AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಾತಂತ್ರ್ಯ ದಿನಾಚರಣೆ ಸಮಯಕ್ಕೆ ಬರಲಿದೆ ‘ಓ ಮೈ ಇಂಡಿಯಾ’ ಸಿನಿಮಾ

‘ಓ ಮೈ ಇಂಡಿಯಾ’ ಸಿನಿಮಾದಲ್ಲಿ ರತನ್‌ ದೇವ್, ಧರಣಿಶ್ರೀ ಮುಂತಾದವರು ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಅವಿನಾಶ್, ಚಿತ್ರಾ ಶಣೈ, ಸುಚೇಂದ್ರ ಪ್ರಸಾದ್, ಇರ್ಷಾದ್ ಅಹ್ಮದ್ ಮುಂತಾದ ಕಲಾವಿದರು ಈ ಚಿತ್ರದ ನಟಿಸಿದ್ದಾರೆ. ರಮ್ಯಾ ಲೋಕೇಶ್ ಅವರು ನಿರ್ಮಾಣ ಮಾಡಿದ್ದು, ಜಿ.ಎನ್. ಕೃಷ್ಣಮೂರ್ತಿ ಅವರು ನಿರ್ದೇಶನ ಮಾಡಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆ ಸಮಯಕ್ಕೆ ಬರಲಿದೆ ‘ಓ ಮೈ ಇಂಡಿಯಾ’ ಸಿನಿಮಾ
Oh My India Movie Team
ಮದನ್​ ಕುಮಾರ್​
|

Updated on: Jul 08, 2025 | 9:58 PM

Share

ಭಾರತದ ಹಿರಿಮೆ ಸಾರಲು ‘ಓ ಮೈ ಇಂಡಿಯಾ’ (Oh My India) ಸಿನಿಮಾ ಮಾಡಿರುವುದಾಗಿ ಚಿತ್ರತಂಡ ಹೇಳಿಕೊಂಡಿದೆ. ಬಹುತೇಕ ಹೊಸಬರು ಸೇರಿಕೊಂಡು ಈ ಸಿನಿಮಾ ಮಾಡಿದ್ದಾರೆ. ಇತ್ತೀಚೆಗೆ ಈ ಚಿತ್ರದ ಹಾಡು ಮತ್ತು ಟ್ರೇಲರ್ (Trailer) ಬಿಡುಗಡೆ ಮಾಡಲಾಯಿತು. ಹಿರಿಯ ನಟ ಎಂ.ಎಸ್. ಉಮೇಶ್, ಸಮಾಜ ಸೇವಕ ಮಹೇಂದ್ರ ಮುನ್ನೋತ್, ನಿರ್ಮಾಪಕ ಡಾ. ಲಯನ್ ಎಸ್. ವೆಂಕಟೇಶ್ ಮುಂತಾದವರು ಈ ಕಾರ್ಯಕ್ರಮದಲ್ಲಿ ಭಾಗಿಯಾದರು. ‘ಸಾನ್ವಿಶ್ರೀಯಾ ಪ್ರೊಡಕ್ಷನ್ಸ್’ ಮೂಲಕ ಈ ಸಿನಿಮಾ ನಿರ್ಮಾಣ ಆಗಿದೆ. ಹಾಸನದ ರಮ್ಯಾ ಲೋಕೇಶ್ (Ramya Lokesh) ಅವರು ನಿರ್ಮಾಣ ಮಾಡಿದ್ದಾರೆ. ಹಿರಿಯ ಪತ್ರಕರ್ತ ಜಿ.ಎನ್. ಕೃಷ್ಣಮೂರ್ತಿ ಅವರು ನಿರ್ದೇಶನ ಮಾಡಿದ್ದಾರೆ.

ಜಿ.ಎನ್. ಕೃಷ್ಣಮೂರ್ತಿ ಅವರು ನಿರ್ದೇಶನದ ಜೊತೆ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯದ ಜವಾಬ್ದಾರಿಯನ್ನೂ ನಿಭಾಯಿಸಿದ್ದಾರೆ. ‘ಓ ಮೈ ಇಂಡಿಯಾ’ ಸಿನಿಮಾಗೆ ಬೆಂಗಳೂರು, ಹಾಸನ, ಸಕಲೇಶಪುರ ಮುಂತಾದ ಕಡೆಗಳಲ್ಲಿ ಚಿತ್ರೀಕರಣ ಮಾಡಲಾಗಿದೆ. ಸ್ವಾತಂತ್ರ್ಯ ದಿನಾಚರಣೆ ಸಮಯದಲ್ಲಿ ಸಿನಿಮಾವನ್ನು ಬಿಡುಗಡೆ ಮಾಡಲು ನಿರ್ಮಾಪಕರು ತಯಾರಿ ಮಾಡಿಕೊಳ್ಳುತ್ತಿದ್ದಾರೆ.

ಈ ಸಿನಿಮಾದಲ್ಲಿ ರತನ್‌ ದೇವ್ ಅವರು ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಶಿಕ್ಷಕಿಯ ಪಾತ್ರದಲ್ಲಿ ಧರಣಿಶ್ರೀ ನಟಿಸಿದ್ದಾರೆ. ವಿಶೇಷ ಪಾತ್ರದಲ್ಲಿ ಸಾಯಿಕುಮಾರ್ ಅಭಿನಯಿಸಿದ್ದಾರೆ. ಅವಿನಾಶ್, ಚಿತ್ರಾ ಶಣೈ, ಸುಚೇಂದ್ರ ಪ್ರಸಾದ್, ಇರ್ಷಾದ್ ಅಹ್ಮದ್ ಮುಂತಾದ ಕಲಾವಿದರು ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ. 3 ಹಾಡುಗಳಿಗೆ ಜಿ. ಭಟ್ ಸಂಗೀತ ನೀಡಿದ್ದಾರೆ. ಅಭಿನಂದನ್ ಅವರು ಛಾಯಾಗ್ರಹಣ ಮಾಡಿದ್ದಾರೆ. ಕೌರವ ವೆಂಕಟೇಶ್ ಅವರ ಸಾಹಸ ನಿರ್ದೇಶನ, ವಿನಯ್ ಜಿ. ಆಲೂರು ಅವರ ಸಂಕಲನ, ಎಂ.ಆರ್. ಕಪಿಲ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

‘ಓ ಮೈ ಇಂಡಿಯಾ’ ಚಿತ್ರದಲ್ಲಿ ರತನ್‌ದೇವ್ ಅವರು ಜಿಲ್ಲಾಧಿಕಾರಿಯಾಗಿ ನಟಿಸಿದ್ದು, ‘ಸರ್ಕಾರಿ ಅಧಿಕಾರಿ ಮನಸ್ಸು ಮಾಡಿದರೆ ಸಮಾಜವನ್ನು ಹೇಗೆ ಸರಿಪಡಿಸಬಹುದು ಎಂಬುದನ್ನು ಈ ಪಾತ್ರದ ಮೂಲಕ ಹೇಳುವ ಪ್ರಯತ್ನ ಮಾಡಿದ್ದೇವೆ’ ಎಂದಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಿರ್ದೇಶಕ ಕೃಷ್ಣಮೂರ್ತಿ ಅವರು ಸಿನಿಮಾದ ಕಥೆ ಬಗ್ಗೆ ಇನ್ನಷ್ಟು ಮಾಹಿತಿ ನೀಡಿದರು.

ಇದನ್ನೂ ಓದಿ: ಗುರುತೇ ಸಿಗದಂತೆ ಬದಲಾದ ರಶ್ಮಿಕಾ ಮಂದಣ್ಣ; ಯಾಕೆ ಈ ಗೆಟಪ್?

‘ನಮ್ಮ ಹೆಮ್ಮೆಯ ಭಾರತವನ್ನು ಬೇರೆ ದೇಶದವರು ಹೊಗಳುತ್ತಿದ್ದಾರೆ. ಆದರೆ ನಮ್ಮವರು ಇಲ್ಲಿಯ ಗಾಳಿ, ಶಿಕ್ಷಣ ಪಡೆದು ನಂತರ ಬದುಕು ಕಟ್ಟಿಕೊಳ್ಳಲು ಬೇರೆ ದೇಶಕ್ಕೆ ಹೋಗುತ್ತಿದ್ದಾರೆ. ದೇಶದ ಭ್ರಷ್ಟ ವ್ಯವಸ್ಥೆಯನ್ನು ಸರಿಪಡಿಸಿಕೊಳ್ಳಬೇಕು. ಪ್ರಜೆಗಳು ಇಂದು ಚುನಾಯಿತ ಪ್ರತಿನಿಧಿಗಳ ಹತ್ತಿರ ಗುಲಾಮರಾಗುತ್ತಿದ್ದೇವೆ. ಇಂತಹ ಕೆಟ್ಟ ವ್ಯವಸ್ಥೆ ತೊಲಗಬೇಕು. ಈ ರೀತಿಯ ಅರ್ಥಪೂರ್ಣ ಅಂಶಗಳು ನಮ್ಮ ಸಿನಿಮಾದಲ್ಲಿವೆ. ಇದರಿಂದ ಪ್ರೇಕ್ಷಕರ ದೃಷ್ಟಿಕೋನ ಬದಲಾಗುತ್ತದೆ’ ಎಂದಿದ್ದಾರೆ ನಿರ್ದೇಶಕ ಜಿ.ಎನ್. ಕೃಷ್ಣಮೂರ್ತಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