Padma Awards: ಅನಂತ್ ​ನಾಗ್​ಗೆ ಪದ್ಮ ಪ್ರಶಸ್ತಿ ನೀಡಿ; ಸೆಲೆಬ್ರಿಟಿಗಳಿಂದಲೂ ಶುರುವಾಯ್ತು ಟ್ವಿಟ್ಟರ್​ ಅಭಿಯಾನ

Anant Nag: ಕನ್ನಡದ ಖ್ಯಾತ ನಟ ಅನಂತ್​ ನಾಗ್ ಅವರಿಗೆ ಈ ವರ್ಷದ ಪದ್ಮ ಪ್ರಶಸ್ತಿಯನ್ನು ನೀಡಬೇಕೆಂಬ ಅಭಿಯಾನಕ್ಕೆ ಅನಂತ್ ​ನಾಗ್ ಅವರ ಅಭಿಮಾನಿಗಳು ಮಾತ್ರವಲ್ಲದೆ ಸ್ಯಾಂಡಲ್​ವುಡ್​ ನಟರು ಕೂಡ ಕೈಜೋಡಿಸಿರುವುದು ವಿಶೇಷ.

Padma Awards: ಅನಂತ್ ​ನಾಗ್​ಗೆ ಪದ್ಮ ಪ್ರಶಸ್ತಿ ನೀಡಿ; ಸೆಲೆಬ್ರಿಟಿಗಳಿಂದಲೂ ಶುರುವಾಯ್ತು ಟ್ವಿಟ್ಟರ್​ ಅಭಿಯಾನ
ಅನಂತ್ ನಾಗ್
Follow us
TV9 Web
| Updated By: Digi Tech Desk

Updated on:Jul 13, 2021 | 12:41 PM

ಬೆಂಗಳೂರು: ಈ ವರ್ಷದ ಪದ್ಮಶ್ರೀ, ಪದ್ಮಭೂಷಣ, ಪದ್ಮವಿಭೂಷಣ ಪ್ರಶಸ್ತಿಗಳಿಗೆ ಜನರೇ ತಮ್ಮ ನಡುವಿನ ಸಾಧಕರ ಹೆಸರನ್ನು ಶಿಫಾರಸು ಮಾಡಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದರು. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲೂ #PeoplesPadma ಹ್ಯಾಷ್​ಟ್ಯಾಗ್​ನಡಿ ಅಭಿಯಾನವೊಂದು ಆರಂಭವಾಗಿದ್ದು, ಕನ್ನಡದ ಖ್ಯಾತ ನಟ ಅನಂತ್​ ನಾಗ್ (Anant Nag) ಅವರಿಗೆ ಈ ವರ್ಷದ ಪದ್ಮ ಪ್ರಶಸ್ತಿಯನ್ನು (Padma Awards 2021) ನೀಡಬೇಕೆಂದು ಒತ್ತಾಯಿಸಲಾಗುತ್ತಿದೆ. ಈ ಅಭಿಯಾನಕ್ಕೆ ಅನಂತ್ ​ನಾಗ್ ಅವರ ಅಭಿಮಾನಿಗಳು ಮಾತ್ರವಲ್ಲದೆ ಸ್ಯಾಂಡಲ್​ವುಡ್​ ನಟರು ಕೂಡ ಕೈಜೋಡಿಸಿರುವುದು ವಿಶೇಷ.

