ಜೆಟ್ ಲ್ಯಾಗ್ ಪಾರ್ಟಿ ಪ್ರಕರಣ: ದರ್ಶನ್, ಅಭಿಷೇಕ್​ಗೆ ಪೊಲೀಸರ ನೋಟಿಸ್

ಇತ್ತೀಚೆಗೆ ‘ಕಾಟೇರ’ ಸಿನಿಮಾ ರಿಲೀಸ್ ಆಗಿ ಗೆದ್ದಿತು. ಅದರ‌ ಸಕ್ಸಸ್ ಸೆಲೆಬ್ರೇಷನ್ ಬಳಿಕ ದರ್ಶನ್, ಅಭಿಷೇಕ್ ಅಂಬರೀಷ್, ಧನಂಜಯ್ ಸೇರಿ ಅನೇಕರು ಬೆಂಗಳೂರಿನ ಒರಾಯನ್‌ ಮಾಲ್ ಬಳಿ ಇರುವ ಜೆಟ್ ಲ್ಯಾಗ್ ಪಬ್​​ನಲ್ಲಿ ಪಾರ್ಟಿ ಮಾಡಿದ್ದರು.

ಜೆಟ್ ಲ್ಯಾಗ್ ಪಾರ್ಟಿ ಪ್ರಕರಣ: ದರ್ಶನ್, ಅಭಿಷೇಕ್​ಗೆ ಪೊಲೀಸರ ನೋಟಿಸ್
ದರ್ಶನ್​
Follow us
Jagadisha B
| Updated By: ರಾಜೇಶ್ ದುಗ್ಗುಮನೆ

Updated on:Jan 08, 2024 | 12:26 PM

ಇತ್ತೀಚೆಗೆ ಜೆಟ್​ ​ಲ್ಯಾಗ್ ಪಬ್​ನಲ್ಲಿ ದರ್ಶನ್ (Darshan), ಅಭಿಷೇಕ್ ಅಂಬರೀಷ್ ಸೇರಿ ಅನೇಕ ಸೆಲೆಬ್ರೆಟಿಗಳು ಮುಂಜಾನೆವರೆಗೆ ಪಾರ್ಟಿ ಮಾಡಿದ್ದರು. ಈ ಪ್ರಕರಣ ಸಾಕಷ್ಟು ಸುದ್ದಿ ಆಗಿತ್ತು. ಈ ಪ್ರಕರಣದಲ್ಲಿ ಪಬ್ ವಿರುದ್ಧ ಕೇಸ್ ದಾಖಲಾಗಿತ್ತು. ಈ ಪಾರ್ಟಿಯಲ್ಲಿ ಭಾಗಿ ಆದ ನಟ ದರ್ಶನ್, ಅಭಿಷೇಕ್, ನಿರ್ಮಾಪಕ ರಾಕ್​ಲೈನ್ ವೆಂಕಟೇಶ್​ಗೆ ನೋಟಿಸ್ ಜಾರಿ ಆಗಿದೆ. ಸುಬ್ರಹ್ಮಣ್ಯನಗರ ಇನ್ಸ್​ಪೆಕ್ಟರ್​ ಸುರೇಶ್ ಅವ​ರಿಂದ ಮೂವರಿಗೂ ನೋಟಿಸ್ ಜಾರಿ ಆಗಿದೆ. ನಟರಾದ ಡಾಲಿ ಧನಂಜಯ್, ಚಿಕ್ಕಣ್ಣ, ನಿನಾಸಂ ಸತೀಶ್ ಹಾಗೂ ನಿರ್ದೇಶಕ ತರುಣ್ ಸುಧೀರ್​ಗೆ ನೋಟಿಸ್​ ನೀಡಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.

ಏನಿದು ಪ್ರಕರಣ?

