AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸರ್ಸೆ..’ ಹಾಡಿನ ವಿವಾದ; ಆ ವ್ಯಕ್ತಿ ಮೇಲೆ ಗಂಭೀರ ಆರೋಪ ಮಾಡಿದ ನೋರಾ ಫತೇಹಿ

‘ಕೆಡಿ’ ಸಿನಿಮಾದ ‘ಸರ್ಕೆ ಚುನಾರ್’ ಹಾಡಿನ ವಿವಾದಕ್ಕೆ ಸಂಬಂಧಿಸಿದಂತೆ ನಟಿ ನೋರಾ ಫತೇಹಿ ಗಂಭೀರ ಆರೋಪ ಮಾಡಿದ್ದಾರೆ. ತಮ್ಮ ಹಾಡನ್ನು ಟಾರ್ಗೆಟ್ ಮಾಡಿ ಟ್ರೋಲ್ ಮಾಡಲು ಸೋಶಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ಗೆ ಹಣ ನೀಡಲಾಗಿತ್ತು. ಆ ಹಣ ಕೊಟ್ಟವರು ಯಾರು ಎನ್ನುವುದು ತಮಗೆ ತಿಳಿದಿದೆ ಎಂದು ನೋರಾ ಬಹಿರಂಗಪಡಿಸಿದ್ದಾರೆ.

‘ಸರ್ಸೆ..’ ಹಾಡಿನ ವಿವಾದ; ಆ ವ್ಯಕ್ತಿ ಮೇಲೆ ಗಂಭೀರ ಆರೋಪ ಮಾಡಿದ ನೋರಾ ಫತೇಹಿ
ಪ್ರೇಮ್-ನೋರಾ, ಸಂಜಯ್
ರಾಜೇಶ್ ಹೆಗಡೆ ದುಗ್ಗುಮನೆ
|

Updated on: Aug 26, 2026 | 2:53 PM

Share

ಮುಖ್ಯಾಂಶಗಳು

  • ಹಾಡಿನ ವಿರುದ್ಧ ಅಪಪ್ರಚಾರ ಮಾಡಲು ದುಡ್ಡು ಕೊಟ್ಟಿದ್ರು
  • ನಟಿ ನೋರಾ ಫತೇಹಿ ಬಾಂಬ್
  • ವಿವಾದಕ್ಕೆ ನೋರಾ ನೀಡಿದ ಸ್ಪಷ್ಟನೆ ಏನು? 

ಕನ್ನಡದ ‘ಕೆಡಿ: ದಿ ಡೆವಿಲ್’ ಸಿನಿಮಾದ ‘ಸರ್ಸೆ ನಿನ್ನ ಸೆರಗ ಸರ್ಸೆ’ (ಹಿಂದಿಯಲ್ಲಿ ಸರ್ಕೆ ಚುನಾರ್) ಹಾಡಿನ ವಿವಾದಕ್ಕೆ ಸಂಬಂಧಿಸಿದಂತೆ ನಟಿ ನೋರಾ ಫತೇಹಿ ಹೊಸ ಬಾಂಬ್ ಸಿಡಿಸಿದ್ದಾರೆ. ತಮ್ಮ ಹಾಡನ್ನು ಟೀಕಿಸಲು ಮತ್ತು ಟ್ರೋಲ್ ಮಾಡಲು ಸೋಶಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ಗೆ ಹಣ ನೀಡಲಾಗಿತ್ತು ಎಂದು ಅವರು ಆರೋಪಿಸಿದ್ದಾರೆ. ಯಾರು ಈ ಕೆಲಸ ಮಾಡಿಸಿದ್ದಾರೆ ಎನ್ನುವುದು ತಮಗೆ ತಿಳಿದಿದೆ ಎಂದು ಹೇಳಿರುವ ನೋರಾ, ಯಾವುದೇ ಹೆಸರನ್ನು ಬಹಿರಂಗಪಡಿಸಿಲ್ಲ.

ಪಾಡ್‌ಕಾಸ್ಟ್‌ ಒಂದರಲ್ಲಿ ಮಾತನಾಡಿದ ನೋರಾ ಫತೇಹಿ ತಮ್ಮ ನೋವನ್ನು ಹಂಚಿಕೊಂಡಿದ್ದಾರೆ. ‘ಯಾರು ಹಣ ಕೊಟ್ಟರು ಮತ್ತು ಎಷ್ಟು ಕೊಟ್ಟರು ಎಂಬ ಸಂಪೂರ್ಣ ಮಾಹಿತಿ ತಮ್ಮ ಬಳಿ ಇದೆ ಎಂದಿದ್ದಾರೆ. ಗಾಯನದ ಸಾಲುಗಳು ಮತ್ತು ದೃಶ್ಯಗಳ ವಿಚಾರವಾಗಿ ಇಂಟರ್ನೆಟ್‌ನಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಇಡೀ ಹಾಡು ಬಿಡುಗಡೆಯಾಗುವ ಮುನ್ನವೇ ಕೇವಲ ಸಣ್ಣ ತುಣುಕುಗಳನ್ನು ಇಟ್ಟುಕೊಂಡು ಅಪಪ್ರಚಾರ ಮಾಡಲಾಯಿತು’ ಎಂದು ನೋರಾ ಬೇಸರ ವ್ಯಕ್ತಪಡಿಸಿದ್ದಾರೆ.

ಸಂಜಯ್ ದತ್ ಜೊತೆ ಅಭಿನಯಿಸುವ ಅವಕಾಶ ಸಿಕ್ಕಿದ್ದಕ್ಕೆ ತಾವು ಈ ಹಾಡಿಗೆ ಒಪ್ಪಿಕೊಂಡಿದ್ದಾಗಿ ನೋರಾ ಸ್ಪಷ್ಟಪಡಿಸಿದ್ದಾರೆ. ‘ಕನ್ನಡ ಸಾಲುಗಳು ತಮಗೆ ಅರ್ಥವಾಗಿರಲಿಲ್ಲ. ಹಿಂದಿಗೆ ಡಬ್ ಮಾಡುವಾಗ ತಮ್ಮಿಂದ ಯಾವುದೇ ಅನುಮತಿ ಪಡೆದಿರಲಿಲ್ಲ. ನನಗೆ ಕನ್ನಡ ಭಾಷೆ ತಿಳಿಯದ ಕಾರಣ ತಂಡ ಹೇಳಿದ್ದನ್ನಷ್ಟೇ ನಂಬಿದ್ದೇನೆ’ ಎಂದು ಅವರು ತಿಳಿಸಿದ್ದಾರೆ. ನಟಿಯ ಈ ಹೊಸ ಹೇಳಿಕೆ ಈಗ ಸಿನಿರಂಗದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಹಾಡನ್ನು ಬ್ಯಾನ್ ಮಾಡಲು ಪ್ಲ್ಯಾನ್ ಮಾಡಿದ್ದು ಯಾರು ಎನ್ನುವ ಪ್ರಶ್ನೆ ಮೂಡಿದೆ.

ಇದನ್ನೂ ಓದಿ: ಜಾಗತಿಕ ವೇದಿಕೆಯಲ್ಲಿ ನೋರಾ ಫತೇಹಿ ಅಬ್ಬರ; ಆಲಿಯಾ, ದೀಪಿಕಾರನ್ನು ಹಿಂದಿಕ್ಕಿದ ನಟಿ

ಈ ಹಾಡಿನ ವಿವಾದದಿಂದಾಗಿ ಆಲ್ ಇಂಡಿಯಾ ಸೈನ್ ವರ್ಕರ್ಸ್ ಅಸೋಸಿಯೇಷನ್ ಹಾಡನ್ನು ನಿಷೇಧಿಸುವಂತೆ ಒತ್ತಾಯಿಸಿತ್ತು. ಬಳಿಕ ಯೂಟ್ಯೂಬ್‌ನಿಂದ ಹಾಡನ್ನು ತೆಗೆದುಹಾಕಲಾಗಿತ್ತು. ರಾಷ್ಟ್ರೀಯ ಮಹಿಳಾ ಆಯೋಗದ ಮುಂದೆ ಮೇ 7 ರಂದು ನೋರಾ ವಿಚಾರಣೆಗೆ ಹಾಜರಾಗಿದ್ದರು. ಧ್ರುವ ಸರ್ಜಾ ಅಭಿನಯದ ಕೆಡಿ ಸಿನಿಮಾ ಏಪ್ರಿಲ್ 30ರಂದು ತೆರೆಕಂಡಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ಹೆಗಡೆ ದುಗ್ಗುಮನೆ
ರಾಜೇಶ್ ಹೆಗಡೆ ದುಗ್ಗುಮನೆ

ರಾಜೇಶ್ ಹೆಗಡೆ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