AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಚಿತ್ರರಂಗದ ಬಗ್ಗೆ ನಿರ್ಲಕ್ಷ್ಯ; ಒಟಿಟಿ ಪ್ಲಾಟ್​ಫಾರ್ಮ್​ಗಳ ಬಗ್ಗೆ ರಿಷಬ್ ಶೆಟ್ಟಿ ಅಸಮಾಧಾನ

ರಿಷಬ್ ಶೆಟ್ಟಿ ಅವರು ಕನ್ನಡ ಚಿತ್ರರಂಗದ ಪರವಾಗಿ ಅನೇಕ ಬಾರಿ ಮಾತನಾಡಿದ್ದಿದೆ. ಈಗ ಅವರು ಒಟಿಟಿ ಪ್ಲಾಟ್​ಫಾರ್ಮ್​ಗಳ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಅವರು ಹೆಚ್ಚು ತೆರೆದುಕೊಂಡಿಲ್ಲ ಎಂದಿದ್ದಾರೆ.

ಕನ್ನಡ ಚಿತ್ರರಂಗದ ಬಗ್ಗೆ ನಿರ್ಲಕ್ಷ್ಯ; ಒಟಿಟಿ ಪ್ಲಾಟ್​ಫಾರ್ಮ್​ಗಳ ಬಗ್ಗೆ ರಿಷಬ್ ಶೆಟ್ಟಿ ಅಸಮಾಧಾನ
ರಿಷಬ್
ರಾಜೇಶ್ ದುಗ್ಗುಮನೆ
|

Updated on: Nov 29, 2023 | 11:06 AM

Share

ರಿಷಬ್ ಶೆಟ್ಟಿ (Rishab Shetty) ಅವರು ನಟನಾಗಿ, ನಿರ್ದೇಶಕನಾಗಿ ಹಾಗೂ ನಿರ್ಮಾಪಕನಾಗಿ ಚಿತ್ರರಂಗಕ್ಕೆ ತಮ್ಮ ಕೊಡುಗೆ ನೀಡುತ್ತಿದ್ದಾರೆ. ಅವರ ನಿರ್ದೇಶನದ ‘ಕಾಂತಾರ’ ಚಿತ್ರವನ್ನು ಎಲ್ಲರೂ ಮೆಚ್ಚಿಕೊಂಡಿದ್ದಾರೆ. ಇತ್ತೀಚೆಗೆ ಅವರು ಗೋವಾದಲ್ಲಿ ನಡೆದ 54ನೇ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ಭಾಗಿ ಆಗಿದ್ದರು. ಅವರಿಗೆ ಸ್ಪೆಷಲ್ ಜ್ಯೂರಿ ಅವಾರ್ಡ್ ಸಿಕ್ಕಿದೆ. ಈ ಕಾರ್ಯಕ್ರಮದಲ್ಲಿ ಅವರು ಕನ್ನಡ ಚಿತ್ರರಂಗದ ಬಗ್ಗೆ ಮಾತನಾಡಿದ್ದಾರೆ. ಒಟಿಟಿ ಪ್ಲಾಟ್​ಫಾರ್ಮ್​ಗಳು ಕನ್ನಡ ಸಿನಿಮಾಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಕೋರಿದ್ದಾರೆ.

‘ಒಟಿಟಿ ಪ್ಲಾಟ್​​ಫಾರ್ಮ್​ಗಳು ಕನ್ನಡ ಚಿತ್ರರಂಗಕ್ಕೆ ಹೆಚ್ಚು ತೆರೆದುಕೊಂಡಿಲ್ಲ. ಇದು ಒಳ್ಳೆಯ ಬೆಳವಣಿಗೆ ಅಲ್ಲ. ಇಲ್ಲಿ ಸಬ್​ಸ್ಕ್ರೈಬ್​ಗಳು ಸಿಗುವುದಿಲ್ಲ ಎಂದು ಅವರು ಹೇಳುತ್ತಾರೆ. ಕೊರೊನಾ ಸಂದರ್ಭದಲ್ಲಿ ರಕ್ಷಿತ್ ಶೆಟ್ಟಿ ಒಡೆತನದ ‘ಪರಂವಃ ಸ್ಟುಡಿಯೋಸ್’ ಹಾಗೂ ನನ್ನ ‘ರಿಷಬ್ ಶೆಟ್ಟಿ ಫಿಲ್ಮ್ಸ್​’ ಸಾಕಷ್ಟು ಸಕ್ರಿಯವಾಗಿ ಕೆಲಸ ಮಾಡುತ್ತಿದ್ದವು. ಇದರ ಹೊರತಾಗಿ ಹಲವು ನಿರ್ಮಾಣ ಸಂಸ್ಥೆಗಳು ಸಿನಿಮಾ ಮಾಡುತ್ತಿವೆ. ನಾವು ಚಿತ್ರೋತ್ಸವಗಳನ್ನು ಮಾಡುತ್ತಿದ್ದೇವೆ. ಆದಾಗ್ಯೂ ಅವರು ನಮ್ಮ ಸಿನಿಮಾಗಳು ತೆಗೆದುಕೊಳ್ಳುತ್ತಿಲ್ಲ’ ಎಂದು ಅಸಮಾಧಾನ ಹೊರಹಾಕಿದ್ದಾರೆ ರಿಷಬ್ ಶೆಟ್ಟಿ.