ಇತ್ತೀಚೆಗೆ ‘ಕಾಟೇರ’ ಸಿನಿಮಾ ರಿಲೀಸ್ ಆಗಿ ಗೆದ್ದಿತು. ಅದರ‌ ಸಕ್ಸಸ್ ಸೆಲೆಬ್ರೇಷನ್ ಬಳಿಕ ದರ್ಶನ್, ಅಭಿಷೇಕ್ ಅಂಬರೀಷ್, ಧನಂಜಯ್ ಸೇರಿ ಅನೇಕರು ಬೆಂಗಳೂರಿನ ಒರಾಯನ್‌ ಮಾಲ್ ಬಳಿ ಇರುವ ಜೆಟ್ ಲ್ಯಾಗ್ ಪಬ್​​ನಲ್ಲಿ ಪಾರ್ಟಿ ಮಾಡಿದ್ದರು. ಜನವರಿ‌ 3ರಂದು‌ ರಾತ್ರಿ‌ ಪಬ್​ಗೆ ಇವರು ಬೆಳಗಿನಜಾವದವರೆಗೆ ಪಾರ್ಟಿ ಮಾಡಿದ್ದರು. ನಿಯಮದ ಪ್ರಕಾರ ತಡರಾತ್ರಿ 1 ಗಂಟೆವರೆಗೆ ಮಾತ್ರ ಪಬ್ ಓಪನ್ ಇಡಲು ಅವಕಾಶ ಇದೆ. ಆದರೆ, ನಿಯಮವನ್ನು ಇಲ್ಲಿ ಮೀರಲಾಗಿದೆ.

ಇದನ್ನೂ ಓದಿ: ಸಿನಿಮಾ ಸಕ್ಸಸ್​​ ಖುಷಿಯಲ್ಲಿ ಮುಂಜಾನೆವರೆಗೂ ಸ್ಟಾರ್ ಹೀರೋ ಪಾರ್ಟಿ; ಪಬ್ ವಿರುದ್ಧ ಎಫ್​ಐಆರ್  

ಯಾರಿಗೆ ನೋಟಿಸ್?

ಈಗಾಗಲೇ ದರ್ಶನ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ನಟ ಅಭಿಷೇಕ್ ಅಂಬರೀಷ್​ಗೆ ನೋಟಿಸ್ ತಲುಪಿದೆ. ಪಾರ್ಟಿಯಲ್ಲಿ ಭಾಗಿ ಆಗಿದ್ದ ನಟ ಡಾಲಿ ಧನುಂಜಯ್, ನಟ ಚಿಕ್ಕಣ್ಣ, ನಿನಾಸಂ ಸತೀಶ್, ಡೈರಕ್ಟರ್ ತರುಣ್ ಸುಧೀರ್, ಸಂಗೀತ ನಿರ್ದೇಶಕ ಹರಿಕೃಷ್ಣ ಅವರಿಗೆ ನೋಟಿಸ್ ನೀಡಲು ಸಿದ್ಧತೆ ನಡೆದಿದೆ. ಸದ್ಯ ಚಿತ್ರತಂಡ ವಿದೇಶದಲ್ಲಿದೆ ಎನ್ನಲಾಗಿದೆ.

ಸಂಚಾರಕ್ಕೆ ಅಡಚಣೆ

ಅಭಿಮಾನಿಗಳು ಸ್ಟಾರ್ ನಟನ ನೋಡಲು ಮುಂಜಾನೆಯೂ ಆಗಮಿಸಿದ್ದರು. ಹೀರೋಗಳು ರಸ್ತೆ ಮೇಲೆಯೇ‌ ಕಾರು ನಿಲ್ಲಿಸಿ ಸಂಚಾರಕ್ಕೆ ಅಡಚಣೆ ಮಾಡಿದ್ದರು ಎನ್ನಲಾಗಿದೆ. ಸ್ಟಾರ್ಸ್ ಚಲನವಲನ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆ ಆಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:23 pm, Mon, 8 January 24

ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್