

‘ಭೂತಕೋಲವು ಹಿಂದೂ ಸಂಸ್ಕೃತಿಗೆ ಸೇರುತ್ತದೆ ಎಂದು ನಿರ್ದೇಶಕ ರಿಷಬ್ ಶೆಟ್ಟಿಯವರು ಹೇಳಿದ್ದಾರೆ. ಇದು ನಿಜವಲ್ಲ’ ಎಂದು ‘ಆ ದಿನಗಳು’ ಚೇತನ್ (Chetan) ಹೇಳಿದ್ದರು. ಈ ವಿಚಾರದ ಬಗ್ಗೆ ಪರ-ವಿರೋಧ ಚರ್ಚೆ ನಡೆಯುತ್ತಿದೆ. ಹೀಗಿರುವಾಗಲೇ ರಿಷಬ್ ಶೆಟ್ಟಿ (Rishab Shetty)  ಅವರು ಪರೋಕ್ಷವಾಗಿ ಚೇತನ್​ಗೆ ತಿರುಗೇಟು ನೀಡಿದ್ದಾರೆ. ‘ಈ ವಿಚಾರದಲ್ಲಿ ನಾನು ಯಾರಿಗೂ ಉತ್ತರ ಕೊಡಬೇಕಾಗಿಲ್ಲ’ ಎಂಬ ಮಾತನ್ನು ಹೇಳಿದ್ದಾರೆ ರಿಷಬ್.

‘ನಾನು ಈ ಸಿನಿಮಾ ಮಾಡಬೇಕಾದ್ರೆ ಮೂಲ ನಿವಾಸಿಗಳು ನನ್ನ ಜೊತೆಯಲ್ಲಿದ್ದರು. ಚಿಕ್ಕಂದಿನಿಂದಲೇ ನಾವು ದೈವ ನಂಬಿದ್ದೇವೆ. ಇಂಥದ್ದೊಂದು ಕತೆ ಹೇಳೋಕೆ ಹೋಗ್ತಿದ್ದೀನಿ ಎಂದಾಗ ಇಲ್ಲಿನ ಮೂಲ ಜನರಿಗೆ ನೋವಾಗಬಾರದು ಎಂದು ನಾನು ಬಯಸಿದ್ದೆ. ಎಲ್ಲೂ ದೈವ ದೇವಾದಿಗಳಿಗೆ, ಇದನ್ನು ಆರಾಧಿಸುವ ಜನರಿಗೆ ನೋವಾಗಬಾರದು, ಎಲ್ಲೂ ಕೂಡ ತಪ್ಪಾಗಬಾರದು ಎಂಬುದು ನನ್ನ ಉದ್ದೇಶ ಆಗಿತ್ತು’ ಎಂದಿದ್ದಾರೆ ರಿಷಬ್.

‘ಇದಕ್ಕೆ ಬೇಕಾದ ಎಲ್ಲಾ ಮುಂಜಾಗ್ರತೆಗಳನ್ನು ನಾನು ತೆಗೆದುಕೊಂಡಿದ್ದೆ. ನನ್ನ ಜೊತೆಯಲ್ಲೇ ಅವರನ್ನು ಇರಿಸಿಕೊಂಡು ಪ್ರತಿಯೊಂದು ಶಾಟ್ ತೆಗೆದಿದ್ದೇವೆ. ದೈವಾರಾಧನೆಗೆ ಸಂಬಂಧಿಸಿದ ಪ್ರತಿ ದೃಶ್ಯಗಳನ್ನು ಅಲ್ಲಿನ ಜನರಿಗೆ ತೋರಿಸುತ್ತಿದ್ದೆವು. ಈ ವಿಚಾರದಲ್ಲಿ ನಾನು ಯಾರಿಗೂ ಉತ್ತರ ಕೊಡಬೇಕಾಗಿಲ್ಲ. ಆ ಬಗ್ಗೆ ನೋ ಕಾಮೆಂಟ್ಸ್. ಅದಕ್ಕೆ ಸಂಬಂಧ ಪಟ್ಟವರು ಮಾತನಾಡುತ್ತಾರೆ. ಅದಕ್ಕೆಲ್ಲಾ ನಾವೇಕೆ ತಲೆ ಕೆಡಿಸಿಕೊಳ್ಳಬೇಕು’ ಎಂದಿದ್ದಾರೆ ರಿಷಬ್.

