AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕರ್ನಾಟಕ ಸಂಸ್ಕೃತಿ, ಜೀವನ ಪರಿಚಯಿಸುವ ‘ದೇಸಾಯಿ’

Desai: ಉತ್ತರ ಕರ್ನಾಟಕದ ಕತೆಗಳು ಸಿನಿಮಾಗಳಾಗುತ್ತಿಲ್ಲ ಎಂಬ ಚರ್ಚೆ ಇತ್ತೀಚೆಗಷ್ಟೆ ಎದ್ದಿತ್ತು, ಇದೀಗ ಉತ್ತರ ಕರ್ನಾಟಕದ ಕತೆ ಹೊತ್ತು ಬರುತ್ತಿದೆ ‘ದೇಸಾಯಿ’ ಸಿನಿಮಾ.

ಉತ್ತರ ಕರ್ನಾಟಕ ಸಂಸ್ಕೃತಿ, ಜೀವನ ಪರಿಚಯಿಸುವ ‘ದೇಸಾಯಿ’
ಮಂಜುನಾಥ ಸಿ.
|

Updated on: Dec 24, 2023 | 10:02 PM

Share

ಕಾಂತಾರ’ (Kantara) ಸಿನಿಮಾ ಕರಾವಳಿ, ಮಲೆನಾಡು ಭಾಗದ ಸಂಸ್ಕೃತಿಯನ್ನು ಜಗತ್ತಿಗೆ ಪರಿಚಯಿಸುವ ಕಾರ್ಯ ಮಾಡಿತ್ತು. ಆ ಸಿನಿಮಾ ಹಿಟ್ ಆದ ಸಮಯದಲ್ಲಿ ಕರ್ನಾಟಕದ ವಿವಿಧ ಭಾಗಗಳ ಕತೆಗಳು ಸಿನಿಮಾ ಆಗಬೇಕಾದ ಅವಶ್ಯಕತೆ ಬಗ್ಗೆ ಚರ್ಚೆ ಎದ್ದಿತ್ತು. ಅದರಲ್ಲಿಯೂ ಉತ್ತರ ಕರ್ನಾಟಕದ ಸಂಸ್ಕೃತಿಯನ್ನು ಕರ್ನಾಟಕದವರಿಗೆ ಪರಿಚಯಿಸುವ ಅಗತ್ಯವಿದೆ. ಆ ಕಾರ್ಯವನ್ನು ಉತ್ತರ ಕರ್ನಾಟಕದವರೇ ಮಾಡಬೇಕು ಎಂದು ರಕ್ಷಿತ್ ಶೆಟ್ಟಿ ಹೇಳಿದ್ದರು. ಇದಾದ ಕೆಲವೇ ತಿಂಗಳಲ್ಲಿ ಇದೀಗ ಉತ್ತರ ಕರ್ನಾಟಕ ಭಾಗದ ಕತೆ ಹೊತ್ತು ‘ದೇಸಾಯಿ’ ಹೆಸರಿನ ಸಿನಿಮಾ ಬಿಡುಗಡೆಗೆ ರೆಡಿಯಾಗುತ್ತಿದೆ.

ವೀರಭದ್ರೇಶ್ವರ ಕ್ರಿಯೇಟಿವ್ ಫಿಲಂಸ್ ನಿರ್ಮಾಣ ಸಂಸ್ಥೆಯು ‘ದೇಸಾಯಿ’ ಸಿನಿಮಾ ಮೂಡಿ ಬರುತ್ತಿದೆ. ಮಹಾಂತೇಶ ವಿ ಚೋಳದಗುಡ್ಡ ಕಥೆ ಬರೆದು ನಿರ್ಮಾಣ ಮಾಡುತ್ತಿದ್ದಾರೆ ಹಾಗೂ ನಾಗಿರೆಡ್ಡಿ ಭಡ ನಿರ್ದೇಶನ ಮಾಡುತ್ತಿದ್ದಾರೆ. ‘ದೇಸಾಯಿ’ ಸಿನಿಮಾಕ್ಕೆ ಡಬ್ಬಿಂಗ್ ಕಾರ್ಯ ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ನಡೆಯುತ್ತಿದೆ. ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಎರಡು ಹಾಡುಗಳ ಚಿತ್ರೀಕರಣ ಮಾತ್ರ ಬಾಕಿಯಿದೆ. ‘ಲವ್ 360’ ಖ್ಯಾತಿಯ ಪ್ರವೀಣ್ ಕುಮಾರ್ ಈ ಸಿನಿಮಾದ ನಾಯಕನಾಗಿ ನಟಿಸುತ್ತಿದ್ದಾರೆ.

ಇದನ್ನೂ ಓದಿ:‘ಸಲಾರ್’ ಸಿನಿಮಾದ ‘ರಾಧಾ ರಮಾ’ ಶ್ರಿಯಾ ರೆಡ್ಡಿ ಯಾರು ಗೊತ್ತೆ?

“ದೇಸಾಯಿ” ಕೌಟುಂಬಿಕ ಕಥಾಹಂದರ ಹೊಂದಿರುವ ಚಿತ್ರವಾಗಿದೆ. ಉತ್ತರ ಕರ್ನಾಟಕದ ಶೈಲಿಯ ಕಥಾಹಂದರ ಹೊಂದಿರುವ ಈ ಚಿತ್ರದ ರಚನೆ ಹಾಗೂ ನಿರ್ದೇಶನ ನಾಗಿರೆಡ್ಡಿ ಭಡ ಅವರದು. ಬಾದಾಮಿ, ಬಾಗಲಕೋಟೆ ಮುಂತಾದ ಕಡೆ ಚಿತ್ರೀಕರಣ ನಡೆದಿದೆ.

“ಲವ್ 360” ಖ್ಯಾತಿಯ ಪ್ರವೀಣ್ ಕುಮಾರ್ ಈ ಚಿತ್ರದ ನಾಯಕನಾಗಿ ಅಭಿನಯಿಸುತ್ತಿದ್ದು, ನಾಯಕಿಯಾಗಿ ಮೈಸೂರಿನ ರಾಧ್ಯ ಇದ್ದಾರೆ. “ಒರಟ” ಪ್ರಶಾಂತ್, ಚೆಲುವರಾಜು, ಮಧುಸೂದನ್ ರಾವ್, ಕಲ್ಯಾಣಿ, ಹರಿಣಿ, ನಟನ ಪ್ರಶಾಂತ್, ಮಂಜುನಾಥ್ ಹೆಗಡೆ, ಸೃಷ್ಟಿ (ಕಾಂತಾರ) ಮುಂತಾದವರು ತಾರಾಬಳಗದಲ್ಲಿದ್ದಾರೆ. ಕಳೆದ ಇಪ್ಪತ್ತು ವರ್ಷಗಳಿಂದ ಕನ್ನಡ ಹಾಗೂ ತೆಲುಗು ಚಿತ್ರರಂಗದಲ್ಲಿ ಸಕ್ರಿಯರಾಗಿರುವ ನಾಗಿರೆಡ್ಡಿ ಅವರಿಗೆ ಇದು ಚೊಚ್ಚಲ ನಿರ್ದೇಶನದ ಚಿತ್ರ. ನಿರ್ಮಾಪಕ ಮಹಾಂತೇಶ್ ಅವರಿಗೂ “ದೇಸಾಯಿ” ಮೊದಲ ನಿರ್ಮಾಣದ ಚಿತ್ರ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು