AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ಸ್ ಬಗ್ಗೆ ಜಾಗೃತಿ ಮೂಡಿಸಲು’ಟಾಕ್ಸಿಕ್’ ಸಿನಿಮಾ ಶೀರ್ಷಿಕೆ ಬಳಸಿಕೊಂಡ ಒಡಿಶಾ ಪೋಲೀಸ್

ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಟಾಕ್ಸಿಕ್' ಸಿನಿಮಾ ಶೀರ್ಷಿಕೆಯನ್ನು ಬಳಸಿಕೊಂಡು ಒಡಿಶಾ ಪೊಲೀಸರು ಮಾದಕ ವಸ್ತುಗಳ ವಿರುದ್ಧ ವಿನೂತನ ಜಾಗೃತಿ ಮೂಡಿಸಿದ್ದಾರೆ. ಡ್ರಗ್ಸ್ ವ್ಯಸನದಿಂದ ದೂರವಿದ್ದು ಆರೋಗ್ಯಕರ ಜೀವನ ನಡೆಸುವಂತೆ ಯುವಜನತೆಗೆ ನೀಡಿರುವ ಈ ಪೋಸ್ಟರ್ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಡ್ರಗ್ಸ್ ಬಗ್ಗೆ ಜಾಗೃತಿ ಮೂಡಿಸಲು'ಟಾಕ್ಸಿಕ್' ಸಿನಿಮಾ ಶೀರ್ಷಿಕೆ ಬಳಸಿಕೊಂಡ ಒಡಿಶಾ ಪೋಲೀಸ್
ಒಡಿಶಾ ಪೊಲೀಸರ ಪೋಸ್ಟ್
 ಶ್ರೀಲಕ್ಷ್ಮೀ ಎಚ್
| Edited By: |

Updated on:Aug 25, 2026 | 7:05 AM

Share

ಮುಖ್ಯಾಂಶಗಳು

  • 'ಟಾಕ್ಸಿಕ್' ಸ್ಟೈಲ್‌ನಲ್ಲಿ ಡ್ರಗ್ಸ್ ವಿರುದ್ಧ ಜಾಗೃತಿ
  • ಒಡಿಶಾ ಪೊಲೀಸರ ಸೃಜನಶೀಲತೆಗೆ ನೆಟ್ಟಿಗರು ಫಿದಾ
  • ನಟ ಯಶ್ ಸಿನಿಮಾ ಕ್ರೇಜ್ ಬಳಸಿಕೊಂಡ ಖಾಕಿ 

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ (Toxic Movie) ಕ್ರೇಜ್ ದೇಶಾದ್ಯಂತ ವ್ಯಾಪಿಸಿದೆ. ಕೇವಲ ಒಂದೇ ದಿನದಲ್ಲಿ ಈ ಚಿತ್ರ ತೆರೆಮೇಲೆ ಬರುತ್ತಿದೆ. ಇದನ್ನೇ ಪ್ರಮುಖ ಅಸ್ತ್ರವನ್ನಾಗಿಸಿಕೊಂಡಿರುವ ಒಡಿಶಾ ರಾಜ್ಯ ಪೊಲೀಸರು ಸಾರ್ವಜನಿಕರಲ್ಲಿ ಡ್ರಗ್ಸ್ ಹಾಗೂ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸಲು ಮುಂದಾಗಿದ್ದಾರೆ. ನಟ ಯಶ್ ಅವರ ಚಿತ್ರದ ಶೀರ್ಷಿಕೆಯನ್ನು ವಿಭಿನ್ನವಾಗಿ ಬಳಸಿಕೊಂಡು ಜಾಗೃತಿ ಪೋಸ್ಟರ್ ಒಂದನ್ನು ಹಂಚಿಕೊಂಡಿದ್ದಾರೆ.

ಒಡಿಶಾ ಪೊಲೀಸರು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಹಂಚಿಕೊಂಡಿರುವ ಪೋಸ್ಟರ್ ನೆಟ್ಟಿಗರ ಗಮನ ಸೆಳೆಯುತ್ತಿದೆ. ‘ನಿಜವಾದ ರೋಮಾಂಚನವು ನಿಮ್ಮ ಆಸಕ್ತಿಗಳನ್ನು ಜೀವಿಸುವುದರಲ್ಲಿದೆ ಹೊರತು ಮಾದಕ ವ್ಯಸನಕ್ಕೆ ಬಲಿಯಾಗುವುದರಲ್ಲಿ ಅಲ್ಲ‘ ಎಂದು ಸಂದೇಶ ನೀಡಲಾಗಿದೆ. ‘ನಿಕೋಟಿನ್ ಹಾಗೂ ಡ್ರಗ್ಸ್ ವ್ಯಸನ ಬಿಡಿ, ಆರೋಗ್ಯಕರ ಜೀವನ ಆಯ್ಕೆ ಮಾಡಿ’ ಎಂದು ಕೋರಲಾಗಿದೆ.

