ಹಿರಿಯ ನಟಿ ಪದ್ಮಜಾ ರಾವ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ

ನಟ, ನಿರ್ದೇಶಕ ವಿರೇಂದ್ರ ಶೆಟ್ಟಿ ಒಡೆತನದ ವೀರೂ ಟಾಕೀಸ್ ಪ್ರೊಡಕ್ಷನ್ ಹೌಸ್‌ನಿಂದ ಹಿರಿಯ ನಟಿ ಪದ್ಮಜಾ ರಾವ್ ಅವರು ಹಂತ ಹಂತವಾಗಿ ಸುಮಾರು 41 ಲಕ್ಷ ರೂಪಾಯಿ ಸಾಲ ಪಡೆದುಕೊಂಡಿದ್ದರು. ಆದರೆ, ಸಾಲ ಹಿಂದಿರುಗಿಸಿರಲಿಲ್ಲ.

ಹಿರಿಯ ನಟಿ ಪದ್ಮಜಾ ರಾವ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ
ಪದ್ಮಜಾ ರಾವ್
Follow us
ರಾಜೇಶ್ ದುಗ್ಗುಮನೆ
| Updated By: ಸಾಧು ಶ್ರೀನಾಥ್​

Updated on: Feb 11, 2021 | 4:25 PM

ಬೆಂಗಳೂರು: ಚೆಕ್‌ ಬೌನ್ಸ್‌ ಪ್ರಕರಣವೊಂದರಲ್ಲಿ ಕನ್ನಡ ಚಿತ್ರರಂಗದ ಹಿರಿಯ ನಟಿ ಪದ್ಮಜಾ ರಾವ್ ವಿರುದ್ಧ ಮಂಗಳೂರಿನ ಜೆ.ಎಂ.ಎಫ್‌.ಸಿ ಐದನೇ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರಂಟ್‌ ಹೊರಡಿಸಿದೆ. ವಾರಂಟ್‌ನ್ನು ಈಗಾಗಲೇ ತಲಘಟ್ಟಪುರ ಪೊಲೀಸ್‌ ಠಾಣೆಗೆ ರವಾನಿಸಲಾಗಿದ್ದು, ಪದ್ಮಜಾ ರಾವ್ ಅವರನ್ನು ಬಂಧಿಸಿ ಮಂಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಬೇಕಿದೆ.

ನಟ, ನಿರ್ದೇಶಕ ವಿರೇಂದ್ರ ಶೆಟ್ಟಿ ಒಡೆತನದ ವೀರೂ ಟಾಕೀಸ್ ಪ್ರೊಡಕ್ಷನ್ ಹೌಸ್‌ನಿಂದ ಹಿರಿಯ ನಟಿ ಪದ್ಮಜಾ ರಾವ್ ಅವರು ಹಂತ ಹಂತವಾಗಿ ಸುಮಾರು 41 ಲಕ್ಷ ರೂಪಾಯಿ ಸಾಲ ಪಡೆದುಕೊಂಡಿದ್ದರು. ಈ ಸಾಲದ ಭದ್ರತೆಗಾಗಿ 40 ಲಕ್ಷ ರೂಪಾಯಿಗಳ ಚೆಕ್‌ ಅನ್ನು ನೀಡಿದ್ದರು.

ಪದ್ಮಜಾ ರಾವ್ ಸಾಲ ವಾಪಸ್​ ಮಾಡದೆ ವಂಚಿಸಿದ್ದರು. ಈ ವೇಳೆ ಅವರು ನೀಡಿದ ಚೆಕ್​ ಬ್ಯಾಂಕ್​ಗೆ ಹಾಕಿದ್ದರು. ಆದರೆ ಖಾತೆಯಲ್ಲಿ ಹಣವಿಲ್ಲದೆ ಚೆಕ್‌ ಬೌನ್ಸ್ ಆಗಿತ್ತು. ಈ ಬಗ್ಗೆ ಮಂಗಳೂರಿನ ಜೆ.ಎಂ.ಎಫ್‌.ಸಿ ಐದನೇ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಲಾಗಿತ್ತು. ಅಲ್ಲದೆ, ನ್ಯಾಯಾಲಯಕ್ಕೆ ಹಾಜರಾಗಲು ಆದೇಶಿಸಿದ್ದ ಸಮನ್ಸ್‌ ಅನ್ನು ಅವರು ಸ್ವೀಕರಿಸಲು ನಿರಾಕರಿಸುತ್ತಾ ಬಂದಿದ್ದರು. ಇದನ್ನು ಗಮನಿಸಿದ ನ್ಯಾಯಾಲಯ ಅವರ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದೆ.

ಹಿರಿತೆರೆ ಹಾಗೂ ಕಿರಿತೆರೆ ಎರಡಲ್ಲೂ ಪದ್ಮಜಾ ರಾವ್​ ಗುರುತಿಸಿಕೊಂಡಿದ್ದಾರೆ. ಮುಂಗಾರು ಮಳೆ ಸೇರಿ ಸಾಕಷ್ಟು ಸಿನಿಮಾಗಳಲ್ಲಿ ಪದ್ಮಜಾ ಪೋಷಕ ಪಾತ್ರ ನಿರ್ವಹಿಸಿದ್ದಾರೆ.

ಇದನ್ನೂ ಓದಿ: Deep Sidhu Arrested ಗಣರಾಜ್ಯೋತ್ಸವ ಗಲಭೆ ಪ್ರಕರಣ: ನಾಪತ್ತೆಯಾಗಿದ್ದ ನಟ ದೀಪ್ ಸಿಧು ಅರೆಸ್ಟ್​