AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸರ್ಸೆ ಸರ್ಸೆ’ ಹಾಡು ತೆಗೆದರೂ ನಿಲ್ಲದ ವಿವಾದ; ನೋರಾ ಫತೇಹಿಗೆ ಇಂದು ಮಹತ್ವದ ದಿನ

ಕೆಡಿ ಚಿತ್ರದ 'ಸರ್ಸೆ ಸರ್ಸೆ' ಹಾಡಿನ ವಿವಾದದ ಕುರಿತು ನಟಿ ನೋರಾ ಫತೇಹಿ ರಾಷ್ಟ್ರೀಯ ಮಹಿಳಾ ಆಯೋಗದ ಮುಂದೆ ಇಂದು ಹಾಜರಾಗಲಿದ್ದಾರೆ. ಹಾಡಿನಲ್ಲಿ ಮಹಿಳೆಯರನ್ನು ಅಶ್ಲೀಲವಾಗಿ ಚಿತ್ರಿಸಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿಂದೆ ನಟ ಸಂಜಯ್ ದತ್ ಕ್ಷಮೆಯಾಚಿಸಿ, 50 ಬುಡಕಟ್ಟು ಹೆಣ್ಣುಮಕ್ಕಳ ಶಿಕ್ಷಣದ ಜವಾಬ್ದಾರಿ ವಹಿಸಿಕೊಂಡಿದ್ದರು. ಮಹಿಳೆಯರ ಘನತೆಗೆ ಧಕ್ಕೆ ತರುವಂತಹ ಯಾವುದೇ ವಿಷಯವನ್ನು ಸಹಿಸುವುದಿಲ್ಲ ಎಂದು ಆಯೋಗ ಕಠಿಣ ನಿಲುವು ತಳೆದಿದೆ.

‘ಸರ್ಸೆ ಸರ್ಸೆ’ ಹಾಡು ತೆಗೆದರೂ ನಿಲ್ಲದ ವಿವಾದ; ನೋರಾ ಫತೇಹಿಗೆ ಇಂದು ಮಹತ್ವದ ದಿನ
ಸರ್ಸೆ ಸರ್ಸೆ ಹಾಡು
ರಾಜೇಶ್ ದುಗ್ಗುಮನೆ
|

Updated on:May 07, 2026 | 7:17 AM

Share

‘ಕೆಡಿ: ದಿ ಡೆವಿಲ್’ ಚಿತ್ರದ ‘ಸರ್ಸೆ ಸರ್ಸೆ’ ಹಾಡು ಸಾಕಷ್ಟು ವಿವಾದ ಸೃಷ್ಟಿ ಮಾಡಿತ್ತು. ಈ ಹಾಡಿನಲ್ಲಿ ಮಹಿಳೆಯರನ್ನು ಅಶ್ಲೀಲವಾಗಿ ಚಿತ್ರಿಸಲಾಗಿದೆ ಎಂದು ಆರೋಪಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ನೋರಾ ಫತೇಹಿ ಅವರು ಇಂದು (ಮೇ 7) ರಾಷ್ಟ್ರೀಯ ಮಹಿಳಾ ಆಯೋಗದ (NCW) ಮುಂದೆ ಹಾಜರಾಗಲಿದ್ದಾರೆ. ಈ ಮೊದಲು ಪ್ರಕರಣದ ಬಗ್ಗೆ ಮಾತನಾಡುವಾಗ ತಮಗೂ ಇದಕ್ಕೂ ಸಂಬಂಧ ಇಲ್ಲ ಎಂಬ ರೀತಿಯಲ್ಲಿ ಮಾತನಾಡಿದ್ದರು. ಈಗ ಆಯೋಗದ ಮುಂದೆ ಅವರು ಯಾವ ರೀತಿಯಲ್ಲಿ ಹೇಳಿಕೆ ಕೊಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

