ಶಿವರಾಜ್​ಕುಮಾರ್ ಜೊತೆ ಸಣ್ಣ ಪಾತ್ರ ಮಾಡಿದ್ದ ಈ ಕಲಾವಿದ ಈಗ ಬಾಲಿವುಡ್​ನ ಸ್ಟಾರ್ ಹೀರೋ

ಪಂಕಜ್ ಅವರು ನಟನೆ ಕಲಿತಿದ್ದು ‘ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾ’ದಲ್ಲಿ. ಅವರು ಇದರಲ್ಲಿ ನಟನಾ ಶಿಕ್ಷಣ ಪಡೆಯುತ್ತಿರುವಾಗಲ ಕೆಲವು ಸಿನಿಮಾಗಳಲ್ಲಿ ಸಣ್ಣ ಪಾತ್ರ ಮಾಡಿದ್ದರು. ಅದರಲ್ಲಿ ‘ಚಿಗುರಿದ ಕನಸು’ ಕೂಡ ಒಂದು. ಈ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಗೆಳೆಯನ ಪಾತ್ರದಲ್ಲಿ ಅವರು ಕಾಣಿಸಿಕೊಂಡಿದ್ದರು.

ಶಿವರಾಜ್​ಕುಮಾರ್ ಜೊತೆ ಸಣ್ಣ ಪಾತ್ರ ಮಾಡಿದ್ದ ಈ ಕಲಾವಿದ ಈಗ ಬಾಲಿವುಡ್​ನ ಸ್ಟಾರ್ ಹೀರೋ
ಶಿವರಾಜ್​ಕುಮಾರ್ ಜೊತೆ ಸಣ್ಣ ಪಾತ್ರ ಮಾಡಿದ್ದ ಈ ಕಲಾವಿದ ಈಗ ಬಾಲಿವುಡ್​ನ ಸ್ಟಾರ್ ಹೀರೋ
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on: Sep 05, 2024 | 7:53 AM

ಪಂಕಜ್ ತ್ರಿಪಾಠಿಗೆ ಇಂದು (ಸೆಪ್ಟೆಂಬರ್ 5) ಜನ್ಮದಿನ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ. ಅವರು ಇಂದು ಸ್ಟಾರ್ ಹೀರೋ ಆಗಿದ್ದಾರೆ. ಪೋಷಕ ಪಾತ್ರಗಳ ಮೂಲಕ ಅವರು ಗಮನ ಸೆಳೆಯುತ್ತಿದ್ದಾರೆ. ಸಿನಿಮಾ ಮಾತ್ರವಲ್ಲ ವೆಬ್​ ಸೀರಿಸ್​ನಲ್ಲೂ ಅವರು ನಟಿಸಿದ್ದಾರೆ. ಅವರು ನಟಿಸಿದ ಮೊದಲ ಸಿನಿಮಾ ಕನ್ನಡದ್ದು ಅನ್ನೋದು ಗೊತ್ತಾ? ಆ ಬಗ್ಗೆ ಇಂದು ನಾವು ನಿಮಗೆ ಹೇಳುತ್ತಿದ್ದೇವೆ. ಕನ್ನಡದಲ್ಲಿ ಅವರು ಶಿವರಾಜ್​ಕುಮಾರ್ ಜೊತೆ ತೆರೆ ಹಂಚಿಕೊಂಡಿದ್ದರು.

ಪಂಕಜ್ ಅವರು ನಟನೆ ಕಲಿತಿದ್ದು ‘ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾ’ದಲ್ಲಿ. ಅವರು ಇದರಲ್ಲಿ ನಟನಾ ಶಿಕ್ಷಣ ಪಡೆಯುತ್ತಿರುವಾಗಲ ಕೆಲವು ಸಿನಿಮಾಗಳಲ್ಲಿ ಸಣ್ಣ ಪಾತ್ರ ಮಾಡಿದ್ದರು. ಅದರಲ್ಲಿ ‘ಚಿಗುರಿದ ಕನಸು’ ಕೂಡ ಒಂದು. ಈ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಗೆಳೆಯನ ಪಾತ್ರದಲ್ಲಿ ಅವರು ಕಾಣಿಸಿಕೊಂಡಿದ್ದರು. ಆ ಬಗ್ಗೆ ನಾವು ಹೇಳುತ್ತೇವೆ.

‘ಚಿಗುರಿದ ಕನಸು’ ಚಿತ್ರದಲ್ಲಿ ಶಿವರಾಜ್​ಕುಮಾರ್ ಶಂಕರ್ ಹೆಸರಿನ ಪಾತ್ರ ಮಾಡಿದ್ದರು. ಶಂಕರ್ ಹುಟ್ಟಿ ಬೆಳೆದಿದ್ದು ದೆಹಲಿಯಲ್ಲಿ. ಆರಂಭದಲ್ಲಿ ದೆಹಲಿಯಲ್ಲೇ ಕಥೆ ಸಾಗುತ್ತದೆ. ಈ ಕಾರಣಕ್ಕೆ ಶಂಕರ್ ಕಾಲೇಜು ದಿನಗಳಲ್ಲಿ ಆತನ ಸುತ್ತ ಮುತ್ತ ಇರೋದೆಲ್ಲ ಹಿಂದಿ ಮಂದಿಯೇ. ಶಂಕರ್ ಗೆಳೆಯನ ಪಾತ್ರದಲ್ಲಿ ಪಂಕಜ್ ತ್ರಿಪಾಠಿ ಕಾಣಿಸಿಕೊಂಡಿದ್ದರು. ಅವರ ಪಾತ್ರದ ಹೆಸರೂ ಪಂಕಜ್ ಎಂದೇ ಇದೆ. ಶಿವಣ್ಣನ ಕಾಲೇಜು ದಿನಗಳನ್ನು ತೋರಿಸುವಾಗ ಪಂಕಜ್ ಜೊತೆಗೆ ಇದ್ದರು. ಈ ರೀತಿಯಲ್ಲಿ ಅವರ ಬಣ್ಣದ ಬದುಕು ಆರಂಭ ಆಯಿತು.

ಪಂಕಜ್ ತ್ರಿಪಾಠಿ ಅವರು ಖ್ಯಾತ ಹೀರೋ ಎನಿಸಿಕೊಂಡಿದ್ದಾರೆ. ಆಗ ಅವರಿನ್ನೂ ಬಣ್ಣದ ಲೋಕದಲ್ಲಿ ಗುರುತಿಸಿಕೊಳ್ಳುತ್ತಿದ್ದರು. ಅವರು ಇಷ್ಟು ದೊಡ್ಡ ಮಟ್ಟದ ಹೆಸರು ಮಾಡುತ್ತಾರೆ ಎಂದು ಯಾರೆಂದರೆ ಯಾರೂ ಊಹಿಸಿರಲಿಲ್ಲ.

ಇದನ್ನೂ ಓದಿ: ಆ ಒಂದು ಘಟನೆ ನಡೆದಿದ್ದರೆ ಪಂಕಜ್ ತ್ರಿಪಾಠಿ ರೈತನಾಗಿರುತ್ತಿದ್ದರು 

ಟಿಎಸ್​ ನಾಗಾಭರಣ ಅವರು ‘ಚಿಗುರಿದ ಕನಸು’ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಶಿವರಾಜ್​ಕುಮಾರ್, ಅನಂತ್ ನಾಗ್, ಅವಿನಾಶ್ ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದರು. ಪಾರ್ವತಮ್ಮ ರಾಜ್​ಕುಮಾರ್ ಅವರು ಈ ಚಿತ್ರವನ್ನು ‘ಶ್ರೀ ವಜ್ರೇಶ್ವರಿ ಕಂಬೈನ್ಸ್’ ಮೂಲಕ ಈ ಚಿತ್ರವನ್ನು ನಿರ್ಮಾಣ ಮಾಡಿದ್ದರು. ಈ ಸಿನಿಮಾ 2003ರ ಅಕ್ಟೋಬರ್ 2ರಂದು ರಿಲೀಸ್ ಆಯಿತು. ಆ ಬಳಿಕ ಪಂಕಹ್ ‘ರನ್’ ಹೆಸರಿನ ಸಿನಿಮಾ ಮಾಡಿದರು. ಆ ಬಳಿಕ ‘ಅಪರಹಣ’ ಮೊದಲಾದ ಸಿನಿಮಾಗಳಲ್ಲಿ ನಟಿಸಿದರು. ‘ಗ್ಯಾಂಗ್ ಆಫ್​ ವಸೇಪುರ್’  ಚಿತ್ರದಲ್ಲಿ ನಟಿಸಿ ಅವರು ಫೇಮಸ್ ಆದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಗೆಳೆಯನನ್ನು ಕಚ್ಚಿ ಹಿಡಿದ ಸಿಂಹಕ್ಕೆ ಮನಬಂದಂತೆ ಥಳಿಸಿದ ವ್ಯಕ್ತಿ
ಗೆಳೆಯನನ್ನು ಕಚ್ಚಿ ಹಿಡಿದ ಸಿಂಹಕ್ಕೆ ಮನಬಂದಂತೆ ಥಳಿಸಿದ ವ್ಯಕ್ತಿ
ಮಹಾರಾಷ್ಟ್ರದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ
ಮಹಾರಾಷ್ಟ್ರದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ
ಸೋಮನಹಳ್ಳಿಯ ಚಿತಾಗಾರದಿಂದ ಭಾರವಾದ ಹೆಜ್ಜೆಹಾಕುತ್ತ ವಾಪಸ್ಸಾದರು ಪ್ರೇಮ
ಸೋಮನಹಳ್ಳಿಯ ಚಿತಾಗಾರದಿಂದ ಭಾರವಾದ ಹೆಜ್ಜೆಹಾಕುತ್ತ ವಾಪಸ್ಸಾದರು ಪ್ರೇಮ
ಒಕ್ಕಲಿಗ ಸಂಪ್ರದಾಯದಂತೆ ನಡೆದ ಅಂತಿಮ ಸಂಸ್ಕಾರದಲ್ಲಿ ಅನೇಕ ಗಣ್ಯರು ಭಾಗಿ
ಒಕ್ಕಲಿಗ ಸಂಪ್ರದಾಯದಂತೆ ನಡೆದ ಅಂತಿಮ ಸಂಸ್ಕಾರದಲ್ಲಿ ಅನೇಕ ಗಣ್ಯರು ಭಾಗಿ
ಉಗ್ರಂ ಮಂಜು ನಿಜವಾದ ಮುಖ ಬಯಲು ಮಾಡಿದ ಗೌತಮಿ; ಬದಲಾಯ್ತು ಆಟ
ಉಗ್ರಂ ಮಂಜು ನಿಜವಾದ ಮುಖ ಬಯಲು ಮಾಡಿದ ಗೌತಮಿ; ಬದಲಾಯ್ತು ಆಟ
ಮಗಳು ಮತ್ತು ಮೊಮ್ಮಗನೊಂದಿಗೆ ಆಗಮಿಸಿ ತಿರಂಗ ಸ್ವೀಕರಿಸಿದ ಪ್ರೇಮ ಕೃಷ್ಣ
ಮಗಳು ಮತ್ತು ಮೊಮ್ಮಗನೊಂದಿಗೆ ಆಗಮಿಸಿ ತಿರಂಗ ಸ್ವೀಕರಿಸಿದ ಪ್ರೇಮ ಕೃಷ್ಣ
ವಿಡಿಯೋ: ರಾಜಕೀಯ ಗುರುವಿಗೆ ಹೆಗಲು ಕೊಟ್ಟು ವಿದಾಯ ಹೇಳಿದ ಡಿಕೆ ಬ್ರದರ್ಸ್
ವಿಡಿಯೋ: ರಾಜಕೀಯ ಗುರುವಿಗೆ ಹೆಗಲು ಕೊಟ್ಟು ವಿದಾಯ ಹೇಳಿದ ಡಿಕೆ ಬ್ರದರ್ಸ್
ರಾಜ್ಯ ಮತ್ತು ರಾಷ್ಟ್ರದ ಹಲವಾರು ನಾಯಕರು ಕೃಷ್ಣರ ಅಂತ್ಯಕ್ರಿಯೆಯಲ್ಲಿ ಭಾಗಿ
ರಾಜ್ಯ ಮತ್ತು ರಾಷ್ಟ್ರದ ಹಲವಾರು ನಾಯಕರು ಕೃಷ್ಣರ ಅಂತ್ಯಕ್ರಿಯೆಯಲ್ಲಿ ಭಾಗಿ
ರಜತ್ ವಿರುದ್ಧ ಮುಗಿಬಿದ್ದ ಮಂಜು, ತ್ರಿವಿಕ್ರಮ್
ರಜತ್ ವಿರುದ್ಧ ಮುಗಿಬಿದ್ದ ಮಂಜು, ತ್ರಿವಿಕ್ರಮ್
ಅಂತ್ಯಕ್ರಿಯೆ ಉಸ್ತುವಾರಿ ವಹಿಸಿಕೊಂಡ ಡಿಕೆ ಶಿವಕುಮಾರ್​ರಿಂದ ಚುರುಕು ಓಡಾಟ
ಅಂತ್ಯಕ್ರಿಯೆ ಉಸ್ತುವಾರಿ ವಹಿಸಿಕೊಂಡ ಡಿಕೆ ಶಿವಕುಮಾರ್​ರಿಂದ ಚುರುಕು ಓಡಾಟ