ಇದನ್ನೂ ಓದಿ
Image
Kantara: ‘ಕಾಂತಾರ’ ಚಿತ್ರದಿಂದ ಅಲ್ಲು ಅರ್ಜುನ್​ ತಂದೆಗೆ ಭಾರಿ ಲಾಭ; ಎಷ್ಟಕ್ಕೆ ನಡೆಯಿತು ತೆಲುಗು ವ್ಯವಹಾರ?
Image
Rishab Shetty: ಒಂದೇ ದಿನಕ್ಕೆ 15 ಕೋಟಿ ರೂಪಾಯಿ ಬಾಚಿದ ‘ಕಾಂತಾರ’; ಪರಭಾಷೆಯಲ್ಲಿ ಭರ್ಜರಿ ಕಮಾಯಿ
Image
Anushka Shetty: ‘ಕಾಂತಾರ’ ನೋಡಿ ಅನುಷ್ಕಾ ಶೆಟ್ಟಿ ಫಿದಾ; ರಿಷಬ್​ ಬಗ್ಗೆ ಸ್ಪೆಷಲ್​ ಮಾತುಗಳನ್ನು ಹೇಳಿದ ಸ್ಟಾರ್​ ನಟಿ
Image
Rishab Shetty: ರಿಷಬ್​ ಶೆಟ್ಟಿ ಕಾಲಿಗೆ ಬಿದ್ದ ಖ್ಯಾತ ಯೂಟ್ಯೂಬರ್​; ಹಿಂದಿ ಪ್ರೇಕ್ಷಕರಲ್ಲಿ ಹೆಚ್ಚಿತು ‘ಕಾಂತಾರ’ ಸೆನ್ಸೇಷನ್​

ಇದನ್ನೂ ಓದಿ: Kantara: ‘ಭೂತಕೋಲ ಹಿಂದೂ ಸಂಸ್ಕೃತಿಗೆ ಸೇರುತ್ತೆ ಅಂತ ರಿಷಬ್ ಶೆಟ್ಟಿ ಹೇಳಿದ್ದು ನಿಜವಲ್ಲ’: ನಟ ಚೇತನ್​ ತಕರಾರು

‘ನಾನು ಸಿನಿಮಾ ಮಾಡುತ್ತೇನೆ. ಇದನ್ನು ನೋಡಿದವರಿಗೆ ತಪ್ಪು-ಸರಿ ಅಂತ ಹೇಳುವ ಅಧಿಕಾರ ಇದೆ. ಸದ್ಯ ‘ಕಾಂತಾರ’ ಸಿನಿಮಾ ನನ್ನದಲ್ಲ. ಅದಕ್ಕೆ ನಾನು ಏನು ಮಾಡುವಂತಿಲ್ಲ. ‘ಕಾಂತಾರ’ ಸಿನಿಮಾಗಾಗಿ ನಾನೇನು ಕೆಲಸ ಮಾಡಿದ್ದೇನೆ ಅದಕ್ಕೆ ಫಲ ಸಿಕ್ಕಿದೆ. ಈ ಚಿತ್ರಕ್ಕಾಗಿ ರಕ್ತ ಸುರಿಸಿದ್ದೇನೆ. ಎಲ್ಲವನ್ನೂ ವೀಕ್ಷಕರಿಗೆ ಬಿಟ್ಟಿದ್ದೇನೆ. ಸಂಸ್ಕೃತಿ ಬಗ್ಗೆ ಮಾತನಾಡುವಷ್ಟು ಅರ್ಹತೆ ನನಗೂ ಇಲ್ಲ. ಹಾಗೇ ಕೇಳುವವರಿಗೆ ಇದೆಯೋ ಇಲ್ಲವೋ ಗೊತ್ತಿಲ್ಲ. ಆ ದೈವಾರಾಧನೆ ಮಾಡುವವರಿಗೆ ಅಷ್ಟೆ ಇದರ ಬಗ್ಗೆ ಮಾತಾಡುವ ಅರ್ಹತೆ ಇದೆ’ ಎಂದು ರಿಷಬ್ ಹೇಳಿದ್ದಾರೆ.

Published On - 9:53 pm, Wed, 19 October 22