1.‘ಸರ್ಸೆ ಸರ್ಸೆ’ ಹಾಡಿನ ವಿವಾದ

2.ಮಹಿಳಾ ಆಯೋಗದ ಎದುರು ನೋರಾ

3.ವಿವಾದ ಸೃಷ್ಟಿಸಿದ್ದ ಕೆಡಿ ಸಿನಿಮಾ ವಿವಾದ

ಈ ಮೊದಲು ನೋರಾ ಫತೇಹಿ ಅವರಿಗೆ ನೋಟಿಸ್ ನೀಡಲಾಗಿತ್ತು. ಆದರೆ, ಆ ಸಂದರ್ಭದಲ್ಲಿ ಅವರು ವಿದೇಶದಲ್ಲಿದ್ದ ಕಾರಣ ವಿಚಾರಣೆಗೆ ಹಾಜರಾಗಲು ಸಾಧ್ಯವಾಗಿರಲಿಲ್ಲ. ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸಲು ಕಾಲಾವಕಾಶ ಕೋರಿದ್ದ ಅವರಿಗೆ ಆಯೋಗವು ಇಂದು ಬೆಳಿಗ್ಗೆ 11:30ಕ್ಕೆ ಸಮಯ ನಿಗದಿಪಡಿಸಿದೆ. ಈ ಹಾಡಿನ ನೃತ್ಯ ಸಂಯೋಜನೆ ಮತ್ತು ಚಿತ್ರೀಕರಣದಲ್ಲಿನ ತಮ್ಮ ಪಾತ್ರದ ಕುರಿತು ಅವರು ಆಯೋಗಕ್ಕೆ ವಿವರಣೆ ನೀಡಲಿದ್ದಾರೆ. ‘ಸರ್ಸೆ ಸರ್ಸೆ’ ಹಾಡು ಬಿಡುಗಡೆಯಾದ ಬೆನ್ನಲ್ಲೇ ಅದರಲ್ಲಿನ ದ್ವಂದ್ವಾರ್ಥದ ಸಾಹಿತ್ಯ ಮತ್ತು ಲೈಂಗಿಕ ಪ್ರಚೋದಕ ನೃತ್ಯದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಗಾಯಕ ಅರ್ಮಾನ್ ಮಲಿಕ್ ಸೇರಿದಂತೆ ಅನೇಕ ಗಣ್ಯರು ಇದನ್ನು ‘ಕಲೆ ಮತ್ತು ಸಾಹಿತ್ಯದ ಅವನತಿ’ ಎಂದು ಕರೆದಿದ್ದರು. ಸಾರ್ವಜನಿಕ ಹಿತದೃಷ್ಟಿಯಿಂದ ಮಹಿಳಾ ಆಯೋಗವು ಈ ಪ್ರಕರಣವನ್ನು ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿತ್ತು.

ಸಂಜಯ್ ದತ್ ಅವರ ಕ್ಷಮೆಯಾಚನೆ

ಇದೇ ಪ್ರಕರಣದಲ್ಲಿ ಈಗಾಗಲೇ ಆಯೋಗದ ಮುಂದೆ ಹಾಜರಾಗಿದ್ದ ನಟ ಸಂಜಯ್ ದತ್, ತಮ್ಮ ನಡೆಯ ಬಗ್ಗೆ ವಿಷಾದ ವ್ಯಕ್ತಪಡಿಸಿ ಲಿಖಿತ ಕ್ಷಮಾಪಣೆ ಸಲ್ಲಿಸಿದ್ದಾರೆ. ಪ್ರಾಯಶ್ಚಿತ್ತವಾಗಿ 50 ಬುಡಕಟ್ಟು ಹೆಣ್ಣು ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ತಮ್ಮ ಸಿನಿಮಾಗಳಲ್ಲಿ ಮಹಿಳೆಯರ ಘನತೆಗೆ ಧಕ್ಕೆ ಬಾರದಂತೆ ಕಾನೂನಾತ್ಮಕ ಮುನ್ನೆಚ್ಚರಿಕೆ ವಹಿಸುವುದಾಗಿ ಅವರು ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ‘ಸರ್ಸೆ ಸೆರಗು’ ಹಾಡಿಗೆ ಅಶ್ಲೀಲ ನೃತ್ಯ, ನೋರಾ ಫತೇಹಿ ವಿರುದ್ಧ ಫತ್ವಾ

ಆಯೋಗದ ಕಠಿಣ ನಿಲುವು

ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ವಿಜಯಾ ರಹಾಟ್ಕರ್ ಅವರು ಈ ವಿಷಯದಲ್ಲಿ ಕಟ್ಟುನಿಟ್ಟಿನ ನಿಲುವು ತಳೆದಿದ್ದಾರೆ. ‘ಸೃಜನಶೀಲತೆಯ ಹೆಸರಿನಲ್ಲಿ ಮಹಿಳೆಯರ ಘನತೆಯನ್ನು ಹರಾಜು ಹಾಕಲು ಬಿಡುವುದಿಲ್ಲ’ ಎಂದು ಅವರು ಎಚ್ಚರಿಸಿದ್ದಾರೆ. ಈ ಹಾಡನ್ನು ಯೂಟ್ಯೂಬ್​​ನಿಂದ ತೆಗೆದಿದ್ದು ಮಾತ್ರವಲ್ಲ, ಸಿನಿಮಾದಲ್ಲೂ ಅದಕ್ಕೆ ಜಾಗ ನೀಡಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:07 am, Thu, 7 May 26

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?