AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಲೆಂಟಾಗಿ ಕೆಜಿಎಫ್​-2 ಚಿತ್ರ ತಂಡ ಸೇರಿಕೊಂಡ ಮತ್ತೋರ್ವ ಬಾಲಿವುಡ್​ ನಟಿ

ಕೆಜಿಎಫ್​ ಮೊದಲ ಚಾಪ್ಟರ್​ನಲ್ಲಿ ಕನ್ನಡದಲ್ಲಿ ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಹೆಜ್ಜೆ ಹಾಕಿದ್ದರು. ಬಾಲಿವುಡ್​ನಲ್ಲಿ ಮೌನಿ ರಾಯ್​ ಸೊಂಟ ಬಳುಕಿಸಿದ್ದರು.

ಸೈಲೆಂಟಾಗಿ ಕೆಜಿಎಫ್​-2 ಚಿತ್ರ ತಂಡ ಸೇರಿಕೊಂಡ ಮತ್ತೋರ್ವ ಬಾಲಿವುಡ್​ ನಟಿ
ನೂರಾ ಫತೇಹಿ-ಯಶ್
ರಾಜೇಶ್ ದುಗ್ಗುಮನೆ
|

Updated on: Apr 28, 2021 | 9:32 PM

Share

ಕೆಜಿಎಫ್​-2 ಸಿನಿಮಾ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಈಗಾಗಲೇ ಶೂಟಿಂಗ್​ ಪೂರ್ಣಗೊಳಿಸಿರುವ ಚಿತ್ರತಂಡ ಪೋಸ್ಟ್​ ಪ್ರೊಡಕ್ಷನ್​ ಕೆಲಸದಲ್ಲಿ ತೊಡಗಿಕೊಂಡಿದೆ.ಈ ಮಧ್ಯೆ ಚಿತ್ರತಂಡದಿಂದ ಹೊಸ ವಿಚಾರವೊಂದು ಹೊರ ಬಿದ್ದಿದೆ. ಕೆಜಿಎಫ್​-2 ಚಿತ್ರದಲ್ಲಿ ಬಾಲಿವುಡ್​ ನಟಿ ಹೆಜ್ಜೆ ಹಾಕಲಿದ್ದಾರಂತೆ! ಅಚ್ಚರಿ ಎಂದರೆ ಈಗಾಗಲೇ ಹಾಡಿನ ಶೂಟಿಂಗ್​ ಕೂಡ ಪೂರ್ಣಗೊಂಡಿದೆ.

ಕೆಜಿಎಫ್​ ಮೊದಲ ಚಾಪ್ಟರ್​ನಲ್ಲಿ ಕನ್ನಡದಲ್ಲಿ ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಹೆಜ್ಜೆ ಹಾಕಿದ್ದರು. ಬಾಲಿವುಡ್​ನಲ್ಲಿ ಮೌನಿ ರಾಯ್​ ಸೊಂಟ ಬಳುಕಿಸಿದ್ದರು. ಈ ವಿಶೇಷ ಹಾಡಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿತ್ತು. ಹೀಗಾಗಿ, ಚಾಪ್ಟರ್​ 2ನಲ್ಲೂ ಐಟಂ ಸಾಂಗ್ ಇಡೋ ಆಲೋಚನೆ ಚಿತ್ರತಂಡದ್ದು. ಇದಕ್ಕಾಗಿ, ಹಿಂದಿಯ ನೂರಾ ಫತೇಹಿ ಅವರನ್ನು ಕರೆಸಿದೆ ಚಿತ್ರತಂಡ.

ಫೆಬ್ರವರಿ ತಿಂಗಳಲ್ಲಿ ನೂರಾ ಹೈದರಾಬಾದ್​ಗೆ ಪ್ರಯಾಣ ಬೆಳೆಸಿದ್ದರು. ಈ ವೇಳೆ ಚಿತ್ರದ ವಿಶೇಷ ಹಾಡು ಶೂಟ್​ ಮಾಡಲಾಗಿದೆ ಎನ್ನಲಾಗುತ್ತಿದೆ. ಈ ಬಗ್ಗೆ ಚಿತ್ರತಂಡ ಯಾವುದೇ ಮಾಹಿತಿಯನ್ನು ಹೊರ ಬಿಟ್ಟು ಕೊಟ್ಟಿಲ್ಲ. ಸದ್ಯ, ಈ ಹಾಡು ಹೇಗಿರಲಿದೆ? ಐದೂ ಭಾಷೆಗಳಿಗೆ ಇದೇ ಹಾಡನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆಯೇ ಎನ್ನುವ ಪ್ರಶ್ನೆ ಅಭಿಮಾನಿಗಳನ್ನು ಕಾಡುತ್ತಿದೆ.

ನೂರಾ ಫತೇಹಿ ಈಗಾಗಲೇ ಸಾಕಷ್ಟು ಬಾಲಿವುಡ್​ ವಿಶೇಷ ಹಾಡುಗಳಿಗೆ ಹೆಜ್ಜೆ ಹಾಕಿದ್ದಾರೆ. ಅವರು ಸೊಂಟ ಬಳುಕಿಸಿದ್ದು ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ. ಅವರು ಈಗ ಕೆಜಿಎಫ್-2​ನಲ್ಲೂ ನಟಿಸುತ್ತಿದ್ದಾರೆ ಎನ್ನುವ ವಿಚಾರ ಸಾಕಷ್ಟು ಕುತೂಹಲ ಮೂಡಿಸಿದೆ.

ಕೊರೊನಾ ಅಬ್ಬರ ಹೀಗೆಯೇ ಮುಂದುವರಿದರೆ ಕೆಜಿಎಫ್​ 2 ರಿಲೀಸ್​ ದಿನಾಂಕ ಮುಂದೂಡಲ್ಪಡಲಿದೆ ಎನ್ನಲಾಗುತ್ತಿದೆ. ಯಶ್​ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡರೆ, ಶ್ರೀನಿಧಿ ಶೆಟ್ಟಿ ಚಿತ್ರದ ನಾಯಕಿ. ಈ ಸಿನಿಮಾದಲ್ಲಿ ಬಾಲಿವುಡ್​ ಸ್ಟಾರ್​ ನಟ ಸಂಜಯ್​ ದತ್​ ಮುಖ್ಯ ವಿಲನ್​ ಆಗಿ ನಟಿಸಿದ್ದಾರೆ. ಕೆಜಿಎಫ್​-2 ಬಾಕ್ಸ್​ ಆಫೀಸ್​ ಗಳಿಕೆಯಲ್ಲಿ ಹೊಸ ದಾಖಲೆ ಮಾಡುವ ಸಾಧ್ಯತೆ ಇದೆ.​​

ಇದನ್ನೂ ಓದಿ: KGF Release Date: ಕೆಜಿಎಫ್-2 ಬಿಡುಗಡೆಗೆ ಕೊರೊನಾ ಅಡ್ಡಗಾಲು; ರಿಲೀಸ್​ ದಿನಾಂಕ ಮುಂದೂಡೋದು ಖಚಿತ?

ಕೆಜಿಎಫ್​-2 ಹಿಂದಿ ಅವತರಣಿಕೆ​ಗೆ ಯಶ್​ ಡಬ್​ ಮಾಡ್ತಾರಾ?; ಇಲ್ಲಿದೆ ಉತ್ತರ

Follow Us
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