#AnanthnagForPadma ಎಂಬ ಹ್ಯಾಷ್​ಟ್ಯಾಗ್​ನಡಿ ಟ್ವಿಟ್ಟರ್​ನಲ್ಲಿ ಅಭಿಯಾನ ನಡೆಯುತ್ತಿದ್ದು, ಸ್ಯಾಂಡಲ್​ವುಡ್ ನಿರ್ದೇಶಕ, ನಟರಾದ ರಿಷಬ್ ಶೆಟ್ಟಿ, ರಕ್ಷಿತ್ ಶೆಟ್ಟಿ ಕೂಡ ಈ ಅಭಿಯಾನಕ್ಕೆ ಕೈಜೋಡಿಸಿದ್ದಾರೆ. ದೇಶದ ಅತ್ಯುನ್ನತ ಗೌರವಗಳಾದ ಪದ್ಮಶ್ರೀ, ಪದ್ಮಭೂಷಣ, ಪದ್ಮವಿಭೂಷಣ ಪ್ರಶಸ್ತಿಗಳಿಗೆ ಸಾಧಕರನ್ನು ಆಯ್ಕೆ ಮಾಡಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ ಜನತೆಗೆ ಕರೆನೀಡಿದ್ದಾರೆ. ಚಿತ್ರರಂಗದ ಮಹಾನ್ ಪ್ರತಿಭೆಗಳಲ್ಲೊಬ್ಬರಾದ ಅನಂತ್​ನಾಗ್ ಅವರು ಕನ್ನಡ ಭಾಷೆಗೆ, ನಾಡಿಗೆ, ಚಿತ್ರರಂಗಕ್ಕೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ ಅವರಿಗೆ ಪದ್ಮ ಪ್ರಶಸ್ತಿ ನೀಡಬೇಕೆಂದು ಒತ್ತಾಯಿಸೋಣ. ಕನ್ನಡನಾಡಿನ ಪರವಾಗಿ ಅನಂತ್​ನಾಗ್ ಅವರನ್ನು #PeoplesPadma ಪ್ರಶಸ್ತಿಗೆ ನಾಮನಿರ್ದೇಶನ ಮಾಡೋಣ ಎಂದು ಈ ಕುರಿತು ಟ್ವಿಟ್ಟರ್​ನಲ್ಲಿ ರಿಷಬ್ ಶೆಟ್ಟಿ ಪೋಸ್ಟ್ ಮಾಡಿದ್ದಾರೆ.

ಟ್ವಿಟ್ಟರ್​ನಲ್ಲಿ #AnanthnagForPadma ಹ್ಯಾಷ್​ಟ್ಯಾಗ್​ ಟ್ರೆಂಡಿಂಗ್​ನಲ್ಲಿದೆ. 300ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿರುವ ಅನಂತ್​ನಾಗ್ ಇದೀಗ ಪೋಷಕ ನಟನಾಗಿಯೂ ಭಾರೀ ಬೇಡಿಕೆ ಹೊಂದಿದ್ದಾರೆ. ತಮ್ಮ ಲೀಲಾಜಾಲವಾದ ಅಭಿನಯದಿಂದ ಜನರನ್ನು ರಂಜಿಸುತ್ತಿರುವ ಸರಳ ವ್ಯಕ್ತಿತ್ವದ ಅನಂತ್ ​ನಾಗ್ ಅವರಿಗೆ ಪದ್ಮ ಪ್ರಶಸ್ತಿ ಸಲ್ಲಬೇಕಾದುದು ನಾವು ಅವರಿಗೆ ನೀಡುವ ಗೌರವ ಎಂದು ಅನಂತ್​ನಾಗ್ ಅಭಿಮಾನಿಗಳು ಟ್ವಿಟ್ಟರ್​ ಮೂಲಕ ಅಭಿಯಾನ ನಡೆಸುತ್ತಿದ್ದಾರೆ.

ನಟ ಹಾಗೂ ನಿರ್ದೇಶಕ ರಕ್ಷಿತ್ ಶೆಟ್ಟಿ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದು, ಅಪ್ರತಿಮ ನಟನಿಗೆ ಅತ್ಯುನ್ನತ ಪ್ರಶಸ್ತಿಯೊಂದು ಗುಡಿಯ ಮೇಲೆ ಕಲಶವಿಟ್ಟಂತೆ. ಹಿರಿಯ ನಟ ಅನಂತ ನಾಗ್ ಅವರಿಗೆ ಪದ್ಮಪ್ರಶಸ್ತಿ ನೀಡಬೇಕೆಂಬುದು ನನ್ನ ಹಾಗೂ ಕನ್ನಡಿಗರ ಆಶಯ. ಈ ಪ್ರಯತ್ನಕ್ಕೆ ನಾವೆಲ್ಲರೂ ಒಂದಾಗಿ ಬೆಂಬಲ ಸೂಚಿಸೋಣ ಎಂದು ತಮ್ಮ ಅಭಿಮಾನಿಗಳಿಗೆ ಕರೆ ನೀಡಿದ್ದಾರೆ.

