ಸರ್ಪ್ರೈಸಿಂಗ್, ಶಾಕಿಂಗ್ ಘಟನೆಗಳು ಇನ್ನೂ ನನ್ನ ಬಳಿ ಇವೆ; ಇಂದ್ರಜಿತ್ ಲಂಕೇಶ್

TV9 Web
| Updated By: ರಾಜೇಶ್ ದುಗ್ಗುಮನೆ

Updated on: Jul 15, 2021 | 3:51 PM

ನಿರ್ಮಾಪಕ ಸಂದೇಶ್​ ಅವರ ‘ಸಂದೇಶ್​ ದಿ ಪ್ರಿನ್ಸ್​’ ಹೋಟೆಲ್​ನಲ್ಲಿರುವ ಸಿಬ್ಬಂದಿ ಮೇಲೆ ದರ್ಶನ್​ ಹಲ್ಲೆ ಮಾಡಿದ್ದಾರೆ ಎಂದು ನಿರ್ದೇಶಕ ಇಂದ್ರಜಿತ್​ ಲಂಕೇಶ್​ ಆರೋಪ ಮಾಡಿದ್ದರು. ಇದಾದ ನಾಲ್ಕು ಗಂಟೆ ನಂತರದಲ್ಲಿ ಮತ್ತೆ ಅವರು ಸುದ್ದಿಗೋಷ್ಠಿ ಕರೆದು ಮಾತನಾಡಿದ್ದಾರೆ.

ನಿರ್ಮಾಪಕ ಸಂದೇಶ್​ ಅವರ ‘ಸಂದೇಶ್​ ದಿ ಪ್ರಿನ್ಸ್​’ ಹೋಟೆಲ್​ನಲ್ಲಿರುವ ಸಿಬ್ಬಂದಿ ಮೇಲೆ ದರ್ಶನ್​ ಹಲ್ಲೆ ಮಾಡಿದ್ದಾರೆ ಎಂದು ನಿರ್ದೇಶಕ ಇಂದ್ರಜಿತ್​ ಲಂಕೇಶ್​ ಆರೋಪ ಮಾಡಿದ್ದರು. ಇದಾದ ನಾಲ್ಕು ಗಂಟೆ ನಂತರದಲ್ಲಿ ಮತ್ತೆ ಅವರು ಸುದ್ದಿಗೋಷ್ಠಿ ಕರೆದು ಮಾತನಾಡಿದ್ದು, ‘ನನ್ನ ಹೇಳಿಕೆಗೆ ನಾನು ಬದ್ಧವಾಗಿದ್ದೇನೆ, ಸಾರ್ವಜನಿಕರಿಗೆ ಅನ್ಯಾಯವಾಗಬಾರದು ಅನ್ನೋದಷ್ಟೇ ನನ್ನ ಉದ್ದೇಶ’ ಎಂದಿದ್ದಾರೆ.

‘ನನಗೆ ಯಾರ ಮೇಲೂ ದ್ವೇಷ ಇಲ್ಲ. ಸಾರ್ವಜನಿಕರಿಗೆ ಅನ್ಯಾಯ ಆಗಬಾರದು ಎನ್ನುವುದು ನನ್ನ ಉದ್ದೇಶ. ಇತ್ತೀಚೆಗೆ ಹಲವಾರು ಘಟನೆ ನಡೀತಾನೆ ಇದೆ. ಬಡವರಿಗೆ ಅನ್ಯಾಯ ಆಗ್ತಿದೆ. ಈ ದೃಷ್ಟಿಯಿಂದ ನಾನು ಮುಂದೆ ಬಂದಿದೀನಿ. ತಪ್ಪಾದಾಗ ತಪ್ಪು ಎಂದಿದೀನಿ. ನನ್ನನ್ನು ಯಾರೂ ಎತ್ತಿ ಕಟ್ಟಿಲ್ಲ. ತಪ್ಪು ಮಾಡಿದ ಸೆಲೆಬ್ರಿಟಿಗಳು ತಪ್ಪಿಸಿಕೊಳ್ಳಬಾರದು’ ಎಂದಿದ್ದಾರೆ ಅವರು. ಅವರ ಸುದ್ದಿಗೋಷ್ಠಿ ವಿವರ ವಿಡಿಯೋದಲ್ಲಿದೆ.

ಇದನ್ನೂ ಓದಿ: ‘ತಪ್ಪು ಮಾಡಿದ ಸೆಲೆಬ್ರಿಟಿಗಳು ತಪ್ಪಿಸಿಕೊಳ್ಳಬಾರದು’; ದರ್ಶನ್​ ವಿರುದ್ಧ ಮತ್ತೆ ಹರಿಹಾಯ್ದ ಇಂದ್ರಜಿತ್​ ಲಂಕೇಶ್