ಯುವಜನತೆಯನ್ನು ಹೆಚ್ಚಾಗಿ ತಲುಪುವ ಉದ್ದೇಶದಿಂದ ‘ನಶಾ ಮುಕ್ತ ಒಡಿಶಾ ಅಭಿಯಾನ’ದಡಿಯಲ್ಲಿ ಈ ಜಾಗೃತಿ ಮೂಡಿಸಲಾಗಿದೆ. ಪೋಸ್ಟರ್‌ನಲ್ಲಿ ‘Toxic’ ಶೈಲಿಯ ವಿನ್ಯಾಸ ಬಳಸಿ ‘ಚೂಸ್ ರಿಯಲ್ ತ್ರಿಲ್ಸ್, ನಾಟ್ ಟಾಕ್ಸಿಕ್ ಅಡಿಕ್ಷನ್’ ಎಂದು ಬರೆಯಲಾಗಿದೆ. ಯಶ್ ಸಿನಿಮಾ ಕ್ರೇಜ್ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡಿದ ಪೋಲಿಸರ ಸೃಜನಶೀಲತೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ಇತ್ತೀಚಿನ ದಿನಗಳಲ್ಲಿ ಯುವಕರು ಮಾದಕ ದ್ರವ್ಯಗಳ ಜಾಲಕ್ಕೆ ಬೀಳುತ್ತಿರುವುದು ಹೆಚ್ಚಾಗುತ್ತಿದ್ದು, ಅದನ್ನು ತಡೆಯಲು ಪೊಲೀಸರು ಸಿನಿಮಾಗಳ ಪ್ರಸಿದ್ಧಿಯನ್ನು ಬಳಸಿಕೊಳ್ಳುತ್ತಿದ್ದಾರೆ. ಒಡಿಶಾ ಪೊಲೀಸರ ನವೀನ ಪ್ರಯತ್ನವು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದ್ದು, ಸಿನಿಮಾ ಪ್ರಿಯರು ಹಾಗೂ ಅಭಿಮಾನಿಗಳು ಈ ಜಾಗೃತಿ ಅಭಿಯಾನವನ್ನು ಶ್ಲಾಘಿಸಿದ್ದಾರೆ.

ಇದನ್ನೂ ಓದಿ: ಟಾಕ್ಸಿಕ್ ಅಡ್ವಾನ್ಸ್ ಬುಕಿಂಗ್ ಧಮಾಕ; ಬಿಡುಗಡೆಗೆ ಮುನ್ನವೇ 30 ಕೋಟಿ ದಾಟಿದ ಯಶ್ ಸಿನಿಮಾ ಗಳಿಕೆ

‘ಟಾಕ್ಸಿಕ್’ ಸಿನಿಮಾ ಆಗಸ್ಟ್ 26ರಂದು ತೆರೆಗೆ ಬರುತ್ತಿದೆ. ಮಲಯಾಳಂ ನಿರ್ದೇಶಕಿ ಗೀತು ಮೋಹನ್​ದಾಸ್ ಅವರು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಈ ಸಿನಿಮಾಗೆ ಐವರು ನಾಯಕಿಯರು.ಈ ಚಿತ್ರದ ಬಗ್ಗೆ ಅಭಿಮಾನಿಗಳ ನಿರೀಕ್ಷೆ ಬೆಟ್ಟದಷ್ಟು ಮೂಡಿದೆ.

ಪ್ರಶ್ನೆ: ಯಶ್ ನಟನೆಯ ಟಾಕ್ಸಿಕ್ ಸಿನಿಮಾದ ಅವಧಿ ಎಷ್ಟು? ಉತ್ತರ: ಮೂರು ಗಂಟೆ 14 ನಿಮಿಷ

ಪ್ರಶ್ನೆ: ಯಶ್ ಪಾತ್ರದ ಹೆಸರೇನು? ಉತ್ತರ: ರಾಯ ಹಾಗೂ ಟಿಕೆಟ್

ಪ್ರಶ್ನೆ: ಟಾಕ್ಸಿಕ್ ಸಿನಿಮಾ ನಿರ್ದೇಶಕರು ಯಾರು? ಉತ್ತರ: ಗೀತು ಮೋಹನ್​ದಾಸ್

Published On - 7:03 am, Tue, 25 August 26

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!
ಬಿಗ್ ಬಾಸ್ ಎಲಿಮಿನೇಷನ್: ಅಪಾಯದಲ್ಲಿ ಕಿರಣ್ ಶಾಸ್ತ್ರಿ, ಸಂಗೀತಾ, ಲಿಖಿತ್
ಬಿಗ್ ಬಾಸ್ ಎಲಿಮಿನೇಷನ್: ಅಪಾಯದಲ್ಲಿ ಕಿರಣ್ ಶಾಸ್ತ್ರಿ, ಸಂಗೀತಾ, ಲಿಖಿತ್
ಫ್ಲೈದುಬೈ ಪ್ರಕರಣ: ಸಹ ಪೈಲಟ್ ಕೃತ್ಯವನ್ನು ಶ್ಲಾಘಿಸಿದ ಅಲ್-ಖೈದಾ
ಫ್ಲೈದುಬೈ ಪ್ರಕರಣ: ಸಹ ಪೈಲಟ್ ಕೃತ್ಯವನ್ನು ಶ್ಲಾಘಿಸಿದ ಅಲ್-ಖೈದಾ
ನೆಲದ ಮೇಲೆ ಕುಳಿತು ಉಪಹಾರ ಸೇವಿಸಿದ ವಿಜಯೇಂದ್ರ
ನೆಲದ ಮೇಲೆ ಕುಳಿತು ಉಪಹಾರ ಸೇವಿಸಿದ ವಿಜಯೇಂದ್ರ