ಅನಂತ್​ನಾಗ್​ರಂತಹ ಶ್ರೇಷ್ಟ ನಟನಿಗೆ ಪದ್ಮ ಪ್ರಶಸ್ತಿ ನೀಡಿ ಎಂದು ನಾವು ಹೀಗೆ ಅಭಿಯಾನ ಮಾಡಬೇಕಾದಂತಹ ಪರಿಸ್ಥಿತಿ ಬಂದಿರುವುದು ಬಹಳ ಬೇಸರದ ಸಂಗತಿ. ಸರ್ಕಾರವೇ ಅವರನ್ನು ಪದ್ಮ ಪ್ರಶಸ್ತಿಗೆ ಶಿಫಾರಸು ಮಾಡಬೇಕಾಗಿತ್ತು ಎಂದು ಹಲವರು ಬೇಸರ ಕೂಡ ವ್ಯಕ್ತಪಡಿಸಿದ್ದಾರೆ.

ಭಾರತದಲ್ಲಿ ಅನೇಕ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಪ್ರತಿಭಾವಂತರಿದ್ದಾರೆ. ಅವರನ್ನು ಮುನ್ನೆಲೆಗೆ ತಂದು ಅವರ ಸಾಧನೆಯನ್ನು ದೇಶಕ್ಕೆ ಪರಿಚಯಿಸುವ ಉದ್ದೇಶದಿಂದ ತೆರಮರೆಯಲ್ಲಿರುವ ಸಾಧಕರನ್ನು ಪದ್ಮ ಪ್ರಶಸ್ತಿಗೆ ಜನರೇ ಶಿಫಾರಸು ಮಾಡಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. #PeoplesPadma ಹ್ಯಾಷ್​ಟ್ಯಾಗ್​ನಡಿ ಜನರೇ ತಮ್ಮ ನಡುವಿನ ಸಾಧಕರನ್ನು ನಾಮನಿರ್ದೇಶನ ಮಾಡುವ ಅವಕಾಶ ನೀಡಲಾಗಿದೆ. ಸೆಪ್ಟೆಂಬರ್ 15ರವರೆಗೆ ಈ ಹ್ಯಾಷ್​ಟ್ಯಾಗ್​ನಡಿ ನಾಮಿನೇಟ್ ಮಾಡಲು ಅವಕಾಶ ಇರುತ್ತದೆ. ಆ ನಾಮನಿರ್ದೇಶನಗಳಲ್ಲಿ ಅತ್ಯುತ್ತಮವಾದವರನ್ನು ಆಯ್ಕೆ ಮಾಡಿ ಪದ್ಮ ಪ್ರಶಸ್ತಿಯನ್ನು ನೀಡಲಾಗುತ್ತದೆ.

ಇದನ್ನೂ ಓದಿ: ರವಿಚಂದ್ರನ್​ ‘ದೃಶ್ಯ 2’ ಶೂಟಿಂಗ್​ ಶುರು; ಚಿತ್ರತಂಡಕ್ಕೆ ಹೊಸ ಎಂಟ್ರಿ ಅನಂತ್​ ನಾಗ್​​

ಇದನ್ನೂ ಓದಿ: ಪದ್ಮ ಪ್ರಶಸ್ತಿಗಾಗಿ ಸೂಕ್ತ ವ್ಯಕ್ತಿಗಳನ್ನು ನಾಮ ನಿರ್ದೇಶನ ಮಾಡಲು ಪ್ರಧಾನಿ ನರೇಂದ್ರ ಮೋದಿ ಕರೆ

Published On - 10:53 am, Tue, 13 July 21

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್