‘ಅಂತಾರಾಷ್ಟ್ರೀಯ ಸಿನಿಮೋತ್ಸವದವದರ ಬಳಿ ಹಾಗೂ ಅದರ ಸ್ಪಾನ್ಸರ್​ಗಳ ಬಳಿ ನಮ್ಮ ಸಿನಿಮಾಗಳನ್ನು ಗುರುತಿಸುವಂತೆ ಕೋರುತ್ತೇನೆ. ಥಿಯೇಟರ್​ನಲ್ಲಿ ಹೆಚ್ಚು ಮಾನ್ಯತೆ ಸಿಗದೇ ಇರುವ ಸಿನಿಮಾಗಳನ್ನು ಒಟಿಟಿ ಪ್ಲಾಟ್​ಫಾರ್ಮ್​ಗಳು ತೆಗೆದುಕೊಳ್ಳಬೇಕು’ ಎಂದು ಅವರು ಬೇಡಿಕೆ ಇಟ್ಟಿದ್ದಾರೆ.

ಒಟಿಟಿ ಪ್ಲಾಟ್​ಫಾರ್ಮ್​ಗಳು ಕನ್ನಡ ಚಿತ್ರಗಳಿಗೆ ಹೆಚ್ಚಿನ ಹಣ ನೀಡುತ್ತಿಲ್ಲ, ಕೆಲ ಸಿನಿಮಾಗಳನ್ನು ಖರೀದಿ ಮಾಡಲು ಮುಂದೆ ಬರುತ್ತಿಲ್ಲ ಎನ್ನುವ ಆರೋಪ ಮೊದಲಿನಿಂದಲೂ ಇದೆ. ವಿಮರ್ಶಕರಿಂದ ಮೆಚ್ಚುಗೆ ಪಡೆದ ಚಿತ್ರಗಳಿಗೆ ಒಟಿಟಿ ಪ್ಲಾಟ್​ಫಾರ್ಮ್​ನಲ್ಲಿ ಜಾಗ ಸಿಕ್ಕಿಲ್ಲ. ಈ ಬಗ್ಗೆ ರಿಷಬ್ ಧ್ವನಿ ಎತ್ತಿದ್ದಾರೆ.

ಇದನ್ನೂ ಓದಿ: ‘ಈ ಪ್ರಶಸ್ತಿಯನ್ನು ಶಂಕರ್ ನಾಗ್​ಗೆ ಅರ್ಪಿಸುತ್ತೇನೆ’; ಭಾವುಕರಾಗಿ ಪತ್ರ ಬರೆದ ರಿಷಬ್ ಶೆಟ್ಟಿ

ರಿಷಬ್ ಶೆಟ್ಟಿ ಅವರು ‘ಕಾಂತಾರ ಚಾಪ್ಟರ್ 1’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇ್ದಾರೆ. ಈ ಚಿತ್ರದ ಫಸ್ಟ್ ಲುಕ್ ಟೀಸರ್ ಇತ್ತೀಚೆಗೆ ರಿಲೀಸ್ ಆಗಿ ಸದ್ದು ಮಾಡಿದೆ. ಒಂದು ದಿನದಲ್ಲಿ 1.2 ಕೋಟಿ ಬಾರಿ ಇದು ವೀಕ್ಷಣೆ ಕಂಡಿದೆ. ರಿಷಬ್ ಅವರು ಸಖತ್ ರಗಡ್ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರ ಕನ್ನಡ ಸೇರಿ ಏಳು ಭಾಷೆಗಳಲ್ಲಿ ರಿಲೀಸ್ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು